Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 3:3 - ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ ದೇವರನ್ನು ಪವಿತ್ರಾತ್ಮರಿಂದ ಆರಾಧಿಸಿ ಕ್ರಿಸ್ತ ಯೇಸುವನ್ನು ಮಹಿಮೆಪಡಿಸುತ್ತಾ ಹರ್ಷಗೊಳ್ಳುವವರೂ ಮಾಂಸದಲ್ಲಿ ಭರವಸೆಯಿಡದ ನಾವೇ ಸುನ್ನತಿಯಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಿಜವಾದ ಸುನ್ನತಿಯವರು ಯಾರೆಂದರೆ, ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ, ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ, ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಿಜವಾದ ಸುನ್ನತಿ ಪಡೆದವರು ನಾವು, ಏಕೆಂದರೆ, ನಾವು ಪವಿತ್ರಾತ್ಮ ಅವರ ಪ್ರೇರಣೆಯಿಂದ ದೇವರನ್ನು ಆರಾಧಿಸುತ್ತೇವೆ. ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಹರ್ಷಿಸುತ್ತೇವೆ. ಬಾಹ್ಯಾಚರಣೆಗಳಲ್ಲೇ ನಂಬಿಕೆಯಿಡದೆ ಬಾಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಿಜವಾದ ಸುನ್ನತಿಯವರು ಯಾರಂದರೆ - ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾವಾದರೋ ನಿಜವಾದ ಸುನ್ನತಿಯನ್ನು ಹೊಂದಿದವರಾಗಿದ್ದೇವೆ; ದೇವರನ್ನು ಆತ್ಮನ ಮೂಲಕ ಆರಾಧಿಸುವವರಾಗಿದ್ದೇವೆ. ನಾವು ಕ್ರಿಸ್ತ ಯೇಸುವಿನಲ್ಲಿರಲು ಹೆಮ್ಮೆಪಡುತ್ತೇವೆ. ನಾವು ನಮ್ಮ ಮೇಲಾಗಲಿ ನಾವು ಮಾಡಬಲ್ಲವುಗಳ ಮೇಲಾಗಲಿ ಭರವಸೆ ಇಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಖರೆ ಸುನ್ನತ್ಕಾರಿ ಕೊನ್ ಮಟ್ಲ್ಯಾರ್, ದೆವಾಚ್ಯಾ ಆತ್ಮ್ಯಾಕ್ನಾ ಪ್ರೆರಿತ್ ಹೊವ್ನ್ ಆರಾದನ್ ಕರ್‍ತಲೆ, ಕ್ರಿಸ್ತ್ ಜೆಜುಚ್ಯಾ ವಿಶಯಾತ್ ಉಮ್ಮೆದಿನ್ ರ್‍ಹಾತಲೆ, ಅನಿ ಆಂಗಾಕ್ ಸಮಂದ್ ಪಡಲ್ಲ್ಯಾ ವಿಶಯಾತ್ನಿ ಬರೊಸೊ ಕರಿನಸಲ್ಲೆ ಹೊವ್ನ್ ಹೊತ್ತೆ ಅಮಿಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 3:3
32 ತಿಳಿವುಗಳ ಹೋಲಿಕೆ  

ನೀವು ಕ್ರಿಸ್ತ ಯೇಸುವಿನಲ್ಲಿ ಸ್ವೀಕರಿಸಿದ ಸುನ್ನತಿಯು ಕೈಯಿಂದ ಮಾಡಿದ್ದಲ್ಲ, ಅದು ನಿಮ್ಮ ಮಾಂಸಭಾವವನ್ನು ಆಳುವ ಇಡೀ ಸ್ವಾರ್ಥವನ್ನೇ ಬಿಟ್ಟುಬಿಡುವ ಆತ್ಮಿಕ ಸುನ್ನತಿಯಾಗಿದೆ.


ಈಗಲಾದರೋ ಒಂದು ಕಾಲದಲ್ಲಿ ನಮ್ಮನ್ನು ಯಾವುದು ಬಂಧನದಲ್ಲಿರಿಸಿತ್ತೋ ಅದಕ್ಕೆ ಸತ್ತವರಾಗಿದ್ದು ನಿಯಮದಿಂದ ಬಿಡುಗಡೆ ಹೊಂದಿದವರಾಗಿರುತ್ತೇವೆ. ಹೀಗೆ ನಾವು ಲಿಖಿತವಾದ ಹಳೆಯ ನಿಯಮದಂತೆ ನಡೆಯದೆ ಆತ್ಮದಿಂದ ನವಜೀವನದಲ್ಲಿ ನಡೆಯುವರಾಗಿದ್ದೇವೆ.


ಆಗ ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಪ್ರೀತಿಸಿ, ನೀವು ಬದುಕಿ ಬಾಳುವಂತೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಹೃದಯವನ್ನೂ, ನಿಮ್ಮ ಸಂತತಿಯ ಹೃದಯವನ್ನೂ ಪರಿಚ್ಛೇದಿಸುವರು.


ನಾವು ದೇವರ ಆತ್ಮದಿಂದ ಜೀವಿಸುತ್ತಿರಲಾಗಿ ಆತ್ಮರನ್ನನುಸರಿಸಿ ನಡೆಯೋಣ.


ನಿಮ್ಮನ್ನು ಪುನಃ ಭಯಕ್ಕೆ ದಾಸರನ್ನಾಗಿ ಮಾಡುವ ಆತ್ಮನನ್ನು ನಾವು ಹೊಂದದೆ, ಪುತ್ರತ್ವದ ಪವಿತ್ರಾತ್ಮನನ್ನೇ ಹೊಂದಿದವರಾಗಿ ದೇವರನ್ನು, “ಅಪ್ಪಾ, ತಂದೆಯೇ,” ಎಂದು ಕರೆಯುತ್ತೇವೆ.


ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವ ದೇವರಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ; ನಿಮ್ಮ ಹೃದಯಗಳ ಮುಂದೊಗಲನ್ನು ತೆಗೆದುಹಾಕಿರಿ. ಇಲ್ಲದಿದ್ದರೆ ನನ್ನ ಉಗ್ರವು ಬೆಂಕಿಯ ಹಾಗೆ ಹೊರಟು, ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾಗದ ಹಾಗೆ ಉರಿಯುವುದು.”


ದೇವರ ಪರಿಶುದ್ಧ ನಾಮವನ್ನು ಹೊಗಳಿರಿ; ಯೆಹೋವ ದೇವರನ್ನು ಹುಡುಕುವವರ ಹೃದಯವು ಸಂತೋಷಿಸಲಿ.


ಹೀಗಿರುವುದರಿಂದ ನಿಮ್ಮ ಹೃದಯದ ಸುನ್ನತಿ ಮಾಡಿಕೊಳ್ಳಿರಿ. ಇನ್ನು ಮೇಲೆ ಹಟಮಾರಿಗಳಾಗಿರಬೇಡಿರಿ.


ನೀವು ಪವಿತ್ರಾತ್ಮ ದೇವರಲ್ಲಿ ಎಲ್ಲಾ ಸಮಯಗಳಲ್ಲಿಯೂ ಸಕಲ ವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಕರ್ತನ ಜನರೆಲ್ಲರಿಗಾಗಿ ಪ್ರಾರ್ಥನೆ ಮಾಡುತ್ತಾ ಎಚ್ಚರವಾಗಿರಿ.


ದೇವಪುತ್ರನ ಸುವಾರ್ತೆಯನ್ನು ಸಾರುವುದರಿಂದ ದೇವರನ್ನೇ ನನ್ನ ಆತ್ಮದಲ್ಲಿ ಸೇವೆ ಮಾಡುವವನಾಗಿದ್ದೇನೆ. ಇದಕ್ಕೆ ದೇವರೇ ನನ್ನ ಸಾಕ್ಷಿ.


ಸೂರ್ಯೋದಯವು ಮೊದಲುಗೊಂಡು ಅಸ್ತಮಾನದವರೆಗೂ, ನನ್ನ ಹೆಸರು ಎಲ್ಲಾ ಜನಾಂಗಗಳಲ್ಲಿ ಘನವಾಗಿರುವುದು. ಪ್ರತಿಯೊಂದು ಸ್ಥಳದಲ್ಲಿಯೂ ನನ್ನ ಹೆಸರಿಗೆ ಧೂಪವೂ, ಶುದ್ಧ ಕಾಣಿಕೆಯೂ ಅರ್ಪಿಸಲಾಗುವುದು. ಏಕೆಂದರೆ ನನ್ನ ಹೆಸರು ಇತರ ಜನಾಂಗಗಳಲ್ಲಿ ಘನವಾಗಿರುವುದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಇಸ್ರಾಯೇಲಿನ ಸಂತಾನದವರೆಲ್ಲರೂ ಯೆಹೋವ ದೇವರಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.


ಪ್ರಿಯರೇ, ನೀವಾದರೋ ನಿಮಗಿರುವ ಅತಿಪರಿಶುದ್ಧವಾದ ನಂಬಿಕೆಯಲ್ಲಿ ನಿಮ್ಮನ್ನು ನಿರ್ಮಿಸಿಕೊಂಡವರಾಗಿ ಪರಿಶುದ್ಧಾತ್ಮ ದೇವರಲ್ಲಿ ಪ್ರಾರ್ಥಿಸಿರಿ.


ಆದ್ದರಿಂದ ಕ್ರಿಸ್ತ ಯೇಸುವಿನಲ್ಲಿ ದೇವರ ಸೇವೆಯ ವಿಷಯವಾಗಿ ಹೊಗಳಿಕೊಳ್ಳುತ್ತೇನೆ.


ಎತ್ತರವಾಗಲಿ, ಆಳವಾಗಲಿ ಅಥವಾ ಸೃಷ್ಟಿಯಲ್ಲಿರುವ ಬೇರೆ ಯಾವುದೇ ಆಗಲಿ ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ನಮ್ಮನ್ನು ಅಗಲಿಸಲಾಗದೆಂದು ನಮಗೆ ದೃಢ ನಿಶ್ಚಯವಿದೆ.


ಇದು ದೇವರ ವಾಕ್ಯವು ನೆರವೇರಲಿಲ್ಲ ಎಂಬಂತೆ ಅಲ್ಲ. ಏಕೆಂದರೆ ಇಸ್ರಾಯೇಲ್ ವಂಶದಲ್ಲಿ ಬಂದವರೆಲ್ಲರೂ ಇಸ್ರಾಯೇಲರಲ್ಲ.


ಅನೇಕರು ಪ್ರಾಪಂಚಿಕ ವಿಷಯಗಳಲ್ಲಿ ತಮ್ಮನ್ನು ಹೊಗಳಿಕೊಳ್ಳುವಂತೆ ನಾನೂ ಹೊಗಳಿಕೊಳ್ಳುವೆನು.


ಈ ಸೂತ್ರಕ್ಕೆ ಸರಿಯಾಗಿ ನಡೆಯುವವರೆಲ್ಲರ ಮೇಲೆಯೂ ದೇವರ ಇಸ್ರಾಯೇಲಿನ ಸಮಾಧಾನ ಹಾಗೂ ಕರುಣೆ ಇರಲಿ.


ಕ್ರಿಸ್ತ ಯೇಸುವಿನ ದಾಸರಾದ ಪೌಲ ತಿಮೊಥೆಯರು, ಕ್ರಿಸ್ತ ಯೇಸುವಿನಲ್ಲಿರುವ ಫಿಲಿಪ್ಪಿಯ ದೇವರ ಪರಿಶುದ್ಧರೆಲ್ಲರಿಗೂ, ಅವರೊಂದಿಗಿರುವ ಮೇಲ್ವಿಚಾರಕರಿಗೂ ಸಭಾಸೇವಕರಿಗೂ ಬರೆಯುವ ಪತ್ರ:


ಇದನ್ನೆಲ್ಲಾ ನಾನು ಸಾಧಿಸಿದ್ದೇನೆಂದಲ್ಲ ಅಥವಾ ಈಗಲೇ ನಾನು ಪರಿಪೂರ್ಣನಾಗಿದ್ದೇನೆಂದೂ ನಾನು ಹೇಳುತ್ತಾ ಇಲ್ಲ. ಆದರೆ ಕ್ರಿಸ್ತ ಯೇಸು ನನ್ನನ್ನು ಅನುಸರಿಸಬೇಕೆಂದು ಯಾವುದಕ್ಕಾಗಿ ಆರಿಸಿಕೊಂಡರೋ, ಆ ಪೂರ್ಣತೆಯೆಡೆಗೆ ತಲುಪುವಂತೆ ನಾನು ಪರಿಶ್ರಮಿಸುತ್ತಿದ್ದೇನೆ.


ಹೀಗೆ ನಾನು ಕ್ರಿಸ್ತ ಯೇಸುವಿನಲ್ಲಿ ದೇವರ ಸ್ವರ್ಗೀಯ ಕರೆಯ ಬಹುಮಾನದ ಗುರಿಯೆಡೆಗೆ ಮುಂದೆ ಸಾಗುತ್ತಾ ಇದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು