Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 3:1 - ಕನ್ನಡ ಸಮಕಾಲಿಕ ಅನುವಾದ

1 ಕಡೆಯದಾಗಿ ನನ್ನ ಪ್ರಿಯರೇ, ಕರ್ತನಲ್ಲಿ ಆನಂದಿಸಿರಿ. ಬರೆದದ್ದನ್ನೇ ನಿಮಗೆ ಬರೆಯುವುದರಲ್ಲಿ ನನಗೆ ಬೇಸರವಿಲ್ಲ, ಅದು ನಿಮಗೆ ಸುರಕ್ಷಿತವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕಡೆಯದಾಗಿ ನನ್ನ ಸಹೋದರರೇ, ಕರ್ತನಲ್ಲಿ ಸಂತೋಷಪಡಿರಿ. ಮೊದಲು ತಿಳಿಸಿದ ಅದೇ ಮಾತುಗಳನ್ನು ಪುನಃ ನಿಮಗೆ ಬರೆಯುವುದಕ್ಕೆ ನನಗೇನೂ ಬೇಸರವಿಲ್ಲ, ಅವುಗಳು ನಿಮ್ಮನ್ನು ಭದ್ರಪಡಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಕೊನೆಯದಾಗಿ ಸಹೋದರರೇ, ಪ್ರಭುವಿನಲ್ಲಿ ಆನಂದಿಸಿರಿ. ನಾನು ನಿಮಗೆ ಮೊದಲೇ ತಿಳಿಸಿದಂತೆ ಇದನ್ನು ಮತ್ತೆ ಮತ್ತೆ ಬರೆಯುವುದರಲ್ಲಿ ನನಗೆ ಬೇಸರವಿಲ್ಲ; ಇದು ನಿಮ್ಮ ಹಿತಕ್ಕಾಗಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕಡೇ ಮಾತೇನಂದರೆ ನನ್ನ ಸಹೋದರರೇ, ಕರ್ತನಲ್ಲಿ ಸಂತೋಷಪಡಿರಿ. ಮೊದಲು ತಿಳಿಸಿದ ಮಾತುಗಳನ್ನು ತಿರಿಗಿ ನಿಮಗೆ ಬರೆಯುವದರಲ್ಲಿ ನನಗೇನೂ ಬೇಸರವಿಲ್ಲ; ನಿಮ್ಮನ್ನಾದರೋ ಅದು ದೃಢಮಾಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನನ್ನ ಸಹೋದರ ಸಹೋದರಿಯರೇ, ಪ್ರಭುವಿನಲ್ಲಿ ಸಂತೋಷವಾಗಿರಿ. ನಾನು ಮೊದಲು ಬರೆದದ್ದನ್ನೇ ಮತ್ತೆ ಬರೆಯಲು ನನಗೆ ಬೇಸರವೇನೂ ಇಲ್ಲ; ಏಕೆಂದರೆ ಅದು ನಿಮ್ಮನ್ನು ಮತ್ತಷ್ಟು ಸಂರಕ್ಷಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಆಕ್ರಿಕ್ ಮಾಜ್ಯಾ ಭಾವಾನು, ಧನಿಯಾಚ್ಯಾ ವಿಶಯಾತ್ ಖುಶಿನ್ ರ್‍ಹಾವಾ, ಅದ್ದಿ ಸಾಂಗಲ್ಲಿ ತಿಚ್ ಗೊಸ್ಟಿಯಾ ಅನಿ ಪರ್ತುನ್ ಲಿವ್ಕ್ ಮಾಕಾ ಬೆಜಾರ್ ನಾ ತೆ ತುಮ್ಕಾ ಘಟ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 3:1
46 ತಿಳಿವುಗಳ ಹೋಲಿಕೆ  

ಯಾವಾಗಲೂ ಕರ್ತ ದೇವರಲ್ಲಿ ಆನಂದಿಸಿರಿ, ಆನಂದಪಡಿರಿ ಎಂದು ಮತ್ತೆ ಹೇಳುತ್ತೇನೆ.


ಇಷ್ಟು ಮಾತ್ರವೇ ಅಲ್ಲ, ಈಗ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಾವು ದೇವರೊಂದಿಗೆ ಮಿತ್ರರಾಗಿ, ಯೇಸುವಿನ ಮೂಲಕವೇ ದೇವರಲ್ಲಿ ಉಲ್ಲಾಸ ಪಡುತ್ತೇವೆ.


ನನ್ನ ಪ್ರಿಯರೇ, ನಿಮ್ಮ ನಂಬಿಕೆಯು ವಿವಿಧ ಕಷ್ಟಗಳಿಗೆ ಗುರಿಯಾಗುವಾಗ ಅವುಗಳನ್ನು ಸಂತೋಷದಿಂದ ಎಣಿಸಿಕೊಳ್ಳಿರಿ.


ನೀವು ಕ್ರಿಸ್ತ ಯೇಸುವಿನ ಬಾಧೆಗಳಲ್ಲಿ ಪಾಲುಗಾರರಾಗಿರುವುದರಿಂದ ಸಂತೋಷವುಳ್ಳವರಾಗಿರಿ. ಆಗ ಕ್ರಿಸ್ತ ಯೇಸುವಿನ ಮಹಿಮೆಯ ಪ್ರತ್ಯಕ್ಷತೆಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ.


ಕಡೆಯದಾಗಿ ಪ್ರಿಯರೇ, ಯಾವುದು ಸತ್ಯವೂ ಯಾವುದು ಮಾನ್ಯವೂ ಯಾವುದು ನ್ಯಾಯವೂ ಯಾವುದು ಶುದ್ಧವೂ ಯಾವುದು ಪ್ರೀತಿಕರವೂ ಯಾವುದು ಮನೋಹರವೂ ಯಾವುದು ಉತ್ತಮವಾದದ್ದೋ ಯಾವುದು ಕೀರ್ತಿಗೆ ಯೋಗ್ಯವೋ ಅವೆಲ್ಲವುಗಳನ್ನೇ ಆಲೋಚಿಸಿರಿ.


ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರಿ, ಒಬ್ಬರಿಗೊಬ್ಬರೂ ಕರುಣೆಯುಳ್ಳವರಾಗಿದ್ದು ಸಹೋದರರಂತೆ ಪ್ರೀತಿಸಿರಿ. ಕನಿಕರವೂ ದೀನತೆ ಉಳ್ಳವರಾಗಿರಿ,


ಪ್ರಿಯರೇ, ಕಡೆಯ ಮಾತೇನೆಂದರೆ, ಆನಂದಪಡಿರಿ! ನಿಮ್ಮನ್ನು ಪೂರ್ಣ ಪುನಃಸ್ಥಾಪನೆಗಾಗಿ ಕ್ರಮಪಡಿಸಿಕೊಳ್ಳಿರಿ, ಉತ್ತೇಜನಗೊಳ್ಳಿರಿ, ಒಂದೇ ಮನಸ್ಸುಳ್ಳವರಾಗಿರಿ, ಸಮಾಧಾನದಿಂದಿರಿ. ಆಗ ಪ್ರೀತಿ ಹಾಗೂ ಶಾಂತಿಯ ದೇವರು ನಿಮ್ಮ ಸಂಗಡ ಇರುವರು.


ಪ್ರಿಯರೇ, ನಿಮಗೀಗ ಬರೆಯುವುದು ಎರಡನೆಯ ಪತ್ರ. ಈ ಎರಡು ಪತ್ರಗಳಲ್ಲಿಯೂ ನಿಮ್ಮ ನೆನಪಿಗೆ ತಂದು ನಿಮ್ಮ ನಿರ್ಮಲವಾದ ಮನಸ್ಸನ್ನು ಉತ್ತೇಜಿಸಿದ್ದೇನೆ.


ಕೊನೆಯದಾಗಿ, ಕರ್ತನಲ್ಲಿಯೂ ಅವರ ಪರಾಕ್ರಮ ಶಕ್ತಿಯಲ್ಲಿಯೂ ಬಲಗೊಳ್ಳಿರಿ.


ನನ್ನ ಆತ್ಮವು ನನ್ನ ರಕ್ಷಕ ದೇವರಲ್ಲಿ ಉಲ್ಲಾಸಗೊಂಡಿದೆ.


ಎಫ್ರಾಯೀಮಿನವರು ಶೂರರಂತೆ ಇರುವರು. ಅವರ ಹೃದಯವು ದ್ರಾಕ್ಷಾರಸ ಕುಡಿದವರಂತೆ ಸಂತೋಷಪಡುವುದು. ಅವರ ಮಕ್ಕಳು ಇದನ್ನು ಕಂಡು ಸಂತೋಷಿಸುವರು. ಅವರ ಹೃದಯವು ಯೆಹೋವ ದೇವರಲ್ಲಿ ಆನಂದಿಸುವುದು.


ನಿನ್ನ ದೇವರಾದ ಯೆಹೋವ ದೇವರು ನಿನ್ನೊಂದಿಗಿದ್ದಾರೆ. ನಿನ್ನನ್ನು ರಕ್ಷಿಸಲು ಶಕ್ತರಾಗಿದ್ದಾರೆ. ನಿನ್ನಲ್ಲಿ ಬಹಳವಾಗಿ ಹರ್ಷಾನಂದಗೊಳ್ಳುವರು. ತಮ್ಮ ಪ್ರೀತಿಯ ನಿಮಿತ್ತ ಅವರು ಇನ್ನು ಮುಂದೆ ನಿನ್ನನ್ನು ಖಂಡಿಸುವುದಿಲ್ಲ, ಆದರೆ ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವರು.”


ಚೀಯೋನಿನ ಪುತ್ರಿಯೇ, ಹಾಡು. ಇಸ್ರಾಯೇಲೇ ಆರ್ಭಟಿಸು; ಯೆರೂಸಲೇಮಿನ ಪುತ್ರಿಯೇ, ಪೂರ್ಣಹೃದಯದಿಂದ ಸಂಭ್ರಮಿಸಿ ಉಲ್ಲಾಸಪಡು.


ಚೀಯೋನಿನ ಜನರೇ, ನಿಮ್ಮ ದೇವರಾದ ಯೆಹೋವ ದೇವರಲ್ಲಿ ಉಲ್ಲಾಸಿಸಿರಿ, ಸಂತೋಷವಾಗಿರಿ. ಏಕೆಂದರೆ ನಿಮಗೆ ಮುಂಗಾರು ಮಳೆಯನ್ನು ಸಾಕಷ್ಟು ಕೊಡುವರು. ಮುಂಗಾರು, ಹಿಂಗಾರು ಮಳೆಗಳನ್ನು ಮೊದಲಿನ ಹಾಗೆ ನಿಮಗೆ ಸುರಿಸುವರು.


ಯೆಹೋವ ದೇವರಲ್ಲಿ ಆನಂದವಾಗಿರು; ಆಗ ಅವರು ನಿನ್ನ ಹೃದಯದ ಅಪೇಕ್ಷೆಗಳನ್ನು ಈಡೇರಿಸುವರು.


ನೀತಿವಂತರೇ, ಯೆಹೋವ ದೇವರಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; ಯಥಾರ್ಥ ಹೃದಯ ಉಳ್ಳವರೇ, ಜಯಗೀತೆ ಹಾಡಿರಿ.


ನಿಶ್ಚಯವಾಗಿ ಸರ್ವಶಕ್ತರಲ್ಲಿ ನೀನು ಆನಂದಗೊಳ್ಳುವೆ. ನಿನ್ನ ಮುಖವನ್ನು ದೇವರ ಕಡೆಗೆ ಎತ್ತುವೆ.


ಆ ದಿವಸದಲ್ಲಿ ಮಹಾ ಸಂತೋಷದಿಂದ ಯೆಹೋವ ದೇವರ ಮುಂದೆ ತಿಂದು ಕುಡಿದರು. ಎರಡನೆಯ ಸಾರಿ ದಾವೀದನ ಮಗ ಸೊಲೊಮೋನನನ್ನು ಅರಸನನ್ನಾಗಿ ಸ್ವೀಕರಿಸಿದರು. ಯೆಹೋವ ದೇವರ ಮುಂದೆ ಅವನನ್ನು ನಾಯಕನಾಗಿಯೂ ಚಾದೋಕನನ್ನು ಯಾಜಕನಾಗಿಯೂ ಅಭಿಷೇಕಿಸಿದರು.


ಏಕೆಂದರೆ ದೇವರನ್ನು ಪವಿತ್ರಾತ್ಮರಿಂದ ಆರಾಧಿಸಿ ಕ್ರಿಸ್ತ ಯೇಸುವನ್ನು ಮಹಿಮೆಪಡಿಸುತ್ತಾ ಹರ್ಷಗೊಳ್ಳುವವರೂ ಮಾಂಸದಲ್ಲಿ ಭರವಸೆಯಿಡದ ನಾವೇ ಸುನ್ನತಿಯಾಗಿದ್ದೇವೆ.


ಸಂತೋಷಪಟ್ಟು ಆನಂದಿಸಿರಿ. ಏಕೆಂದರೆ ಪರಲೋಕದಲ್ಲಿ ನಿಮಗೆ ಮಹಾ ಪ್ರತಿಫಲ ಸಿಕ್ಕುವುದು. ಅವರು ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನು ಸಹ ಇದೇ ರೀತಿಯಲ್ಲಿ ಹಿಂಸೆಪಡಿಸಿದರು.


ನಾನು ಯೆಹೋವ ದೇವರಲ್ಲಿ ಬಹಳವಾಗಿ ಸಂತೋಷಿಸುವೆನು. ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸಪಡುವುದು. ವರನು ಸೌಂದರ್ಯವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ, ವಧುವು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ, ಅವನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ. ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.


ನೀನು ಅವುಗಳನ್ನು ತೂರಲು, ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವುದು. ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವುದು. ನೀನಂತೂ ಯೆಹೋವ ದೇವರಲ್ಲಿ ಸಂತೋಷಿಸಿ, ಇಸ್ರಾಯೇಲಿನ ಪರಿಶುದ್ಧರಲ್ಲಿ ಮಹಿಮೆ ಹೊಂದುವೆ.


ಇಸ್ರಾಯೇಲು ತನ್ನನ್ನು ಉಂಟುಮಾಡಿದ ದೇವರಲ್ಲಿ ಸಂತೋಷಿಸಲಿ; ಚೀಯೋನಿನ ಜನರು ತಮ್ಮ ಅರಸರಲ್ಲಿ ಉಲ್ಲಾಸಿಸಲಿ.


ಯೆಹೋವ ದೇವರು ಆಳಿಕೆ ಮಾಡುತ್ತಾರೆ; ಭೂಮಿಯು ಉಲ್ಲಾಸಪಡಲಿ; ದ್ವೀಪಗಳ ಸಮೂಹವು ಸಂತೋಷಪಡಲಿ.


ಜನಸಮೂಹದೊಂದಿಗೆ ನಾನು ಉತ್ಸಾಹದಿಂದಲೂ ಸ್ತೋತ್ರದಿಂದಲೂ ಹಬ್ಬವನ್ನಾಚರಿಸಲು ದೇವರ ಆಲಯಕ್ಕೆ ಹೋಗಿದ್ದನ್ನು ನೆನಪಿಸಿಕೊಳ್ಳುತ್ತಾ ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು.


ಆದರೆ ನಿಮ್ಮನ್ನು ಆಶ್ರಯಿಸುವವರೆಲ್ಲರು ಆನಂದಿಸಲಿ; ಅವರು ಸದಾ ನಿಮ್ಮ ಆನಂದ ಗಾನವನ್ನು ಹಾಡಲಿ. ನಿಮ್ಮ ಹೆಸರನ್ನು ಪ್ರೀತಿಸುವವರು ನಿಮ್ಮಲ್ಲಿ ಆನಂದಿಸುವಂತೆ ಅವರನ್ನು ನಿಮ್ಮ ಸಂರಕ್ಷಣೆಯಿಂದ ಆವರಿಸಿಕೊಳ್ಳಿರಿ.


ಇದಲ್ಲದೆ ಎಜ್ರನು ಅವರಿಗೆ, “ನೀವು ಹೋಗಿ ಒಳ್ಳೆಯ ಆಹಾರವನ್ನು ತಿಂದು, ಸಿಹಿಯಾದದ್ದನ್ನು ಕುಡಿಯಿರಿ, ತಮಗಾಗಿ ಸಿದ್ಧಮಾಡಿಕೊಳ್ಳದವರಿಗೆ ಒಂದು ಪಾಲನ್ನು ಕಳುಹಿಸಿಕೊಡಿರಿ. ಈ ದಿನವು ನಮ್ಮ ಯೆಹೋವ ದೇವರಿಗೆ ಪರಿಶುದ್ಧವಾಗಿದೆ. ನೀವು ವ್ಯಥೆಪಡಬೇಡಿರಿ. ಯೆಹೋವ ದೇವರ ಆನಂದವೇ ನಿಮ್ಮ ಬಲ,” ಎಂದು ಹೇಳಿದನು.


ದೇವರ ಪರಿಶುದ್ಧ ನಾಮವನ್ನು ಹೊಗಳಿರಿ, ಯೆಹೋವ ದೇವರನ್ನು ಹುಡುಕುವವರ ಹೃದಯವು ಸಂತೋಷಿಸಲಿ.


ಹೀಗೆ ಇಸ್ರಾಯೇಲರೆಲ್ಲರೂ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಆರ್ಭಟದಿಂದಲೂ, ಕೊಂಬಿನ ಶಬ್ದದಿಂದಲೂ, ತುತೂರಿಗಳಿಂದಲೂ, ತಾಳಗಳಿಂದಲೂ ವೀಣೆಗಳನ್ನೂ, ಕಿನ್ನರಿಗಳನ್ನೂ ಬಾರಿಸುತ್ತಾ ತೆಗೆದುಕೊಂಡು ಬಂದರು.


ಹನ್ನಳು ಪ್ರಾರ್ಥಿಸಿ ಹೇಳಿದ್ದೇನೆಂದರೆ, “ನನ್ನ ಹೃದಯವು ಯೆಹೋವ ದೇವರಲ್ಲಿ ಸಂತೋಷಿಸಿತು. ನನ್ನ ಕೊಂಬು ಯೆಹೋವ ದೇವರಲ್ಲಿ ಉನ್ನತವಾಯಿತು. ನನ್ನ ಶತ್ರುಗಳ ಮುಂದೆ ನನ್ನ ಬಾಯಿ ಹೆಚ್ಚಳಪಟ್ಟಿತು. ಏಕೆಂದರೆ ನಾನು ನಿಮ್ಮ ರಕ್ಷಣೆಯಲ್ಲಿ ಹರ್ಷಿಸುತ್ತೇನೆ.


ಮತ್ತು ಅವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು, ನಿಮ್ಮ ಗಂಡು ಹೆಣ್ಣುಮಕ್ಕಳು, ದಾಸದಾಸಿಯರು, ನಿಮ್ಮ ಊರಲ್ಲಿರುವ ಲೇವಿಯರು, ಪರದೇಶದವರು, ತಂದೆತಾಯಿ ಇಲ್ಲದವರು ಹಾಗೂ ವಿಧವೆಯರು ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.


ಅವುಗಳನ್ನು ನಿಮ್ಮ ದೇವರಾದ ಯೆಹೋವ ದೇವರ ಮುಂದೆ, ಅವರು ಆಯ್ದುಕೊಳ್ಳುವ ಸ್ಥಳದಲ್ಲಿ ನೀವೂ, ನಿಮ್ಮ ಮಕ್ಕಳೂ, ನಿಮ್ಮ ದಾಸರೂ, ನಿಮ್ಮ ದಾಸಿಯರೂ, ನಿಮ್ಮ ಊರುಗಳಲ್ಲಿರುವ ಲೇವಿಯರೂ ತಿನ್ನಬೇಕು. ಹೀಗೆ ನಿಮ್ಮ ಎಲ್ಲಾ ಕೈಕೆಲಸದಲ್ಲಿ ನಿಮ್ಮ ದೇವರಾದ ಯೆಹೋವ ದೇವರ ಮುಂದೆ ನೀವು ಸಂತೋಷ ಪಡಬೇಕು.


ಪ್ರಿಯರೇ, ನೀವು ಹೇಗೆ ನಡೆದುಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿದಂತೆಯೇ ಜೀವಿಸುತಿರುವಿರಿ. ಇದರಲ್ಲಿ ನೀವು ಹೆಚ್ಚೆಚ್ಚಾಗಿ ಮಾಡಬೇಕೆಂದು ನಾವು ಕಡೆಯದಾಗಿ ನಮಗೆ ಕರ್ತ ಆಗಿರುವ ಯೇಸುವಿನಲ್ಲಿ ನಿಮ್ಮನ್ನು ಪ್ರಬೋಧಿಸುತ್ತೇವೆ ಮತ್ತು ಉತ್ತೇಜಿಸುತ್ತೇವೆ.


ಇಗೋ, ನನ್ನ ಸೇವಕರು ಹೃದಯದ ಆನಂದದಿಂದ ಹಾಡುವರು, ಆದರೆ ನೀವು ಹೃದಯದ ವ್ಯಸನದಿಂದ ಅಳುವಿರಿ ಮತ್ತು ಮುರಿದ ಆತ್ಮದಿಂದ ಗೋಳಾಡುವಿರಿ.


ನೀತಿವಂತರೇ, ಯೆಹೋವ ದೇವರಿಗಾಗಿ ಸಂತೋಷದಿಂದ ಹಾಡಿರಿ; ಯಥಾರ್ಥರು ಅವರನ್ನು ಕೊಂಡಾಡುವುದು ಯೋಗ್ಯವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು