Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 9:2 - ಕನ್ನಡ ಸಮಕಾಲಿಕ ಅನುವಾದ

2 ಎಲ್ಲವೂ ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವುದು. ನೀತಿವಂತನಿಗೂ ದುಷ್ಟನಿಗೂ ಒಳ್ಳೆಯವನಿಗೂ ಕೆಟ್ಟವನಿಗೂ ಶುದ್ಧನಿಗೂ ಅಶುದ್ಧನಿಗೂ ಮತ್ತು ಯಜ್ಞ ಅರ್ಪಿಸುವವನಿಗೂ ಅರ್ಪಿಸದವನಿಗೂ ಒಂದೇ ಗತಿಯಾಗುವುದು. ಒಳ್ಳೆಯವನಿಗೆ ಹೇಗೋ ಹಾಗೆಯೇ ಪಾಪಿಗೂ ಇರುವುದು. ಆಣೆಯಿಡುವವನಿಗೆ ಹೇಗೋ ಹಾಗೆಯೇ, ಆಣೆಯಿಡಲು ಭಯಪಡುವವನಿಗೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಎಲ್ಲವುಗಳು ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವುದು. ನೀತಿವಂತನಿಗೂ ಮತ್ತು ದುಷ್ಟನಿಗೂ, ಒಳ್ಳೆಯವನಿಗೂ ಮತ್ತು ಕೆಟ್ಟವನಿಗೂ, ಶುದ್ಧನಿಗೂ ಮತ್ತು ಅಶುದ್ಧನಿಗೂ, ಯಜ್ಞವನ್ನು ಅರ್ಪಿಸುವವನಿಗೂ ಮತ್ತು ಅರ್ಪಿಸದವನಿಗೂ ಒಂದೇ ಗತಿಯಾಗುವುದು. ಒಳ್ಳೆಯವನು ಹೇಗೋ ಹಾಗೆಯೇ ಪಾಪಿಯೂ ಇರುವನು. ಆಣೆಯಿಡುವವನು ಹೇಗೋ ಹಾಗೆಯೇ ಆಣೆಗೆ ಭಯಪಡುವವನೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಎಲ್ಲವೂ ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವುದು; ಸಜ್ಜನನಿಗೂ ದುರ್ಜನನಿಗೂ, ಒಳ್ಳೆಯವನಿಗೂ (ಕೆಟ್ಟವನಿಗೂ), ಶುದ್ಧನಿಗೂ, ಅಶುದ್ಧನಿಗೂ ಬಲಿಯನ್ನರ್ಪಿಸುವವನಿಗೂ ಅರ್ಪಿಸದವನಿಗೂ ಒಂದೇ ಗತಿ ಕಾದಿದೆ; ನಿರ್ದೋಷಿಯಂತೆ ದೋಷಿಯೂ ಇರುವನು; ಆಣೆಯಿಡುವವನ ಹಾಗೆ ಆಣೆಗೆ ಅಂಜುವವನೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಎಲ್ಲವೂ ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವದು; ಶಿಷ್ಟನಿಗೂ ದುಷ್ಟನಿಗೂ ಒಳ್ಳೆಯವನಿಗೂ ಶುದ್ಧನಿಗೂ ಅಶುದ್ಧನಿಗೂ ಯಜ್ಞಮಾಡುವವನಿಗೂ ಮಾಡದವನಿಗೂ ಒಂದೇ ಗತಿ; ನಿರ್ದೋಷಿಯಂತೆ ದೋಷಿಯಿರುವನು; ಆಣೆಯಿಡುವವನ ಹಾಗೆ ಆಣೆಗೆ ಅಂಜುವವನು ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದರೆ ಎಲ್ಲರಿಗೂ ಸಂಭವಿಸುವುದು ಒಂದೇ. ಅದೇ ಮರಣ. ಒಳ್ಳೆಯವರಿಗೂ ಕೆಟ್ಟವರಿಗೂ ಶುದ್ಧರಿಗೂ ಅಶುದ್ಧರಿಗೂ ಯಜ್ಞಗಳನ್ನು ಅರ್ಪಿಸುವವರಿಗೂ ಅರ್ಪಿಸದವರಿಗೂ ಮರಣವಾಗುತ್ತದೆ. ಒಳ್ಳೆಯವನು ಸಹ ಕೇವಲ ಪಾಪಿಯಂತೆ ಸಾಯುವನು. ದೇವರಿಗೆ ವಿಶೇಷವಾದ ಹರಕೆಗಳನ್ನು ಮಾಡುವವನು ಸಹ ಆ ಹರಕೆಗಳನ್ನು ಮಾಡಲು ಭಯಪಡುವ ವ್ಯಕ್ತಿಯಂತೆ ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 9:2
22 ತಿಳಿವುಗಳ ಹೋಲಿಕೆ  

ಆಗ ನೀವು ನೀತಿವಂತನಿಗೂ, ದುಷ್ಟನಿಗೂ, ದೇವರ ಸೇವೆ ಮಾಡುವವನಿಗೂ, ಮಾಡದವನಿಗೂ ಇರುವ ವ್ಯತ್ಯಾಸವನ್ನು ಪುನಃ ನೋಡುವಿರಿ.


“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಏಕೆಂದರೆ ನಾನು ದುಷ್ಟರ ಸೌಭಾಗ್ಯವನ್ನು ಕಂಡಾಗ ಮೂರ್ಖರ ಮೇಲೆ ಹೊಟ್ಟೆಕಿಚ್ಚುಪಟ್ಟೆನು.


ಇದೆಲ್ಲಾ ಒಂದೇ ವಿಷಯ; ಆದ್ದರಿಂದ ನಾನು ಇದನ್ನು ಹೇಳುತ್ತೇನೆ: ‘ನಿರ್ದೋಷಿಯನ್ನೂ, ಕೆಟ್ಟವನನ್ನೂ ದೇವರು ದಂಡಿಸುತ್ತಾರೆ.’


ಈಗ ನಾವು ಗರ್ವಿಷ್ಠರನ್ನು ಭಾಗ್ಯವಂತರೆಂದನ್ನುತ್ತೇವೆ. ದುಷ್ಟರು ಅಭಿವೃದ್ಧಿಯಾಗುತ್ತಿದ್ದಾರೆ. ದೇವರಿಗೆ ಸವಾಲು ಹಾಕಿದವರು ತಪ್ಪಿಸಿಕೊಂಡಿದ್ದಾರೆ’ ಎಂದು ಹೇಳಿದ್ದೀರಿ.”


ನೀನು ಇವುಗಳನ್ನು ಗ್ರಹಿಸಿಕೊಳ್ಳುವುದು ಒಳ್ಳೆಯದು. ಹೌದು, ಇವುಗಳನ್ನು ಮರೆಯಬೇಡ. ಏಕೆಂದರೆ ದೇವರಿಗೆ ಭಯಪಡುವವನು ಇವೆಲ್ಲವುಗಳಿಂದ ಪಾರಾಗುವನು.


ಔತಣದ ಮನೆಗೆ ಹೋಗುವುದಕ್ಕಿಂತ, ಶೋಕದ ಮನೆಗೆ ಹೋಗುವುದು ಲೇಸು. ಏಕೆಂದರೆ ಎಲ್ಲಾ ಮನುಷ್ಯರ ಅಂತ್ಯವು ಸಾವಾಗಿದೆ. ಇದರಿಂದ ಜೀವಂತರು ಇದನ್ನು ತಮ್ಮ ಹೃದಯದಲ್ಲಿ ಸ್ಮರಿಸಿಕೊಳ್ಳುವರು.


ಒಂದು ವೇಳೆ ಎರಡು ಸಾವಿರ ವರ್ಷಗಳು ಆ ಮನುಷ್ಯನು ಬದುಕಿದರೂ ಅವನು ತನ್ನ ಐಶ್ವರ್ಯವನ್ನು ಅನುಭವಿಸದಿದ್ದರೆ ಏನು ಪ್ರಯೋಜನ? ಎಲ್ಲರೂ ಒಂದೇ ಸ್ಥಳಕ್ಕೆ ಹೋಗುತ್ತಾರಲ್ಲವೇ?


ಏಕೆಂದರೆ ದೇವರು ಮೆಚ್ಚಿದವರಿಗೆ ಅವರು ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾರೆ. ಆದರೆ ದೇವರು ತಮಗೆ ಮೆಚ್ಚುಗೆಯಾದವನಿಗೆ ಕೊಡತಕ್ಕ ಐಶ್ವರ್ಯವನ್ನು ಕೂಡಿಸಿಡುವ ಪ್ರಯಾಸವನ್ನು ಮಾತ್ರ ಪಾಪಿಗೆ ಕೊಡುತ್ತಾರೆ. ಏಕೆಂದರೆ ಇದು ಸಹ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.


ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಪುತ್ರಿಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳಬಾರದು.


ಜನರು ಆ ಅಡವಿಯಲ್ಲಿ ಹೋಗುವಾಗ, ಜೇನುತುಪ್ಪ ಸುರಿಯುತ್ತಿತ್ತು. ಆದರೆ ಜನರು ಆ ಆಣೆಯ ನಿಮಿತ್ತ ಭಯಪಟ್ಟದ್ದರಿಂದ ಒಬ್ಬನಾದರೂ ತನ್ನ ಬಾಯಿಗೆ ಹಾಕಿಕೊಳ್ಳಲಿಲ್ಲ.


ಏಕೆಂದರೆ ಮೃಗಗಳಿಗೆ ಸಂಭವಿಸುವುದು ಮನುಷ್ಯರಿಗೂ ಸಂಭವಿಸುತ್ತದೆ. ಇಬ್ಬರಿಗೂ ಒಂದೇ ಸಂಗತಿ ಸಂಭವಿಸುತ್ತದೆ. ಒಂದು ಹೇಗೆ ಸಾಯುತ್ತದೋ ಹಾಗೆ ಇನ್ನೊಂದೂ ಸಾಯುತ್ತದೆ. ಎಲ್ಲಕ್ಕೂ ಒಂದೇ ಪ್ರಾಣ ಇದೆ. ಆ ರೀತಿಯಲ್ಲಿ ಮೃಗಕ್ಕಿಂತ ಮನುಷ್ಯನಿಗೆ ಹೆಚ್ಚು ಶ್ರೇಷ್ಠತೆ ಇಲ್ಲ. ಎಲ್ಲವೂ ವ್ಯರ್ಥ.


ಸೂರ್ಯನ ಕೆಳಗೆ ಮಾಡುವ ಎಲ್ಲಾ ಸಂಗತಿಗಳಲ್ಲಿಯೂ ಇದೂ ಒಂದು ವ್ಯಸನವು. ಎಲ್ಲರಿಗೂ ಒಂದೇ ಗತಿ ಇದೆ. ಹೌದು, ಮನುಷ್ಯರ ಹೃದಯದಲ್ಲಿ ಕೆಟ್ಟತನ ತುಂಬಿವೆ. ಅವರು ಬದುಕಿರುವ ತನಕ ಅವರ ಹೃದಯಗಳಲ್ಲಿ ಹುಚ್ಚುತನವಿದೆ. ಅನಂತರ ಅವರು ಸಾಯುತ್ತಾರೆ.


ನಾನು ಮತ್ತೆ ಸೂರ್ಯನ ಕೆಳಗೆ ನೋಡಿದ್ದೇನೆಂದರೆ, ವೇಗಿಗಳಿಗೆ ಓಟವೂ ಪರಾಕ್ರಮಶಾಲಿಗಳಿಗೆ ಯುದ್ಧವೂ ಜ್ಞಾನಿಗಳಿಗೆ ಆಹಾರವೂ ವಿವೇಕಿಗಳಿಗೆ ಐಶ್ವರ್ಯವೂ ಪ್ರವೀಣರಿಗೆ ದಯೆಯೂ ಸಿಗುವುದು ಎಂಬ ನಿಶ್ಚಯ ಇಲ್ಲ. ಏಕೆಂದರೆ ಕಾಲವೂ ಅವಕಾಶವೂ ಅವರೆಲ್ಲರಿಗೆ ಒಳಪಟ್ಟಿರುತ್ತವೆ.


ಅಂದರೆ ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ, ಅರಸನ ಪುತ್ರಿಯರನ್ನೂ, ಕಾವಲಿನವರ ಅಧಿಪತಿಯಾದ ನೆಬೂಜರದಾನನು ಶಾಫಾನನ ಮೊಮ್ಮಗ ಅಹೀಕಾಮನ ಮಗ ಗೆದಲ್ಯನ ಸಂಗಡ ಬಿಟ್ಟವರೆಲ್ಲರನ್ನೂ, ಪ್ರವಾದಿಯಾದ ಯೆರೆಮೀಯನನ್ನೂ, ನೇರೀಯನ ಮಗ ಬಾರೂಕನನ್ನೂ ತೆಗೆದುಕೊಂಡು ಈಜಿಪ್ಟ್ ದೇಶಕ್ಕೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು