Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 1:14 - ಕನ್ನಡ ಸಮಕಾಲಿಕ ಅನುವಾದ

14 ನಾನು ಸೆರೆಯಲ್ಲಿರುವುದರಿಂದಲೇ ಕರ್ತ ದೇವರಲ್ಲಿರುವ ಅನೇಕ ಸಹೋದರರು ಭಯವಿಲ್ಲದೆಯೂ ಭರವಸೆಯಿಂದಲೂ ಸುವಾರ್ತೆಯ ವಾಕ್ಯವನ್ನು ಮಾತನಾಡುವುದಕ್ಕೆ ಪ್ರೋತ್ಸಾಹ ಹೊಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇದಲ್ಲದೆ ಸಹೋದರರಲ್ಲಿ ಬಹಳ ಜನರು ನನ್ನ ಬಂಧನದಿಂದಲೇ ಕರ್ತನಲ್ಲಿ ಭರವಸವುಳ್ಳವರಾಗಿ ದೇವರ ವಾಕ್ಯವನ್ನು ನಿರ್ಭಯದಿಂದ ಹೇಳುವುದಕ್ಕೆ ಇನ್ನೂ ಹೆಚ್ಚು ಧೈರ್ಯಹೊಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನನ್ನ ಬಂಧನದಿಂದಾಗಿ ನಮ್ಮ ಸಹೋದರರಲ್ಲಿ ಅನೇಕರು ದೇವರಲ್ಲಿ ಭರವಸೆಯಿಟ್ಟಿರುವರು. ಅಳುಕಿಲ್ಲದೆ, ಅಂಜಿಕೆಯಿಲ್ಲದೆ ದಿಟ್ಟತನದಿಂದ ಶುಭಸಂದೇಶವನ್ನು ಅವರು ಸಾರುತ್ತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇದಲ್ಲದೆ ಸಹೋದರರಲ್ಲಿ ಬಹಳ ಜನರು ನನ್ನ ಬೇಡಿಗಳಿಂದಲೇ ಕರ್ತನಲ್ಲಿ ಭರವಸವುಳ್ಳವರಾಗಿ ದೇವರ ವಾಕ್ಯವನ್ನು ನಿರ್ಭಯದಿಂದ ಹೇಳುವದಕ್ಕೆ ಇನ್ನೂ ವಿಶೇಷ ಧೈರ್ಯಹೊಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾನಿನ್ನೂ ಸೆರೆಮನೆಯಲ್ಲಿದ್ದೇನೆ. ಆದರೆ ನನ್ನ ಈ ಸ್ಥಿತಿಯಿಂದ ಅನೇಕ ವಿಶ್ವಾಸಿಗಳು ಪ್ರೋತ್ಸಾಹಿತರಾಗಿ ಕ್ರಿಸ್ತನ ವಿಷಯವಾದ ಸಂದೇಶವನ್ನು ಮತ್ತಷ್ಟು ಧೈರ್ಯದಿಂದ ಜನರಿಗೆ ಹೇಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅನಿ ಮಾಜ್ಯಾ ಭಾವಾನಿ ಅನಿ ಭೆನಿಯಾನಿ ಲೈ ಲೊಕಾನಿ ಮಾಕಾ ಬಂಧಿಖಾನ್ಯಾತ್ ಥವಲ್ಲ್ಯಾ ಸಾಟಿಚ್ ಕ್ರಿಸ್ತಾಚ್ಯಾ ವರ್‍ತಿ ಬರೊಸೊ ಥವ್ನ್ ಘೆವ್ನ್ ದೆವಾಚಿ ಬರಿ ಖಬರ್ ಭಿಂಯೆನಸ್ತಾನಾ ಸಾಂಗುಕ್ ಅನಿಬಿ ಧೈರ್ಯ್ ಕರುನ್ ಘೆಟ್ಲ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 1:14
16 ತಿಳಿವುಗಳ ಹೋಲಿಕೆ  

ಫಿಲಿಪ್ಪಿ ಪಟ್ಟಣದಲ್ಲಿ ಮುಂಚೆ ನಮಗೆ ಹಿಂಸೆ ಮತ್ತು ಅವಮಾನವು ಸಂಭವಿಸಿದ್ದನ್ನು ನೀವು ಬಲ್ಲಿರಿ. ಹಾಗಿದ್ದರೂ ನಾವು ನಮ್ಮ ದೇವರ ಸಹಾಯದಿಂದ ಧೈರ್ಯಗೊಂಡು ಬಹು ವಿರೋಧದ ನಡುವೆ ನಿಮಗೆ ಸುವಾರ್ತೆಯನ್ನು ತಿಳಿಸಿದೆವು.


