Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 4:17 - ಕನ್ನಡ ಸಮಕಾಲಿಕ ಅನುವಾದ

17 ನಾನು ನಿಮ್ಮಿಂದ ದಾನವನ್ನು ನಿರೀಕ್ಷಿಸುವುದಿಲ್ಲ. ಆದರೆ ನಿಮ್ಮ ಲೆಕ್ಕಕ್ಕೆ ಲಾಭ ಹೆಚ್ಚಿಸುವುದನ್ನೇ ನೋಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವುದಿಲ್ಲ, ನಿಮ್ಮ ಲೆಕ್ಕಕ್ಕೆ ಸಮೃದ್ಧಿಯುಂಟಾಗುವ ಫಲವನ್ನೇ ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಿಮ್ಮಿಂದ ಸಹಾಯ ಪಡೆಯಬೇಕೆಂಬುದು ನನ್ನ ಉದ್ದೇಶವಲ್ಲ. ಆದರೆ ಈ ಸಹಾಯದಿಂದ ನಿಮಗೆ ಮುಂದೆ ದೊರಕುವ ಪ್ರತಿಫಲವು ಸಮೃದ್ಧಿಯಾಗಲೆಂದೇ ನನ್ನ ಇಚ್ಛೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವದಿಲ್ಲ; ನಿಮ್ಮ ಆತ್ಮಕ್ಕೆ ಆದಾಯವಾಗುವಂಥ ಪ್ರೀತಿಫಲವನ್ನೇ ಅಪೇಕ್ಷಿಸುತ್ತೇನೆ. ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಿಜವಾಗಿಯೂ, ನಿಮ್ಮಿಂದ ಕೊಡುಗೆಗಳನ್ನು ಪಡೆದುಕೊಳ್ಳಬೇಕೆಂಬುದು ನನ್ನ ಅಪೇಕ್ಷೆಯಲ್ಲ. ಆದರೆ ಕೊಡುವುದರ ಮೂಲಕ ಮುಂದೆ ಹೇರಳವಾಗಿ ದೊರೆಯುವ ಆಶೀರ್ವಾದಗಳನ್ನು ನೀವು ಹೊಂದಿಕೊಳ್ಳಬೇಕೆಂಬುದೇ ನನ್ನ ಅಪೇಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಖರೆಚ್ಬಿ ತುಮ್ಚ್ಯಾಕ್ನಾ ದಾನ್ ಕರ್ವುನ್ ಘೆವ್ಚೆ ಮನ್ತಲಿ ಮಾಜಿ ಆಶ್ಯಾ ನ್ಹಯ್ ಖರೆ ಅಶೆ ತುಮ್ಚ್ಯಾ ಖಾತ್ಯಾಕ್ ಸಗ್ಳ್ಯಾ ಥರಾಚೆ ಫಳ್ ಗಾವ್ಚೆ ಮನುನ್ ಮಿಯ್ಯಾ ಆಶ್ಯಾ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 4:17
26 ತಿಳಿವುಗಳ ಹೋಲಿಕೆ  

ನಮ್ಮವರು ಸತ್ಕ್ರಿಯೆಗಳನ್ನು ಮಾಡುವುದಕ್ಕಾಗಿಯೂ ಅಗತ್ಯವಾಗಿರುವ ಕೊರತೆಗಳನ್ನು ನೀಗಿಸುವುದಕ್ಕೂ ಕಲಿತುಕೊಳ್ಳಲಿ. ಆಗ ಅವರು ನಿಷ್ಪಲರಾಗದೇ ಇರುವರು.


ಅವರು ನಿಮ್ಮ ಸೇವೆಯನ್ನೂ ನೀವು ಪರಿಶುದ್ಧರಿಗೆ ಸೇವೆಮಾಡಿದ್ದರಲ್ಲಿ ಇನ್ನೂ ಮಾಡುತ್ತಿರುವುದರಲ್ಲಿ ದೇವರ ಹೆಸರಿನ ಕಡೆಗೆ ತೋರಿಸಿದ ಪ್ರೀತಿಯನ್ನೂ ಅವರು ಮರೆಯುವುದಕ್ಕೆ ದೇವರು ಅನ್ಯಾಯಗಾರರಲ್ಲ.


ನೀವು ಬಹಳ ಫಲಕೊಡುವುದರಿಂದಲೇ ನನ್ನ ಶಿಷ್ಯರಾಗಿರುವಿರಿ, ಇದರಿಂದ ನನ್ನ ತಂದೆಗೆ ಮಹಿಮೆಯಾಗುವುದು.


ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲಾತ್ಕಾರದಿಂದಲ್ಲ, ಆದರೆ ದೇವರ ಪ್ರಕಾರ ಇಷ್ಟಪೂರ್ವಕವಾಗಿಯೂ ನೀಚ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿಚಾರಣೆ ಮಾಡಿರಿ.


ಏಕೆಂದರೆ ಸಭಾಧ್ಯಕ್ಷನು ದೇವರ ಕಾರ್ಯಭಾರವನ್ನು ಉಳ್ಳವನಾಗಿರುವುದರಿಂದ ನಿಂದಾರಹಿತನಾಗಿರಬೇಕು; ಅವನು ಗರ್ವಿಷ್ಠನೂ ಮುಂಗೋಪಿಯೂ ಮದ್ಯಪಾನ ಮಾಡುವವನೂ ಹೊಡೆದಾಡುವವನೂ ನೀಚಲಾಭವನ್ನು ಆಶಿಸುವವನೂ ಆಗಿರಬಾರದು.


ನನಗೆ ಕೊರತೆಯಿದೆ ಎಂಬುದಕ್ಕಾಗಿ ನಾನು ಇದನ್ನು ಹೇಳುತ್ತಿಲ್ಲ. ಯಾವುದೇ ಪರಿಸ್ಥಿತಿಯಲ್ಲಿ ಸಂತೃಪ್ತನಾಗಿರುವುದನ್ನು ನಾನು ಕಲಿತುಕೊಂಡಿದ್ದೇನೆ.


ನಾವು ಎಂದಿಗೂ ನಿಮ್ಮನ್ನು ಹೊಗಳಿ ಮಾತನಾಡಲಿಲ್ಲ, ಕೌಶಲ್ಯವನ್ನು ಪ್ರಯೋಗಿಸಿ ಹಣದಾಸೆಯನ್ನು ಮರೆಮಾಡುವವರು ಆಗಿರಲಿಲ್ಲ ಎಂಬುದನ್ನು ನೀವು ತಿಳಿದಿರುವಿರಿ. ಇದಕ್ಕೆ ದೇವರೇ ಸಾಕ್ಷಿ.


ಆದ್ದರಿಂದ ಸಹೋದರರನ್ನು ಮುಂಚಿತವಾಗಿ ಹೋಗುವುದಕ್ಕೆ ನಾನು ಏರ್ಪಾಡು ಮಾಡಬೇಕಾಯಿತು. ಅವರು ಬಂದು ನೀವು ವಾಗ್ದಾನಮಾಡಿದ ಕೊಡುಗೆಯನ್ನು ಸಂಗ್ರಹಿಸುವ ಕಾರ್ಯವನ್ನು ಮುಗಿಸುವರು. ಹೀಗೆ ಈ ಉದಾರವಾಗಿರುವ ದಾನವು ಬಲಾತ್ಕಾರದ ವಸೂಲಿಯಾಗಿರದೆ ಮನಃಪೂರ್ವಕವಾಗಿ ಕೊಟ್ಟಿರುವ ಸಹಾಯ ಧನವಾಗಿರುವುದು.


ಆದ್ದರಿಂದ ಈ ಕೆಲಸವನ್ನು ಪೂರೈಸಿ ಸಂಗ್ರಹಿಸಿ ಕೊಟ್ಟದ್ದನ್ನು ಅವರಿಗೆ ಒಪ್ಪಿಸಿ ಖಚಿತವಾದ ಬಳಿಕ, ನಾನು ಸ್ಪೇನ್ ದೇಶಕ್ಕೆ ಹೋಗುವ ದಾರಿಯಲ್ಲಿ ನಿಮ್ಮನ್ನು ಸಂದರ್ಶಿಸುತ್ತೇನೆ.


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ಸ್ಥಿರವಾಗಿರುವಂತೆಯೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗೆ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅವರು ನಿಮಗೆ ಕೊಡುವರು.


ನಾನು ಬುದ್ಧಿಹೀನನೆಂದು ಯಾರೂ ನೆನಸಬಾರದೆಂದು ನಾನು ತಿರುಗಿ ಹೇಳುತ್ತೇನೆ. ಒಂದು ವೇಳೆ ಹಾಗೆ ನೆನಸಿದರೆ, ನೀವು ಬುದ್ಧಿಹೀನರನ್ನು ಸ್ವೀಕರಿಸುವಂತೆಯೇ, ನನ್ನನ್ನೂ ಸ್ವೀಕರಿಸಿರಿ. ಆಗ ನನ್ನನ್ನು ನಾನೇ ಪ್ರಶಂಶಿಸಿಕೊಳ್ಳಲು ನನಗೆ ಆಸ್ಪದವಾಗುವುದು.


“ನನ್ನ ಬಲಿಪೀಠದ ಮೇಲೆ ವ್ಯರ್ಥವಾಗಿ ಬೆಂಕಿ ಹಚ್ಚುವುದಕ್ಕಿಂತ, ಬಾಗಿಲು ಮುಚ್ಚುವುದು ಒಳ್ಳೆಯದು. ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವುದಿಲ್ಲ.


ಬಡವರಿಗೆ ದಯೆ ತೋರಿಸುವವನು ಯೆಹೋವ ದೇವರಿಗೆ ಸಾಲ ಕೊಡುತ್ತಾನೆ; ಆತನು ಅವನ ಉಪಕಾರಕ್ಕಾಗಿ ಪ್ರತ್ಯುಪಕಾರ ಮಾಡುವನು.


ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವುದಕ್ಕಾಗಿ ಬಿಳಾಮನ ದೋಷವನ್ನು ಮಾಡುವುದಕ್ಕೆ ದುರಾಶೆಯಿಂದ ಓಡುವವರಾಗಿದ್ದಾರೆ. ಅವರು ಕೋರಹನಂತೆ ಎದುರು ಮಾತನಾಡಿ ನಾಶವಾಗುವವರಾಗಿದ್ದಾರೆ. ಆದ್ದರಿಂದ ಅವರ ಗತಿ ಏನೆಂದು ಹೇಳಲಿ!


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಅಂಥವರಿಗೆ ಬಹುಕಾಲದ ಹಿಂದೆಯೇ ದೇವರ ತೀರ್ಪು ಸಿದ್ಧಪಡಿಸಲಾಗಿದೆ. ಅವರಿಗಾಗುವ ವಿನಾಶವು ತೂಕಡಿಸುವುದಿಲ್ಲ.


ಅವನು ಮದ್ಯಪಾನ ಮಾಡುವವನಾಗಿರಬಾರದು, ಹೊಡೆದಾಡುವವನಾಗಿರಬಾರದು. ಆದರೆ ಸಾತ್ವಿಕನೂ ಕುತರ್ಕ ಮಾಡದವನೂ ಹಣದಾಶೆಯಿಲ್ಲದವನೂ ಆಗಿರಬೇಕು.


ದೇವರ ಮಹಿಮೆ ಹಾಗೂ ಸ್ತೋತ್ರಕ್ಕಾಗಿ ಕ್ರಿಸ್ತ ಯೇಸುವಿನ ಮೂಲಕ ಬರುವ ನೀತಿಯ ಫಲಗಳಿಂದ ತುಂಬಿದವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.


ಎಂತಹ ಸಂಕಟ ನನ್ನದು! ನಾನು ಬೇಸಿಗೆ ಕಾಲದ ಹಣ್ಣುಗಳನ್ನು ಕೂಡಿಸುವವರ ಹಾಗೆಯೂ ದ್ರಾಕ್ಷಿ ಸುಗ್ಗಿಯಲ್ಲಿ ಹಕ್ಕಲು ಆರಿಸುವವರ ಹಾಗೆಯೂ ಇದ್ದೇನೆ. ತಿನ್ನುವುದಕ್ಕೆ ಗೊಂಚಲೇ ಇಲ್ಲ. ನನಗೆ ಪ್ರಿಯವಾದ ಮೊದಲು ಮಾಗಿದ ಅಂಜೂರದ ಹಣ್ಣುಗಳೂ ಇಲ್ಲ.


ಇವರು ನೇರವಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.


ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಬೇರಾಗಿದೆ. ಕೆಲವರು ಹಣಕ್ಕಾಗಿ ಆತುರಪಟ್ಟು ನಂಬಿಕೆಯಿಂದ ದೂರಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು