Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 3:17 - ಕನ್ನಡ ಸಮಕಾಲಿಕ ಅನುವಾದ

17 ಪ್ರಿಯರೇ, ನೀವು ನನ್ನನ್ನು ಅನುಸರಿಸುವವರಾಗಿರಿ. ನಮ್ಮ ಹಾಗೆ ಬಾಳುವ ಆದರ್ಶದ ಪ್ರಕಾರ ನಡೆದುಕೊಳ್ಳುವವರನ್ನು ಗಮನಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಸಹೋದರರೇ, ನೀವೆಲ್ಲರು ನನ್ನೊಂದಿಗೆ ಸೇರಿ ನನ್ನನ್ನು ಅನುಸರಿಸುವವರಾಗಿರಿ ಮತ್ತು ನಾವು ತೋರಿಸಿದ ಮಾದರಿಯ ಪ್ರಕಾರ ನಡೆದುಕೊಳ್ಳುವವರನ್ನು ಲಕ್ಷ್ಯಕ್ಕೆ ತಂದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸಹೋದರರೇ, ನೀವು ನನ್ನನ್ನು ಅನುಸರಿಸಿರಿ. ನಮ್ಮಂತೆ ಆದರ್ಶಜೀವನ ನಡೆಸುವವರನ್ನು ಅನುಸರಿಸಿ ಬಾಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಸಹೋದರರೇ, ನೀವೆಲ್ಲರು ನನ್ನನ್ನು ಅನುಸರಿಸುವವರಾಗಿರಿ; ಮತ್ತು ನಾವು ನಿಮಗೆ ತೋರಿಸಿದ ಮಾದರಿಯ ಪ್ರಕಾರ ನಡೆದುಕೊಳ್ಳುವವರನ್ನು ಲಕ್ಷ್ಯಕ್ಕೆ ತಂದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಸಹೋದರ ಸಹೋದರಿಯರೇ, ನೀವೆಲ್ಲರೂ ನನ್ನಂತೆ ಜೀವಿಸಲು ಪ್ರಯತ್ನಿಸಿ. ನಾವು ನಿಮಗೆ ತೋರಿಸಿದ ಮಾದರಿಯ ಪ್ರಕಾರ ಜೀವಿಸುವವರನ್ನು ಅನುಸರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಭಾವಾನು, ತುಮಿ ಸಗ್ಳೆಬಿ ಮಿಯಾ ಕರುನ್ ದಿಲ್ಲ್ಯಾ ವಾಟೆನುಚ್ ಚಲ್ತಲ್ಯಾಕ್ನಿ ಧ್ಯಾನ್ ದಿವಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 3:17
15 ತಿಳಿವುಗಳ ಹೋಲಿಕೆ  

ನೀವು ಯಾವುದನ್ನು ನನ್ನಿಂದ ಕಲಿತು ಹೊಂದಿದ್ದೀರೋ ಮತ್ತು ಯಾವುದನ್ನು ನನ್ನಲ್ಲಿ ಕೇಳಿ ಕಂಡಿದ್ದೀರೋ ಅದನ್ನೇ ಮಾಡುವವರಾಗಿರಿ. ಆಗ ಸಮಾಧಾನದ ದೇವರು ನಿಮ್ಮೊಂದಿಗಿರುವರು.


ಆದ್ದರಿಂದ ನೀವು ನನ್ನನ್ನು ಅನುಕರಣೆ ಮಾಡುವವರಾಗಿ ಇರಬೇಕು ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ದೇವರ ಸ್ವಾಸ್ತ್ಯದ ಮೇಲೆ ದೊರೆತನ ಮಾಡುವವರಂತೆ ನಡೆಯದೆ ಮಂದೆಗೆ ಆದರ್ಶವಾಗಿಯೇ ನಡೆದುಕೊಳ್ಳಿರಿ.


ನಿಮ್ಮಿಂದ ಪೋಷಣೆ ಹೊಂದುವುದಕ್ಕೆ ನಮಗೆ ಹಕ್ಕಿಲ್ಲವೆಂದಲ್ಲ. ನೀವು ನಮ್ಮನ್ನು ಅನುಸರಿಸುವುದಕ್ಕಾಗಿ ನಿಮಗೆ ಆದರ್ಶರಾಗಿರಬೇಕೆಂದು ಹಾಗೆ ಮಾಡಿದೆವು.


ನಿಮಗೆ ದೇವರ ವಾಕ್ಯವನ್ನು ತಿಳಿಸಿ, ನಿಮ್ಮನ್ನು ನಡೆಸಿದ ನಿಮ್ಮ ಪಾಲಕರನ್ನು ಜ್ಞಾಪಕಮಾಡಿಕೊಳ್ಳಿರಿ. ಅವರು ಜೀವಿಸಿದ ದಾರಿಯ ಅಂತ್ಯ ಫಲವನ್ನು ಆಲೋಚಿಸಿ, ಅವರ ನಂಬಿಕೆಯನ್ನು ಅನುಸರಿಸಿರಿ.


ನಿನ್ನ ಯೌವನವನ್ನೂ ಯಾರೂ ತಾತ್ಸಾರ ಮಾಡದಿರಲಿ. ಆದರೆ ನಂಬುವವರಿಗೆ ನುಡಿಯಲ್ಲಿ, ನಡೆಯಲ್ಲಿ, ಪ್ರೀತಿಯಲ್ಲಿ, ವಿಶ್ವಾಸದಲ್ಲಿ, ಶುದ್ಧತ್ವದಲ್ಲಿ ನೀನೇ ಆದರ್ಶನಾಗಿರು.


ನೀವು ನಮ್ಮ ಮಾದರಿಯನ್ನು ಅನುಸರಿಸಿ ಹೇಗೆ ನಡೆಯಬೇಕೆಂದು ನೀವೇ ಬಲ್ಲಿರಿ. ಏಕೆಂದರೆ ನಾವು ನಿಮ್ಮಲ್ಲಿರುವಾಗ ಸೋಮಾರಿಗಳಾಗಿರಲಿಲ್ಲ.


ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ, ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ.


ಈ ಪತ್ರದ ಮೂಲಕ ಹೇಳಿರುವ ನಮ್ಮ ಮಾತಿಗೆ ಯಾರಾದರೂ ವಿಧೇಯರಾಗದಿದ್ದರೆ ಅಂಥವರನ್ನು ಗುರುತಿಸಿ ಅವರಿಗೆ ನಾಚಿಕೆಯಾಗುವಂತೆ ಅವರ ಸಹವಾಸದಲ್ಲಿ ಸೇರಬೇಡಿರಿ.


ನೀವು ಬಹು ಹಿಂಸೆಯಿಂದಲೂ ಪವಿತ್ರಾತ್ಮ ಪ್ರೇರಿತ ಆನಂದದಿಂದಲೂ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತ ಯೇಸುವನ್ನೂ ಅನುಸರಿಸುವವರಾಗಿದ್ದೀರಿ.


ಪ್ರಿಯರೇ, ನೀವು ಕಲಿತುಕೊಂಡ ಬೋಧನೆಗೆ ವಿರೋಧವಾಗಿರುವ ಭೇದಗಳನ್ನೂ ಅಭ್ಯಂತರಗಳನ್ನೂ ಮಾಡುವವರ ಬಗ್ಗೆ ಎಚ್ಚರಿಕೆಯಿಂದಿರಿ. ಅಂಥವರಿಂದ ದೂರವಾಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ನಿರ್ದೋಷಿಯನ್ನು ಗಮನಿಸು; ಯಥಾರ್ಥನನ್ನು ನೋಡು; ಸಮಾಧಾನ ಹುಡುಕುವವರಿಗೆ ಒಳ್ಳೆಯ ಭವಿಷ್ಯವಿದೆ.


ನಾನು ಕ್ರಿಸ್ತ ಯೇಸುವನ್ನು ಅನುಸರಿಸುವಂತೆಯೇ, ನೀವೂ ನನ್ನನ್ನು ಅನುಸರಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು