Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 3:2 - ಕನ್ನಡ ಸಮಕಾಲಿಕ ಅನುವಾದ

2 ನಾಯಿಗಳಂತೆ ವರ್ತಿಸುವವರಿಗೆ ಎಚ್ಚರಿಕೆ. ದುಷ್ಟಕಾರ್ಯಮಾಡುವವರಿಗೆ ಎಚ್ಚರಿಕೆ, ಸುಳ್ಳು ಸುನ್ನತಿಗಾಗಿ ವಾಗ್ವಾದಿಸುವವರಿಗೆ ಎಚ್ಚರಿಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆ ನಾಯಿಗಳಿಗೆ ಎಚ್ಚರವಾಗಿರಿ, ದುಷ್ಕರ್ಮಿಗಳಿಗೆ ಎಚ್ಚರಿಕೆಯಾಗಿರಿ. ಸುನ್ನತಿಯೆಂದು ಹೇಳಿಕೊಂಡು ಅಂಗಚ್ಛೇದನ ಮಾಡುವವರಿಂದ ಎಚ್ಚರಿಕೆಯಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಿಮಗೆ ಸುನ್ನತಿಯಾಗಬೇಕೆಂದು ಬೋಧಿಸುವವರ ವಿಷಯದಲ್ಲಿ ಜಾಗರೂಕರಾಗಿರಿ. ಅವರು ದುಷ್ಕರ್ಮಿಗಳು, ಶ್ವಾನಗಳಿಗೆ ಸಮಾನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆ ನಾಯಿಗಳಿಗೆ ಎಚ್ಚರಿಕೆಯಾಗಿರಿ; ದುರ್ಮನಸ್ಸಿನಿಂದ ಕೆಲಸಮಾಡುವವರಿಗೆ ಎಚ್ಚರಿಕೆಯಾಗಿರಿ. ಸುನ್ನತಿಯೆಂದು ಹೇಳಿಕೊಂಡು ಅಂಗಚ್ಫೇದನ ಮಾಡುವವರಿಗೆ ಎಚ್ಚರಿಕೆಯಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಕೇಡುಮಾಡುವಂಥ ಜನರ ವಿಷಯದಲ್ಲಿ ಎಚ್ಚರಿಕೆಯಿಂದಿರಿ. ಅವರು ನಾಯಿಗಳಂತಿದ್ದಾರೆ. ಸುನ್ನತಿ ಎಂದು ಹೇಳಿಕೊಂಡು ಅಂಗಚ್ಛೇದನೆ ಮಾಡುವವರ ವಿಷಯದಲ್ಲಿ ಎಚ್ಚರಿಕೆಯಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತ್ಯಾ ಕುತ್ರ್ಯಾಂಚ್ಯಾಕ್ನಾ ಹುರ್ಶಾಕಿನ್ ರ್‍ಹಾವಾ, ಬುರ್ಶಿಕಾಮಾ ಕರ್ತಲ್ಯಾಂಚ್ಯಾಕ್ನಾ ಹುರ್ಶಾಕಿನ್ ರ್‍ಹಾವಾ, ಅಂಗ್ ಕಾಪ್ತಲ್ಯಾ ವಿಶಯಾತ್ ಹುಶ್ಯಾರ್ಕಿ ರ್‍ಹಾವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 3:2
31 ತಿಳಿವುಗಳ ಹೋಲಿಕೆ  

ಅಂಥಾ ಜನರು ಸುಳ್ಳು ಅಪೊಸ್ತಲರು, ವಂಚಿಸುವ ವರ್ತಕರು, ಕ್ರಿಸ್ತ ಯೇಸುವಿನ ಅಪೊಸ್ತಲರೆಂದು ವೇಷ ಹಾಕಿಕೊಂಡವರೂ ಆಗಿದ್ದಾರೆ.


ತಾವು ದೇವರನ್ನು ತಿಳಿದವರೆಂದು ಅವರು ವಾದಿಸುತ್ತಾರೆ. ಆದರೆ ತಮ್ಮ ಕೃತ್ಯಗಳಿಂದ ದೇವರನ್ನೇ ಅಲ್ಲಗಳೆಯುವರಾಗಿದ್ದಾರೆ. ಅವರು ಅಸಹ್ಯರೂ ಅವಿಧೇಯರೂ ಯಾವ ಸತ್ಕಾರ್ಯಗಳನ್ನು ಮಾಡುವುದಕ್ಕೆ ಅಯೋಗ್ಯರಾಗಿದ್ದಾರೆ.


ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳನ್ನು ಪ್ರೀತಿಸಿ ಅನುಸರಿಸುವರೆಲ್ಲರೂ ಹೊರಗಿರುವರು.


ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಿ ನುಂಗುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರಿಕೆ.


ವಿನಾಶನವೇ ಅವರ ಅಂತ್ಯವು. ಹೊಟ್ಟೆಯೇ ಅವರ ದೇವರು. ನಾಚಿಕೆ ಕಾರ್ಯಗಳಲ್ಲಿಯೇ ಅವರ ಪ್ರಭಾವ. ಅವರು ಲೌಕಿಕವಾದವುಗಳ ಮೇಲೆ ಮನಸ್ಸಿಡುತ್ತಾರೆ.


ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಸುನ್ನತಿ ಆಗದಿದ್ದರೂ ಯಾವ ವ್ಯತ್ಯಾಸವಿರುವುದಿಲ್ಲ. ಆದರೆ ಪ್ರೀತಿಯಿಂದ ಕಾರ್ಯ ನಡೆಸುವ ನಂಬಿಕೆಯು ಮಾತ್ರ ಪ್ರಯೋಜನವಾಗಿರುತ್ತದೆ.


ನಾಯಿಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಗುಂಪು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.


“ಕುರಿಯ ವೇಷಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆ. ಏಕೆಂದರೆ ಅವರು ಒಳಗೆ ಕ್ರೂರವಾದ ತೋಳಗಳಾಗಿದ್ದಾರೆ.


ನನ್ನ ಪ್ರಾಣವನ್ನು ಖಡ್ಗದಿಂದಲೂ ನನ್ನ ಅಮೂಲ್ಯ ಜೀವವನ್ನು ನಾಯಿಗಳ ಬಲದಿಂದಲೂ ಬಿಡಿಸಿರಿ.


ಆದರೆ ಹೇಡಿಗಳು, ನಂಬದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ, ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು!” ಎಂದು ನನಗೆ ಹೇಳಿದರು.


ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದಿಂದ ಕೆಲವರು ಬಂದು ನಿನ್ನ ಪಾದಕ್ಕೆ ಬೀಳುವಂತೆಯೂ ನಿನ್ನನ್ನು ನಾನು ಪ್ರೀತಿಸಿದ್ದನ್ನು ತಿಳಿಯುವಂತೆಯೂ ಮಾಡುವೆನು.


ಏಕೆಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆಪಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡೆಸುವವರೂ ನಮ್ಮ ಒಬ್ಬರೇ ಕರ್ತ ಆಗಿರುವ ದೇವರನ್ನು ಮತ್ತು ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಅಲ್ಲಗಳೆಯುವ ಕೆಲವು ಜನರೂ ರಹಸ್ಯವಾಗಿ ಸಭೆಯೊಳಗೆ ಹೊಕ್ಕಿದ್ದಾರೆ. ಇವರು ದಂಡನೆಗೋಸ್ಕರ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ.


ನಂಬಿಗಸ್ತನೂ ಒಳ್ಳೆಯ ಮನಸ್ಸಾಕ್ಷಿಯುಳ್ಳವನೂ ಆಗಿರು. ಕೆಲವರು ಈ ಒಳ್ಳೆಯ ಮನಸ್ಸಾಕ್ಷಿಯನ್ನು ತಳ್ಳಿಬಿಟ್ಟು ನಂಬಿಕೆಯ ಹಡಗನ್ನು ಒಡೆದವರ ಹಾಗೆ ಇದ್ದಾರೆ.


ಏಕೆಂದರೆ ದೇವರನ್ನು ಪವಿತ್ರಾತ್ಮರಿಂದ ಆರಾಧಿಸಿ ಕ್ರಿಸ್ತ ಯೇಸುವನ್ನು ಮಹಿಮೆಪಡಿಸುತ್ತಾ ಹರ್ಷಗೊಳ್ಳುವವರೂ ಮಾಂಸದಲ್ಲಿ ಭರವಸೆಯಿಡದ ನಾವೇ ಸುನ್ನತಿಯಾಗಿದ್ದೇವೆ.


ಪ್ರಿಯರೇ, ನೀವು ಸ್ವಾತಂತ್ರ್ಯಕ್ಕಾಗಿ ಕರೆಹೊಂದಿದವರು. ಆದರೆ ಆ ಸ್ವಾತಂತ್ರ್ಯವನ್ನು ಶಾರೀರಿಕ ಅನುಕೂಲಕ್ಕಾಗಿ ಉಪಯೋಗಿಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ದೀನರಾಗಿ ಸೇವೆಮಾಡಿರಿ.


ಹೊರಗೆ ಮಾತ್ರ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ. ಹೊರಗೆ ಶರೀರದಲ್ಲಿ ಮಾತ್ರ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.


“ಪವಿತ್ರವಾದದ್ದನ್ನು ನಾಯಿಗಳಿಗೆ ಕೊಡಬೇಡಿರಿ. ಹಂದಿಗಳ ಮುಂದೆ ನಿಮ್ಮ ಮುತ್ತುಗಳನ್ನು ಚೆಲ್ಲಬೇಡಿರಿ. ಹಾಗೆ ಮಾಡಿದರೆ ಹಂದಿಗಳು ಮುತ್ತುಗಳನ್ನು ತಮ್ಮ ಕಾಲುಗಳಿಂದ ತುಳಿದು ಹಾಕಿಯಾವು. ನಾಯಿಗಳು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.


ತಾನು ಕಕ್ಕಿದ್ದಕ್ಕೆ ನಾಯಿಯು ತಿರುಗುವಂತೆ ಮೂಢನು ತನ್ನ ಮೂಢತನಕ್ಕೆ ಹಿಂದಿರುಗುತ್ತಾನೆ.


ನಾನು ನಿನ್ನ ಸಂಕಟವನ್ನೂ ನಿನ್ನ ದಾರಿದ್ರ್ಯವನ್ನೂ ಬಲ್ಲೆನು. ಆದರೂ ನೀನು ಸಿರಿವಂತನೇ! ಮಾತ್ರವಲ್ಲದೇ ಅವರು ಯೆಹೂದ್ಯರಲ್ಲದಿದ್ದರೂ ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನೂ ಬಲ್ಲೆನು. ಅವರು ಸೈತಾನನ ಸಭಾಮಂದಿರದವರಾಗಿದ್ದಾರೆ.


“ನಾಯಿ ತಾನು ಕಕ್ಕಿದ್ದನ್ನು ನೆಕ್ಕಲು ತಿರುಗಿಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡಲು ತಿರುಗಿಕೊಂಡಿತು!” ಎಂಬ ನಿಜವಾದ ಗಾದೆ ಅವರಿಗೆ ಸರಿಯಾಗಿ ಅನ್ವಯಿಸುತ್ತದೆ.


ಆಗ ಅನೇಕರು ವಿಶ್ವಾಸದಿಂದ ಬಿದ್ದವರಾಗಿ ಒಬ್ಬರಿಗೊಬ್ಬರು ದ್ರೋಹ ಬಗೆಯುವರು ಮತ್ತು ಒಬ್ಬರನ್ನೊಬ್ಬರು ದ್ವೇಷಿಸುವರು.


ನಿಯಮ ಮೀರುವವರೇ, ನನ್ನಿಂದ ತೊಲಗಿರಿ, ನಾನು ನನ್ನ ದೇವರ ಆಜ್ಞೆಗಳನ್ನು ಪಾಲಿಸಲು ಬಿಡಿರಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು