Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 3:6 - ಕನ್ನಡ ಸಮಕಾಲಿಕ ಅನುವಾದ

6 ಆಸಕ್ತಿಯನ್ನು ನೋಡಿದರೆ, ನಾನು ಸಭೆಯ ಹಿಂಸಕನು; ಮೋಶೆಯ ನಿಯಮದಲ್ಲಿರುವ ನೀತಿಯ ಅನುಸಾರವಾಗಿ ನಾನು ನಿರ್ದೋಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮತಾಸಕ್ತಿಯನ್ನು ನೋಡಿದರೆ ನಾನು ಕ್ರೈಸ್ತ ಸಭೆಯ ಹಿಂಸಕನು, ಧರ್ಮಶಾಸ್ತ್ರದಲ್ಲಿ ಹೇಳಿರುವ ನೀತಿಯನ್ನು ನೋಡಿದರೆ ನಾನು ನಿರ್ದೋಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಧರ್ಮಶಾಸ್ತ್ರದ ದೃಷ್ಟಿಯಲ್ಲಿ ನಿಷ್ಠಾವಂತ ಫರಿಸಾಯನು; ಮತಾಶಕ್ತಿಯ ಹಿತದೃಷ್ಟಿಯಿಂದ ಧರ್ಮಸಭೆಯ ಹಿಂಸಕನು; ಧರ್ಮಶಾಸ್ತ್ರ ವಿಧಿನಿಯಮಗಳ ಪಾಲನೆಯಲ್ಲಿ ನಿಂದಾರಹಿತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮತಾಸಕ್ತಿಯನ್ನು ನೋಡಿದರೆ ನಾನು ಕ್ರೈಸ್ತಸಭೆಯ ಹಿಂಸಕನು, ಧರ್ಮಶಾಸ್ತ್ರದಲ್ಲಿ ಹೇಳಿರುವ ನೀತಿಯನ್ನು ನೋಡಿದರೆ ನಾನು ನಿರ್ದೋಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೂದ್ಯ ಧರ್ಮದಲ್ಲಿ ಬಹಳ ಆಸಕ್ತಿಯುಳ್ಳವನಾಗಿದ್ದು ಕ್ರೈಸ್ತಸಭೆಯನ್ನು (ವಿಶ್ವಾಸಿಗಳನ್ನು) ಹಿಂಸಿಸಿದೆನು. ಮೋಶೆಯ ಧರ್ಮಶಾಸ್ತ್ರಕ್ಕೆ ಯಾವಾಗಲೂ ವಿಧೇಯನಾಗಿದ್ದುದರಿಂದ ಯಾರೂ ನನ್ನ ವಿಷಯದಲ್ಲಿ ತಪ್ಪನ್ನು ಕಂಡುಹಿಡಿಯಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಮತಾಸಕ್ತಿ ಬಗಟ್ಲ್ಯಾರ್ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ ತರಾಸ್ ದಿತಲೊ, ಖಾಯ್ದ್ಯಾಂಚ್ಯಾ ಪುಸ್ತಾಕಾತ್ ಸಾಂಗಲ್ಲಿ ನಿತ್ ಬಗಟ್ಲ್ಯಾರ್, ಮಿಯಾ ಕಾಯ್ ಚುಕ್ ಕರುಕ್ ನತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 3:6
25 ತಿಳಿವುಗಳ ಹೋಲಿಕೆ  

ಆದರೆ ಸೌಲನು ಸಭೆಯನ್ನು ಹಾಳುಮಾಡಲು ಪ್ರಾರಂಭಿಸಿದನು. ಅವನು ಮನೆಮನೆಗಳಿಗೆ ಹೋಗಿ ಸ್ತ್ರೀಪುರುಷರನ್ನು ಹೊರಗೆಳೆದು ಅವರನ್ನು ಸೆರೆಮನೆಯಲ್ಲಿ ಹಾಕಿಸಿದನು.


ನಿಮ್ಮ ನೀತಿಯು ಫರಿಸಾಯರ ಮತ್ತು ನಿಯಮ ಬೋಧಕರ ನೀತಿಗಿಂತಲೂ ಹೆಚ್ಚಿನದಾಗದಿದ್ದರೆ, ನೀವು ಪರಲೋಕ ರಾಜ್ಯವನ್ನು ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.


ಮೊದಲು ದೇವದೂಷಕನೂ ಹಿಂಸಕನೂ ಅಪಮಾನ ಮಾಡುವವನೂ ಆಗಿದ್ದ ನಾನು ಅಜ್ಞಾನಿಯಾಗಿ ಅಪನಂಬಿಕೆಯಲ್ಲಿ ಹಾಗೆ ವರ್ತಿಸಿದ್ದರೂ ದೇವರು ನನಗೆ ಕರುಣೆತೋರಿದರು.


ಹೀಗೆ ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು ಅವರಲ್ಲಿ ಒಂದಾಗಿರ ಬಯಸುತ್ತೇನೆ. ನಿಯಮದಿಂದ ಬರುವ ಸ್ವನೀತಿಯನ್ನು ಆಶ್ರಯಿಸಿಕೊಳ್ಳದೆ, ಕ್ರಿಸ್ತನನ್ನು ನಂಬುವುದರ ಮೂಲಕ ವಿಶ್ವಾಸದ ಆಧಾರದ ಮೇಲೆ ದೇವರು ಕೊಡುವ ನೀತಿಯನ್ನೇ ಹೊಂದಿದವನಾಗಿರ ಬಯಸುತ್ತೇನೆ.


ನಾನಾದರೋ ಅಪೊಸ್ತಲರಲ್ಲಿ ಕನಿಷ್ಠನು, ಅಪೊಸ್ತಲನೆನಿಸಿಕೊಳ್ಳುವುದಕ್ಕೆ ನಾನು ಯೋಗ್ಯನಲ್ಲ, ಏಕೆಂದರೆ ನಾನು ದೇವರ ಸಭೆಯನ್ನು ಹಿಂಸೆಪಡಿಸಿದೆನು.


ಒಮ್ಮೆ ನಾನು ನಿಯಮವಿಲ್ಲದೆ ಜೀವಿಸುತ್ತಿದ್ದೆನು. ಆದರೆ ಯಾವಾಗ ಆಜ್ಞೆಯು ಬಂದಿತೋ ಆಗ ಪಾಪವು ಜೀವಂತವಾಯಿತು, ನಾನು ಸತ್ತವನಾದೆನು.


ಅವರು ನಮ್ಮ ವಿಶ್ವಾಸದ ಅತಿ ಕಟ್ಟುನಿಟ್ಟಾದ ಪಂಗಡಕ್ಕೆ ತಕ್ಕಂತೆ ನಾನು ಫರಿಸಾಯನಾಗಿ ಜೀವಿಸಿದೆನೆಂಬುದಾಗಿ ತಿಳಿದವರಾಗಿದ್ದಾರೆ. ಸಾಕ್ಷಿ ಹೇಳುವುದಕ್ಕೆ, ಅವರಿಗೆ ಮನಸ್ಸಿದ್ದರೆ ಹೇಳಬಹುದು.


ಅವರು ಅದನ್ನು ಕೇಳಿ, ದೇವರನ್ನು ಕೊಂಡಾಡಿದರು. ಅನಂತರ ಪೌಲನಿಗೆ, “ಸಹೋದರನೇ, ಸಾವಿರಾರು ಜನ ಯೆಹೂದ್ಯರು ನಂಬಿರುವುದನ್ನು ಕಾಣುತ್ತೀಯಲ್ಲಾ, ಅವರೆಲ್ಲರೂ ಮೋಶೆಯ ನಿಯಮದ ಅಭಿಮಾನಿಗಳಾಗಿದ್ದರು.


ಇವರಿಬ್ಬರೂ ಕರ್ತದೇವರ ಎಲ್ಲಾ ಆಜ್ಞೆಗಳನ್ನೂ ತೀರ್ಪುಗಳನ್ನೂ ತಪ್ಪಿಲ್ಲದೆ ಕೈಕೊಂಡು, ದೇವರ ಮುಂದೆ ನೀತಿವಂತರಾಗಿದ್ದರು.


“ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ, ಆದರೆ ಅವು ಒಳಗೆ ಸುಲಿಗೆಯಿಂದಲೂ ದುರಾಶೆಯಿಂದಲೂ ತುಂಬಿರುತ್ತವೆ.


“ನೀನು ನನ್ನ ಸಂಗಡ ಬಂದು ಯೆಹೋವ ದೇವರಿಗೋಸ್ಕರ ನನಗುಂಟಾದ ಆಸಕ್ತಿಯನ್ನು ನೋಡು,” ಎಂದು ಹೇಳಿ ಅವನನ್ನು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.


ಆಗ ಅರಸನಾದ ದಾವೀದನು ಗಿಬ್ಯೋನ್ಯರನ್ನು ಕರೆಕಳುಹಿಸಿದನು. ಗಿಬ್ಯೋನ್ಯರು ಇಸ್ರಾಯೇಲರಿಗೆ ಸೇರಿದವರಲ್ಲ. ಅಮೋರಿಯರಲ್ಲಿ ಉಳಿದ ಜನರಾಗಿದ್ದರು. ಅವರನ್ನು ಕೊಲ್ಲುವುದಿಲ್ಲವೆಂದು ಇಸ್ರಾಯೇಲರು ಆಣೆ ಇಟ್ಟಿದ್ದರು. ಆದರೆ ಸೌಲನು ಇಸ್ರಾಯೇಲರಿಗಾಗಿಯೂ, ಯೆಹೂದದವರಿಗಾಗಿಯೂ ತನಗಿದ್ದ ಆಸಕ್ತಿಯಿಂದ ಅವರನ್ನು ಕೊಂದುಹಾಕಲು ಪ್ರಯತ್ನಮಾಡಿದ್ದನು.


ನೀನು ಅತಿಯಾಗಿ ನೀತಿವಂತನಾಗಿರಬೇಡ. ಅತಿಯಾಗಿ ನಿನ್ನನ್ನು ಜ್ಞಾನಿಯನ್ನಾಗಿಯೂ ಮಾಡಿಕೊಳ್ಳಬೇಡ. ನಿನ್ನನ್ನು ನೀನೇ ಏಕೆ ನಾಶಪಡಿಸಿಕೊಳ್ಳುವೆ?


ಮಹಾಯಾಜಕನೂ ಹಿರಿಸಭೆಯವರೆಲ್ಲರೂ ಇದಕ್ಕೆ ಸಾಕ್ಷಿ. ಅವರಿಂದಲೇ ದಮಸ್ಕದಲ್ಲಿದ್ದ ಸಹೋದರರಿಗೆ ಪತ್ರಗಳನ್ನು ತೆಗೆದುಕೊಂಡು, ಅಲ್ಲಿಗೆ ಹೋದವರನ್ನೂ ದಂಡಿಸುವುದಕ್ಕಾಗಿಯೂ ಸೆರೆಹಿಡಿದು ಯೆರೂಸಲೇಮಿಗೆ ತರುವುದಕ್ಕಾಗಿಯೂ ದಮಸ್ಕಕ್ಕೆ ಪ್ರಯಾಣಮಾಡಿದೆನು.


ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ, ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ.


ಹೀಗೆ ನೀವು ನಿಂದಾರಹಿತರೂ ದೋಷವಿಲ್ಲದವರೂ, “ನಿಷ್ಕಳಂಕರಾದ ದೇವರ ಮಕ್ಕಳಾಗಿ, ವಕ್ರವಾದ ದುಷ್ಟ ಜನಾಂಗದ ಮಧ್ಯದಲ್ಲಿ,” ಜೀವವಾಕ್ಯವನ್ನು ಹಿಡಿದುಕೊಂಡು, ಲೋಕದಲ್ಲಿ ನಕ್ಷತ್ರಗಳಂತೆ ಹೊಳೆಯುವವರಾಗಿರುವಿರಿ.


ಹಸಿ ಮಾಂಸವು ಮತ್ತೆ ಬದಲಾಗಿ ಬೆಳ್ಳಗಾದರೆ, ಅವನು ಯಾಜಕನ ಬಳಿಗೆ ಬರಬೇಕು.


ಆ ಊರಿನವರು ಯೋವಾಷನಿಗೆ, “ನಿನ್ನ ಮಗನನ್ನು ಹೊರಗೆ ತೆಗೆದುಕೊಂಡು ಬಾ, ಅವನು ಸಾಯಬೇಕು. ಏಕೆಂದರೆ ಬಾಳನ ಬಲಿಪೀಠವನ್ನು ಕೆಡವಿ, ಅದರ ಬಳಿಯಲ್ಲಿದ್ದ ಅಶೇರ ಸ್ತಂಭವನ್ನು ಕಡಿದುಹಾಕಿದನು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು