Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 1:5 - ಕನ್ನಡ ಸಮಕಾಲಿಕ ಅನುವಾದ

5 ಏಕೆಂದರೆ, ನೀವು ಮೊದಲನೆಯ ದಿನದಿಂದ ಇಂದಿನವರೆಗೂ ಸುವಾರ್ತೆಯಲ್ಲಿ ಸಹಭಾಗಿಗಳಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀವು ಮೊದಲಿನಿಂದ ಇಂದಿನವರೆಗೂ ಸುವಾರ್ತಾಪ್ರಚಾರದಲ್ಲಿ ಸಹಕಾರಿಗಳಾಗಿದ್ದೀರೆಂದು ನನ್ನ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಏಕೆಂದರೆ, ನಾನು ನಿಮ್ಮನ್ನು ಸಂಧಿಸಿದ ಮೊದಲ ದಿನದಿಂದ ಇಂದಿನವರೆಗೂ ನೀವು ನನ್ನೊಡನೆ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ಸಹಕರಿಸುತ್ತಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀವು ಮೊದಲಿನಿಂದ ಇಂದಿನವರೆಗೂ ಸುವಾರ್ತಾಪ್ರಚಾರದಲ್ಲಿ ಸಹಕಾರಿಗಳಾಗಿದ್ದೀರೆಂದು ನನ್ನ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನನ್ನ ಸುವಾರ್ತಾಸೇವೆಯಲ್ಲಿ ನೀವು ಪಾಲುಗಾರರಾದ ಕಾರಣ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ. ನೀವು ನಂಬಿಕೊಂಡಂದಿನಿಂದ ಇಲ್ಲಿಯವರೆಗೂ ನನಗೆ ಸಹಾಯ ಮಾಡಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಕಶ್ಯಾಕ್ ಮಟ್ಲ್ಯಾರ್, ಕ್ರಿಸ್ತಾಚ್ಯಾ ವಿಶಯಾತ್ ಮಾಕಾ ಬರಿ ಖಬರ್ ಸಾಂಗುಕ್ ತುಮಿ ಆಜ್ ಪತರ್ ಬಿ ಮಜತ್ ಕರ್ಲ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 1:5
23 ತಿಳಿವುಗಳ ಹೋಲಿಕೆ  

ಮೊದಲಿನಿಂದಿರುವ ನಮ್ಮ ನಿರೀಕ್ಷೆಯನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡಿದುಕೊಳ್ಳುವುದಾದರೆ ಕ್ರಿಸ್ತ ಯೇಸುವಿನ ಭಾಗಿಗಳಾಗಿದ್ದೇವಲ್ಲಾ!


ಆದಕಾರಣ ನಾನು ನಿನಗೆ ಅನ್ಯೋನ್ಯತೆವುಳ್ಳವನೆಂದು ನೀನು ಎಣಿಸುವುದಾದರೆ ನನ್ನನ್ನು ಸ್ವೀಕರಿಸಿಕೊಳ್ಳುವ ಪ್ರಕಾರವೇ ಅವನನ್ನು ಸ್ವೀಕರಿಸು.


ನಿಮ್ಮೆಲ್ಲರ ವಿಷಯದಲ್ಲಿ ಹೀಗೆ ಯೋಚಿಸುವುದು ನನಗೆ ಸೂಕ್ತವಾಗಿದೆ. ಏಕೆಂದರೆ ನಾನು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ. ನಾನು ಬೇಡಿಗಳಿಂದ ಸೆರೆಯಲ್ಲಿರುವಾಗಲೂ ಸುವಾರ್ತೆಯನ್ನು ಸಮರ್ಥಿಸಿ ದೃಢಪಡಿಸುವಾಗಲೂ ನೀವೆಲ್ಲರು ನನ್ನೊಂದಿಗಿರುವ ಕೃಪೆಯಲ್ಲಿ ಪಾಲುಗಾರರಾಗಿದ್ದೀರಿ.


ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರಬೇಕೆಂದು, ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡವೂ ಅವರ ಮಗನಾದ ಕ್ರಿಸ್ತ ಯೇಸುವಿನ ಸಂಗಡವೂ ಇರುವಂಥದ್ದು.


ಸುವಾರ್ತೆಯ ಮೂಲಕ ಯೆಹೂದ್ಯರಲ್ಲದವರೂ ಸಹ ಇಸ್ರಾಯೇಲರೊಂದಿಗೆ ವಾರಸುದಾರರೂ ಒಂದೇ ದೇಹದ ಅವಯವಗಳೂ ಕ್ರಿಸ್ತ ಯೇಸುವಿನಲ್ಲಿ ದೇವರ ವಾಗ್ದಾನದ ಸಹಪಾಲುಗಾರರೂ ಆಗಿರಬೇಕೆಂಬುದೇ ಈ ರಹಸ್ಯ.


ಪ್ರಿಯರೇ, ಮಕೆದೋನ್ಯದಲ್ಲಿರುವ ಸಭೆಗಳಿಗೆ ದೇವರು ಕೊಟ್ಟಿರುವ ಕೃಪೆಯನ್ನು ಕುರಿತು ನೀವು ತಿಳಿದಿರಬೇಕೆಂದು ನಮ್ಮ ಅಪೇಕ್ಷೆ.