ನಾವು ನಮ್ಮ ಶತ್ರುಗಳ ಕೈಯಿಂದ ಬಿಡುಗಡೆಹೊಂದಿ ನಿರ್ಭಯವುಳ್ಳವರಾಗಿಯೂ


ಆದಕಾರಣ ನಾನು ಆ ರಹಸ್ಯವನ್ನು ಮಾಡಬಯಸುವ ರೀತಿಯಲ್ಲಿ ಸ್ಪಷ್ಟವಾಗಿ ಸಾರುವಂತೆಯೂ ಬೇಡಿಕೊಳ್ಳಿರಿ.


ನಿಮ್ಮೆಲ್ಲರ ವಿಷಯದಲ್ಲಿ ಹೀಗೆ ಯೋಚಿಸುವುದು ನನಗೆ ಸೂಕ್ತವಾಗಿದೆ. ಏಕೆಂದರೆ ನಾನು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ. ನಾನು ಬೇಡಿಗಳಿಂದ ಸೆರೆಯಲ್ಲಿರುವಾಗಲೂ ಸುವಾರ್ತೆಯನ್ನು ಸಮರ್ಥಿಸಿ ದೃಢಪಡಿಸುವಾಗಲೂ ನೀವೆಲ್ಲರು ನನ್ನೊಂದಿಗಿರುವ ಕೃಪೆಯಲ್ಲಿ ಪಾಲುಗಾರರಾಗಿದ್ದೀರಿ.


ಪ್ರಿಯ ಸಹೋದರನೂ ನಂಬಿಗಸ್ತ ಸೇವಕನೂ ಮತ್ತು ಕರ್ತ ಯೇಸುವಿನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ವಿಷಯವನ್ನೆಲ್ಲಾ ನಿಮಗೆ ತಿಳಿಸುವನು.


ಹೀಗಿರಲಾಗಿ, ನನಗೆ ಆಪ್ತರೂ ನಾನು ಹಂಬಲಿಸುವವರೂ ಆದ ನನ್ನ ಪ್ರಿಯರೇ, ನನ್ನ ಆನಂದವೂ ಕಿರೀಟವೂ ಆಗಿರುವ ಸ್ನೇಹಿತರೇ, ಈಗಲೂ ಕರ್ತ ದೇವರಲ್ಲಿ ದೃಢವಾಗಿ ನಿಲ್ಲಿರಿ!


ಆದ್ದರಿಂದ, ನಿಮಗಾಗಿ ನನಗುಂಟಾದ ಸಂಕಟಗಳು ನಿಮಗೆ ಮಹಿಮೆಯಾಗಿರುವುದರಿಂದ, ನೀವು ಧೈರ್ಯಗೆಡಬಾರದೆಂದು ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


ಇಂಥಾ ನಿರೀಕ್ಷೆಯು ನಮಗಿರುವುದರಿಂದ ನಾವು ಬಹಳ ಧೈರ್ಯಶಾಲಿಗಳಾಗಿದ್ದೇವೆ.


ನಿಮ್ಮ ಮೇಲೆ ನನಗೆ ಪರಿಪೂರ್ಣ ಭರವಸೆ ಇದೆ. ನಿಮ್ಮ ಬಗ್ಗೆ ನಾನು ಹೆಮ್ಮೆಪಡುತ್ತೇನೆ. ನಾನು ಬಹಳವಾಗಿ ಪ್ರೋತ್ಸಾಹ ಹೊಂದಿ, ನಮಗೆ ಬಂದಿದ್ದ ಎಲ್ಲಾ ಸಂಕಟಗಳಲ್ಲಿ ನಾವು ನಿಮ್ಮಿಂದ ಮಿತಿಯಿಲ್ಲದಷ್ಟು ಆನಂದಪಡುತ್ತಿದ್ದೇನೆ.


ಹೇಗೆಂದರೆ, ನಾನು ಯಾವ ವಿಷಯದಲ್ಲೂ ನಾಚಿಕೆಪಡದೆ ಎಂದಿನಂತೆ ಈಗಲೂ ಪೂರ್ಣ ಧೈರ್ಯದಿಂದಿರುವಂತೆಯೇ ಬದುಕಿದರೂ ಸತ್ತರೂ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂಬುದೇ ನನ್ನ ಬಯಕೆಯೂ ನಿರೀಕ್ಷೆಯೂ ಆಗಿದೆ.


ಈ ಸುವಾರ್ತೆಗಾಗಿ ನಾನು ಕಷ್ಟವನ್ನು ಅನುಭವಿಸಿ ದುಷ್ಕರ್ಮಿಯಂತೆ ಬೇಡಿಗಳಿಂದ ಬಂಧಿತನಾಗಿದ್ದೇನೆ. ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.


ಯೇಸು ಕೈಬತ್ತಿದವನಿಗೆ, “ಎದ್ದು ಮುಂದೆ ಬಾ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು