Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 6:2 - ಕನ್ನಡ ಸಮಕಾಲಿಕ ಅನುವಾದ

2 ಅದೇನೆಂದರೆ, ಮನುಷ್ಯನು ಹೃದಯದಲ್ಲಿ ಬಯಸಿದ್ದನ್ನು ಕೊರತೆಯಾಗದಂತೆ ದೇವರು ಅವನಿಗೆ ಧನ, ಐಶ್ವರ್ಯ, ಸನ್ಮಾನವನ್ನು ಕೊಡುತ್ತಾರೆ. ಆದರೆ ಅದನ್ನು ಅನುಭವಿಸುವಂತೆ ದೇವರು ಸಾಮರ್ಥ್ಯವನ್ನು ಕೊಡುವುದಿಲ್ಲ. ಆದುದರಿಂದ ಪರರು ಅದನ್ನು ಅನುಭವಿಸುತ್ತಾರೆ. ಇದು ವ್ಯರ್ಥವೂ ವ್ಯಸನಕರವಾದ ಕೇಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅದೇನೆಂದರೆ ದೇವರು ಒಬ್ಬನಿಗೆ ಯಾವ ಇಷ್ಟಾರ್ಥಕ್ಕೂ ಕೊರತೆಯಿಲ್ಲದಂತೆ ಧನವನ್ನು, ಸಂಪತ್ತನ್ನು ಹಾಗು ಘನತೆಯನ್ನು ಅನುಗ್ರಹಿಸುವನು. ಆದರೆ ಅದನ್ನು ಅನುಭವಿಸುವುದಕ್ಕೆ ದೇವರು ಅವನನ್ನು ಶಕ್ತಿಗೊಳಿಸುವುದಿಲ್ಲ. ಅದನ್ನು ಮತ್ತೊಬ್ಬನು ಅನುಭವಿಸುವನು. ಇದು ಸಹ ವ್ಯರ್ಥವೂ, ದುಃಖಕರವಾದ ಕೆಟ್ಟತನವೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅದೇನು ಎಂದರೆ, ದೇವರು ಒಬ್ಬನಿಗೆ ಧನಸಂಪತ್ತನ್ನೂ ಘನತೆಗೌರವವನ್ನೂ ಅನುಗ್ರಹಿಸುತ್ತಾರೆ. ಅವನ ಇಷ್ಟಾರ್ಥಕ್ಕೆ ಯಾವ ಕೊರತೆಯೂ ಇಲ್ಲದಂತೆ ಮಾಡುತ್ತಾರೆ. ಆದರೆ ಅವನ್ನು ಅನುಭವಿಸುವುದಕ್ಕೆ‍ ಶಕ್ತಿಯನ್ನು ದೇವರು ಅವನಿಗೆ ಕೊಡುವುದಿಲ್ಲ. ಅವುಗಳನ್ನು ಮತ್ತೊಬ್ಬನು ಅನುಭವಿಸುತ್ತಾನೆ. ಇದೂ ಸಹ ನಿರರ್ಥಕ; ದೊಡ್ಡ ಪಿಡುಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಏನಂದರೆ ದೇವರು ಒಬ್ಬನಿಗೆ ಯಾವ ಇಷ್ಟಾರ್ಥಕ್ಕೂ ಕೊರತೆಯಿಲ್ಲದಂತೆ ಧನಸಂಪತ್ತನ್ನೂ ಘನತೆಯನ್ನೂ ಅನುಗ್ರಹಿಸುವನು; ಆದರೆ ಅದನ್ನು ಅನುಭವಿಸುವದಕ್ಕೆ ದೇವರು ಅವನನ್ನು ಶಕ್ತಿಗೊಳಿಸುವದಿಲ್ಲ; ಅದನ್ನು ಮತ್ತೊಬ್ಬನು ಅನುಭವಿಸುವನು; ಇದು ಸಹ ವ್ಯರ್ಥವೂ ದೊಡ್ಡ ರೋಗವೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದೇವರು ಒಬ್ಬನಿಗೆ ಐಶ್ವರ್ಯವನ್ನು, ಆಸ್ತಿಪಾಸ್ತಿಯನ್ನು ಮತ್ತು ಘನತೆಯನ್ನು ಕೊಡುವನು. ಅವನು ತನಗೆ ಈಗ ಬೇಕಾಗಿರುವ ಮತ್ತು ಮುಂದೆ ಬೇಕಾಗುವ ಎಲ್ಲವನ್ನೂ ಹೊಂದಿರುವನು. ಆದರೆ ಅವುಗಳನ್ನು ಅನುಭವಿಸಲು ದೇವರು ಅವನಿಗೆ ಅವಕಾಶಕೊಡುವುದಿಲ್ಲ. ಮತ್ತೊಬ್ಬನು ಬಂದು ಎಲ್ಲವನ್ನೂ ತೆಗೆದುಕೊಳ್ಳುವನು. ಇದು ಸಹ ತುಂಬ ಕೆಟ್ಟದ್ದೂ ಅರ್ಥವಿಲ್ಲದ್ದೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 6:2
24 ತಿಳಿವುಗಳ ಹೋಲಿಕೆ  

ಮನುಷ್ಯನಿಗೆ ದೇವರು ಆಸ್ತಿಪಾಸ್ತಿಗಳನ್ನು ದಯಪಾಲಿಸಿ, ಅವುಗಳನ್ನು ಅನುಭವಿಸುವುದಕ್ಕೆ ಸಾಮರ್ಥ್ಯ ಕೊಟ್ಟಿದ್ದರೆ, ಅವನು ತನ್ನ ಪಾಲನ್ನು ತೆಗೆದುಕೊಂಡು, ತನ್ನ ಪ್ರಯಾಸದಲ್ಲಿ ಆನಂದಿಸುವುದೂ ದೇವರ ದಾನದಿಂದಲೇ.


ಯೆಹೋವ ದೇವರೇ, ಈ ಲೋಕಜೀವನದಲ್ಲಿಯಷ್ಟೇ ಪ್ರತಿಫಲವೆಂದು ತಿಳಿಯುವ ಜನರಿಂದ, ನನ್ನನ್ನು ನಿಮ್ಮ ಹಸ್ತದ ಮೂಲಕ ರಕ್ಷಿಸಿ ಕಾಪಾಡಿರಿ. ಅಂಥ ಜನರಿಗಾಗಿ ನೀವು ಸಂಗ್ರಹಿಸಿ ಇಟ್ಟಿರುವುದು ಅವರ ಹೊಟ್ಟೆ ತುಂಬಲಿ; ಅವರ ಮಕ್ಕಳು ಅದರಿಂದ ಸಮೃದ್ಧಿ ಹೊಂದಲಿ, ಅವರ ಚಿಕ್ಕಮಕ್ಕಳಿಗೂ ಉಳಿದದ್ದು ಸಿಕ್ಕಲಿ.


ಅವರ ಹೃದಯವು ಕೊಬ್ಬಿನಿಂದ ಉಬ್ಬಿಕೊಂಡಿರುತ್ತವೆ; ಅವರ ದುಷ್ಕಲ್ಪನೆಗಳಿಗೆ ಮಿತಿಯೇ ಇಲ್ಲ.


ನೀನು ಕೇಳದ ಐಶ್ವರ್ಯವನ್ನೂ, ಘನವನ್ನೂ ಕೊಟ್ಟಿದ್ದೇನೆ. ಆದ್ದರಿಂದ ನಿನ್ನ ಸಮಸ್ತ ದಿವಸಗಳಲ್ಲಿ ನಿನ್ನ ಹಾಗೆ ಅರಸುಗಳಲ್ಲಿ ಒಬ್ಬನೂ ಇರುವುದಿಲ್ಲ.


ನಮ್ಮ ಸ್ವಾಸ್ತ್ಯವು ಅಪರಿಚಿತರಿಗೂ, ನಮ್ಮ ಮನೆಗಳು ಪರರಿಗೂ ವಶವಾದವು.


“ನಿಶ್ಚಯವಾಗಿ ಮನುಷ್ಯನು ಮಾಯಾರೂಪದಿಂದ ನಡೆದಾಡುತ್ತಾನೆ; ಅವನು ಸಡಗರದಿಂದ ಐಶ್ವರ್ಯವನ್ನು ರಾಶಿಯಾಗಿ ಕೂಡಿಸಿಕೊಳ್ಳುತ್ತಾನೆ; ಆದರೆ ಅದನ್ನು ಅನುಭವಿಸುವವರು ಯಾರೋ ಅರಿಯನು.


ವಿದೇಶಿಯರು ಅವನ ಶಕ್ತಿಯನ್ನು ಹೀರಿಬಿಟ್ಟಿದ್ದಾರೆ. ಅದು ಅವನಿಗೆ ಗೊತ್ತಿಲ್ಲ. ನರೆಕೂದಲು ಸಹ ಅವನ ಮೇಲೆ ಇದೆ. ಆದರೂ ಅವನು ತಿಳಿಯದೇ ಇದ್ದಾನೆ.


“ಅರಸನೇ, ಮಹೋನ್ನತರಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ಸಾರ್ವಭೌಮತ್ವವನ್ನೂ, ಮಹತ್ತನ್ನೂ, ಕೀರ್ತಿಯನ್ನೂ, ಘನವನ್ನೂ ಕೊಟ್ಟರು.


ಇದು ಕೂಡ ವ್ಯಸನಕರವಾದ ಕೇಡು: ಮನುಷ್ಯನು ಹೇಗೆ ಬಂದನೋ, ಹಾಗೆಯೇ ಹೋಗುವನು. ಗಾಳಿಗಾಗಿ ಪ್ರಯಾಸಪಟ್ಟವನಿಗೆ ಲಾಭವೇನಿದೆ?


ಜೊತೆಗಾರನಿಲ್ಲದೆ ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದನು. ಅವನಿಗೆ ಮಗನಾಗಲಿ, ಸಹೋದರನಾಗಲಿ ಇರಲಿಲ್ಲ. ಆದರೂ ಅವನ ಪ್ರಯಾಸಕ್ಕೆ ಕೊನೆಯಿಲ್ಲ. ತನ್ನ ಸಂಪತ್ತಿನಿಂದ ಅವನ ಕಣ್ಣು ತೃಪ್ತಿ ಹೊಂದಿರಲಿಲ್ಲ. ಅವನು, “ನಾನು ಸುಖಸಂತೋಷವನ್ನು ತೊರೆದು, ಯಾರಿಗೋಸ್ಕರ ಕಷ್ಟಪಡುತ್ತಲೇ ಇದ್ದೇನೆ?” ಎಂದುಕೊಂಡನು. ಇದು ಕೂಡ ವ್ಯರ್ಥವೇ, ಪ್ರಯಾಸದ ಕೆಲಸವೇ ಸರಿ.


ಮನುಷ್ಯನು ಪಡುವ ಎಲ್ಲಾ ಪ್ರಯಾಸವನ್ನೂ ಸಾಧಿಸುವ ಎಲ್ಲಾ ಕಾರ್ಯಗಳನ್ನೂ ನೋಡಿದಾಗ ಇವು ಪರಸ್ಪರ ಮತ್ಸರಕ್ಕೆ ಕಾರಣವೆಂದು ನಾನು ತಿಳಿದುಕೊಂಡೆನು. ಇದು ಕೂಡ ಗಾಳಿಯನ್ನು ಬೆನ್ನಟ್ಟಿದ ಹಾಗೆ ವ್ಯರ್ಥವೇ.


ಆಗ ದೇವರು ಸೊಲೊಮೋನನಿಗೆ, “ಇದು ನಿನ್ನ ಹೃದಯದಲ್ಲಿ ಇದ್ದುದರಿಂದಲೂ ನೀನು ಐಶ್ವರ್ಯವನ್ನೂ, ಸ್ಥಿತಿಯನ್ನೂ, ಘನವನ್ನೂ, ನಿನ್ನ ಶತ್ರುಗಳ ಪ್ರಾಣವನ್ನೂ ಕೇಳದೆ ಮತ್ತು ಹೆಚ್ಚಾದ ದಿವಸಗಳನ್ನೂ ನೀನು ಕೇಳದೆ, ನಾನು ಯಾರ ಮೇಲೆ ನಿನ್ನನ್ನು ಅರಸನಾಗಿ ಮಾಡಿದೆನೋ, ಆ ನನ್ನ ಜನರಿಗೆ ನೀನು ನ್ಯಾಯತೀರಿಸುವ ಹಾಗೆ, ಜ್ಞಾನವನ್ನೂ, ತಿಳುವಳಿಕೆಯನ್ನೂ ನೀನು ಕೇಳಿದ್ದರಿಂದಲೂ;


ಅವನು ದೀರ್ಘಾಯುಷ್ಯದಿಂದಲೂ, ಐಶ್ವರ್ಯದಿಂದಲೂ, ಘನದಿಂದಲೂ ಕೂಡಿದವನಾಗಿ, ಒಳ್ಳೆಯ ಪ್ರಾಯದಲ್ಲಿ ಮರಣಹೊಂದಿದನು. ಅವನ ಮಗ ಸೊಲೊಮೋನನು ಅವನಿಗೆ ಬದಲಾಗಿ ಅರಸನಾದನು.


ಇದಲ್ಲದೆ ಯೆಹೋವ ದೇವರು ಸಮಸ್ತ ಇಸ್ರಾಯೇಲಿನ ಸಮ್ಮುಖದಲ್ಲಿ ಸೊಲೊಮೋನನನ್ನು ಅಧಿಕವಾಗಿ ಹೆಚ್ಚಿಸಿ, ಇಸ್ರಾಯೇಲಿನಲ್ಲಿ ಅವನಿಗಿಂತ ಮುಂಚೆ ಇದ್ದ ಯಾವ ಅರಸನಿಗಾದರೂ ಇಲ್ಲದಂಥ ರಾಜ್ಯದ ವೈಭವವನ್ನು ಅವನಿಗೆ ಕೊಟ್ಟರು.


ನೀವು ಅಲ್ಲಿಗೆ ತಲುಪಿದಾಗ, ಸಂಶಯಪಡದ ಜನರನ್ನು ಅಲ್ಲಿ ಕಾಣುವಿರಿ. ಅದು ವಿಸ್ತಾರವಾದ ದೇಶವಾಗಿದೆ. ದೇವರು ಅದನ್ನು ನಿಮ್ಮ ಕೈಗಳಲ್ಲಿ ಒಪ್ಪಿಸಿಕೊಟ್ಟಿದ್ದಾರೆ. ಆ ಪ್ರದೇಶದಲ್ಲಿ ಯಾವ ಕೊರತೆಯು ಇರುವುದಿಲ್ಲ,” ಎಂದರು.


ನಿಮ್ಮ ಮಧ್ಯದಲ್ಲಿರುವ ಪರದೇಶದವರು ನಿಮಗಿಂತಲೂ ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗುವರು. ನೀವಾದರೋ ಕಡಿಮೆಯಾಗುತ್ತಾ ಹೀನಸ್ಥಿತಿಗೆ ಬರುವಿರಿ.


ನಿಮ್ಮ ಭೂಮಿಯ ಫಲವನ್ನೂ, ನಿಮ್ಮ ಎಲ್ಲಾ ಆದಾಯವನ್ನೂ ನಿಮ್ಮನ್ನರಿಯದ ಜನರು ತಿಂದುಬಿಡುವರು. ನೀವು ಯಾವಾಗಲೂ ಬಲಾತ್ಕಾರವನ್ನೂ, ಸಂಕಟವನ್ನೂ ಅನುಭವಿಸುವಿರಿ.


ಸೂರ್ಯನ ಕೆಳಗೆ ವ್ಯಸನಕರವಾದ ಕೇಡನ್ನು ನಾನು ನೋಡಿದೆ. ಅದು ಯಾವುದೆಂದರೆ: ಸಂಗ್ರಹಿಸಿದ ಆಸ್ತಿ ಯಜಮಾನನಿಗೆ ಹಾನಿ.


ಆಹಾರವಲ್ಲದಕ್ಕೆ ಹಣವನ್ನು ವ್ಯರ್ಥ ಮಾಡುವುದು ಏಕೆ? ತೃಪ್ತಿಪಡಿಸದವುಗಳಿಗೆ ನಿಮ್ಮ ದುಡಿತವನ್ನು ವೆಚ್ಚಮಾಡುವುದು ಏಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯದನ್ನು ನೀವು ಉಣ್ಣಿರಿ. ನೀವು ಮೃಷ್ಟಾನ್ನದಲ್ಲಿ ಆನಂದಿಸಿ!


ದೇವರು ಮನುಷ್ಯನಿಗೆ ಕೊಟ್ಟದ್ದನ್ನು ಸೂರ್ಯನ ಕೆಳಗೆ ಅವನು ಕೈಗೊಂಡ ಪ್ರಯಾಸದ ಸುಖವನ್ನು ಅನುಭವಿಸಿ, ತಿಂದು, ಕುಡಿಯುವುದು ತೃಪ್ತಿಕರವಾದದ್ದೂ ಆಗಿದೆ, ಎಂದು ಒಂದು ಒಳ್ಳೆಯದನ್ನು ಕಂಡುಕೊಂಡೆನು. ಏಕೆಂದರೆ ಇದು ಮನುಷ್ಯನ ಪಾಲು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು