Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 8:13 - ಕನ್ನಡ ಸಮಕಾಲಿಕ ಅನುವಾದ

13 ದುಷ್ಟರು ದೇವರಿಗೆ ಭಯಪಡುವುದಿಲ್ಲ. ಆದ್ದರಿಂದ ಅವರಿಗೆ ಒಳ್ಳೆಯದಾಗುವುದಿಲ್ಲ. ನೆರಳಿನ ಹಾಗಿರುವ ದುಷ್ಟರ ದಿನಗಳು ಹೆಚ್ಚುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೆ ದುಷ್ಟನಿಗೆ ಒಳ್ಳೆಯದಾಗುವುದಿಲ್ಲ. ನೆರಳಿನಂತಿರುವ ಅವನ ದಿನಗಳು ಹೆಚ್ಚುವುದಿಲ್ಲ. ಏಕೆಂದರೆ ಅವನು ದೇವರಿಗೆ ಭಯಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ದೇವರಿಗೆ ಹೆದರದ ದುರ್ಜನನಿಗೆ ಒಳ್ಳೆಯದಾಗದೆಂಬುದು ನಿಶ್ಚಯ. ನೆರಳಿನಂತಿರುವ ಅವನ ಬಾಳಿನ ದಿನಗಳು ಹೆಚ್ಚುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದರೆ ದುಷ್ಟನಿಗೆ ಮೇಲಾಗದು, ನೆರಳಿನಂತಿರುವ ಅವನ ದಿನಗಳು ಹೆಚ್ಚುವದಿಲ್ಲ; ಅವನು ದೇವರಿಗೆ ಹೆದರುವವನಲ್ಲವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ದುಷ್ಟರಿಗೆ ದೇವರಲ್ಲಿ ಭಯಭಕ್ತಿಯಿಲ್ಲದಿರುವುದರಿಂದ ಅವರಿಗೆ ಒಳ್ಳೆಯದಾಗುವುದಿಲ್ಲ; ಅವರ ಜೀವಿತವು ಸಾಯಂಕಾಲದ ನೆರಳಿನಂತೆ ಇಲ್ಲವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 8:13
26 ತಿಳಿವುಗಳ ಹೋಲಿಕೆ  

ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮನುಷ್ಯನ ಜೀವಮಾನದ ಎಲ್ಲಾ ದಿವಸಗಳಲ್ಲಿ ಅವನಿಗೆ ಯಾವುದು ಒಳ್ಳೆಯದೆಂದು ಯಾರಿಗೆ ಗೊತ್ತು? ಅವನು ಹೊರಟುಹೋದ ಮೇಲೆ ಸೂರ್ಯನ ಕೆಳಗೆ ಏನಾಗುತ್ತದೆಂದು ಅವನಿಗೆ ಯಾರು ಹೇಳಬಲ್ಲರು?


ಕೆಡುಕರಿಗೆ ಕಷ್ಟ! ಅವರಿಗೆ ಕೇಡೇ ಇರಲಿ. ಏಕೆಂದರೆ ಅವರ ಕೈಗಳ ಪ್ರತಿಫಲವು ಅವರಿಗೆ ಕೊಡಲಾಗುವುದು.


ಅವನು ಹೂವಿನ ಹಾಗೆ ಅರಳಿ ಬಾಡುವನು; ಅವನು ನೆರಳಿನಂತೆ ಓಡಿಹೋಗುತ್ತಾನೆ, ಶಾಶ್ವತವಾಗಿರುವದಿಲ್ಲ.


ಆಗ ನೀವು ನೀತಿವಂತನಿಗೂ, ದುಷ್ಟನಿಗೂ, ದೇವರ ಸೇವೆ ಮಾಡುವವನಿಗೂ, ಮಾಡದವನಿಗೂ ಇರುವ ವ್ಯತ್ಯಾಸವನ್ನು ಪುನಃ ನೋಡುವಿರಿ.


“ದುಷ್ಟರಿಗೆ ಸಮಾಧಾನವೇ ಇಲ್ಲ,” ಎಂದು ನನ್ನ ದೇವರು ಹೇಳುತ್ತಾರೆ.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಅಂಥವರಿಗೆ ಬಹುಕಾಲದ ಹಿಂದೆಯೇ ದೇವರ ತೀರ್ಪು ಸಿದ್ಧಪಡಿಸಲಾಗಿದೆ. ಅವರಿಗಾಗುವ ವಿನಾಶವು ತೂಕಡಿಸುವುದಿಲ್ಲ.


ನಾಳೆ ಏನಾಗುವುದೋ ನಿಮಗೆ ತಿಳಿಯದು. ನಿಮ್ಮ ಜೀವಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ.


ಒಳ್ಳೆಯದನ್ನು ಮಾಡಿದವರು ಜೀವಕ್ಕಾಗಿ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ನ್ಯಾಯತೀರ್ಪಿಗಾಗಿ ಪುನರುತ್ಥಾನವನ್ನೂ ಹೊಂದುವರು.


ಎತ್ತರವಾದ ಗೋಡೆಯ ಒಂದು ಭಾಗವು ಉಬ್ಬಿಕೊಂಡು ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿ ಬೀಳುವ ಹಾಗೆ ನಿಮ್ಮ ಅಪರಾಧವು ನಿಮಗೆ ಅಪಾಯಕರವಾಗಿರುವುದು.


ಮನುಷ್ಯನು ಕೇವಲ ಉಸಿರಿನಂತಿದ್ದಾನೆ; ಅವನ ದಿವಸಗಳು ಅಳಿದು ಹೋಗುವ ನೆರಳಿನ ಹಾಗಿವೆ.


ಆದರೆ ದೇವರೇ, ದುಷ್ಟರನ್ನು ನಾಶದ ಕುಣಿಯಲ್ಲಿ ಇಳಿಯ ಮಾಡುವಿರಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಕಾಲದಲ್ಲಿ ಅರ್ಧವನ್ನೂ ಜೀವಿಸುವುದಿಲ್ಲ. ನಾನಾದರೋ ನಿಮ್ಮಲ್ಲಿ ಭರವಸವಿಡುತ್ತೇನೆ.


ಇಗೋ, ನನ್ನ ದಿವಸಗಳನ್ನು ಅಂಗೈ ಅಗಲದಷ್ಟು ಮಾಡಿದ್ದೀರಿ. ನನ್ನ ಆಯುಷ್ಯವು ನಿಮ್ಮ ಮುಂದೆ ಏನೂ ಇಲ್ಲದ ಹಾಗಿದೆ; ಪ್ರತಿ ಮನುಷ್ಯನ ಜೀವನ ಬರೀ ಉಸಿರೇ.


ಯೆಹೋವ ದೇವರು ನೀತಿವಂತನನ್ನು ಪರೀಕ್ಷಿಸುತ್ತಾರೆ, ಆದರೆ ಅವರು ದುಷ್ಟರನ್ನೂ ಹಿಂಸಾತ್ಮಕರನ್ನೂ ವಿರೋಧಿಸುತ್ತಾರೆ.


ಹೀಗೆ ಆಪತ್ತಿನ ದಿನ ದುಷ್ಟರು ತಪ್ಪಿಸಿಕೊಳ್ಳುತ್ತಾರೆ; ದೇವರ ದಂಡನೆಯ ದಿನದಲ್ಲಿ ಅವರು ಬಿಡುಗಡೆಯಾಗುತ್ತಾರೆ.


ದುಷ್ಟರ ಜಯವು ಅಲ್ಪ ಕಾಲ, ಭಕ್ತಿಹೀನರ ಸಂತೋಷವು ಕ್ಷಣ ಮಾತ್ರ.


“ಹೌದು, ನಿಶ್ಚಯವಾಗಿ ದುಷ್ಟರ ಬೆಳಕು ಆರಿಹೋಗುವುದು; ಅವನ ಬಾಳಿನ ಬೆಂಕಿಯ ಜ್ವಾಲೆಯು ಉರಿಯದೆ ಹೋಗುವುದು.


ದೇವರು ಮಾಡುವ ಕಾರ್ಯವೆಲ್ಲವೂ ಶಾಶ್ವತವಾಗಿರುವುದೆಂದು ನಾನು ಬಲ್ಲೆನು; ಅದಕ್ಕೆ ಯಾವುದನ್ನೂ ಕೂಡಿಸಲಾಗದು ಮತ್ತು ಯಾವುದನ್ನೂ ತೆಗೆಯಲಾಗದು. ತಮ್ಮ ಸನ್ನಿಧಿಯಲ್ಲಿ ಮನುಷ್ಯರು ಭಯಭಕ್ತಿಯಿಂದ ಜೀವಿಸಬೇಕೆಂದು ದೇವರು ಇದನ್ನು ಮಾಡಿದ್ದಾರೆ.


ಬಹು ಕನಸುಗಳೂ ಬಹು ಮಾತುಗಳೂ ವ್ಯರ್ಥವಾದವುಗಳು. ಆದ್ದರಿಂದ ನೀನು ದೇವರಿಗೆ ಭಯಪಡು.


ನನ್ನ ವ್ಯರ್ಥದ ದಿನಗಳಲ್ಲಿ ಇವೆರಡು ವಿಷಯಗಳನ್ನು ನೋಡಿದ್ದೇನೆ: ನೀತಿವಂತನು ತನ್ನ ನೀತಿಯಲ್ಲಿ ಗತಿಸಿಹೋಗುತ್ತಾನೆ. ದುಷ್ಟನು ತನ್ನ ದುಷ್ಟತನದಲ್ಲಿ, ಇಡೀ ಜೀವಮಾನವನ್ನು ಕಳೆಯುತ್ತಾನೆ.


ನೀನು ಇವುಗಳನ್ನು ಗ್ರಹಿಸಿಕೊಳ್ಳುವುದು ಒಳ್ಳೆಯದು. ಹೌದು, ಇವುಗಳನ್ನು ಮರೆಯಬೇಡ. ಏಕೆಂದರೆ ದೇವರಿಗೆ ಭಯಪಡುವವನು ಇವೆಲ್ಲವುಗಳಿಂದ ಪಾರಾಗುವನು.


ನಮ್ಮ ಆತ್ಮವನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ. ಹಾಗೆಯೇ ಸಾಯುವ ಸಮಯವನ್ನು ತಡೆಯುವ ಶಕ್ತಿಯು ಸಹ ಯಾರಿಗೂ ಇಲ್ಲ. ಯುದ್ಧ ಸಮಯದಲ್ಲಿ ಹೇಗೆ ವಿರಾಮ ಇರುವುದಿಲ್ಲವೋ, ಹಾಗೆಯೇ ದುಷ್ಟನಿಗೆ ದುಷ್ಟತ್ವದಿಂದ ಬಿಡುಗಡೆಯೇ ಇಲ್ಲ.


“ಅಲ್ಲಿ ಕೆಲವು ದಿನಗಳು ಮಾತ್ರ ಬದುಕತಕ್ಕ ಕೂಸೂ, ವೃದ್ಧನೂ ಇರುವುದಿಲ್ಲ. ಮಗುವು ನೂರು ವರುಷದವನಾಗಿ ಸಾಯುವುದು. ಆದರೆ ನೂರು ವರುಷವನ್ನು ತಲುಪಲು ವಿಫಲನಾದವನನ್ನು ಶಾಪಗ್ರಸ್ತ ಎಂದು ಪರಿಗಣಿಸಲಾಗುತ್ತದೆ.


ಕೆಟ್ಟವರನ್ನು ನೋಡಿ ಕೋಪಿಸಿಕೊಳ್ಳಬೇಡ. ಇಲ್ಲವೆ ಅಕ್ರಮ ಮಾಡುವವರ ಬಗ್ಗೆ ಹೊಟ್ಟೆಕಿಚ್ಚುಪಡಬೇಡ.


ಈ ದಿನದವರೆಗೂ ಅವರು ತಗ್ಗಿಸಿಕೊಳ್ಳಲಿಲ್ಲ, ಭಯಪಡಲಿಲ್ಲ. ನಾನು ನಿಮ್ಮ ಮುಂದೆಯೂ, ನಿಮ್ಮ ತಂದೆಗಳ ಮುಂದೆಯೂ ಇಟ್ಟ ನನ್ನ ನಿಯಮದಲ್ಲಿ ನಡೆಯಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು