ಪ್ರಸಂಗಿ 8:9 - ಕನ್ನಡ ಸಮಕಾಲಿಕ ಅನುವಾದ9 ನಾನು ಇದನ್ನೆಲ್ಲಾ ನೋಡಿ, ಸೂರ್ಯನ ಕೆಳಗೆ ಮಾಡುವ ಪ್ರತಿಯೊಂದು ಕೆಲಸಕ್ಕೂ ನನ್ನ ಹೃದಯವನ್ನು ಪ್ರಯೋಗಿಸಿದ್ದೇನೆ. ಒಬ್ಬ ಮನುಷ್ಯನು ಇನ್ನೊಬ್ಬನ ಮೇಲೆ ತನ್ನ ಹಾನಿಗಾಗಿ ಅಧಿಕಾರ ನಡೆಸುವ ಕಾಲವೂ ಇದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಾನು ಇದನ್ನೆಲ್ಲಾ ನೋಡಿ, ಈ ಲೋಕದೊಳಗೆ ನಡೆಯುವ ಸಕಲ ಕಾರ್ಯಗಳನ್ನೂ ಪರಿಶೀಲಿಸಿದ್ದೇನೆ. ಒಬ್ಬ ಮನುಷ್ಯನು ಇನ್ನೊಬ್ಬನ ಮೇಲೆ ಅಧಿಕಾರ ನಡೆಸಿ ಅವನಿಗೆ ಹಾನಿಯನ್ನು ಉಂಟುಮಾಡುವ ಕಾಲವೂ ಇದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಈ ಲೋಕದಲ್ಲಿ ನಡೆಯುವ ಆಗುಹೋಗುಗಳನ್ನೆಲ್ಲ ಚಿಂತಿಸಿ ನೋಡಿದಾಗ ಈ ವಿಷಯಗಳು ಕಂಡುಬಂದವು: ಈಗ ಒಬ್ಬನು ಮತ್ತೊಬ್ಬನ ಮೇಲೆ ದಬ್ಬಾಳಿಕೆ ನಡೆಸುತ್ತಾನೆ; ಹಾನಿಯನ್ನು ಉಂಟುಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಒಬ್ಬನು ಮತ್ತೊಬ್ಬನ ಮೇಲೆ ಅಧಿಕಾರ ನಡಿಸಿ ಅವನಿಗೆ ಹಾನಿಯನ್ನುಂಟುಮಾಡುವ ಈ ಕಾಲದಲ್ಲಿ ಇದನ್ನೆಲ್ಲಾ ನೋಡಿ ಲೋಕದೊಳಗೆ ನಡೆಯುವ ಸಕಲ ಕಾರ್ಯಗಳನ್ನೂ ಪರಿಶೀಲಿಸಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಾನು ಇವುಗಳನ್ನೆಲ್ಲಾ ನೋಡಿ ಈ ಲೋಕದ ಕಾರ್ಯಗಳನ್ನು ಪರಿಶೀಲಿಸಿದೆನು. ಮನುಷ್ಯರು ಇನ್ನೊಬ್ಬರ ಮೇಲೆ ಅಧಿಪತಿಗಳಾಗಿರಲು ಪ್ರಯಾಸಪಡುತ್ತಾರೆ. ಇದು ಅವರಿಗೆ ಹಾನಿಕರ. ಅಧ್ಯಾಯವನ್ನು ನೋಡಿ |