ಪ್ರಸಂಗಿ 9:16 - ಕನ್ನಡ ಸಮಕಾಲಿಕ ಅನುವಾದ16 ಇದನ್ನು ನೋಡಿ ನಾನು, “ಬಲಕ್ಕಿಂತ ಜ್ಞಾನವು ಉತ್ತಮ; ಆದರೆ ಜನರು ಬಡವನ ಜ್ಞಾನವನ್ನು ತಿರಸ್ಕಾರ ಮಾಡುತ್ತಾರೆ, ಅವನ ಮಾತುಗಳನ್ನು ಯಾರೂ ಲಕ್ಷಿಸುವುದಿಲ್ಲ,” ಎಂದುಕೊಂಡೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಾನು ಇದನ್ನು ನೋಡಿ ಬಲಕ್ಕಿಂತ ಜ್ಞಾನವೇ ಶ್ರೇಷ್ಠ, ಆದರೆ ಜನರು ಬಡವನ ಜ್ಞಾನವನ್ನು ತಾತ್ಸಾರ ಮಾಡಿ ಅವನ ಮಾತುಗಳನ್ನು ಗಮನಿಸುವುದಿಲ್ಲ ಅಂದುಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಇದನ್ನು ನೋಡಿದ ನಾನು, ಶಕ್ತಿಗಿಂತ ಜ್ಞಾನವೇ ಶ್ರೇಷ್ಠ; ಆದರೆ ಜನರು ಆ ಬಡವನ ಜ್ಞಾನವನ್ನು ತಾತ್ಸಾರ ಮಾಡುತ್ತಾರೆ, ಅವನ ಮಾತುಗಳನ್ನು ಗಮನಿಸುವುದಿಲ್ಲ, ಎಂದುಕೊಂಡೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಾನು ಇದನ್ನು ನೋಡಿ, ಬಲಕ್ಕಿಂತ ಜ್ಞಾನವೇ ಶ್ರೇಷ್ಠ; ಆದರೆ ಜನರು ಬಡವನ ಜ್ಞಾನವನ್ನು ತಾತ್ಸಾರಮಾಡಿ ಅವನ ಮಾತುಗಳನ್ನು ಗಮನಿಸರು ಅಂದುಕೊಂಡೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಾನು ಹೇಳುವುದೇನೆಂದರೆ, ಜ್ಞಾನವು ಶಕ್ತಿಗಿಂತಲೂ ಉತ್ತಮ. ಅವರು ಆ ಬಡವನ ಜ್ಞಾನವನ್ನು ಮರೆತುಬಿಟ್ಟರೂ ಅವನ ಮಾತುಗಳನ್ನು ಕೇಳದಿದ್ದರೂ ಜ್ಞಾನವು ಉತ್ತಮವಾದದ್ದೇ. ಅಧ್ಯಾಯವನ್ನು ನೋಡಿ |