ಮಕೆದೋನ್ಯ ಮತ್ತು ಅಖಾಯದವರು ಯೆರೂಸಲೇಮಿನ ಭಕ್ತರಲ್ಲಿರುವ ಬಡವರಾಗಿರುವವರಿಗೆ ಸಹಾಯ ಮಾಡುವುದು ಒಳ್ಳೆಯದೆಂದು ಭಾವಿಸಿದ್ದಾರೆ.


ದೇವರು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ಬಾಳಿದರೆ, ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಆಗ ದೇವರ ಮಗನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.


ಕ್ರಿಸ್ತ ಯೇಸುವಿನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು, ನಮ್ಮ ದೇವರ ಮತ್ತು ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ನೀತಿಯ ಮೂಲಕ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದು:


ಹೀಗಿರುವಲ್ಲಿ ನನ್ನ ಪ್ರಿಯ ಸ್ನೇಹಿತರೇ, ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರುವಾಗಲೂ ನೀವು ಯಾವಾಗಲೂ ನನಗೆ ವಿಧೇಯರಾದಂತೆ ಈಗಲೂ ವಿಧೇಯರಾಗಿ, ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ರಕ್ಷಣೆಯನ್ನು ಕಾರ್ಯರೂಪಕ್ಕೆ ತನ್ನಿರಿ.


ತಮ್ಮ ಪುತ್ರರೂ ನಮ್ಮ ಕರ್ತ ದೇವರೂ ಆಗಿರುವ ಕ್ರಿಸ್ತ ಯೇಸುವಿನ ಅನ್ಯೋನ್ಯತೆಗೆ ನಿಮ್ಮನ್ನು ಕರೆದ ದೇವರು ಪ್ರಾಮಾಣಿಕರು.


ಕೆಲವು ಕೊಂಬೆಗಳು ಮುರಿದುಹೋಗಿರುವುದಾದರೆ, ಕಾಡು ಓಲಿವ್ ಮರದಂತಿರುವ ನೀನು ಅವುಗಳ ನಡುವೆ ಕಸಿಮಾಡಿ ಉತ್ತಮ ಓಲಿವ್ ಮರದ ರಸವತ್ತಾದ ಬೇರಿನಲ್ಲಿ ಪಾಲುಹೊಂದಿರಲಾಗಿ,


ಅವರೆಲ್ಲರು ಅಪೊಸ್ತಲರ ಬೋಧನೆಯಲ್ಲಿ, ಅನ್ಯೋನ್ಯತೆಯಲ್ಲಿ, ರೊಟ್ಟಿ ಮುರಿಯುವುದರಲ್ಲಿ, ಪ್ರಾರ್ಥನೆ ಮಾಡುವುದರಲ್ಲಿ ತಮ್ಮನ್ನು ಸಮರ್ಪಿಸಿಕೊಂಡು,


ಕೊರತೆ ಇರುವ ದೇವಜನರೊಂದಿಗೆ ನಿಮಗೆ ಇರುವುದನ್ನು ಹಂಚಿಕೊಳ್ಳಿರಿ, ಅತಿಥಿ ಸತ್ಕಾರವನ್ನು ಮಾಡುತ್ತಾ ಇರಿ.


ಪ್ರಿಯರೇ, ನನಗೆ ಸಂಭವಿಸಿದ ಸಂಕಟಗಳು ಸುವಾರ್ತೆಯ ಪ್ರಗತಿಗಾಗಿಯೇ ಅನುಕೂಲವಾಯಿತು ಎಂಬುದನ್ನು ನೀವು ತಿಳಿಯಬೇಕೆಂದು ನಾನು ಅಪೇಕ್ಷಿಸುತ್ತೇನೆ.


ಇವರಾದರೋ, ನಾನು ಸುವಾರ್ತೆಗಾಗಿ ನೇಮಕವಾಗಿದ್ದೇವೆಂದು ತಿಳಿದು ಪ್ರೀತಿಯಿಂದ ಸಾರುತ್ತಾರೆ.


ಏನೇ ಸಂಭವಿಸಿದರೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿ, ದೂರದಲ್ಲಿದ್ದು ನಿಮ್ಮ ವಿಷಯವಾಗಿ ಕೇಳಿದರೂ ಸರಿ, ನೀವು ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗಾಗಿ ಒಂದೇ ಮನಸ್ಸಿನಿಂದ ಒಟ್ಟಿಗೆ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.


ಆದರೆ ತಿಮೊಥೆಯನ ಗುಣಸ್ವಭಾವವನ್ನು ನೀವು ಬಲ್ಲಿರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ಸುವಾರ್ತೆಯಲ್ಲಿ ನನ್ನೊಂದಿಗೆ ಶ್ರಮಿಸಿದ್ದಾನೆ.


ಜೀವಗ್ರಂಥದಲ್ಲಿ ಹೆಸರು ಬರೆದಿರುವ ಕ್ಲೇಮೆನ್ಸ್ ಮುಂತಾದ ನನ್ನ ಜೊತೆ ಕೆಲಸದವರೊಡನೆ ನನ್ನೊಂದಿಗೆ ಸುವಾರ್ತೆಗೋಸ್ಕರ ಪ್ರಯಾಸಪಟ್ಟ ಆ ಸ್ತ್ರೀಯರಿಗೆ ನೀನೂ ಸಹಾಯಕನಾಗಿರಬೇಕೆಂದು ನಿಜ ಜೊತೆಗಾರನೇ, ನಿನ್ನನ್ನೂ ಕೇಳಿಕೊಳ್ಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು