Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 3:9 - ಕನ್ನಡ ಸಮಕಾಲಿಕ ಅನುವಾದ

9 ಹೀಗೆ ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು ಅವರಲ್ಲಿ ಒಂದಾಗಿರ ಬಯಸುತ್ತೇನೆ. ನಿಯಮದಿಂದ ಬರುವ ಸ್ವನೀತಿಯನ್ನು ಆಶ್ರಯಿಸಿಕೊಳ್ಳದೆ, ಕ್ರಿಸ್ತನನ್ನು ನಂಬುವುದರ ಮೂಲಕ ವಿಶ್ವಾಸದ ಆಧಾರದ ಮೇಲೆ ದೇವರು ಕೊಡುವ ನೀತಿಯನ್ನೇ ಹೊಂದಿದವನಾಗಿರ ಬಯಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇದರಲ್ಲಿ ನನ್ನ ಉದ್ದೇಶವೇನೆಂದರೆ, ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು, ಧರ್ಮಶಾಸ್ತ್ರದ ಫಲವಾಗಿರುವ ಸ್ವನೀತಿಯನ್ನಲ್ಲ, ಕ್ರಿಸ್ತನನ್ನು ನಂಬುವುದರಿಂದ ದೊರಕುವಂಥ ಅಂದರೆ ಕ್ರಿಸ್ತನ ಮೇಲಣ ನಂಬಿಕೆಯ ಆಧಾರದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ಕ್ರಿಸ್ತನಲ್ಲಿರುವವನಾಗಿರಬೇಕೆಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಧರ್ಮಶಾಸ್ತ್ರದ ಪಾಲನೆಯಿಂದ ದೊರಕುವ, ನನ್ನದೇ ಎಂದು ಹೇಳಿಕೊಳ್ಳಬಹುದಾದ ಸತ್ಸಂಬಂಧ ಯಾವುದೂ ನನಗಿಲ್ಲ. ಪ್ರತಿಯಾಗಿ, ನಾನು ಕ್ರಿಸ್ತಯೇಸುವಿನಲ್ಲಿಟ್ಟಿರುವ ವಿಶ್ವಾಸದ ಪ್ರಯುಕ್ತ ದೇವರೊಂದಿಗೆ ಸರಿಯಾದ ಸತ್ಸಂಬಂಧವನ್ನು ಹೊಂದಿದ್ದೇನೆ. ಈ ಸಂಬಂಧವು ದೇವರು ನನಗೆ ದಯಪಾಲಿಸಿರುವ ಅನುಗ್ರಹ. ನನ್ನ ವಿಶ್ವಾಸದ ಆಧಾರದ ಮೇಲೆ ಅವರೇ ನೀಡಿರುವ ಕೃಪಾವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇದರಲ್ಲಿ ನನ್ನ ಉದ್ದೇಶವೇನಂದರೆ - ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು ನೇಮನಿಷ್ಠೆಗಳ ಫಲವಾಗಿರುವ ಸ್ವನೀತಿಯನ್ನಾಶ್ರಯಿಸದೆ ಕ್ರಿಸ್ತನನ್ನು ನಂಬುವದರಿಂದ ದೊರಕುವಂಥ ಅಂದರೆ ಕ್ರಿಸ್ತನ ಮೇಲಣ ನಂಬಿಕೆಯ ಆಧಾರದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ಕ್ರಿಸ್ತನಲ್ಲಿರುವವನಾಗಿ ಕಾಣಿಸಿಕೊಳ್ಳಬೇಕೆಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾನು ಕ್ರಿಸ್ತನನ್ನು ಹೊಂದಿಕೊಳ್ಳಲು ಮತ್ತು ಕ್ರಿಸ್ತನಲ್ಲಿರಲು ಇದು ನನಗೆ ಅವಕಾಶ ಮಾಡಿಕೊಡುತ್ತದೆ. ನಾನು ಕ್ರಿಸ್ತನ ಮೂಲಕ ನೀತಿವಂತನಾಗಿದ್ದೇನೆ. ಈ ನೀತಿಯು, ಧರ್ಮಶಾಸ್ತ್ರವನ್ನು ಅನುಸರಿಸಿದ ಮಾತ್ರಕ್ಕೆ ದೊರೆಯುವುದಿಲ್ಲ. ಇದು ನಂಬಿಕೆಯ ಮೂಲಕ ದೇವರಿಂದ ಬರುತ್ತದೆ. ಕ್ರಿಸ್ತನಲ್ಲಿ ನನಗಿರುವ ನಂಬಿಕೆಯ ಮೂಲಕ ದೇವರು ನನ್ನನ್ನು ನೀತಿವಂತನನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಹ್ಯಾತುರ್ ಮಾಜೊ ಉದ್ದೆಶ್ ಕಾಯ್ ಮಟ್ಲ್ಯಾರ್, ಮಿಯಾ ಕ್ರಿಸ್ತಾಕ್ ಖಮ್ವುನ್ ಘೆವ್ನ್ ಖಾಯ್ದ್ಯಾಚೆ ಫಳ್ ಸ್ವತಾಚಿ ನಿತಿ ನ್ಹಯ್, ಕ್ರಿಸ್ತಾಚ್ಯಾ ವೈರ್ ವಿಶ್ವಾಸ್ ಥವ್ಲ್ಯಾರ್ ಗಾವ್ತಲಿ ಮಟ್ಲ್ಯಾರ್, ಕ್ರಿಸ್ತಾಚ್ಯಾ ವಿಶ್ವಾಸಾಚ್ಯಾ ಆಧಾರಾ ವೈನಾ ದೆವ್ ದಿತಲಿ ನಿತ್ ಘೆವ್ನ್ ಕ್ರಿಸ್ತಾಕ್ಡೆ ಹೊತ್ತೊ ಹೊವ್ನ್ ರ್‍ಹಾವ್ಚೆ ಮನ್ತಲೆಚ್ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 3:9
56 ತಿಳಿವುಗಳ ಹೋಲಿಕೆ  

ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪವನ್ನಾಗಿ ಮಾಡಿದರು. ಹೀಗೆ ಕ್ರಿಸ್ತ ಯೇಸುವಿನಲ್ಲಿ ದೇವರ ನೀತಿಯನ್ನಾಗಿ ದೇವರು ನಮ್ಮನ್ನು ಮಾಡಿದರು.


ನೀವು ದೇವರಿಂದಲೇ ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿಯೂ ಶುದ್ಧೀಕರಣವೂ ವಿಮೋಚನೆಯೂ ಆಗಿದ್ದಾರೆ.


ಒಬ್ಬ ವ್ಯಕ್ತಿ ಮೋಶೆಯ ನಿಯಮದ ಕ್ರಿಯೆಗಳಿಂದ ನೀತಿವಂತನಾಗುವುದಿಲ್ಲ. ಆದರೆ ಕ್ರಿಸ್ತ ಯೇಸುವನ್ನು ನಂಬುವುದರಿಂದಲೇ ನೀತಿವಂತನಾಗುತ್ತಾನೆ ಎಂದು ನಮಗೆ ತಿಳಿದಿದೆ. ನಾವು ಸಹ ಮೋಶೆಯ ನಿಯಮದ ಕ್ರಿಯೆಗಳಿಂದಲ್ಲ, ಕ್ರಿಸ್ತ ಯೇಸುವಿನ ನಂಬಿಕೆಯ ಮೂಲಕ ನೀತಿವಂತರಾವುದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಟ್ಟೆವು. ಏಕೆಂದರೆ, ಮೋಶೆಯ ನಿಯಮದ ಕ್ರಿಯೆಗಳಿಂದ ಯಾರೂ ನೀತಿವಂತರಾಗುವುದಿಲ್ಲ.


ಆದ್ದರಿಂದ, ಈಗ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ.


ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ಪ್ರಕಟವಾಗಿದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನು,” ಎಂದು ಬರೆದಿರುವ ಪ್ರಕಾರ, ಆ ನೀತಿಯು ಪ್ರಾರಂಭದಿಂದ ಕೊನೆಯವರೆಗೆ ನಂಬಿಕೆಯಿಂದಲೇ ಆದದ್ದು.


ಆತನು ತನ್ನ ಪ್ರಾಣದ ವೇದನೆಯನ್ನು ಸಹಿಸಿದ ತರುವಾಯ, ಜೀವದ ಬೆಳಕನ್ನು ಕಂಡು ತೃಪ್ತನಾಗುವನು. ತನ್ನ ತಿಳುವಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕರಿಗೆ ನೀತಿವಂತನಾಗಿ ನಿರ್ಣಯಿಸುವನು. ಏಕೆಂದರೆ ಆತನೇ ಅವರ ಅಪರಾಧಗಳನ್ನು ಹೊತ್ತುಕೊಳ್ಳುವನು.


ಆಗ ಯೆಹೂದ್ಯರು ಸುರಕ್ಷಿತರಾಗಿರುವರು. ಯೆರೂಸಲೇಮಿನವರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಅಂದರೆ ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಈ ನಗರಕ್ಕೆ ಸಲ್ಲುವುದು.’


ಅವರು ನಮ್ಮನ್ನು ರಕ್ಷಿಸಿದರು. ಹೇಗೆಂದರೆ, ನಾವು ಮಾಡಿದ ಪುಣ್ಯ ಕ್ರಿಯೆಗಳಿಂದಲ್ಲ, ಅವರ ಕರುಣೆಗೆ ಅನುಸಾರವಾಗಿ ಆತ್ಮಿಕವಾಗಿ ಹುಟ್ಟುವಂತೆ ಮಾಡಿ, ನಮ್ಮನ್ನು ತೊಳೆದೂ ಪವಿತ್ರಾತ್ಮ ದೇವರು ನೂತನ ಜೀವನವನ್ನು ಕೊಡುವುದರ ಮೂಲಕವೇ ಅವರು ನಮ್ಮನ್ನು ರಕ್ಷಿಸಿದರು.


ದೇವರು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತಮ್ಮ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಜೀವಿತಕ್ಕೆ ನಮ್ಮನ್ನು ಕರೆದರು. ಈ ಕೃಪೆಯು ಕಾಲದ ಆರಂಭಕ್ಕೆ ಮುಂಚೆಯೇ ಕ್ರಿಸ್ತ ಯೇಸುವಿನಲ್ಲಿ ನಮಗೆ ಕೊಡಲಾಯಿತು.


ಆದ್ದರಿಂದ ಯಾರಾದರೂ ಕ್ರಿಸ್ತ ಯೇಸುವಿನಲ್ಲಿದ್ದರೆ, ಅವರು ನೂತನ ಸೃಷ್ಟಿಯಾಗಿದ್ದಾರೆ: ಹಳೆಯದೆಲ್ಲವೂ ಹೋಗಿ ಅವರಿಗೆ ಹೊಸ ಸೃಷ್ಟಿಯು ಬರುವುದು.


ಆಸಕ್ತಿಯನ್ನು ನೋಡಿದರೆ, ನಾನು ಸಭೆಯ ಹಿಂಸಕನು; ಮೋಶೆಯ ನಿಯಮದಲ್ಲಿರುವ ನೀತಿಯ ಅನುಸಾರವಾಗಿ ನಾನು ನಿರ್ದೋಷಿ.


ನೀನು ನಿನ್ನ ಹೃದಯದಿಂದ ನಂಬಿ ನೀತಿವಂತನೆಂದು ಎಣಿಸಿಕೊಳ್ಳುವಿ ಮತ್ತು ನಿನ್ನ ಬಾಯಿಂದ ನಿನ್ನ ವಿಶ್ವಾಸವನ್ನು ಅರಿಕೆ ಮಾಡಿದಾಗ ರಕ್ಷಣೆ ಹೊಂದುತ್ತಿ.


ನಿಯಮವು ನಮ್ಮ ಮಾಂಸಭಾವದ ಬಲಹೀನತೆಯಿಂದ ಯಾವುದನ್ನು ಮಾಡಲಿಕ್ಕೆ ಸಾಧ್ಯವಾಗದೆ ಹೋಯಿತೋ ಅದನ್ನು ದೇವರೇ ಮಾಡಿದರು. ಪಾಪ ಪರಿಹಾರಕ್ಕಾಗಿ ದೇವರು ತಮ್ಮ ಸ್ವಂತ ಪುತ್ರನನ್ನು ಪಾಪಮಯವಾದ ನರಮಾಂಸದ ರೂಪದಲ್ಲಿ ಕಳುಹಿಸಿಕೊಟ್ಟರು. ಆ ನರಮಾಂಸದಲ್ಲಿಯೇ ಪಾಪಕ್ಕೆ ದಂಡನಾತೀರ್ಪು ಮಾಡಿ ಸಾಧ್ಯಗೊಳಿಸಿದರು.


ಆತನ ದಿನಗಳಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು. ಇಸ್ರಾಯೇಲರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಎಂದರೆ, ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಅವರಿಗಿರುವುದು.


ಪಾಪಮಾಡದೆ ಒಳ್ಳೆಯದನ್ನೇ ನಡೆಸುವ ನೀತಿವಂತನು, ಭೂಮಿಯ ಮೇಲೆ ಒಬ್ಬನೂ ಇಲ್ಲ.


ಆದರೆ ನೀವು ಹೋಗಿ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ,’ ಎಂಬುದರ ಅರ್ಥವನ್ನು ಕಲಿತುಕೊಳ್ಳಿರಿ. ಏಕೆಂದರೆ ನಾನು ನೀತಿವಂತರನ್ನಲ್ಲ, ಪಾಪಿಗಳನ್ನು ಕರೆಯಲು ಬಂದಿದ್ದೇನೆ,” ಎಂದು ಹೇಳಿದರು.


ನಾವೆಲ್ಲರೂ ದಾರಿತಪ್ಪಿದ ಕುರಿಗಳಂತೆ ಇದ್ದೆವು. ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು. ಯೆಹೋವ ದೇವರು ನಮ್ಮ ಎಲ್ಲಾ ದುಷ್ಕೃತ್ಯಗಳನ್ನು ಆತನ ಮೇಲೆ ಹಾಕಿದರು.


ನಿಮ್ಮ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡಿರಿ, ಏಕೆಂದರೆ ಜೀವಿಸುವರಲ್ಲಿ ಒಬ್ಬರೂ ನಿಮ್ಮ ಮುಂದೆ ನೀತಿವಂತರಲ್ಲ.


ತಮ್ಮ ತಪ್ಪುಗಳನ್ನು ತಿಳಿದುಕೊಳ್ಳಲು ಯಾರಿಗೆ ಸಾಧ್ಯ? ನನ್ನ ಗುಪ್ತ ಪಾಪಗಳನ್ನು ಕ್ಷಮಿಸು.


ಎಲ್ಲರೂ ದಾರಿತಪ್ಪಿ ಹೋಗಿದ್ದಾರೆ, ಎಲ್ಲರೂ ಕೆಟ್ಟು ಹೋಗಿದ್ದಾರೆ; ಒಳ್ಳೆಯದನ್ನು ಮಾಡುವವರು ಯಾರೂ ಇಲ್ಲ, ಒಬ್ಬರಾದರೂ ಇಲ್ಲ.


ಆದರೆ ಹಿಜ್ಕೀಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಹೋದನು. ಏಕೆಂದರೆ ಅವನ ಹೃದಯವು ಅಹಂಕಾರದಿಂದ ತುಂಬಿತ್ತು. ಆದ್ದರಿಂದ ಅವನ ಮೇಲೆಯೂ, ಯೆಹೂದ ಮತ್ತು ಯೆರೂಸಲೇಮಿನ ಮೇಲೆಯೂ ಯೆಹೋವ ದೇವರ ರೌದ್ರ ಉಂಟಾಯಿತು.


“ಪಾಪ ಮಾಡದವನು ಯಾವನೂ ಇಲ್ಲವಲ್ಲಾ. ಆದ್ದರಿಂದ ಅವರು ನಿಮಗೆ ವಿರೋಧವಾಗಿ ಪಾಪಮಾಡಲು, ನೀವು ಅವರ ಮೇಲೆ ಕೋಪಿಸಿಕೊಂಡು ದೂರವಾದರೂ, ಸಮೀಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆಯಾಗಿ ಹೋಗುವಂತೆ ನೀವು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿದರೆ,


ಹೀಗೆ ಮನುಷ್ಯರು, ಪಶುಪಕ್ಷಿ, ಕ್ರಿಮಿಕೀಟಗಳು, ಭೂಮಿಯ ಮೇಲಿದ್ದ ಎಲ್ಲಾ ಜೀವರಾಶಿಗಳೂ ನಾಶವಾಯಿತು. ಅವು ಭೂಮಿಯ ಮೇಲಿಂದ ಅಳಿದುಹೋದವು. ನೋಹನು ಮತ್ತು ಅವನ ಸಂಗಡ ನಾವೆಯಲ್ಲಿದ್ದವರು ಮಾತ್ರ ಜೀವಂತವಾಗಿ ಉಳಿದರು.


ಪಾಪಮಾಡುವ ಪ್ರತಿಯೊಬ್ಬನೂ ನಿಯಮವನ್ನು ಮೀರುವವನಾಗಿದ್ದಾನೆ. ನಿಯಮವನ್ನು ಮೀರುವುದೇ ಪಾಪ.


ಕ್ರಿಸ್ತ ಯೇಸುವಿನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು, ನಮ್ಮ ದೇವರ ಮತ್ತು ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ನೀತಿಯ ಮೂಲಕ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದು:


ಏಕೆಂದರೆ ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವುದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ, ಅವನು ಪರಿಪೂರ್ಣನೂ ತನ್ನ ಇಡೀ ದೇಹವನ್ನೇ ಸ್ವಾಧೀನದಲ್ಲಿಟ್ಟುಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.


ದೇವರ ವಾಗ್ದಾನ ಮತ್ತು ಆಣೆ ಇವೆರಡೂ ಬದಲಾಗದ ಆಧಾರಗಳು. ಇವುಗಳ ವಿಷಯವಾಗಿ ದೇವರು ನಮಗೆ ಸುಳ್ಳಾಡುವವರಲ್ಲ. ಇದರಿಂದಾಗಿ, ದೇವರ ಆಶ್ರಯವನ್ನು ಹೊಂದುವುದಕ್ಕೆ ಓಡಿಬಂದಿರುವ ನಾವು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಳ್ಳಲು ಬಲವಾದ ಉತ್ತೇಜನ ಉಂಟಾಯಿತು.


ನನ್ನ ಬಂಧುಗಳೂ ಜೊತೆ ಸೆರೆಯವರೂ ಆದ ಅಂದ್ರೋನಿಕನಿಗೂ ಯೂನ್ಯಳಿಗೂ ವಂದನೆಗಳು. ಅವರು ಅಪೊಸ್ತಲರಲ್ಲಿ ಪ್ರಸಿದ್ಧರೂ ಮತ್ತು ನನಗಿಂತ ಮೊದಲೇ ಕ್ರಿಸ್ತನಲ್ಲಿದ್ದವರೂ ಆಗಿರುತ್ತಾರೆ.


ಹೀಗೆ ಪಾಪವು ಮರಣದ ಮೂಲಕ ಆಳಿದಂತೆಯೇ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಿತ್ಯಜೀವವನ್ನುಂಟು ಮಾಡಲು ಕೃಪೆಯು ನೀತಿಯ ಮೂಲಕ ಆಳುವುದು.


“ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು. ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾಗದು, ನನ್ನ ಮಹಿಮೆಯಾಗಿರುವ ಇಸ್ರಾಯೇಲಿಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟುಮಾಡುವೆನು.


ಆಗ ನಾನು, “ಅಯ್ಯೋ, ನಾನು ನಾಶವಾದೆನಲ್ಲಾ! ಏಕೆಂದರೆ, ನಾನು ಅಶುದ್ಧ ತುಟಿಯವನು. ನಾನು ಅಶುದ್ಧ ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು. ನನ್ನ ಕಣ್ಣುಗಳು ರಾಜಾಧಿರಾಜರೂ ಸೇನಾಧೀಶ್ವರ ಯೆಹೋವ ದೇವರನ್ನು ಕಂಡವು!” ಎಂದೆನು.


ಆದರೆ ದೇಶದಲ್ಲಿ ಅದ್ಭುತಕ್ಕೋಸ್ಕರ ವಿಚಾರಣೆ ಮಾಡಲು ಬಾಬಿಲೋನಿನ ಅಧಿಪತಿಗಳಿಂದ ತನ್ನ ಬಳಿಗೆ ಕಳುಹಿಸಲಾದ ರಾಯಭಾರಿಗಳ ಕಾರ್ಯದಲ್ಲಿ ಅವನು ತನ್ನ ಹೃದಯದಲ್ಲಿ ಇರುವ ಪ್ರತಿಯೊಂದನ್ನೂ ತಿಳಿದುಕೊಳ್ಳುವದಕ್ಕಾಗಿಯೂ ಪರಿಶೋಧಿಸುವುದಕ್ಕಾಗಿಯೂ ದೇವರು ಅವನನ್ನು ಕೈಬಿಟ್ಟರು.


ಅವರು, “ದೇವರ ನಿಯಮದ ಈ ಮಾತುಗಳನ್ನು ಸನ್ಮಾನಿಸಿ ಕೈಗೊಳ್ಳದೆ ಇರುವವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು