Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 9:4 - ಕನ್ನಡ ಸಮಕಾಲಿಕ ಅನುವಾದ

4 ಜೀವಂತರ ಗುಂಪಿಗೆ ಸೇರಿಕೊಂಡವನಿಗೆ ನಿರೀಕ್ಷೆ ಇರುವುದು. ಸತ್ತ ಸಿಂಹಕ್ಕಿಂತ ಬದುಕಿರುವ ನಾಯಿಯೇ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಜೀವಿತರ ಗುಂಪಿನಲ್ಲಿ ಸೇರಿದವನಿಗೆ ನಿರೀಕ್ಷೆಯುಂಟು. ಸತ್ತ ಸಿಂಹಕ್ಕಿಂತ ಬದುಕಿರುವ ನಾಯಿಯೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಜೀವಿತರ ಗುಂಪಿಗೆ ಸೇರಿದವನಿಗೆ ನಂಬಿಕೆ-ನಿರೀಕ್ಷೆಯುಂಟು; ಸತ್ತ ಸಿಂಹಕ್ಕಿಂತ ಬದುಕಿರುವ ನಾಯಿಯೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಜೀವಿತರ ಗುಂಪಿನಲ್ಲಿ ಸೇರಿದವನಿಗೆ ನಿರೀಕ್ಷೆಯುಂಟು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇನ್ನೂ ಜೀವದಿಂದಿರುವ ಪ್ರತಿಯೊಬ್ಬರಿಗೂ ನಿರೀಕ್ಷೆಯಿದೆ. ಜೀವಂತವಾಗಿರುವ ನಾಯಿ ಸತ್ತ ಸಿಂಹಕ್ಕಿಂತಲೂ ಉತ್ತಮ ಎಂಬ ನುಡಿ ಎಷ್ಟೋ ಸತ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 9:4
7 ತಿಳಿವುಗಳ ಹೋಲಿಕೆ  

ಸಮಾಧಿಯು ನಿನ್ನನ್ನು ಹೊಗಳುವುದಿಲ್ಲ. ಮರಣವು ನಿನ್ನನ್ನು ಕೊಂಡಾಡುವುದಿಲ್ಲ. ಕುಣಿಯೊಳಕ್ಕೆ ಹೋಗುವವರು ನಿಮ್ಮ ಸತ್ಯತೆಯಲ್ಲಿ ಭರವಸವಿಡಲಾರರು.


ದೇವರು ಭಕ್ತಿಹೀನನನ್ನು ಕಡಿದುಬಿಟ್ಟರೆ, ಅವನ ಪ್ರಾಣ ತೆಗೆದುಕೊಂಡರೆ, ಅವನಿಗೆ ನಿರೀಕ್ಷೆ ಎಲ್ಲಿ?


ಸೂರ್ಯನ ಕೆಳಗೆ ಮಾಡುವ ಎಲ್ಲಾ ಸಂಗತಿಗಳಲ್ಲಿಯೂ ಇದೂ ಒಂದು ವ್ಯಸನವು. ಎಲ್ಲರಿಗೂ ಒಂದೇ ಗತಿ ಇದೆ. ಹೌದು, ಮನುಷ್ಯರ ಹೃದಯದಲ್ಲಿ ಕೆಟ್ಟತನ ತುಂಬಿವೆ. ಅವರು ಬದುಕಿರುವ ತನಕ ಅವರ ಹೃದಯಗಳಲ್ಲಿ ಹುಚ್ಚುತನವಿದೆ. ಅನಂತರ ಅವರು ಸಾಯುತ್ತಾರೆ.


ಬದುಕಿರುವವರು ತಾವು ಸಾಯುತ್ತೇವೆಂದು ತಿಳಿದಿದ್ದಾರೆ, ಆದರೆ ಸತ್ತವರಿಗೆ ಏನೂ ತಿಳಿಯದು; ಅವರಿಗೆ ಇನ್ನು ಮೇಲೆ ಪ್ರತಿಫಲ ಇಲ್ಲ. ಅವರ ಹೆಸರನ್ನು ಸಹ ಜನರು ಮರೆತುಬಿಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು