Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 9:9 - ಕನ್ನಡ ಸಮಕಾಲಿಕ ಅನುವಾದ

9 ಈ ನಿರರ್ಥಕವಾದ ಎಲ್ಲಾ ದಿನಗಳಲ್ಲಿ ಸೂರ್ಯನ ಕೆಳಗೆ ದೇವರು ನಿನಗೆ ಕೊಟ್ಟ ಜೀವನದ ಎಲ್ಲಾ ದಿನಗಳಲ್ಲಿ, ನೀನು ಪ್ರೀತಿಸುವ ನಿನ್ನ ಹೆಂಡತಿಯೊಡನೆ ಆನಂದದಿಂದ ವಾಸಿಸು. ಸೂರ್ಯನ ಕೆಳಗೆ ನೀನು ಪಡುವ ನಿನ್ನ ಜೀವನದ ಕಷ್ಟದಲ್ಲಿ ಇದೇ ನಿನ್ನ ಪಾಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಲೋಕದೊಳಗೆ ದೇವರು ನಿನಗೆ ನೇಮಿಸಿರುವ ವ್ಯರ್ಥ ಜೀವಮಾನದ ವ್ಯರ್ಥ ದಿನಗಳೆಲ್ಲಾ ನಿನ್ನ ಪ್ರಿಯಪತ್ನಿಯೊಡನೆ ಸುಖದಿಂದ ಬದುಕು. ನಿನ್ನ ಬಾಳಿನಲ್ಲಿಯೂ, ನೀನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಇದೇ ನಿನ್ನ ಪಾಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಲೋಕದಲ್ಲಿ ದೇವರು ವಿಧಿಸಿರುವ ಈ ನಿರರ್ಥಕ ಜೀವಮಾನದ ನಿರರ್ಥಕ ದಿನದಿನವೂ ನಿನ್ನ ಪ್ರಿಯ ಪತ್ನಿಯೊಡನೆ ಸುಖದಿಂದ ಬದುಕು; ಇಹಲೋಕದ ನಿನ್ನ ಬಾಳಿನಲ್ಲಿ ನೀನು ಪಡುವ ಪಾಡಿಗೆ ಇದೇ ನಿನ್ನ ಪಾಲಿಗೆ ಬಂದ ಪಂಚಾಮೃತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಲೋಕದೊಳಗೆ ದೇವರು ನಿನಗೆ ನೇವಿುಸಿರುವ ವ್ಯರ್ಥ ಜೀವಮಾನದ ವ್ಯರ್ಥ ದಿನಗಳಲ್ಲೆಲ್ಲಾ ನಿನ್ನ ಪ್ರಿಯಪತ್ನಿಯೊಡನೆಯ ಸುಖದಿಂದ ಬದುಕು; ನಿನ್ನ ಬಾಳಿನಲ್ಲಿಯೂ ನೀನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಇದೇ ನಿನಗೆ ಬಂದ ಪಾಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನೀನು ಪ್ರಿಯ ಪತ್ನಿಯೊಡನೆ ಸುಖಪಡು. ನಿನ್ನ ಅಲ್ಪಕಾಲ ಜೀವಿತದ ದಿನಗಳಲ್ಲೆಲ್ಲಾ ಸುಖಪಡು. ಈ ಜೀವಿತವನ್ನು ನಿನಗೆ ಅನುಗ್ರಹಿಸಿರುವಾತನು ದೇವರೇ, ಇದೇ ನಿನ್ನ ಪಾಲು. ನಿನ್ನ ಈ ಜೀವಿತದ ಕೆಲಸಕಾರ್ಯಗಳನ್ನು ಸಂತೋಷದಿಂದ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 9:9
14 ತಿಳಿವುಗಳ ಹೋಲಿಕೆ  

ನನ್ನ ಕಣ್ಣು ಬಯಸಿದ್ದೆಲ್ಲವನ್ನು ಅದರಿಂದ ಹಿಂತೆಗೆಯಲಿಲ್ಲ, ಯಾವ ಸಂತೋಷಕ್ಕಾಗಿಯೂ ನನ್ನ ಹೃದಯವನ್ನು ನಾನು ತಡೆಯಲಿಲ್ಲ. ನನ್ನ ಎಲ್ಲಾ ಪ್ರಯಾಸದಲ್ಲಿ ನನ್ನ ಹೃದಯವು ಸಂತೋಷಿಸಿತು. ಇದು ನನ್ನ ಎಲ್ಲಾ ಪ್ರಯಾಸದಿಂದ ನನಗೆ ಬಂದ ಬಹುಮಾನ.


ನಿನ್ನನ್ನು ಸೃಷ್ಟಿಸಿದವನು ಒಬ್ಬನೇ ಅಲ್ಲವೇ? ನೀವು ದೇಹ ಮತ್ತು ಆತ್ಮದಲ್ಲಿ ಅವರಿಗೆ ಸೇರಿದವರು. ಮತ್ತು ಒಬ್ಬರೇ ದೇವರಾಗಿರುವ ದೇವರು ಏನು ಹುಡುಕುತ್ತಾರೆ? ದೈವಿಕ ಸಂತಾನ. ಆದ್ದರಿಂದ ನೀವು ಜಾಗರೂಕರಾಗಿರಿ ಮತ್ತು ನಿಮ್ಮ ಯೌವನದ ಹೆಂಡತಿಗೆ ವಿಶ್ವಾಸದ್ರೋಹ ಮಾಡಬೇಡಿ.


ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮನುಷ್ಯನ ಜೀವಮಾನದ ಎಲ್ಲಾ ದಿವಸಗಳಲ್ಲಿ ಅವನಿಗೆ ಯಾವುದು ಒಳ್ಳೆಯದೆಂದು ಯಾರಿಗೆ ಗೊತ್ತು? ಅವನು ಹೊರಟುಹೋದ ಮೇಲೆ ಸೂರ್ಯನ ಕೆಳಗೆ ಏನಾಗುತ್ತದೆಂದು ಅವನಿಗೆ ಯಾರು ಹೇಳಬಲ್ಲರು?


ಇದಲ್ಲದೆ ಪ್ರತಿಯೊಬ್ಬನು ಅನ್ನಪಾನಗಳನ್ನು ಸೇವಿಸಿ, ತನ್ನ ಎಲ್ಲಾ ಪ್ರಯಾಸಗಳಲ್ಲಿ ಸುಖವನ್ನು ಅನುಭವಿಸುವುದು ದೇವರ ದಾನದಿಂದಲೇ.


ನನ್ನ ವ್ಯರ್ಥದ ದಿನಗಳಲ್ಲಿ ಇವೆರಡು ವಿಷಯಗಳನ್ನು ನೋಡಿದ್ದೇನೆ: ನೀತಿವಂತನು ತನ್ನ ನೀತಿಯಲ್ಲಿ ಗತಿಸಿಹೋಗುತ್ತಾನೆ. ದುಷ್ಟನು ತನ್ನ ದುಷ್ಟತನದಲ್ಲಿ, ಇಡೀ ಜೀವಮಾನವನ್ನು ಕಳೆಯುತ್ತಾನೆ.


ದೇವರು ಮನುಷ್ಯನಿಗೆ ಕೊಟ್ಟದ್ದನ್ನು ಸೂರ್ಯನ ಕೆಳಗೆ ಅವನು ಕೈಗೊಂಡ ಪ್ರಯಾಸದ ಸುಖವನ್ನು ಅನುಭವಿಸಿ, ತಿಂದು, ಕುಡಿಯುವುದು ತೃಪ್ತಿಕರವಾದದ್ದೂ ಆಗಿದೆ, ಎಂದು ಒಂದು ಒಳ್ಳೆಯದನ್ನು ಕಂಡುಕೊಂಡೆನು. ಏಕೆಂದರೆ ಇದು ಮನುಷ್ಯನ ಪಾಲು.


ಆದಕಾರಣ ಮನುಷ್ಯನು ತನ್ನ ಕೆಲಸ ಕಾರ್ಯಗಳಲ್ಲಿ ಆನಂದಿಸುವುದಕ್ಕಿಂತ ಉತ್ತಮವಾದದ್ದು ಯಾವುದೂ ಇಲ್ಲವೆಂದು ನಾನು ನೋಡಿದೆನು. ಏಕೆಂದರೆ ಇದೇ ಅವನ ಪಾಲು. ಆದ್ದರಿಂದ ತನ್ನ ಜೀವಮಾನದ ನಂತರ ಸಂಭವಿಸುವುದನ್ನು ನೋಡುವುದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು?


ಒಬ್ಬ ವ್ಯಕ್ತಿ ತನ್ನ ಪ್ರಯಾಸದಲ್ಲಿ ತೃಪ್ತಿಹೊಂದುವಂತೆ ತಿಂದು ಕುಡಿಯುವುದಕ್ಕಿಂತ ಶ್ರೇಷ್ಠವಾದದ್ದು ಮನುಷ್ಯನಿಗೆ ಯಾವುದೂ ಇಲ್ಲ. ಇದೂ ಕೂಡ ದೇವರ ಕೈಯಿಂದಲೇ ಆಗುತ್ತದೆ ಎಂದು ನಾನು ಕಂಡೆನು.


ಮನೆಯೂ ಸಂಪತ್ತೂ ಪಿತೃಗಳ ಸ್ವಾಸ್ತ್ಯವು; ವಿವೇಕಿಯಾದ ಹೆಂಡತಿಯು ಯೆಹೋವ ದೇವರಿಂದಲೇ.


ಪತ್ನಿಯನ್ನು ದೊರಕಿಸಿಕೊಂಡವನು ಒಳ್ಳೆಯದನ್ನು ಸಂಪಾದಿಸಿದವನಾಗಿ, ಯೆಹೋವ ದೇವರ ದಯೆಯನ್ನು ಹೊಂದುತ್ತಾನೆ.


ಮನುಷ್ಯನು ಕೇವಲ ಉಸಿರಿನಂತಿದ್ದಾನೆ; ಅವನ ದಿವಸಗಳು ಅಳಿದು ಹೋಗುವ ನೆರಳಿನ ಹಾಗಿವೆ.


ಇಗೋ, ನನ್ನ ದಿವಸಗಳನ್ನು ಅಂಗೈ ಅಗಲದಷ್ಟು ಮಾಡಿದ್ದೀರಿ. ನನ್ನ ಆಯುಷ್ಯವು ನಿಮ್ಮ ಮುಂದೆ ಏನೂ ಇಲ್ಲದ ಹಾಗಿದೆ; ಪ್ರತಿ ಮನುಷ್ಯನ ಜೀವನ ಬರೀ ಉಸಿರೇ.


ಅವನು ಅಲ್ಲಿ ಬಹಳ ದಿನಗಳಿದ್ದ ಮೇಲೆ, ಒಂದು ದಿನ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನು ಕಿಟಕಿಯಿಂದ ನೋಡುತ್ತಿದ್ದಾಗ, ಇಸಾಕನು ತನ್ನ ಹೆಂಡತಿಯಾದ ರೆಬೆಕ್ಕಳ ಸಂಗಡ ಸರಸಮಾಡುವುದನ್ನು ಕಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು