Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 2:30 - ಕನ್ನಡ ಸಮಕಾಲಿಕ ಅನುವಾದ

30 ಅವನು ಕ್ರಿಸ್ತನ ಸೇವೆಯ ನಿಮಿತ್ತ ಸಾಯುವ ಹಾಗಿದ್ದನು. ನೀವು ನನಗೆ ಮಾಡಲು ಸಾಧ್ಯವಾಗದೆ ಹೋದ ಸಹಾಯವನ್ನು ತಾನೇ ಪೂರ್ತಿ ಮಾಡುವುದಕ್ಕಾಗಿ, ಅವನು ತನ್ನ ಪ್ರಾಣವನ್ನೇ ಅಪಾಯಕ್ಕೆ ಗುರಿಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಕ್ರಿಸ್ತಯೇಸುವಿನ ಸೇವೆಯಲ್ಲಿ ಅವನು ಸತ್ತು ಬದುಕಿದ್ದಾನೆ. ನೀವು ಕೊಡಲು ಸಾಧ್ಯವಾಗದೆ ಹೋದ ನೆರವನ್ನು ಅವನು ನನಗೆ ಕೊಟ್ಟು ಸೇವೆಯನ್ನು ಪೂರ್ಣಗೊಳಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಅವನು ಕ್ರಿಸ್ತನ ಕೆಲಸಕ್ಕಾಗಿ ಬಹುಮಟ್ಟಿಗೆ ತನ್ನ ಪ್ರಾಣವನ್ನೇ ಕೊಟ್ಟದ್ದರಿಂದ ಅವನಿಗೆ ಮಾನ್ಯತೆ ದೊರೆಯಬೇಕು. ನನಗೆ ಸಹಾಯಮಾಡಲು ಅವನು ತನ್ನ ಪ್ರಾಣವನ್ನೇ ಅಪಾಯಕ್ಕೆ ಈಡುಮಾಡಿಕೊಂಡನು. ಈ ರೀತಿಯ ಸಹಾಯ ಮಾಡಲು ನಿಮಗೆ ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಅಶೆ ರಾತಾನಾ ತುಮಿಚ್ ಮಾಕಾ ಕರುಚೆ ಮನುನ್ ಹೊತ್ತ್ಯಾ ಉಪ್ಚಾರಾತ್ ಕಮ್ಮಿ ಫುರಾ ಕರುಕ್ ಸಾಟ್ನಿ ತೆನಿ ಆಪ್ಲ್ಯಾ ಜಿವಾಚ್ಯಾ ಆಶ್ಯಾಕ್ ಧ್ಯಾನ್ ದಿಯ್ ನಸ್ತಾನಾ ಕ್ರಿಸ್ತಾಚ್ಯಾ ಕಾಮಾಸಾಟಿ ಮರ್ತಲ್ಯಾ ಸಾರ್ಕೊ ಹೊಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 2:30
15 ತಿಳಿವುಗಳ ಹೋಲಿಕೆ  

ಸ್ತೆಫನನೂ ಫೊರ್ತುನಾತನೂ ಅಖಾಯಿಕನೂ ಬಂದುದರಿಂದ ನನಗೆ ಸಂತೋಷವಾಯಿತು. ನೀವಿಲ್ಲದ್ದ ಕೊರತೆಯನ್ನು ಅವರು ನನಗೆ ಒದಗಿಸಿದ್ದಾರೆ.


ಅಂತೂ ಕೊನೆಯದಾಗಿ ನನ್ನ ಬಗ್ಗೆ ನಿಮಗಿರುವ ಆಸಕ್ತಿಯು ಪುನಃ ಚಿಗುರಿದ್ದಕ್ಕಾಗಿ ಕರ್ತ ದೇವರಲ್ಲಿ ಬಹಳವಾಗಿ ಆನಂದಿಸುತ್ತೇನೆ. ನೀವು ನನ್ನ ಬಗ್ಗೆ ಆಸಕ್ತಿ ಮೊದಲಿನಿಂದ ಹೊಂದಿದ್ದರೂ ಅದನ್ನು ತೋರಿಸಲು ನಿಮಗೆ ಸೂಕ್ತ ಅವಕಾಶ ಸಿಕ್ಕಿರಲಿಲ್ಲ.


ಆದರೂ ನನ್ನ ಪ್ರಾಣ ನನಗೆ ಅಮೂಲ್ಯವೆಂದು ನಾನು ಎಣಿಸುವುದಿಲ್ಲ. ಕರ್ತ ಯೇಸು ನನಗೆ ಕೊಟ್ಟ, ದೇವರ ಕೃಪೆಯ ಸುವಾರ್ತೆಗೆ ಸಾಕ್ಷಿ ಕೊಡುವ ಸೇವೆಯ ಓಟವನ್ನು ಓಡಿ ಮುಗಿಸುವುದೇ ನನ್ನ ಬಾಳಿನ ಒಂದೇ ಗುರಿಯಾಗಿದೆ.


ನಾನು ಎಲ್ಲವನ್ನೂ ಪರಿಪೂರ್ಣವಾಗಿ ಹೊಂದಿದ್ದೇನೆ. ನನಗೆ ಅಗತ್ಯಕ್ಕಿಂತಲೂ ಹೆಚ್ಚು ದೊರೆತಿದೆ. ನೀವು ಎಪಫ್ರೊದೀತನಿಂದ ಕಳುಹಿಸುವವುಗಳು ಈಗ ನನಗೆ ತಲುಪಿದೆ; ನಿಮ್ಮ ಕೊಡುಗೆ ದೇವರನ್ನು ಮೆಚ್ಚಿಸುವ ಸುಗಂಧ ಕಾಣಿಕೆಯೂ ಸ್ವೀಕೃತವಾದ ಯಜ್ಞವೂ ಆಗಿರುತ್ತವೆ.


ನಾನಂತೂ ನನಗಿರುವುದೆಲ್ಲವನ್ನೂ ನಿಮ್ಮ ಆತ್ಮಗಳಿಗೋಸ್ಕರ ಬಹು ಸಂತೋಷದಿಂದ ವೆಚ್ಚಮಾಡುತ್ತೇನೆ. ನನ್ನನ್ನು ಕೂಡ ನಿಮಗೋಸ್ಕರ ವೆಚ್ಚಮಾಡಲು ಸಿದ್ಧನಾಗಿದ್ದೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ, ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುವಿರೋ?


ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಕುರಿಮರಿಯಾಗಿರುವವರ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.


ಸುವಾರ್ತೆಯ ನಿಮಿತ್ತ ಸೆರೆಯಲ್ಲಿರುವ ನನಗೆ ಉಪಚಾರ ಮಾಡುವಂತೆ ನಿನಗೆ ಬದಲಾಗಿ ಓನೇಸಿಮನನನ್ನು ನನ್ನ ಬಳಿಯಲ್ಲೇ ಉಳಿಸಿಕೊಳ್ಳಲು ಅಪೇಕ್ಷಿಸಿದ್ದೆನು.


ಅವನು ಅಸ್ವಸ್ಥನಾಗಿ ಸಾಯುವ ಹಾಗೆ ಇದ್ದದ್ದು ನಿಜವೇ. ಆದರೆ ದೇವರು ಅವನನ್ನು ಕರುಣಿಸಿದರು. ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖ ಬಾರದಂತೆ ನನ್ನನ್ನು ಕರುಣಿಸಿದರು.


ನಿಮ್ಮ ವಿಶ್ವಾಸದಿಂದ ಬರುವ ಯಜ್ಞದ ಮೇಲೆಯೂ ಸೇವೆಯ ಮೇಲೆಯೂ ನಾನು ಪಾನಸಮರ್ಪಣೆಯಾದರೂ ಸಹ ಹರ್ಷದಿಂದ ನಿಮ್ಮೆಲ್ಲರೊಡನೆ ಆನಂದಿಸುವೆನು.


ನನ್ನ ಹಾಗೆಯೇ ತಿಮೊಥೆ ಕರ್ತನ ಸೇವೆ ಮಾಡುತ್ತಿದ್ದಾನೆ. ಅವನು ಬಂದರೆ, ಅವನು ನಿಮ್ಮೊಂದಿಗಿರುವಾಗ ಅವನಿಗೆ ಯಾವ ಭಯವೂ ಇಲ್ಲದಂತೆ ನೋಡಿಕೊಳ್ಳಿರಿ.


ಅಳಿಯುವ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವುದು, ಮರಣಾಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವುದು.


ಅವರು ನನ್ನ ಪ್ರಾಣದ ನಿಮಿತ್ತವಾಗಿ ತಮ್ಮ ಪ್ರಾಣಗಳನ್ನು ಅಪಾಯಕ್ಕೆ ಒಡ್ಡಿದರು. ಅವರಿಗೆ ನಾನು ಮಾತ್ರವೇ ಅಲ್ಲ ಯೆಹೂದ್ಯರಲ್ಲದವರು ಎಲ್ಲಾ ಸಭೆಗಳವರೂ ಕೃತಜ್ಞರಾಗಿರುತ್ತಾರೆ.


ಹೀಗಿರುವುದರಿಂದ, ನಮ್ಮೊಳಗೆ ಮರಣವು ಕಾರ್ಯ ಮಾಡುತ್ತದೆ, ಆದರೆ ನಿಮ್ಮೊಳಗೆ ಜೀವವು ಕಾರ್ಯ ಮಾಡುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು