ಫಿಲಿಪ್ಪಿಯವರಿಗೆ 3:19 - ಕನ್ನಡ ಸಮಕಾಲಿಕ ಅನುವಾದ19 ವಿನಾಶನವೇ ಅವರ ಅಂತ್ಯವು. ಹೊಟ್ಟೆಯೇ ಅವರ ದೇವರು. ನಾಚಿಕೆ ಕಾರ್ಯಗಳಲ್ಲಿಯೇ ಅವರ ಪ್ರಭಾವ. ಅವರು ಲೌಕಿಕವಾದವುಗಳ ಮೇಲೆ ಮನಸ್ಸಿಡುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕೆಲಸಗಳಲ್ಲಿಯೇ ಅವರಿಗೆ ಘನತೆ, ಅವರು ಪ್ರಪಂಚದ ಕಾರ್ಯಗಳ ಕುರಿತು ಚಿಂತಿಸುವವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕಾರ್ಯಗಳಲ್ಲಿಯೇ ಅವರಿಗೆ ಹೆಮ್ಮೆ, ನಶ್ವರವಾದ ವಿಷಯಗಳಲ್ಲಿಯೇ ಅವರಿಗೆ ವ್ಯಾಮೋಹ. ಹೀಗಾಗಿ, ವಿನಾಶವೇ ಅವರ ಅಂತ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು, ಅವರು ಪ್ರಪಂಚದ ಕಾರ್ಯಗಳ ಮೇಲೆ ಮನಸ್ಸಿಡುವವರು. ನಾವಾದರೋ ಪರಲೋಕಸಂಸ್ಥಾನದವರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಅವರ ನಡತೆಯು ಅವರನ್ನು ನಾಶದೆಡೆಗೆ ನಡೆಸುತ್ತಿದೆ. ಅವರು ದೇವರ ಸೇವೆ ಮಾಡುತ್ತಿಲ್ಲ. ಆ ಜನರು ಕೇವಲ ತಮ್ಮ ಸಂತೋಷಕ್ಕಾಗಿ ಜೀವಿಸುತ್ತಿದ್ದಾರೆ. ಅವರು ನಾಚಿಕೆಕರವಾದ ಕೆಲಸಗಳನ್ನು ಮಾಡಿ, ಅವುಗಳ ಬಗ್ಗೆ ಹೆಮ್ಮೆಪಡುತ್ತಾರೆ. ಅವರು ಕೇವಲ ಈ ಲೋಕದ ವಿಷಯಗಳ ಬಗ್ಗೆ ಆಲೋಚಿಸುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ತೆಂಕಾ ಆಕ್ರಿಕ್ ಗಾವ್ತಲೆ ನಾಶುಚ್, ತೆಂಚೆ ಪೊಟುಚ್ ತೆಂಚೊ ದೆವ್, ಮರ್ಯ್ಯಾದ್ ಗೆಡಿ ಕಾಮಚ್ ತೆಂಕಾ ಗೌರವ್ ದಿತ್ಯಾತ್, ತೆನಿ ಹ್ಯಾ ಜಗಾಕ್ ಸಮಂದ್ ಪಡಲ್ಯಾ ವಿಶಯಾತ್ನಿ ಮನ್ ಥವ್ತಾತ್. ಅಧ್ಯಾಯವನ್ನು ನೋಡಿ |