Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 4:15 - ಕನ್ನಡ ಸಮಕಾಲಿಕ ಅನುವಾದ

15 ಫಿಲಿಪ್ಪಿಯವರೇ, ನಾನು ಪ್ರಾರಂಭ ದಿನಗಳಲ್ಲಿ ನಿಮ್ಮ ನಡುವೆ ಸುವಾರ್ತೆ ಸಾರಿ ಮಕೆದೋನ್ಯದಿಂದ ಹೊರಟುಹೋದಾಗ, ನಿಮ್ಮನ್ನು ಬಿಟ್ಟು ಬೇರಾವ ಸಭೆಯವರು ಕೊಡುವ ಮತ್ತು ತೆಗೆದುಕೊಳ್ಳುವ ವಿಷಯದಲ್ಲಿ ಯಾರೂ ನನ್ನೊಂದಿಗೆ ಪಾಲುಗಾರರಾಗಲಿಲ್ಲ ಎಂಬುದನ್ನು ನೀವು ತಿಳಿದುಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಫಿಲಿಪ್ಪಿಯವರೇ, ನಾನು ಪ್ರಾರಂಭದಲ್ಲಿ ನಿಮ್ಮಲ್ಲಿ ಸುವಾರ್ತೆಯನ್ನು ಸಾರಿ, ಮಕೆದೋನ್ಯದಿಂದ ಹೊರಟುಹೋದಾಗ ಕೊಡುವ, ಕೊಳ್ಳುವ ವಿಷಯದಲ್ಲಿ ನಿಮ್ಮ ಹೊರತು ಬೇರೆ ಯಾವ ಸಭೆಯೂ ನನಗೆ ಬೆಂಬಲಿಸಲ್ಲಿಲ್ಲವೆಂಬುದನ್ನು ನೀವೂ ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಫಿಲಿಪ್ಪಿಯ ಸಹೋದರರೇ, ನಾನು ಶುಭಸಂದೇಶವನ್ನು ಸಾರಲು ಹೊರಟ ಪ್ರಾರಂಭದ ದಿನಗಳಲ್ಲಿ ಮಕೆದೋನಿಯವನ್ನು ಬಿಟ್ಟುಹೋದಾಗ ನೀವಲ್ಲದೆ ಬೇರೆ ಯಾವ ಸಭೆಯೂ ನನ್ನ ಆಯ-ವ್ಯಯಗಳಲ್ಲಿ ನೆರವಾಗಿರಲಿಲ್ಲ. ಇದು ನಿಮಗೆ ತಿಳಿದ ವಿಷಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇದಲ್ಲದೆ ಫಿಲಿಪ್ಪಿಯವರೇ, ನಾನು ಮೊದಲು ನಿಮ್ಮಲ್ಲಿ ಸುವಾರ್ತೆಯನ್ನು ಸಾರಿ ಮಕೆದೋನ್ಯದಿಂದ ಹೊರಟು ಹೋದಾಗ ಕೊಡುವ ಕೊಳ್ಳುವ ವಿಷಯದಲ್ಲಿ ನಿಮ್ಮ ಹೊರತು ಬೇರೆ ಯಾವ ಸಭೆಗೂ ನನಗೂ ಸಂಬಂಧವಿರಲಿಲ್ಲವೆಂದು ನೀವೂ ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಇದಲ್ಲದೆ ಫಿಲಿಪ್ಪಿ ಪಟ್ಟಣದವರೇ, ನಾನು ಮೊದಲು ನಿಮ್ಮಲ್ಲಿ ಸುವಾರ್ತೆಯನ್ನು ಸಾರಿ ಮಕೆದೋನಿಯಕ್ಕೆ ಹೊರಟಾಗ, ನಿಮ್ಮ ಸಭೆಯೊಂದೇ ನನಗೆ ಸಹಾಯ ಮಾಡಿದ್ದು ನಿಮಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಅನಿ ಪಿಲಿಪ್ಪಿತ್ಲ್ಯಾ ಲೊಕಾನು, ಬರಿ ಖಬರ್ ಶುರು ಕರ್‍ತಾನಾ ಮಿಯಾ ಮೆಸೆದೊನಿಯಾಕ್ನಾ ಜಾತಾನಾ ದಿತಲ್ಯಾ, ಅನಿ ಘೆತಲ್ಯಾ ವಿಶಯಾತ್ ತುಮ್ಕಾ ಸೊಡುನ್ ದುಸ್ರ್ಯಾ ತಾಂಡ್ಯಾಚೆ ಮಾಜ್ಯಾ ವಾಂಗ್ಡಾ ಭಾಗಿದಾರ್ ಹೊವ್ನ್ ನಾತ್, ಮನ್ತಲೆ ತುಮ್ಕಾಬಿ ಗೊತ್ತುಚ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 4:15
12 ತಿಳಿವುಗಳ ಹೋಲಿಕೆ  

ಏಕೆಂದರೆ, ನೀವು ಮೊದಲನೆಯ ದಿನದಿಂದ ಇಂದಿನವರೆಗೂ ಸುವಾರ್ತೆಯಲ್ಲಿ ಸಹಭಾಗಿಗಳಾಗಿದ್ದೀರಿ.


ಪೌಲ, ಸೀಲರು ಸೆರೆಮನೆಯಿಂದ ಹೊರಗೆ ಬಂದ ಮೇಲೆ ಲುದ್ಯಳ ಮನೆಗೆ ಹೋಗಿ, ಅಲ್ಲಿ ಸಹೋದರರನ್ನು ಭೇಟಿಯಾಗಿ ಅವರನ್ನು ಪ್ರೋತ್ಸಾಹಿಸಿ, ಅಲ್ಲಿಂದ ಹೊರಟು ಹೋದರು.


ದೇವರ ಮನುಷ್ಯನಾದ ಎಲೀಷನ ಸೇವಕನಾಗಿರುವ ಗೇಹಜಿಯು, “ನನ್ನ ಯಜಮಾನನು ಈ ಅರಾಮ್ಯನಾದ ನಾಮಾನನು ತೆಗೆದುಕೊಂಡು ಬಂದದ್ದನ್ನು ಅವನ ಕೈಯಿಂದ ತೆಗೆದುಕೊಳ್ಳದೆ ಸುಮ್ಮನೆ ಕಳುಹಿಸಿದ್ದಾನೆ. ಆದರೆ ಯೆಹೋವ ದೇವರ ಜೀವದಾಣೆ, ನಾನು ಅವನ ಹಿಂದೆ ಓಡಿಹೋಗಿ, ಅವನ ಕೈಯಿಂದ ಏನಾದರೂ ತೆಗೆದುಕೊಳ್ಳುವೆನು,” ಅಂದುಕೊಂಡನು.


ಆದರೆ ಪ್ರವಾದಿಯು, “ನಾನು ಯಾರ ಮುಂದೆ ನಿಲ್ಲುತ್ತೇನೋ ಆ ಯೆಹೋವ ದೇವರ ಜೀವದಾಣೆ, ನಾನು ಏನೂ ತೆಗೆದುಕೊಳ್ಳುವುದಿಲ್ಲ,” ಎಂದನು. ಅವನು ತೆಗೆದುಕೊಳ್ಳಬೇಕೆಂದು ಬಲವಂತ ಮಾಡಿದರೂ, “ಬೇಡ,” ಎಂದನು.


ಮಕೆದೋನ್ಯ ಮತ್ತು ಅಖಾಯದವರು ಯೆರೂಸಲೇಮಿನ ಭಕ್ತರಲ್ಲಿರುವ ಬಡವರಾಗಿರುವವರಿಗೆ ಸಹಾಯ ಮಾಡುವುದು ಒಳ್ಳೆಯದೆಂದು ಭಾವಿಸಿದ್ದಾರೆ.


ನಿಮ್ಮೆಲ್ಲರ ವಿಷಯದಲ್ಲಿ ಹೀಗೆ ಯೋಚಿಸುವುದು ನನಗೆ ಸೂಕ್ತವಾಗಿದೆ. ಏಕೆಂದರೆ ನಾನು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ. ನಾನು ಬೇಡಿಗಳಿಂದ ಸೆರೆಯಲ್ಲಿರುವಾಗಲೂ ಸುವಾರ್ತೆಯನ್ನು ಸಮರ್ಥಿಸಿ ದೃಢಪಡಿಸುವಾಗಲೂ ನೀವೆಲ್ಲರು ನನ್ನೊಂದಿಗಿರುವ ಕೃಪೆಯಲ್ಲಿ ಪಾಲುಗಾರರಾಗಿದ್ದೀರಿ.


ಪ್ರಿಯರೇ, ನನಗೆ ಸಂಭವಿಸಿದ ಸಂಕಟಗಳು ಸುವಾರ್ತೆಯ ಪ್ರಗತಿಗಾಗಿಯೇ ಅನುಕೂಲವಾಯಿತು ಎಂಬುದನ್ನು ನೀವು ತಿಳಿಯಬೇಕೆಂದು ನಾನು ಅಪೇಕ್ಷಿಸುತ್ತೇನೆ.


ಇವರಾದರೋ, ನಾನು ಸುವಾರ್ತೆಗಾಗಿ ನೇಮಕವಾಗಿದ್ದೇವೆಂದು ತಿಳಿದು ಪ್ರೀತಿಯಿಂದ ಸಾರುತ್ತಾರೆ.


ಹೀಗಿರುವಲ್ಲಿ ನನ್ನ ಪ್ರಿಯ ಸ್ನೇಹಿತರೇ, ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರುವಾಗಲೂ ನೀವು ಯಾವಾಗಲೂ ನನಗೆ ವಿಧೇಯರಾದಂತೆ ಈಗಲೂ ವಿಧೇಯರಾಗಿ, ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ರಕ್ಷಣೆಯನ್ನು ಕಾರ್ಯರೂಪಕ್ಕೆ ತನ್ನಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು