Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 1:30 - ಕನ್ನಡ ಸಮಕಾಲಿಕ ಅನುವಾದ

30 ನೀವು ನನ್ನಲ್ಲಿ ಕಂಡು, ಈಗ ನನ್ನಲ್ಲಿರುವುದೆಂದು ಕೇಳುತ್ತಿರುವ ಅದೇ ಹೋರಾಟದ ಅನುಭವವೇ ನಿಮಗೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಹೀಗೆ ನೀವು ನನ್ನಲ್ಲಿ ಕಂಡಂಥ ಮತ್ತು ಈಗ ನನ್ನ ಕುರಿತಾಗಿ ಕೇಳುವಂಥ ಅದೇ ಹೋರಾಟವು ನಿಮಗೂ ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ನಿಮ್ಮ ಹೋರಾಟವೂ ನಮ್ಮ ಹೋರಾಟವೂ ಒಂದೇ ಆಗಿದೆ. ನಾನು ಕ್ರಿಸ್ತಯೇಸುವಿಗಾಗಿ ಪಟ್ಟ ಕಷ್ಟವನ್ನು ನೀವು ಕಂಡಿದ್ದೀರಿ. ಈಗಲೂ ಅನುಭವಿಸುತ್ತಿದ್ದೇನೆಂದು ಅರಿತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಹೀಗೆ ನೀವು ನನ್ನಲ್ಲಿ ಕಂಡಂಥ ಮತ್ತು ಈಗ ನನ್ನಲ್ಲಿರುವದಾಗಿ ಕೇಳುವಂಥ ಅದೇ ಹೋರಾಟವು ನಿಮಗುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನಾನು ನಿಮ್ಮ ಮಧ್ಯದಲ್ಲಿದ್ದಾಗ ಸುವಾರ್ತೆಗೆ ವಿರುದ್ಧವಾಗಿದ್ದ ಜನರೊಂದಿಗೆ ಮಾಡಿದ ಹೋರಾಟವನ್ನು ನೋಡಿದ್ದೀರಿ. ಈಗಲೂ ನನಗಿರುವ ಹೋರಾಟದ ಬಗ್ಗೆ ಕೇಳುತ್ತಿದ್ದೀರಿ. ಸ್ವತಃ ನೀವೇ ಈ ರೀತಿಯ ಹೋರಾಟವನ್ನು ಹೊಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಅಶೆ ತುಮಿ ಮಾಜ್ಯಾ ವಿಶಯಾತ್ ಬಗಟಲ್ಲೆ, ಅನಿ ಅತ್ತಾ ಆಯ್ಕುಲಾಗಲೊ ಹೊರಾಟ್ ತುಮ್ಚ್ಯಾ ಸಾಟಿಬಿ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 1:30
21 ತಿಳಿವುಗಳ ಹೋಲಿಕೆ  

ಫಿಲಿಪ್ಪಿ ಪಟ್ಟಣದಲ್ಲಿ ಮುಂಚೆ ನಮಗೆ ಹಿಂಸೆ ಮತ್ತು ಅವಮಾನವು ಸಂಭವಿಸಿದ್ದನ್ನು ನೀವು ಬಲ್ಲಿರಿ. ಹಾಗಿದ್ದರೂ ನಾವು ನಮ್ಮ ದೇವರ ಸಹಾಯದಿಂದ ಧೈರ್ಯಗೊಂಡು ಬಹು ವಿರೋಧದ ನಡುವೆ ನಿಮಗೆ ಸುವಾರ್ತೆಯನ್ನು ತಿಳಿಸಿದೆವು.


ನಾನು ಒಳ್ಳೆಯ ಹೋರಾಟವನ್ನು ಮಾಡಿದ್ದೇನೆ. ನಾನು ಓಟವನ್ನು ಮುಗಿಸಿದ್ದೇನೆ. ನಾನು ವಿಶ್ವಾಸವನ್ನು ಕಾಪಾಡಿಕೊಂಡಿದ್ದೇನೆ.


ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವುದರಲ್ಲಿ, ಇನ್ನೂ ರಕ್ತವನ್ನು ಸುರಿಸುವಷ್ಟು ಅದನ್ನು ಎದುರಿಸಲಿಲ್ಲ.


“ನನ್ನಲ್ಲಿ ನಿಮಗೆ ಸಮಾಧಾನ ಇರುವಂತೆ ಇವುಗಳನ್ನು ನಾನು ನಿಮ್ಮೊಂದಿಗೆ ಮಾತನಾಡಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟವಿರುವದು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ,” ಎಂದರು.


ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಕುರಿಮರಿಯಾಗಿರುವವರ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.


ವಿಶ್ವಾಸದ ಒಳ್ಳೆಯ ಹೋರಾಟವನ್ನು ಮಾಡು. ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ದೇವರು ನಿನ್ನನ್ನು ಕರೆದಿದ್ದಾರೆ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಅರಿಕೆಯನ್ನು ಮಾಡಿದ್ದೀಯಲ್ಲಾ?


ನನ್ನಲ್ಲಿ ಬಲದಿಂದ ಕಾರ್ಯ ಮಾಡುವ ಕ್ರಿಸ್ತನ ಶಕ್ತಿಗೆ ಅನುಸಾರವಾಗಿ, ನಾನೂ ಸಹ ಪ್ರಯಾಸ ಪಡುತ್ತಾ ಈ ಗುರಿಗಾಗಿ ಹೋರಾಡುತ್ತೇನೆ.


ಹೇಗೆಂದರೆ, ನಾನು ಸೆರೆಯಲ್ಲಿರುವುದು ಕ್ರಿಸ್ತನ ನಿಮಿತ್ತವೇ ಎಂದು ಇಡೀ ರಾಜಭವನದಲ್ಲಿಯೂ ಮಿಕ್ಕಾದವರೆಲ್ಲರಿಗೂ ಚೆನ್ನಾಗಿ ತಿಳಿದಿದೆ.


ನಿಮಗಾಗಿಯೂ ಲವೊದಿಕೀಯದವರಿಗಾಗಿಯೂ ವೈಯಕ್ತಿಕವಾಗಿ ಭೇಟಿಯಾಗದವರಿಗಾಗಿಯೂ ನಾನು ಎಷ್ಟು ಶ್ರಮಿಸುತ್ತಿದ್ದೇನೆ ಎಂಬುದನ್ನು ನೀವು ತಿಳಿದಿರಬೇಕೆಂದು ನಾನು ಅಪೇಕ್ಷಿಸುತ್ತೇನೆ.


ಆದಕಾರಣ ಸಾಕ್ಷಿಗಳು ದೊಡ್ಡ ಮೇಘದಂತೆ ನಮ್ಮ ಸುತ್ತಲೂ ಇರುವುದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನೂ ನಾವು ಎಸೆದುಬಿಟ್ಟು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು