Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 1:4 - ಕನ್ನಡ ಸಮಕಾಲಿಕ ಅನುವಾದ

4 ನಾನು ನಿಮ್ಮೆಲ್ಲರಿಗೋಸ್ಕರ ಯಾವಾಗಲೂ ಮಾಡುವ ನನ್ನ ಪ್ರತಿಯೊಂದು ಪ್ರಾರ್ಥನೆಯಲ್ಲಿ ಆನಂದದಿಂದಲೇ ಬೇಡಿಕೊಳ್ಳುವವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಿಮಗೋಸ್ಕರ ಯಾವಾಗಲೂ ತುಂಬುಹೃದಯದಿಂದ ಪ್ರಾರ್ಥಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ನಿಮ್ಮೆಲ್ಲರಿಗಾಗಿ ಯಾವಾಗಲೂ ಆನಂದದಿಂದ ಪ್ರಾರ್ಥಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಅನಿ ಮಿಯಾ ತುಮ್ಚ್ಯಾ ಸಗ್ಳ್ಯಾಂಚ್ಯಾ ಸಾಟ್ನಿ ದೆವಾಕ್ಡೆ ಕುಶಿನಿ ಸದ್ದಿ ಮಾಗ್ನಿ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 1:4
14 ತಿಳಿವುಗಳ ಹೋಲಿಕೆ  

ನಾವು ನಮ್ಮ ಪ್ರಾರ್ಥನೆಗಳಲ್ಲಿ ನಿಮ್ಮನ್ನು ಸ್ಮರಿಸುತ್ತಾ ನಿಮ್ಮೆಲ್ಲರಿಗಾಗಿ ದೇವರಿಗೆ ಯಾವಾಗಲೂ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.


ನಿನ್ನ ಮಕ್ಕಳಲ್ಲಿ ಕೆಲವರು ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ ಸತ್ಯದಲ್ಲಿ ನಡೆಯುವುದನ್ನು ಕಂಡು ನಾನು ಬಹಳ ಸಂತೋಷವುಳ್ಳವನಾದೆನು.


ದೇವಪುತ್ರನ ಸುವಾರ್ತೆಯನ್ನು ಸಾರುವುದರಿಂದ ದೇವರನ್ನೇ ನನ್ನ ಆತ್ಮದಲ್ಲಿ ಸೇವೆ ಮಾಡುವವನಾಗಿದ್ದೇನೆ. ಇದಕ್ಕೆ ದೇವರೇ ನನ್ನ ಸಾಕ್ಷಿ.


ನೀವು ಒಂದೇ ಮನಸ್ಸು, ಒಂದೇ ಪ್ರೀತಿ, ಆತ್ಮ, ಹಾಗೂ ಒಂದೇ ಗುರಿಯುಳ್ಳವರಾಗಿ, ನನ್ನ ಸಂತೋಷವನ್ನು ಪರಿಪೂರ್ಣಗೊಳಿಸಿರಿ.


ಸಹೋದರನೇ, ನಿನ್ನ ಮೂಲಕ ದೇವಜನರ ಹೃದಯಗಳಿಗೆ ಉತ್ತೇಜನವಾದ್ದರಿಂದ, ನಿನ್ನ ಪ್ರೀತಿಯ ನಿಮಿತ್ತ ನನಗೆ ಬಹಳ ಆನಂದವೂ ಆದರಣೆಯೂ ಉಂಟಾದವು.


ನಾನು ಶಾರೀರಿಕವಾಗಿ ನಿಮ್ಮಿಂದ ದೂರವಾಗಿದ್ದರೂ ಆತ್ಮದಲ್ಲಿ ನಿಮ್ಮೊಂದಿಗಿದ್ದು ನೀವು ಎಷ್ಟು ಕ್ರಮವುಳ್ಳವರೆಂಬುದನ್ನೂ, ಕ್ರಿಸ್ತ ಯೇಸುವಿನಲ್ಲಿ ನಿಮ್ಮ ವಿಶ್ವಾಸ ಎಷ್ಟು ದೃಢವಾಗಿದೆ ಎಂಬುದನ್ನೂ, ನೋಡಿ ನನಗೆ ಆನಂದವಾಗುತ್ತದೆ.


ಹೀಗಿರಲಾಗಿ, ನನಗೆ ಆಪ್ತರೂ ನಾನು ಹಂಬಲಿಸುವವರೂ ಆದ ನನ್ನ ಪ್ರಿಯರೇ, ನನ್ನ ಆನಂದವೂ ಕಿರೀಟವೂ ಆಗಿರುವ ಸ್ನೇಹಿತರೇ, ಈಗಲೂ ಕರ್ತ ದೇವರಲ್ಲಿ ದೃಢವಾಗಿ ನಿಲ್ಲಿರಿ!


ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ಬಾಳುತ್ತಿದ್ದಾರೆ. ಅವರ ವಿಷಯದಲ್ಲಿ ನಾನು ನಿಮಗೆ ಹಲವಾರು ಸಾರಿ ತಿಳಿಸಿರುವಂತೆ ಈಗಲೂ ಕಣ್ಣೀರಿನಿಂದ ಹೇಳುತ್ತೇನೆ.


ಅದೇ ಪ್ರಕಾರ, ಪಶ್ಚಾತ್ತಾಪಪಟ್ಟು ದೇವರ ಕಡೆ ತಿರುಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವುದು, ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.


ಅದರಂತೆಯೇ, ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಲು ಅವಶ್ಯವಿಲ್ಲದ ತೊಂಬತ್ತೊಂಬತ್ತು ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಬಹಳ ಸಂತೋಷ ಉಂಟಾಗುವುದು ಎಂದು ನಾನು ನಿಮಗೆ ಹೇಳುತ್ತೇನೆ.


ಅವನು ಹಗಲಿರುಳು ಸಮಾಧಿಯ ಗುಹೆಗಳಲ್ಲಿಯೂ ಗುಡ್ಡಗಳಲ್ಲಿಯೂ ಇರುವವನಾಗಿ ಅರಚುತ್ತಾ ಕಲ್ಲುಗಳಿಂದ ತನ್ನನ್ನು ತಾನೇ ಚಚ್ಚಿಕೊಳ್ಳುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು