ಪ್ರಸಂಗಿ 5:6 - ಕನ್ನಡ ಸಮಕಾಲಿಕ ಅನುವಾದ6 ನಿನ್ನ ಬಾಯಿ ನಿನ್ನನ್ನು ಪಾಪಕ್ಕೆ ನಡೆಸದಂತೆ ನೋಡಿಕೋ. “ನಾನು ಹರಕೆ ಮಾಡಿದ್ದು ತಪ್ಪು,” ಎಂದು ದೂತನ ಮುಂದೆ ಹೇಳಬೇಡ. ಇದರಿಂದ ದೇವರು ನಿನ್ನ ಮಾತಿಗೆ ಮೆಚ್ಚದೆ, ನಿನ್ನನ್ನು ಏಕೆ ದಂಡಿಸಬೇಕು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಿನ್ನ ಬಾಯಿ ನಿನ್ನನ್ನು ಪಾಪಕ್ಕೆ ಗುರಿಮಾಡದಂತೆ ನೋಡಿಕೋ. “ಇದು ಅಜಾಗ್ರತೆಯಿಂದ ಆಯಿತು” ಎಂದು ದೂತನ ಮುಂದೆ ಹೇಳಬೇಡ. ದೇವರು ನಿನ್ನ ಮಾತಿಗೆ ರೋಷಗೊಂಡು ನಿನ್ನ ಕೈಕೆಲಸವನ್ನು ಏಕೆ ಹಾಳುಮಾಡಬೇಕು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಿನ್ನ ಬಾಯಿ ಪಾಪಕ್ಕೆ ಕಾರಣ ಆಗದಂತೆ ನೋಡಿಕೊ. ಅದು ಅಜಾಗ್ರತೆಯಿಂದ ಆಯಿತೆಂದು ದೇವದೂತನ ಮುಂದೆ ನೆಪ ಹೇಳಬೇಡ. ದೇವರು ನಿನ್ನ ಮಾತಿಗೆ ಕೋಪಗೊಂಡು ನಿನ್ನ ಕೆಲಸವನ್ನು ಹಾಳುಮಾಡಿಯಾರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಿನ್ನ ಬಾಯಿ ನಿನ್ನನ್ನು ಪಾಪಕ್ಕೆ ಗುರಿಮಾಡದಂತೆ ನೋಡಿಕೋ; ಇದು ಅಜಾಗ್ರತೆಯಿಂದಾಯಿತೆಂದು ದೂತನ ಮುಂದೆ ಹೇಳಬೇಡ; ದೇವರು ನಿನ್ನ ಮಾತಿಗೆ ರೋಷಗೊಂಡು ನಿನ್ನ ಕೈಗೆಲಸವನ್ನು ಏಕೆ ಹಾಳುಮಾಡಬೇಕು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದ್ದರಿಂದ ನಿಮ್ಮ ಮಾತುಗಳು ನಿಮ್ಮನ್ನು ಪಾಪಕ್ಕೆ ನಡೆಸದಂತೆ ನೋಡಿಕೊಳ್ಳಿ. “ನಾನು ಅಜಾಗ್ರತೆಯಿಂದ ಹೇಳಿದೆ” ಎಂದು ಯಾಜಕನಿಗೆ ತಿಳಿಸಬೇಡಿ. ಇಲ್ಲವಾದರೆ, ದೇವರು ನಿಮ್ಮ ಮಾತುಗಳಿಗೆ ಕೋಪಗೊಂಡು ನೀವು ದುಡಿದಿರುವುದನ್ನೆಲ್ಲಾ ನಾಶಮಾಡಬಹುದು. ಅಧ್ಯಾಯವನ್ನು ನೋಡಿ |