Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 2:15 - ಕನ್ನಡ ಸಮಕಾಲಿಕ ಅನುವಾದ

15 ಹೀಗೆ ನೀವು ನಿಂದಾರಹಿತರೂ ದೋಷವಿಲ್ಲದವರೂ, “ನಿಷ್ಕಳಂಕರಾದ ದೇವರ ಮಕ್ಕಳಾಗಿ, ವಕ್ರವಾದ ದುಷ್ಟ ಜನಾಂಗದ ಮಧ್ಯದಲ್ಲಿ,” ಜೀವವಾಕ್ಯವನ್ನು ಹಿಡಿದುಕೊಂಡು, ಲೋಕದಲ್ಲಿ ನಕ್ಷತ್ರಗಳಂತೆ ಹೊಳೆಯುವವರಾಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಹೀಗೆ ನೀವು ನಿರ್ದೋಷಿಗಳೂ ಹಾಗೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು ವಕ್ರಬುದ್ಧಿಯುಳ್ಳ ಮೂರ್ಖ ಜಾತಿಯ ಮಧ್ಯದಲ್ಲಿ ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಿರ್ದೋಷಿಗಳೂ ನಿಷ್ಕಳಂಕರೂ ಆಗಿರಿ. ವಕ್ರಬುದ್ಧಿಯ ದುಷ್ಟಜನರ ನಡುವೆ ದೇವರ ಪರಿಶುದ್ಧ ಮಕ್ಕಳಂತೆ ಬಾಳಿರಿ. ಜೀವದಾಯಕ ಸಂದೇಶವನ್ನು ಎತ್ತಿಹಿಡಿಯಿರಿ; ಆಗ ನಕ್ಷತ್ರಗಳು ಆಕಾಶವನ್ನು ಬೆಳಗಿಸುವಂತೆ ಪ್ರಪಂಚದಲ್ಲಿ ನೀವು ಕಂಗೊಳಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಹೀಗೆ ನೀವು ನಿರ್ದೋಷಿಗಳೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು ವಕ್ರಬುದ್ಧಿಯುಳ್ಳ ಮೂರ್ಖಜಾತಿಯ ಮಧ್ಯದಲ್ಲಿ ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಗ ಮುಗ್ಧರೂ ಪರಿಶುದ್ಧರೂ ಆಗಿದ್ದು ಕಳಂಕರಹಿತವಾದ ದೇವಮಕ್ಕಳಾಗಿರುತ್ತೀರಿ. ದುಷ್ಟಜನರ ಮಧ್ಯದಲ್ಲಿ ವಾಸವಾಗಿರುವ ನೀವು ಕಾರ್ಗತ್ತಲೆಯಲ್ಲಿ ಪ್ರಕಾಶಿಸುವ ನಕ್ಷತ್ರಮಂಡಲದಂತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಅಶೆ ತುಮಿ ಚುಕ್ ನಸಲ್ಲೆ, ಅನಿ ಬರ್‍ಯಾ ಮನಾಚೆ ಹೊವ್ನ್ ಬುರ್ಶ್ಯಾ ಚಾಲಿಚ್ಯಾ ಬುದ್ ನಸಲ್ಲ್ಯಾ ಜಾತಿಚ್ಯಾ ಮದ್ದಿ ಚುಕ್ ನಸಲ್ಲೆ ದೆವಾಚಿ ಪುರಾ ಹೊವ್ನ್ ರ್‍ಹಾತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 2:15
42 ತಿಳಿವುಗಳ ಹೋಲಿಕೆ  

ನಿಮ್ಮ ನಡವಳಿಕೆಯು ಯೆಹೂದ್ಯರಲ್ಲದವರ ನಡುವೆ ಯೋಗ್ಯವಾಗಿರಲಿ, ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ, ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಕರ್ತ ಯೇಸು ನಮ್ಮನ್ನು ದರ್ಶಿಸುವ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.


ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಅವರು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ. ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆ ಸುರಿಸುತ್ತಾರೆ.


ಏಳು, ಪ್ರಕಾಶಿಸು. ಏಕೆಂದರೆ ನಿನ್ನ ಮೇಲೆ ಬೆಳಕು ಬಂತು, ಯೆಹೋವ ದೇವರ ಮಹಿಮೆಯು ನಿನ್ನ ಮೇಲೆ ಉದಯವಾಯಿತು.


ಸಮಾಧಾನದ ದೇವರು ತಾವಾಗಿಯೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ. ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಪುನರಾಗಮನದಲ್ಲಿ ನಿಮ್ಮ ಆತ್ಮ, ಪ್ರಾಣ, ಶರೀರಗಳು ದೋಷವಿಲ್ಲದೆ ಸಂಪೂರ್ಣವಾಗಿ ಸುರಕ್ಷಿತವಾಗಿರಲಿ.


ಇಸ್ರಾಯೇಲರು ತಮ್ಮನ್ನು ಕೆಡಿಸಿಕೊಂಡರು. ದೇವರ ಮಕ್ಕಳಿಗೆ ತಕ್ಕಂತೆ ನಡೆಯದವರು. ಅವರು ಮೂರ್ಖರಾದ ವಕ್ರ ಸಂತತಿ.


ಆದಕಾರಣ ಪ್ರಿಯ ಸ್ನೇಹಿತರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವುದರಿಂದ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಅವರಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವರಾಗಿರಿ.


ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ದಿನದಲ್ಲಿ ನೀವು ನಿರ್ದೋಷಿಗಳಾಗಿರುವಂತೆ ಅವರು ಕೊನೆಯತನಕವೂ ನಿಮ್ಮನ್ನು ಬಲಪಡಿಸಿ ಕಾಯುವರು.


ಯಾವುದನ್ನೂ ಕದ್ದಿಟ್ಟುಕೊಳ್ಳದೆ, ನಮ್ಮ ರಕ್ಷಕರಾದ ದೇವರ ಉಪದೇಶವನ್ನು ಎಲ್ಲಾ ವಿಷಯಗಳಲ್ಲಿಯೂ ಅಲಂಕರಿಸುವಂತೆ, ಒಳ್ಳೆಯ ನಂಬಿಗಸ್ತರೆಂದು ಎಲ್ಲದರಲ್ಲಿಯೂ ತೋರಿಸಬೇಕೆಂದು ಅವರನ್ನು ಉಪದೇಶಿಸು.


ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.


ಆದ್ದರಿಂದ, ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣರಾಗಿರುವಂತೆ ನೀವೂ ಪರಿಪೂರ್ಣರಾಗಿರಿ.


ಇದಲ್ಲದೆ ಇವರು ಸಹ ಮೊದಲು ಪರೀಕ್ಷೆಗೊಳಪಡಬೇಕು. ಅವರು ನಿಂದಾರಹಿತರಾಗಿ ಕಂಡು ಬಂದರೆ ಸಭಾ ಹಿರಿಯರಾಗಿ ಸೇವೆಮಾಡಲಿ.


ಸಭೆಯ ಮೇಲ್ವಿಚಾರಕನು ನಿಂದಾರಹಿತನಾಗಿ, ಏಕಪತ್ನಿಯುಳ್ಳವನೂ ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಗೌರವಸ್ಥನೂ ಅತಿಥಿ ಸತ್ಕಾರ ಮಾಡುವವನೂ ಬೋಧಿಸುವುದರಲ್ಲಿ ಪ್ರವೀಣನೂ ಆಗಿರಬೇಕು.


ಆಗ, ಅತ್ಯುತ್ತಮ ಕಾರ್ಯಗಳನ್ನು ನೀವು ವಿವೇಚಿಸಿಕೊಳ್ಳುವಿರಿ. ಕ್ರಿಸ್ತನ ಪುನರಾಗಮನ ದಿನದವರೆಗೆ ನೀವು ಪರಿಶುದ್ಧರಾಗಿಯೂ ನಿರ್ದೋಷಿಗಳಾಗಿಯೂ ಇರಬೇಕೆಂತಲೂ


ಅದನ್ನು ಕಳಂಕ, ಸುಕ್ಕು ಇಂಥದ್ದು ಯಾವುದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯನ್ನಾಗಿ ತಮ್ಮ ಮುಂದೆ ನಿಲ್ಲಿಸಿಕೊಳ್ಳಬೇಕೆಂದು ತಮ್ಮನ್ನೇ ಒಪ್ಪಿಸಿಕೊಟ್ಟರು.


ನಿಮ್ಮ ವಿಧೇಯತೆಯು ಎಲ್ಲಾ ಮನುಷ್ಯರಿಗೂ ಪ್ರಸಿದ್ಧವಾಯಿತು. ಆದ್ದರಿಂದ ನಾನು ನಿಮ್ಮ ವಿಷಯದಲ್ಲಿ ಸಂತೋಷಪಡುತ್ತೇನೆ. ಆದರೆ ನೀವು ಒಳ್ಳೆಯದನ್ನು ಕುರಿತು ಜ್ಞಾನಿಗಳಾಗಿಯೂ ಕೆಟ್ಟವುಗಳನ್ನು ಕುರಿತು ನಿಷ್ಕಳಂಕರಾಗಿಯೂ ಇರಬೇಕೆಂದು ಅಪೇಕ್ಷಿಸುತ್ತೇನೆ.


ಪೇತ್ರನು ಇನ್ನೂ ಅನೇಕ ಮಾತುಗಳಿಂದ ಅವರನ್ನು ಎಚ್ಚರಿಸಿ, ಸಾಕ್ಷಿ ನುಡಿದು, “ಈ ಕೆಟ್ಟ ಸಂತತಿಯಿಂದ ನಿಮ್ಮನ್ನು ರಕ್ಷಿಸಿಕೊಳ್ಳಿರಿ,” ಎಂದು ಹೇಳಿದನು.


“ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದ್ದರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.


ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರೂ ಗಗನ ಮಂಡಲಗಳಿಗಿಂತ ಉನ್ನತಕ್ಕೇರಿದಾತರೂ ಆಗಿರುವ ಇಂಥಾ ಮಹಾಯಾಜಕ ನಮಗಿದ್ದಾರೆ.


ಈ ಕಾರ್ಯಗಳ ವಿಷಯದಲ್ಲಿ, ನೀನು ಉಪದೇಶಿಸುತ್ತಾ ಇರು. ಪ್ರೋತ್ಸಾಹಮಾಡುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.


ಸಭೆಯ ಹಿರಿಯನು, ನಿಂದಾರಹಿತನೂ ಪತ್ನಿಗೆ ನಂಬಿಗಸ್ತನೂ ಆಗಿರಬೇಕು. ಅವನ ಮಕ್ಕಳು ವಿಶ್ವಾಸಿಗಳಾಗಿರಬೇಕು. ಅವರು ದುರ್ಮಾಗಿಗಳು ಇಲ್ಲವೆ ತಿರುಗಿ ಬೀಳುವವರೂ ಎಂಬ ಆರೋಪವನ್ನು ಹೊಂದಿರಬಾರದು.


ಪಾಪಮಾಡುವ ಹಿರಿಯರನ್ನು ಎಲ್ಲರ ಮುಂದೆಯೇ ಗದರಿಸು. ಇದರಿಂದ ಇತರರಿಗೂ ಎಚ್ಚರಿಕೆಯಾಗುವುದು.


ನಿಮ್ಮೊಳಗಿಂದಲೂ ಜನರು ಎದ್ದು ವಕ್ರಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳೆದುಕೊಳ್ಳುವರು.


ಯೋಹಾನನು ಉರಿದು ಪ್ರಕಾಶಿಸುವ ದೀಪವಾಗಿದ್ದನು. ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಅತ್ಯಾನಂದಪಡಲು ನೀವು ಇಚ್ಚಿಸಿದಿರಿ.


ಆದರೆ ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಅವರಿಗೆ ಒಳ್ಳೆಯದನ್ನು ಮಾಡಿರಿ. ಏನನ್ನೂ ತಿರುಗಿ ನಿರೀಕ್ಷಿಸದೆ ಸಾಲ ಕೊಡಿರಿ, ಆಗ ನಿಮ್ಮ ಪ್ರತಿಫಲ ದೊಡ್ಡದಾಗಿರುವುದು. ನೀವು ಮಹೋನ್ನತ ದೇವರ ಮಕ್ಕಳಾಗಿರುವಿರಿ, ಅವರು ಕೃತಜ್ಞತೆಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವರಾಗಿದ್ದಾರೆ.


ಆಗ ಯೇಸು, “ವಿಶ್ವಾಸವಿಲ್ಲದ ಮೂರ್ಖ ಸಂತತಿಯೇ, ಇನ್ನೂ ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,” ಎಂದು ಹೇಳಿದರು.


ಏಕೆಂದರೆ ಅಲ್ಲಿ ನ್ಯಾಯ ನಿರ್ಣಯಕ್ಕೆ ಸಿಂಹಾಸನಗಳೂ, ಅಂದರೆ, ದಾವೀದನ ಮನೆಯ ಸಿಂಹಾಸನಗಳೂ ಇರುತ್ತವೆ.


ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದಿಂದ ಕೆಲವರು ಬಂದು ನಿನ್ನ ಪಾದಕ್ಕೆ ಬೀಳುವಂತೆಯೂ ನಿನ್ನನ್ನು ನಾನು ಪ್ರೀತಿಸಿದ್ದನ್ನು ತಿಳಿಯುವಂತೆಯೂ ಮಾಡುವೆನು.


ಆದ್ದರಿಂದ ಯೌವನಸ್ಥ ವಿಧವೆಯರು ಮದುವೆಮಾಡಿಕೊಂಡು, ಮಕ್ಕಳನ್ನು ಹೆತ್ತು, ಮನೆಯ ಕೆಲಸಮಾಡಿ, ವಿರೋಧಿಯ ನಿಂದೆಗೆ ಆಸ್ಪದ ಕೊಡಬಾರದೆಂಬುದೇ ನನ್ನ ಅಪೇಕ್ಷೆ.


ವಿಧವೆಯರು ನಿಂದೆಗೆ ಗುರಿಯಾಗದಂತೆ ಇವುಗಳನ್ನು ಆಜ್ಞಾಪಿಸು.


ಆದ್ದರಿಂದ, “ಅವರ ನಡುವೆಯಿಂದ ಹೊರಟುಬಂದು ಪ್ರತ್ಯೇಕವಾಗಿರಿ. ಅಶುದ್ಧವಾದ ಯಾವುದನ್ನೂ ಮುಟ್ಟದಿರಿ, ನಾನು ನಿಮ್ಮನ್ನು ಸ್ವೀಕರಿಸುವೆನು ಎಂದು ಕರ್ತದೇವರು ಹೇಳುತ್ತಾರೆ.”


ಇವರಿಬ್ಬರೂ ಕರ್ತದೇವರ ಎಲ್ಲಾ ಆಜ್ಞೆಗಳನ್ನೂ ತೀರ್ಪುಗಳನ್ನೂ ತಪ್ಪಿಲ್ಲದೆ ಕೈಕೊಂಡು, ದೇವರ ಮುಂದೆ ನೀತಿವಂತರಾಗಿದ್ದರು.


ನೀತಿವಂತರ ಮಾರ್ಗವು ಮುಂಜಾನೆಯ ಸೂರ್ಯನ ಬೆಳಕಿನಂತೆ ಇದ್ದು, ದಿನದ ಪೂರ್ಣ ಬೆಳಕಿನವರೆಗೂ ಪ್ರಕಾಶಿಸಿ ಹೊಳೆಯುತ್ತಾ ಇರುವುದು.


ನನ್ನ ಬಾಯಿಯ ಮಾತುಗಳೆಲ್ಲಾ ನೀತಿಯುಕ್ತವಾಗಿವೆ; ಮೂರ್ಖತನವಾಗಲಿ, ವಕ್ರತೆಯಾಗಲಿ ಅವುಗಳಲ್ಲಿ ಇಲ್ಲ.


ಹೀಗಿರಲು ಉಪರಾಜರೂ, ದೇಶಾಧಿಪತಿಗಳೂ ರಾಜ್ಯಭಾರದ ವಿಷಯವಾಗಿ ದಾನಿಯೇಲನ ವಿರೋಧವಾಗಿ ತಪ್ಪು ಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ಅವನು ನಂಬಿಗಸ್ತನಾಗಿದ್ದು ಅವನಲ್ಲಿ ತಪ್ಪು ನಿರ್ಲಕ್ಷ್ಯತೆ ಇಲ್ಲದಿರುವುದರಿಂದ ಅವರಿಗೆ ಯಾವ ತಪ್ಪೂ ಸಿಗಲಾರದೆ ಹೋಯಿತು.


ಆಸಕ್ತಿಯನ್ನು ನೋಡಿದರೆ, ನಾನು ಸಭೆಯ ಹಿಂಸಕನು; ಮೋಶೆಯ ನಿಯಮದಲ್ಲಿರುವ ನೀತಿಯ ಅನುಸಾರವಾಗಿ ನಾನು ನಿರ್ದೋಷಿ.


ಆದ್ದರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ, ಅದನ್ನು ಜ್ಞಾಪಿಸಿಕೊಂಡು ಪಶ್ಚಾತ್ತಾಪಪಡು. ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನಿನ್ನ ಮನಸ್ಸು ಪರಿವರ್ತನೆ ಹೊಂದದಿದ್ದರೆ, ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು.


ಆಗ ಮೋಶೆಯ ಮುಖವು ಪ್ರಕಾಶಿಸುವುದನ್ನು ಇಸ್ರಾಯೇಲರು ನೋಡಿದ್ದರು. ಮೋಶೆ ದೇವರ ಸಂಗಡ ಮಾತನಾಡುವುದಕ್ಕೆ ಹೋಗುವವರೆಗೆ ಅವನು ತನ್ನ ಮುಖದ ಮೇಲೆ ತಿರುಗಿ ಮುಸುಕನ್ನು ಹಾಕಿಕೊಳ್ಳುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು