ಪ್ರಸಂಗಿ 7:15 - ಕನ್ನಡ ಸಮಕಾಲಿಕ ಅನುವಾದ15 ನನ್ನ ವ್ಯರ್ಥದ ದಿನಗಳಲ್ಲಿ ಇವೆರಡು ವಿಷಯಗಳನ್ನು ನೋಡಿದ್ದೇನೆ: ನೀತಿವಂತನು ತನ್ನ ನೀತಿಯಲ್ಲಿ ಗತಿಸಿಹೋಗುತ್ತಾನೆ. ದುಷ್ಟನು ತನ್ನ ದುಷ್ಟತನದಲ್ಲಿ, ಇಡೀ ಜೀವಮಾನವನ್ನು ಕಳೆಯುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನೀತಿವಂತನು ತನ್ನ ನೀತಿಯಲ್ಲಿಯೇ ನಶಿಸುವುದುಂಟು. ದುಷ್ಟನು ತನ್ನ ದುಷ್ಟತನದಲ್ಲಿಯೇ ಬಹಳ ದಿನ ಬದುಕುವುದುಂಟು. ಇದನ್ನೆಲ್ಲಾ ನನ್ನ ವ್ಯರ್ಥವಾದ ಜೀವಮಾನದಲ್ಲಿ ನೋಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸಜ್ಜನನು ಸದ್ಧರ್ಮಿಯಾಗಿ ಜೀವಿಸುತ್ತಾ ಗತಿಸಿಹೋಗುತ್ತಾನೆ; ದುರ್ಜನನಾದರೋ ಅಧರ್ಮದಲ್ಲಿ ಬಹುಕಾಲ ಬದುಕುತ್ತಾನೆ. ಇದನ್ನು ಎಲ್ಲಾ ನನ್ನ ನಿರರ್ಥಕ ಜೀವನದಲ್ಲಿ ಎಷ್ಟೋ ನೋಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಧರ್ಮಿಯು ತನ್ನ ಧರ್ಮದಲ್ಲಿಯೇ ನಶಿಸುವದುಂಟು; ಅಧರ್ಮಿಯು ತನ್ನ ಅಧರ್ಮದಲ್ಲಿಯೇ ಬಹು ದಿನ ಬದುಕುವದುಂಟು; ಇದನ್ನೆಲ್ಲಾ ನನ್ನ ವ್ಯರ್ಥವಾದ ಜೀವಮಾನದಲ್ಲಿ ನೋಡಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನನ್ನ ಅಲ್ಪಕಾಲದ ಜೀವನದಲ್ಲಿ ನಾನು ಪ್ರತಿಯೊಂದನ್ನೂ ನೋಡಿದ್ದೇನೆ. ನೀತಿವಂತರು ಯೌವನ ಪ್ರಾಯದಲ್ಲಿ ಸಾಯುವುದನ್ನೂ ನೋಡಿದ್ದೇನೆ. ದುಷ್ಟರು ಬಹುಕಾಲ ಬದುಕುವುದನ್ನೂ ನೋಡಿದ್ದೇನೆ. ಅಧ್ಯಾಯವನ್ನು ನೋಡಿ |