Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 1:7 - ಕನ್ನಡ ಸಮಕಾಲಿಕ ಅನುವಾದ

7 ನಿಮ್ಮೆಲ್ಲರ ವಿಷಯದಲ್ಲಿ ಹೀಗೆ ಯೋಚಿಸುವುದು ನನಗೆ ಸೂಕ್ತವಾಗಿದೆ. ಏಕೆಂದರೆ ನಾನು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ. ನಾನು ಬೇಡಿಗಳಿಂದ ಸೆರೆಯಲ್ಲಿರುವಾಗಲೂ ಸುವಾರ್ತೆಯನ್ನು ಸಮರ್ಥಿಸಿ ದೃಢಪಡಿಸುವಾಗಲೂ ನೀವೆಲ್ಲರು ನನ್ನೊಂದಿಗಿರುವ ಕೃಪೆಯಲ್ಲಿ ಪಾಲುಗಾರರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. ನಾನು ಬಂಧನದಲ್ಲಿರುವಾಗಲೂ, ಸುವಾರ್ತೆಯ ಕುರಿತಾದ ವಾದ-ಪ್ರತಿವಾದಗಳಲ್ಲಿಯು ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿರಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನೀವು ನನಗೆ ಆತ್ಮೀಯರು. ಆದಕಾರಣ, ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. ನಾನು ಸೆರೆಯಲ್ಲಿರುವಾಗಲೂ ಶುಭಸಂದೇಶಕ್ಕಾಗಿ ಹೋರಾಡಿ ಆದನ್ನು ಸ್ಥಿರಗೊಳಿಸುವಾಗಲೂ ದೇವರ ಅನುಗ್ರಹದಲ್ಲಿ ನೀವು ನನ್ನೊಂದಿಗೆ ಸಹಭಾಗಿಗಳಾಗಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿಮ್ಮೆಲ್ಲರ ವಿಷಯದಲ್ಲಿ ಈ ಅಭಿಪ್ರಾಯವುಳ್ಳವನಾಗಿರುವದು ನ್ಯಾಯವಾಗಿದೆ; ನಾನು ಬೇಡಿಬಿದ್ದಿರುವಾಗಲೂ ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳಿ ಸ್ಥಾಪಿಸುವಾಗಲೂ ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಿಮ್ಮೆಲ್ಲರ ವಿಷಯದಲ್ಲಿ ಈ ರೀತಿ ಆಲೋಚಿಸುವುದು ನ್ಯಾಯಬದ್ಧವಾದದ್ದೆಂದು ನನಗೆ ಗೊತ್ತಿದೆ. ನೀವು ನನ್ನ ಹೃದಯದಲ್ಲಿರುವುದರಿಂದ, ನಾನು ನಿಮಗೆ ತುಂಬ ಸಮೀಪಸ್ಥನಾಗಿದ್ದೇನೆಂದು ಭಾವಿಸುತ್ತೇನೆ. ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾದ ಕಾರಣ ನೀವು ನನಗೆ ಸಮೀಪರಾಗಿದ್ದೀರಿ. ನಾನು ಸೆರೆಯಲ್ಲಿರುವಾಗಲೂ ಸುವಾರ್ತೆಯನ್ನು ಪ್ರತಿಪಾದಿಸುವಾಗಲೂ ನಿರೂಪಿಸುವಾಗಲೂ ನೀವು ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತುಮ್ಚ್ಯಾ ಸಗ್ಳ್ಯಾಂಚ್ಯಾಸಾಟ್ನಿ ಮಾಕಾ ಅಶೆ ದಿಸ್ತಲೆ ಸಮಾಚ್ ಹಾಯ್, ಮಿಯಾ ಬಂಧಿಖಾನ್ಯಾತ್ ರ್‍ಹಾತಾನಾಬಿ, ಬರ್‍ಯಾ ಖಬ್ರೆಸಾಟ್ನಿ ಹೊಲ್ಲ್ಯಾ ವಾದಾತ್ನಿ ತುಮಿ ಸಗ್ಳ್ಯೆ ಮಾಜ್ಯಾ ವಾಂಗ್ಡಾ ದೆವಾಚ್ಯಾ ಕುರ್ಪೆತ್ ವಾಟೊ ಘೆಟ್ಲ್ಯಾಶಿ, ಮನುನ್ ತುಮ್ಕಾ ಮಾಜ್ಯಾ ಮನಾತ್ ಥವ್ನ್ ಘೆಟ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 1:7
34 ತಿಳಿವುಗಳ ಹೋಲಿಕೆ  

ನಿಮ್ಮ ಮೇಲೆ ತಪ್ಪು ಹೊರಿಸುವುದಕ್ಕಾಗಿ ನಾನು ಇದನ್ನು ನಿಮಗೆ ಹೇಳುತ್ತಿಲ್ಲ. ನಾವು ನಿಮ್ಮೊಂದಿಗೆ ಜೀವಿಸಿ, ಸಾಯುವಷ್ಟರ ಮಟ್ಟಿಗೆ ನಾವು ನಮ್ಮ ಹೃದಯದಾಳದಿಂದ ನಿಮ್ಮನ್ನು ಪ್ರೀತಿಸುತ್ತಿದ್ದೇವೆ ಎಂದು ನಾನು ಹಿಂದೆ ಹೇಳಲಿಲ್ಲವೇ?


ಏಕೆಂದರೆ, ನೀವು ಮೊದಲನೆಯ ದಿನದಿಂದ ಇಂದಿನವರೆಗೂ ಸುವಾರ್ತೆಯಲ್ಲಿ ಸಹಭಾಗಿಗಳಾಗಿದ್ದೀರಿ.


ಈ ಸುವಾರ್ತೆಗಾಗಿ ನಾನು ಕಷ್ಟವನ್ನು ಅನುಭವಿಸಿ ದುಷ್ಕರ್ಮಿಯಂತೆ ಬೇಡಿಗಳಿಂದ ಬಂಧಿತನಾಗಿದ್ದೇನೆ. ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.


ಇದು ಪೌಲನಾದ ನಾನೇ ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ.


ಹೀಗಿದ್ದರೂ, ನನ್ನ ತೊಂದರೆಗಳಲ್ಲಿ ನೀವು ಭಾಗವಹಿಸಿದ್ದು ಒಳ್ಳೆಯದಾಯಿತು.


ಏಕೆಂದರೆ ಆ ಸುವಾರ್ತೆಗಾಗಿಯೇ ಸೆರೆಯಲ್ಲಿರುವ ರಾಯಭಾರಿಯಾದ ನಾನು ಅದನ್ನು ಸಾರುವುದರಲ್ಲಿ ಧೈರ್ಯವಾಗಿ ಮಾತನಾಡುವ ಹಂಗಿನಲ್ಲಿದ್ದೇನೆ.


ಈ ಕಾರಣದಿಂದ ಯೆಹೂದ್ಯರಲ್ಲದವರಾಗಿರುವ ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ ಸೆರೆಯಾಳಾಗಿರುವ ಪೌಲನೆಂಬ ನಾನು ಹೇಳುವುದೇನೆಂದರೆ:


ಪ್ರತಿಯೊಂದು ಪಟ್ಟಣದಲ್ಲಿ ಸೆರೆಮನೆಯೂ ಬಾಧೆಯೂ ನನಗಾಗಿ ಕಾದಿವೆಯೆಂದು ಪವಿತ್ರಾತ್ಮ ದೇವರು ಎಚ್ಚರಿಸಿದ್ದಾರೆ.


ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವುದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬುದು ನಮಗೆ ಗೊತ್ತಾಗಿದೆ. ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.


ನಾನು ನನ್ನ ದೇಹವೆಂಬ ಗುಡಾರದಲ್ಲಿ ಬಾಳುವ ತನಕ ನಿಮ್ಮ ನೆನಪಿಗೆ ತರುವುದು ಯುಕ್ತವೆಂದೆಣಿಸಿದ್ದೇನೆ.


ನೀವು ಕ್ರಿಸ್ತ ಯೇಸುವಿನ ಬಾಧೆಗಳಲ್ಲಿ ಪಾಲುಗಾರರಾಗಿರುವುದರಿಂದ ಸಂತೋಷವುಳ್ಳವರಾಗಿರಿ. ಆಗ ಕ್ರಿಸ್ತ ಯೇಸುವಿನ ಮಹಿಮೆಯ ಪ್ರತ್ಯಕ್ಷತೆಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ.


ಆದ್ದರಿಂದ ಪರಿಶುದ್ಧರಾದ ಪ್ರಿಯರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಅರಿಕೆಮಾಡುವ ಅಪೊಸ್ತಲರೂ ಮಹಾಯಾಜಕರೂ ಆಗಿರುವ ಯೇಸುವನ್ನೇ ಆಲೋಚಿಸಿರಿ.


ಹೀಗಿರುವುದರಿಂದ ನಮ್ಮ ಕರ್ತ ಯೇಸುವಿನ ಸಾಕ್ಷಿಯ ವಿಷಯವಾಗಿಯೂ ಅವರ ಸೆರೆಯವನಾದ ನನ್ನ ವಿಷಯವಾಗಿಯೂ ನೀನು ನಾಚಿಕೆಪಡಬೇಡ. ಅದರ ಬದಲಾಗಿ, ದೇವರ ಶಕ್ತಿಗೆ ಅನುಸಾರವಾಗಿ, ಸುವಾರ್ತೆಗೋಸ್ಕರ ನನ್ನೊಂದಿಗೆ ಶ್ರಮೆಯನ್ನು ಅನುಭವಿಸು.


ನೀವೆಲ್ಲರೂ ಬೆಳಕಿನ ಮಕ್ಕಳೂ ಹಗಲಿನ ಮಕ್ಕಳೂ ಆಗಿದ್ದೀರಿ. ನಾವು ರಾತ್ರಿಯವರೂ ಅಲ್ಲ, ಕತ್ತಲೆಯವರೂ ಅಲ್ಲ.


ನಾವು ಕ್ರಿಸ್ತ ಯೇಸುವಿನ ರಹಸ್ಯವನ್ನು ಮಾತನಾಡುವಂತೆ ದೇವರು ನಮ್ಮ ಸಂದೇಶಕ್ಕೆ ಬಾಗಿಲನ್ನು ತೆರೆಯುವಂತೆ ನಮಗೋಸ್ಕರವೂ ಪ್ರಾರ್ಥಿಸಿರಿ. ಈ ಸೇವೆಗಾಗಿಯೇ ನಾನು ಸೆರೆಯಲ್ಲಿದ್ದೇನಲ್ಲಾ.


ಆದ್ದರಿಂದ ನೀವು ಸ್ವೀಕರಿಸಿದ ನಿಮ್ಮ ಕರೆಯುವಿಕೆಗೆ ಯೋಗ್ಯರಾಗಿ ಬಾಳಬೇಕೆಂದು ಕರ್ತನ ಸೆರೆಯಾಳಾದ ನಾನು ನಿಮ್ಮನ್ನು ಪ್ರಬೋಧಿಸುತ್ತೇನೆ.


ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಸುನ್ನತಿ ಆಗದಿದ್ದರೂ ಯಾವ ವ್ಯತ್ಯಾಸವಿರುವುದಿಲ್ಲ. ಆದರೆ ಪ್ರೀತಿಯಿಂದ ಕಾರ್ಯ ನಡೆಸುವ ನಂಬಿಕೆಯು ಮಾತ್ರ ಪ್ರಯೋಜನವಾಗಿರುತ್ತದೆ.


ನೀವೇ ನಮ್ಮ ಹೃದಯದ ಮೇಲೆ ಎಲ್ಲರೂ ಓದಿ ತಿಳಿದುಕೊಳ್ಳಬಹುದಾದ ಪತ್ರವಾಗಿರುತ್ತೀರಿ.


ಯಾವಾಗಲೂ ಸಂರಕ್ಷಿಸುತ್ತದೆ, ಯಾವಾಗಲೂ ನಂಬುತ್ತದೆ, ಯಾವಾಗಲೂ ನಿರೀಕ್ಷಿಸುತ್ತದೆ, ಯಾವಾಗಲೂ ಸಹಿಸಿಕೊಳ್ಳುತ್ತದೆ.


ನಾನು ಸುವಾರ್ತೆಯ ಆಶೀರ್ವಾದಗಳಲ್ಲಿ ಪಾಲುಗಾರನಾಗಬೇಕೆಂದು ಇದೆಲ್ಲವನ್ನು ಸುವಾರ್ತೆಗೋಸ್ಕರವೇ ಮಾಡುತ್ತೇನೆ.


ಸಹಸ್ರಾಧಿಪತಿ ಅಲ್ಲಿಗೆ ಬಂದು ಪೌಲನನ್ನು ಬಂಧಿಸಿ, ಅವನನ್ನು ಎರಡು ಸರಪಣಿಗಳಿಂದ ಕಟ್ಟಬೇಕೆಂದು ಆಜ್ಞಾಪಿಸಿದನು. ಅನಂತರ “ಇವನು ಯಾರು? ಇವನು ಮಾಡಿದ್ದೇನು?” ಎಂದು ವಿಚಾರಿಸಿದನು.


ಜೊತೆ ಹಿರಿಯನೂ ಕ್ರಿಸ್ತ ಯೇಸುವಿನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಮಹಿಮೆಯಲ್ಲಿ ಪಾಲುಗಾರನೂ ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಬೇಡಿಕೊಳ್ಳುವುದು.


ಪ್ರಿಯರೇ, ನನಗೆ ಸಂಭವಿಸಿದ ಸಂಕಟಗಳು ಸುವಾರ್ತೆಯ ಪ್ರಗತಿಗಾಗಿಯೇ ಅನುಕೂಲವಾಯಿತು ಎಂಬುದನ್ನು ನೀವು ತಿಳಿಯಬೇಕೆಂದು ನಾನು ಅಪೇಕ್ಷಿಸುತ್ತೇನೆ.


ಹೇಗೆಂದರೆ, ನಾನು ಸೆರೆಯಲ್ಲಿರುವುದು ಕ್ರಿಸ್ತನ ನಿಮಿತ್ತವೇ ಎಂದು ಇಡೀ ರಾಜಭವನದಲ್ಲಿಯೂ ಮಿಕ್ಕಾದವರೆಲ್ಲರಿಗೂ ಚೆನ್ನಾಗಿ ತಿಳಿದಿದೆ.


ನಾನು ಸೆರೆಯಲ್ಲಿರುವುದರಿಂದಲೇ ಕರ್ತ ದೇವರಲ್ಲಿರುವ ಅನೇಕ ಸಹೋದರರು ಭಯವಿಲ್ಲದೆಯೂ ಭರವಸೆಯಿಂದಲೂ ಸುವಾರ್ತೆಯ ವಾಕ್ಯವನ್ನು ಮಾತನಾಡುವುದಕ್ಕೆ ಪ್ರೋತ್ಸಾಹ ಹೊಂದಿದ್ದಾರೆ.


ಆದರೆ ತಿಮೊಥೆಯನ ಗುಣಸ್ವಭಾವವನ್ನು ನೀವು ಬಲ್ಲಿರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ಸುವಾರ್ತೆಯಲ್ಲಿ ನನ್ನೊಂದಿಗೆ ಶ್ರಮಿಸಿದ್ದಾನೆ.


ಜೀವಗ್ರಂಥದಲ್ಲಿ ಹೆಸರು ಬರೆದಿರುವ ಕ್ಲೇಮೆನ್ಸ್ ಮುಂತಾದ ನನ್ನ ಜೊತೆ ಕೆಲಸದವರೊಡನೆ ನನ್ನೊಂದಿಗೆ ಸುವಾರ್ತೆಗೋಸ್ಕರ ಪ್ರಯಾಸಪಟ್ಟ ಆ ಸ್ತ್ರೀಯರಿಗೆ ನೀನೂ ಸಹಾಯಕನಾಗಿರಬೇಕೆಂದು ನಿಜ ಜೊತೆಗಾರನೇ, ನಿನ್ನನ್ನೂ ಕೇಳಿಕೊಳ್ಳುತ್ತೇನೆ.


ಫಿಲಿಪ್ಪಿಯವರೇ, ನಾನು ಪ್ರಾರಂಭ ದಿನಗಳಲ್ಲಿ ನಿಮ್ಮ ನಡುವೆ ಸುವಾರ್ತೆ ಸಾರಿ ಮಕೆದೋನ್ಯದಿಂದ ಹೊರಟುಹೋದಾಗ, ನಿಮ್ಮನ್ನು ಬಿಟ್ಟು ಬೇರಾವ ಸಭೆಯವರು ಕೊಡುವ ಮತ್ತು ತೆಗೆದುಕೊಳ್ಳುವ ವಿಷಯದಲ್ಲಿ ಯಾರೂ ನನ್ನೊಂದಿಗೆ ಪಾಲುಗಾರರಾಗಲಿಲ್ಲ ಎಂಬುದನ್ನು ನೀವು ತಿಳಿದುಕೊಂಡಿದ್ದೀರಿ.


ಸುವಾರ್ತೆಯ ನಿಮಿತ್ತ ಸೆರೆಯಲ್ಲಿರುವ ನನಗೆ ಉಪಚಾರ ಮಾಡುವಂತೆ ನಿನಗೆ ಬದಲಾಗಿ ಓನೇಸಿಮನನನ್ನು ನನ್ನ ಬಳಿಯಲ್ಲೇ ಉಳಿಸಿಕೊಳ್ಳಲು ಅಪೇಕ್ಷಿಸಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು