Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 4:3 - ಕನ್ನಡ ಸಮಕಾಲಿಕ ಅನುವಾದ

3 ಜೀವಗ್ರಂಥದಲ್ಲಿ ಹೆಸರು ಬರೆದಿರುವ ಕ್ಲೇಮೆನ್ಸ್ ಮುಂತಾದ ನನ್ನ ಜೊತೆ ಕೆಲಸದವರೊಡನೆ ನನ್ನೊಂದಿಗೆ ಸುವಾರ್ತೆಗೋಸ್ಕರ ಪ್ರಯಾಸಪಟ್ಟ ಆ ಸ್ತ್ರೀಯರಿಗೆ ನೀನೂ ಸಹಾಯಕನಾಗಿರಬೇಕೆಂದು ನಿಜ ಜೊತೆಗಾರನೇ, ನಿನ್ನನ್ನೂ ಕೇಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನನ್ನ ನಿಜವಾದ ಜೊತೆ ಸೇವಕನೇ, ಆ ಸ್ತ್ರೀಯರಿಗೆ ಸಹಾಯಕನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಜೊತೆ ಸುವಾರ್ತೆಗೋಸ್ಕರ ಪ್ರಯಾಸಪಟ್ಟವರು. ಅವರವರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಬರೆದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನನ್ನ ಜೊತೆ ಸೇವಕನಾದ ನೀನು ಈ ಮಹಿಳೆಯರಿಗೆ ನೆರವಾಗಬೇಕು. ಇವರು ಸಹ ಕ್ಲೇಮಂತನು ಮತ್ತು ಇತರ ಸಹಸೇವಕರೊಡನೆ ನನ್ನೊಂದಿಗೆ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ಸಹಕರಿಸಿರುತ್ತಾರೆ. ಇವರೆಲ್ಲರ ಹೆಸರುಗಳು ನಿತ್ಯಜೀವಬಾಧ್ಯರ ಪಟ್ಟಿಯಲ್ಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಸತ್ಯ ಸಯುಜನೇ, ಅವರಿಗೆ ಸಹಾಯಕನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಕೂಡ ಸುವಾರ್ತೆಗೋಸ್ಕರ ಪ್ರಯಾಸಪಟ್ಟವರು. ಅವರವರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಬರೆದವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನನ್ನ ಸ್ನೇಹಿತನೇ, ನೀನು ನನ್ನ ಜೊತೆಕೆಲಸದವನಾಗಿ ನಂಬಿಗಸ್ತಿಕೆಯಿಂದ ಸೇವೆ ಮಾಡುತ್ತಿರುವುದರಿಂದ ಈ ಸ್ತ್ರೀಯರಿಗೂ ನೀನು ಸಹಾಯ ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ. ಈ ಸ್ತ್ರೀಯರು ನನ್ನೊಂದಿಗೆ ಸುವಾರ್ತೆಗೋಸ್ಕರ ಸೇವೆ ಮಾಡಿದ್ದಾರೆ. ನನ್ನೊಂದಿಗೆ ಸೇವೆ ಮಾಡುತ್ತಿದ್ದ ಕ್ಲೇಮೆನ್ಸ್ ಮತ್ತು ಇತರ ಸೇವಕರೊಡನೆ ಈ ಸ್ತ್ರೀಯರು ಸೇವೆ ಮಾಡಿದ್ದಾರೆ. ಅವರ ಹೆಸರುಗಳು ಜೀವಬಾಧ್ಯರ ಪುಸಕ್ತದಲ್ಲಿ ಬರೆಯಲ್ಪಟ್ಟಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಖರೆ ವಾಂಗ್ಡಿಯಾನೊ, ತಿಯಾ ತ್ಯಾ ಬಾಯ್ಕಾಮಾನ್ಸಾಕ್ನಿ ಮಜ್ಜತ್‍ಕಾರಿ ಹೊವ್ನ್ ರ್‍ಹಾವ್ಚೆ ಮನುನ್ ತುಜ್ಯಾಕ್ಡೆ ಮಾಗ್ತಾ, ತೆನಿ ಕ್ಲೆಮನ್ಸ್, ಅನಿ ಹುರಲ್ಲ್ಯಾ ಮಾಜ್ಯಾ ವಾಂಗ್ಡಿ ಕಾಮ್ ಕರ್‍ತಲೆ ಅನಿ ಮಾಜ್ಯಾ ವಾಂಗ್ಡಾ ಬರಿ ಖಬರ್ ಸಾಂಗುಕ್ ಕಟ್ಪಟ್ ಕರಲ್ಯಾಂಚಿ ನಾವಾ ಜಿವಾಚ್ಯಾ ಪುಸ್ತಕಾತ್ ಲಿವಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 4:3
28 ತಿಳಿವುಗಳ ಹೋಲಿಕೆ  

ಜಗದುತ್ಪತ್ತಿಗೆ ಮೊದಲೇ ಕೊಯ್ಯಲಾದ ಕುರಿಮರಿಯವರ ಜೀವಗ್ರಂಥದಲ್ಲಿ ಯಾರ‍್ಯಾರ ಹೆಸರುಗಳು ಬರೆದಿರುವುದಿಲ್ಲವೋ, ಆ ಭೂನಿವಾಸಿಗಳೆಲ್ಲರೂ ಆ ಮೃಗವನ್ನು ಆರಾಧಿಸುವರು.


ಜಯಹೊಂದುವವರಿಗೆ ಹೀಗೆ ಬಿಳಿಯ ವಸ್ತ್ರಗಳನ್ನು ಹೊದಿಸಲಾಗುವುದು. ಅವರ ಹೆಸರನ್ನು ಜೀವಬಾಧ್ಯರ ಪಟ್ಟಿಯಿಂದ ನಾನು ಅಳಿಸಿಬಿಡದೆ, ಅವರ ಹೆಸರನ್ನು ನನ್ನ ತಂದೆಯ ಮುಂದೆಯೂ ಅವರ ದೂತರ ಮುಂದೆಯೂ ಅರಿಕೆ ಮಾಡುವೆನು.


ಹೀಗಿದ್ದರೂ, ದೆವ್ವಗಳು ನಿಮಗೆ ಅಧೀನವಾಗಿವೆ ಎಂದು ಸಂತೋಷ ಪಡಬೇಡಿರಿ, ಆದರೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಲಿಖಿತವಾಗಿವೆ ಎಂದು ಸಂತೋಷಿಸಿರಿ,” ಎಂದರು.


ಏನೇ ಸಂಭವಿಸಿದರೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿ, ದೂರದಲ್ಲಿದ್ದು ನಿಮ್ಮ ವಿಷಯವಾಗಿ ಕೇಳಿದರೂ ಸರಿ, ನೀವು ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗಾಗಿ ಒಂದೇ ಮನಸ್ಸಿನಿಂದ ಒಟ್ಟಿಗೆ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.


ಅಶುದ್ಧವಾದದ್ದು ಅದರಲ್ಲಿ ಸೇರುವುದಿಲ್ಲ. ಅಸಹ್ಯವಾದದ್ದನ್ನೂ ವಂಚಕವಾದದ್ದನ್ನೂ ನಡೆಸುವವನು ಅದರಲ್ಲಿ ಪ್ರವೇಶಿಸಲಾರನು. ಕುರಿಮರಿಯ ಜೀವ ಪುಸ್ತಕದಲ್ಲಿ ಯಾರ ಯಾರ ಹೆಸರುಗಳು ಬರೆದಿವೆಯೋ ಅವರು ಮಾತ್ರ ಸೇರುವರು.


ನೀನು ಕಂಡ ಮೃಗವು ಒಮ್ಮೆ ಇತ್ತು, ಈಗ ಇಲ್ಲ, ಪಾತಾಳದೊಳಗಿನಿಂದ ಮೇಲೆ ಬಂದು ವಿನಾಶಕ್ಕೆ ಹೊರಡಲಿದೆ. ಲೋಕದ ಸೃಷ್ಟಿಯಾದ ದಿನದಿಂದ ಯಾರ ಯಾರ ಹೆಸರುಗಳು ಜೀವಗ್ರಂಥದಲ್ಲಿ ಬರೆದಿರುವುದಿಲ್ಲವೋ, ಆ ಭೂನಿವಾಸಿಗಳು ಮೃಗವನ್ನು ನೋಡಿ ಆ ಮೃಗವು ಹಿಂದೆ ಇತ್ತು, ಈಗ ಇಲ್ಲ, ಇನ್ನು ಮೇಲೆ ಬರಲಿದೆ ಎಂದು ಆಶ್ಚರ್ಯಗೊಳ್ಳುವರು.


ಕರ್ತ ದೇವರಲ್ಲಿ ಒಂದೇ ಮನಸ್ಸುಳ್ಳವರಾಗಿರಬೇಕೆಂದು ಯುವೊದ್ಯಳನ್ನೂ ಸಂತುಕೆಯನ್ನೂ ಬೇಡಿಕೊಳ್ಳುತ್ತೇನೆ.


ಕರ್ತನ ಸೇವೆಯಲ್ಲಿ ದುಡಿಯುವ ತ್ರುಫೈನಳಿಗೂ ತ್ರುಫೋಸಳಿಗೂ ವಂದನೆಗಳು, ಕರ್ತನಲ್ಲಿ ತುಂಬಾ ಶ್ರಮಪಟ್ಟು ದುಡಿದಿರುವ ಪ್ರೀತಿಯ ಪೆರ್ಸೀಸಳಿಗೂ ನನ್ನ ವಂದನೆಗಳು.


ಕ್ರಿಸ್ತನಲ್ಲಿ ನನ್ನ ಜೊತೆ ಸೇವಕನಾಗಿರುವ ಉರ್ಬಾನನಿಗೂ ನನಗೆ ಪ್ರಿಯನಾದ ಸ್ತಾಖುನಿಗೂ ವಂದನೆಗಳು.


ಆದ್ದರಿಂದ, ಪ್ರಿಯರೇ ದೇವರ ಕರುಣೆಯಿಂದ ಬೇಡಿಕೊಳ್ಳುವುದೇನೆಂದರೆ, ನೀವು ನಿಮ್ಮ ದೇಹಗಳನ್ನು ದೇವರಿಗೆ ಪರಿಶುದ್ಧವೂ ಮೆಚ್ಚುಗೆಯೂ ಆಗಿರುವ ಸಜೀವ ಯಜ್ಞವಾಗಿ ಸಮರ್ಪಿಸಿರಿ. ಇದೇ ನಿಮ್ಮ ವಿವೇಕ ಪೂರ್ವಕವಾದ ಆರಾಧನೆಯು.


ಜೀವಪುಸ್ತಕದೊಳಗಿಂದ ಅವರ ಹೆಸರು ಅಳಿದು ಹೋಗಲಿ. ನೀತಿವಂತರ ಸಂಗಡ ಅವರ ಹೆಸರು ಬರೆಯದೆ ಇರಲಿ.


ಆದರೂ ಈಗ ನೀವು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲವಾದರೆ ನೀವು ಬರೆದ ಗ್ರಂಥದಿಂದ ನನ್ನ ಹೆಸರನ್ನು ಅಳಿಸಿಬಿಡಿ,” ಎಂದು ಬೇಡಿಕೊಂಡನು.


ಇದಲ್ಲದೆ ಸತ್ತವರಾದ ಹಿರಿಯರೂ ಕಿರಿಯರೂ ಸಿಂಹಾಸನದ ಎದುರಿಗೆ ನಿಂತಿರುವುದನ್ನೂ ಕಂಡೆನು. ಆಗ ಪುಸ್ತಕಗಳನ್ನು ತೆರೆಯಲಾಯಿತು. ನಿತ್ಯಜೀವ ಪುಸ್ತಕವೆಂಬ ಇನ್ನೊಂದು ಪುಸ್ತಕವನ್ನು ತೆರೆಯಲಾಯಿತು. ಆ ಪುಸ್ತಕಗಳಲ್ಲಿ ಬರೆದಿದ್ದರ ಪ್ರಕಾರ, ಅವರವರ ಕ್ರಿಯೆಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.


ಇದನ್ನು ನೀವು ನಮ್ಮ ಪ್ರೀತಿಯ ಜೊತೆ ಸೇವಕನಾದ ಎಪಫ್ರನಿಂದ ಕಲಿತುಕೊಂಡಿರಿ. ಅವನು ನಮಗೋಸ್ಕರ ಕ್ರಿಸ್ತನ ನಂಬಿಗಸ್ತನಾದ ಸೇವಕನು.


“ಆ ಕಾಲದಲ್ಲಿ ನಿನ್ನ ಜನರನ್ನು ಕಾಪಾಡುವುದಕ್ಕಾಗಿ ಮಹಾರಾಜಕುಮಾರನಾದ ಮೀಕಾಯೇಲನು ಏಳುವನು. ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನವರೆಗೂ ಸಂಭವಿಸದಂತಹ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಎಂದರೆ ಜೀವ ಪುಸ್ತಕದಲ್ಲಿ ಯಾರ ಹೆಸರು ಬರೆಯಲಾಗಿದೆಯೋ, ಅವರೆಲ್ಲರೂ ಬಿಡುಗಡೆಯಾಗುವರು.


ಯಾರ ಹೆಸರು ಜೀವ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವರನ್ನು ಬೆಂಕಿಯ ಕೆರೆಗೆ ದೊಬ್ಬಲಾಯಿತು.


ಸುಳ್ಳಾದದ್ದನ್ನು ದರ್ಶಿಸಿ, ಸುಳ್ಳು ಕಣಿ ಹೇಳುವ ಪ್ರವಾದಿಗಳಿಗೆ ವಿರುದ್ಧವಾಗಿ ನನ್ನ ಹಸ್ತವಿರುವುದು. ಅವರು ನನ್ನ ಜನರ ಸಭೆಯಲ್ಲಿ ಇರುವುದೂ ಇಲ್ಲ, ಇಸ್ರಾಯೇಲನ ಮನೆತನದವರ ಪಟ್ಟಿಯಲ್ಲಿ ಬರೆಯಲಾಗುವುದೂ ಇಲ್ಲ. ಇಸ್ರಾಯೇಲಿನ ದೇಶದಲ್ಲಿ ಪ್ರವೇಶಿಸುವುದೂ ಇಲ್ಲ. ಆಗ ನಾನೇ ಸಾರ್ವಭೌಮ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ.


ಹೀಗಿರುವಲ್ಲಿ ಚೀಯೋನಿನಲ್ಲಿ ಉಳಿದವರು, ಯೆರೂಸಲೇಮಿನಲ್ಲಿ ಉಳಿದವರು ಹಾಗೂ ಯೆರೂಸಲೇಮಿನಲ್ಲಿ ವಾಸಿಸುವವರೆಂದೂ ದಾಖಲೆಗೊಂಡ ಪ್ರತಿಯೊಬ್ಬರೂ ಪವಿತ್ರರು ಎಂದು ಕರೆಯಲಾಗುವರು.


ಏಕೆಂದರೆ, ನೀವು ಮೊದಲನೆಯ ದಿನದಿಂದ ಇಂದಿನವರೆಗೂ ಸುವಾರ್ತೆಯಲ್ಲಿ ಸಹಭಾಗಿಗಳಾಗಿದ್ದೀರಿ.


ನಿಮ್ಮೆಲ್ಲರ ವಿಷಯದಲ್ಲಿ ಹೀಗೆ ಯೋಚಿಸುವುದು ನನಗೆ ಸೂಕ್ತವಾಗಿದೆ. ಏಕೆಂದರೆ ನಾನು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ. ನಾನು ಬೇಡಿಗಳಿಂದ ಸೆರೆಯಲ್ಲಿರುವಾಗಲೂ ಸುವಾರ್ತೆಯನ್ನು ಸಮರ್ಥಿಸಿ ದೃಢಪಡಿಸುವಾಗಲೂ ನೀವೆಲ್ಲರು ನನ್ನೊಂದಿಗಿರುವ ಕೃಪೆಯಲ್ಲಿ ಪಾಲುಗಾರರಾಗಿದ್ದೀರಿ.


ಪ್ರಿಯರೇ, ನನಗೆ ಸಂಭವಿಸಿದ ಸಂಕಟಗಳು ಸುವಾರ್ತೆಯ ಪ್ರಗತಿಗಾಗಿಯೇ ಅನುಕೂಲವಾಯಿತು ಎಂಬುದನ್ನು ನೀವು ತಿಳಿಯಬೇಕೆಂದು ನಾನು ಅಪೇಕ್ಷಿಸುತ್ತೇನೆ.


ಇವರಾದರೋ, ನಾನು ಸುವಾರ್ತೆಗಾಗಿ ನೇಮಕವಾಗಿದ್ದೇವೆಂದು ತಿಳಿದು ಪ್ರೀತಿಯಿಂದ ಸಾರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು