ಫಿಲಿಪ್ಪಿಯವರಿಗೆ 4:1 - ಕನ್ನಡ ಸಮಕಾಲಿಕ ಅನುವಾದ1 ಹೀಗಿರಲಾಗಿ, ನನಗೆ ಆಪ್ತರೂ ನಾನು ಹಂಬಲಿಸುವವರೂ ಆದ ನನ್ನ ಪ್ರಿಯರೇ, ನನ್ನ ಆನಂದವೂ ಕಿರೀಟವೂ ಆಗಿರುವ ಸ್ನೇಹಿತರೇ, ಈಗಲೂ ಕರ್ತ ದೇವರಲ್ಲಿ ದೃಢವಾಗಿ ನಿಲ್ಲಿರಿ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಹೀಗಿರಲಾಗಿ, ನನ್ನ ಸಹೋದರರೇ ಅತಿ ಪ್ರಿಯರೇ, ಹಾಗೂ ಆಪ್ತರೇ, ನನಗೆ ಸಂತೋಷವೂ ಕಿರೀಟವೂ ಆಗಿರುವವರೇ, ನಾನು ಹೇಳಿದಂತೆ ಕರ್ತನಲ್ಲಿ ದೃಢವಾಗಿ ನಿಲ್ಲಿರಿ, ಪ್ರಿಯರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಹೀಗಿರಲಾಗಿ ಒಲವಿನ ಸಹೋದರರೇ, ನನ್ನ ಅತಿ ಪ್ರಿಯರೇ, ಆಪ್ತರೇ, ನನ್ನ ಮುದವೂ ಮುಕುಟವೂ ಆದವರೇ, ಪ್ರಭುವಿನಲ್ಲಿ ದೃಢ ವಿಶ್ವಾಸಿಗಳಾಗಿ ಬಾಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಹೀಗಿರಲಾಗಿ ಪ್ರಿಯರೂ ಇಷ್ಟರೂ ಆದ ನನ್ನ ಸಹೋದರರೇ, ನನಗೆ ಸಂತೋಷವೂ ಜಯಮಾಲೆಯೂ ಆಗಿರುವವರೇ, ನಾನು ಹೇಳಿದಂತೆ ಕರ್ತನಲ್ಲಿ ದೃಢವಾಗಿ ನಿಲ್ಲಿರಿ; ಪ್ರಿಯರೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ನನ್ನ ಸಹೋದರ ಸಹೋದರಿಯರೇ, ನಾನು ನಿಮ್ಮನ್ನು ಪ್ರೀತಿಸುತ್ತೇನೆ ಮತ್ತು ನಿಮ್ಮನ್ನು ನೋಡಬಯಸುತ್ತೇನೆ. ನೀವು ನನಗೆ ಆನಂದವನ್ನು ಉಂಟುಮಾಡಿ, ನಿಮ್ಮ ವಿಷಯದಲ್ಲಿ ನಾನು ಹೆಮ್ಮಪಡುವಂತೆ ಮಾಡಿದ್ದೀರಿ. ನಾನು ನಿಮಗೆ ಹೇಳಿದಂತೆ ಪ್ರಭುವನ್ನು ಅನುಸರಿಸಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ತಸೆ ಹೊವ್ನ್ ಲೈ ಪ್ರೆಮಾಚೆ, ಅನಿ ಬರೆ ಹೊವ್ನ್ ಹೊತ್ತ್ಯಾ ಮಾಜ್ಯಾ ಭಾವಾನು ಅನಿ ಭೆನಿಯಾನು, ಮಾಜಿ ಖುಶಿ, ಅನಿ ಮುಕುಟ್ ಹೊವ್ನ್ ಹೊತ್ತಾ ಪ್ರಿಯಾನು, ಧನಿಯಾಕ್ಡೆ ಘಟ್ಟ್ ಹೊವ್ನ್ ಇಬೆ ರ್‍ಹಾವಾ. ಅಧ್ಯಾಯವನ್ನು ನೋಡಿ |