ಪ್ರಸಂಗಿ 5:8 - ಕನ್ನಡ ಸಮಕಾಲಿಕ ಅನುವಾದ8 ದೇಶದಲ್ಲಿ ಬಡವರ ಹಿಂಸೆಯನ್ನೂ ನೀತಿನ್ಯಾಯ ನಿರಾಕರಿಸಿದ್ದನ್ನೂ ನೀನು ನೋಡಿದರೆ, ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಮತ್ತೊಬ್ಬ ಉನ್ನತ ಅಧಿಕಾರಿಗಳು ಇದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ, ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಹೆಚ್ಚಿನ ಅಧಿಕಾರವುಳ್ಳವನಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನಾಡಿನಲ್ಲಿ ಬಡವರ ಶೋಷಣೆಯನ್ನೂ ನ್ಯಾಯನೀತಿಯ ಉಲ್ಲಂಘನೆಯನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬ ಅಧಿಕಾರಿ ಉಸ್ತುವಾರಿ ನಡೆಸುತ್ತಾನೆ. ಆ ಇಬ್ಬರು ಅಧಿಕಾರಿಗಳ ಮೇಲೆ ಇನ್ನೂ ಉನ್ನತ ಅಧಿಕಾರಿಗಳು ಇದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷ್ಯಕ್ಕೆ ತರುವನು; ಆ ಹಿಂಸಕರಿಗಿಂತ ಮಹೋನ್ನತನು ಇದ್ದಾನಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ದೇಶದಲ್ಲಿ ಬಡವರಿಂದ ಬಲವಂತ ಸೇವೆಮಾಡಿಸುವುದನ್ನು ಕಂಡು ಅವರಿಗೆ ಅನ್ಯಾಯವಾಗಿದೆಯೆಂದೂ ಹಕ್ಕಿಗೆ ಚ್ಯುತಿಯಾಗಿದೆಯೆಂದೂ ಆಶ್ಚರ್ಯಪಡಬೇಡಿ. ಅವರಿಂದ ಬಲವಂತವಾಗಿ ದುಡಿಸುವ ಅಧಿಪತಿಗೆ ಬಲವಂತದಿಂದ ದುಡಿಸುವ ಮತ್ತೊಬ್ಬ ಅಧಿಪತಿಯಿರುವನು. ಈ ಇಬ್ಬರು ಅಧಿಪತಿಗಳಿಗೂ ಮತ್ತೊಬ್ಬ ಅಧಿಪತಿಯಿರುವನು. ಅಧ್ಯಾಯವನ್ನು ನೋಡಿ |
“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.