Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 9:10 - ಕನ್ನಡ ಸಮಕಾಲಿಕ ಅನುವಾದ

10 ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿರುವ ಸಮಾಧಿಯಲ್ಲಿ, ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲ ಪೂರ್ಣಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿಕ್ಕಿರುವ ಪಾತಾಳದಲ್ಲಿ ಯಾವ ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು; ನೀನು ಸೇರಬೇಕಾದ ಪಾತಾಳದಲ್ಲಿ ಯಾವ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಿನ್ನ ಕೆಲಸಕಾರ್ಯಗಳನ್ನು ನಿನ್ನಿಂದಾದಷ್ಟು ಉತ್ತಮವಾಗಿ ಮಾಡು. ಸಮಾಧಿಯಲ್ಲಿ ನಿನಗೆ ಕೆಲಸವಿಲ್ಲ. ಅಲ್ಲಿ ಆಲೋಚನೆಯಾಗಲಿ ಜ್ಞಾನವಾಗಲಿ ವಿವೇಕವಾಗಲಿ ಇರುವುದಿಲ್ಲ. ನಾವೆಲ್ಲರೂ ಮರಣದ ಆ ಸ್ಥಳಕ್ಕೆ ಹೋಗುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 9:10
44 ತಿಳಿವುಗಳ ಹೋಲಿಕೆ  

ನೀವು ಏನನ್ನು ಮಾಡಿದರೂ ಅದನ್ನು ಮನುಷ್ಯರಿಗೋಸ್ಕರವೆಂದು ಮಾಡದೆ ಕರ್ತನಿಗೋಸ್ಕರವೇ ಎಂದು ಹೃದಯಪೂರ್ವಕವಾಗಿ ಮಾಡಿರಿ.


ಈ ದಿನಗಳು ಕೆಟ್ಟವುಗಳಾಗಿರುವುದರಿಂದ, ಸರ್ವ ಸದಾವಕಾಶಗಳನ್ನೂ ಸದ್ವಿನಿಯೋಗಿಸಿಕೊಳ್ಳಿರಿ.


ಉತ್ಸಾಹದಲ್ಲಿ ಆಲಸ್ಯರಾಗದೆ, ಆತ್ಮದಲ್ಲಿ ಬೆಂಕಿಯುಳ್ಳವರಾಗಿ ಕರ್ತನ ಸೇವೆಯನ್ನು ಮಾಡಿರಿ.


ಸತ್ತವರಲ್ಲಿ ನಿಮ್ಮನ್ನು ಸ್ಮರಿಸುವವರಿಲ್ಲ. ಪಾತಾಳದಲ್ಲಿ ನಿಮ್ಮನ್ನು ಸ್ತುತಿಸುವವರು ಯಾರು?


ಪಂದ್ಯಗಳಲ್ಲಿ ಎಲ್ಲರೂ ಓಡುತ್ತಾರೆ. ಆದರೆ ಒಬ್ಬನಿಗೆ ಮಾತ್ರ ಬಹುಮಾನ ದೊರೆಯುತ್ತದೆ ಎಂಬುದು ನಿಮಗೆ ತಿಳಿಯದೋ? ಬಹುಮಾನವನ್ನು ಪಡಕೊಳ್ಳಬೇಕೆಂದು ನೀವೂ ಓಡಿರಿ.


ಬೆಳಿಗ್ಗೆ ನಿನ್ನ ಬೀಜವನ್ನು ಬಿತ್ತು. ಸಾಯಂಕಾಲದವರೆಗೂ ನಿನ್ನ ಕೈಗೆ ಬಿಡುವು ಕೊಡಬೇಡ. ಏಕೆಂದರೆ ಇದು ಸಫಲವೋ ಅದು ಸಫಲವೋ ನಿನಗೆ ತಿಳಿಯದು. ಎರಡೂ ಒಳ್ಳೆಯ ಬೆಳೆಯನ್ನು ಕೊಡಲು ಸಾಧ್ಯವಿದೆ.


ನನ್ನನ್ನು ಹುಡುಕುವಿರಿ. ಪೂರ್ಣಹೃದಯದಿಂದ ನನ್ನನ್ನು ಹುಡುಕುವಾಗ, ನನ್ನನ್ನು ಕಂಡುಕೊಳ್ಳುವಿರಿ.


ನೀವು ಮೊದಲು ದೇವರ ರಾಜ್ಯವನ್ನೂ ಅದರ ನೀತಿಯನ್ನೂ ಹುಡುಕಿರಿ. ಆಗ ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ಆದರೆ ನಾನು ಎಂಥವನಾಗಿದ್ದೇನೋ, ಅದು ದೇವರ ಕೃಪೆಯಿಂದಲೇ ಆಗಿರುತ್ತದೆ. ನನಗುಂಟಾದ ದೇವರ ಕೃಪೆಯು ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.


ಗೊತ್ತುಗುರಿ ಇಲ್ಲದವನ ಹಾಗೆ ನಾನು ಓಡುವುದಿಲ್ಲ, ಗಾಳಿಯನ್ನು ಗುದ್ದುವವನ ಹಾಗೆ ನಾನು ಹೋರಾಡುವುದಿಲ್ಲ.


ನನ್ನನ್ನು ಕಳುಹಿಸಿದ ತಂದೆಯ ಕೆಲಸಗಳನ್ನು ಹಗಲಿರುವಾಗಲೇ ನಾವು ಮಾಡಬೇಕು. ರಾತ್ರಿ ಬಂದಾಗ ಯಾರಿಗೂ ಕೆಲಸ ಮಾಡಲಾಗದು.


ಯೇಸು ಅವರಿಗೆ, “ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನು ಮಾಡಿ ಅವರ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.


ಮೋಡಗಳು ಮಳೆಯಿಂದ ತುಂಬಿದ್ದರೆ, ಅವು ಭೂಮಿಯ ಮೇಲೆ ಸುರಿದುಬಿಡುತ್ತವೆ. ಮರವು ಉತ್ತರ ಇಲ್ಲವೆ ದಕ್ಷಿಣಕ್ಕೆ ಬಿದ್ದರೆ, ಆ ಮರವು ಬಿದ್ದ ಸ್ಥಳದಲ್ಲಿಯೇ ಇರುವುದು.


ತಮ್ಮ ಜೊತೆ ಕೆಲಸ ಮಾಡುವವರ ಮುಂದೆಯೂ ಸಮಾರ್ಯದಲ್ಲಿರುವ ಸೈನ್ಯದ ಮುಂದೆಯೂ, “ಈ ಬಲಹೀನರಾದ ಯೆಹೂದ್ಯರು ಮಾಡುವುದೇನು? ಅವರು ತಮ್ಮ ಗೋಡೆಯನ್ನು ಪುನಃ ಕಟ್ಟುತ್ತಾರೆಯೇ? ಬಲಿಯನ್ನು ಅರ್ಪಿಸುವರೋ? ಪಟ್ಟಣವು ಬೆಂಕಿಯಲ್ಲಿ ಸುಟ್ಟುಹೋದಾಗ, ಕಲ್ಲಿನ ತುಂಡುಗಳ ರಾಶಿಯಿಂದ ಕಟ್ಟಡಕ್ಕೆ ಸೂಕ್ತವಾದ ಕಲ್ಲುಗಳನ್ನು ಹೊರತೆಗೆಯಲು ಅವರಿಗೆ ಸಾಧ್ಯವಾಗುತ್ತದೆಯೇ?” ಎಂದು ಹೇಳಿದನು.


ಹೀಗೆ ನಾವು ಪುನಃ ಗೋಡೆ ಕಟ್ಟುವುದನ್ನು ಮುಂದುವರಿಸಿದೆವು. ಗೋಡೆ ಅರ್ಧ ಎತ್ತರದವರೆಗೂ ಆಯಿತು. ಏಕೆಂದರೆ ಜನರು ಕೆಲಸ ಮಾಡುವುದಕ್ಕೆ ಮನಸ್ಸುಳ್ಳವರಾಗಿದ್ದರು.


ನಿಮ್ಮ ದೇವರಾದ ಯೆಹೋವ ದೇವರನ್ನು ಹುಡುಕಲು ನಿಮ್ಮ ಹೃದಯವನ್ನೂ, ನಿಮ್ಮ ಪ್ರಾಣವನ್ನೂ ಒಪ್ಪಿಸಿ, ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ದೇವರ ಪರಿಶುದ್ಧ ಪಾತ್ರೆಗಳನ್ನು ಯೆಹೋವ ದೇವರ ನಾಮಕ್ಕಾಗಿ ಕಟ್ಟಲಾಗುವ ಆಲಯದೊಳಗೆ ತರುವ ಹಾಗೆ, ಎದ್ದು ಯೆಹೋವ ದೇವರಾದ ದೇವರಿಗೆ ಪರಿಶುದ್ಧ ಸ್ಥಳವನ್ನು ಕಟ್ಟಿಸಿರಿ,” ಎಂದನು.


ನನ್ನ ಹಾಗೆಯೇ ತಿಮೊಥೆ ಕರ್ತನ ಸೇವೆ ಮಾಡುತ್ತಿದ್ದಾನೆ. ಅವನು ಬಂದರೆ, ಅವನು ನಿಮ್ಮೊಂದಿಗಿರುವಾಗ ಅವನಿಗೆ ಯಾವ ಭಯವೂ ಇಲ್ಲದಂತೆ ನೋಡಿಕೊಳ್ಳಿರಿ.


ಆದರೆ ಯೆರೂಸಲೇಮಿಗೋಸ್ಕರ ಮಾಡಲು ನನ್ನ ದೇವರು ನನ್ನ ಹೃದಯದಲ್ಲಿ ಇಟ್ಟಿದ್ದನ್ನು ಯಾರಿಗೂ ತಿಳಿಸಲಿಲ್ಲ. ನಾನು ಸವಾರಿಮಾಡುತ್ತಿದ್ದ ವಾಹನ ಪಶುವಿನ ಹೊರತು ಬೇರೆ ಪಶು ನನ್ನೊಂದಿಗಿರಲಿಲ್ಲ.


ದಾವೀದನು ತನ್ನ ಮಗ ಸೊಲೊಮೋನನಿಗೆ, “ನೀನು ಬಲಗೊಂಡು, ಧೈರ್ಯದಿಂದ ಮಾಡು; ಭಯಪಡಬೇಡ, ನಿರಾಶನಾಗಬೇಡ. ಏಕೆಂದರೆ ನನ್ನ ದೇವರಾಗಿರುವ ಯೆಹೋವ ದೇವರು ನಿನ್ನ ಸಂಗಡ ಇರುತ್ತಾರೆ. ಯೆಹೋವ ದೇವರ ಆಲಯದ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವವರೆಗೂ, ಅವರು ನಿನ್ನನ್ನು ತೊರೆಯುವುದಿಲ್ಲ, ಕೈಬಿಡುವುದಿಲ್ಲ.


ನಂತರ ಕಾಲೇಬನು ಮೋಶೆಯ ಎದುರಿನಲ್ಲಿ ಜನರನ್ನು ಸುಮ್ಮನಿರಿಸಿ, “ನಾವು ತಕ್ಷಣವೇ ಏರಿಹೋಗಿ ಅದನ್ನು ಸ್ವಾಧೀನ ಮಾಡಿಕೊಳ್ಳೋಣ. ಏಕೆಂದರೆ ಅದನ್ನು ಜಯಿಸಲು ನಾವು ನಿಜವಾಗಿಯೂ ಶಕ್ತರಾಗಿದ್ದೇವೆ,” ಎಂದನು.


ಅವನ ಪುತ್ರಪುತ್ರಿಯರೆಲ್ಲಾ ಅವನನ್ನು ಆದರಿಸಿದರೂ ಅವನು ಆದರಣೆ ಹೊಂದಲೊಲ್ಲದೆ, “ನನ್ನ ಮಗನಿರುವ ಸಮಾಧಿಗೆ ದುಃಖದಿಂದಲೇ ಇಳಿದು ಹೋಗುವೆನು,” ಎಂದನು. ಹೀಗೆ ಅವನ ತಂದೆ ಅವನಿಗೋಸ್ಕರ ಅತ್ತನು.


ಈ ಗುರುತುಗಳೆಲ್ಲಾ ನಿನಗೆ ಸಂಭವಿಸಿದಾಗ, ದೇವರು ನಿನ್ನ ಸಂಗಡ ಇರುವುದರಿಂದ ನೀನು ಆ ವೇಳೆಯಲ್ಲಿ ನಿನಗೆ ಕೈಗೂಡಿದ ಹಾಗೆ ಮಾಡು.


ಅವರು ಸಂಪತ್ತಿನಲ್ಲಿ ತಮ್ಮ ದಿನಗಳನ್ನು ಕಳೆಯುತ್ತಾರೆ; ಕೊನೆಗೆ ಸಮಾಧಾನದಿಂದ ಸಮಾಧಿಗೆ ಸೇರುತ್ತಾರೆ.


“ನನ್ನ ಜೀವನದ ಮಧ್ಯಪ್ರಾಯದಲ್ಲೇ ನಾನು ಪಾತಾಳದ ದ್ವಾರದೊಳಗೆ ಹೋಗಬೇಕು. ನನ್ನ ಆಯುಷ್ಯದಲ್ಲಿ ಕಳೆದು ಉಳಿದ ವರುಷಗಳು ನನಗೆ ತಪ್ಪಿಹೋಯಿತು,” ಎಂದು ನಾನು ಅಂದುಕೊಂಡೆನು.


ನಾನು ಹಿಂದಿರುಗಲಾಗದ ಮಬ್ಬಾಗಿರುವ ಕತ್ತಲೆಯ ದೇಶಕ್ಕೆ ಸೇರಲಿರುವೆನು.


ಆ ದೇಶದಲ್ಲಿ ಕಾರ್ಗತ್ತಲೂ, ಗಾಢಾಂಧಕಾರವೂ ಮರಣದ ತುಂಬಿರುವುದು. ಕ್ರಮವಿಲ್ಲದ ಆ ದೇಶದಲ್ಲಿ ಬೆಳಕೂ ಕತ್ತಲೆಯೇ.”


ಕೊಡತಕ್ಕದ್ದು ಈಗಾಗಲೇ ನಿನ್ನಲ್ಲಿರುವಾಗ, “ಹೋಗಿ ಬಾ, ನಾಳೆ ನಿನಗೆ ಕೊಡುತ್ತೇನೆ,” ಎಂದು ನಿನ್ನ ನೆರೆಯವನಿಗೆ ಹೇಳಬೇಡ.


“ಅವರು, ‘ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ,’ ಎಂದರು. “ಆಗ ಅವನು, ‘ನೀವು ಸಹ ದ್ರಾಕ್ಷಿಯ ತೋಟಕ್ಕೆ ಹೋಗಿರಿ,’ ಎಂದು ಹೇಳಿದನು.


ಏಕೆಂದರೆ ಕೆಲವೊಮ್ಮೆ ದೇವದೂತನು ಇಳಿದುಬಂದು ನೀರನ್ನು ಕಲಕುತ್ತಿದ್ದನು. ನೀರು ಕಲಕಿದೊಡನೆ ಮೊದಲು ಯಾರು ನೀರಿನೊಳಗೆ ಹೆಜ್ಜೆಯಿಡುತ್ತಿದ್ದರೋ ಅವರಿಗೆ ಯಾವ ರೋಗವಿದ್ದರೂ ಅದು ಗುಣವಾಗುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು