Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲೆಮೋನನಿಗೆ 1:1 - ಕನ್ನಡ ಸಮಕಾಲಿಕ ಅನುವಾದ

1 ಸುವಾರ್ತೆಯನ್ನು ಸಾರಿದ್ದರಿಂದ ಕ್ರಿಸ್ತ ಯೇಸುವಿನ ಸೆರೆಯಾಳಾಗಿರುವ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ, ನಮಗೆ ಪ್ರಿಯನೂ ಜೊತೆಗೆಲಸದವನೂ ಆಗಿರುವ ಫಿಲೆಮೋನನಿಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕ್ರಿಸ್ತ ಯೇಸುವಿನ ಸೆರೆಯಾಳಾಗಿರುವ ಪೌಲನೂ, ಸಹೋದರನಾದ ತಿಮೊಥೆಯನೂ, ನಮಗೆ ಪ್ರಿಯನೂ ಜೊತೆ ಸೇವಕನೂ ಆಗಿರುವ ಫಿಲೆಮೋನನೆಂಬ ನಿನಗೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1-3 ನಮ್ಮ ಅತಿಪ್ರಿಯನೂ ಸಹೋದ್ಯೋಗಿಯೂ ಆದ ಫಿಲೆಮೋನನಿಗೂ ನಿನ್ನ ಮನೆಯಲ್ಲಿ ಸಭೆಸೇರುವ ಸಹೋದರರಿಗೂ ಹಾಗು ನಮ್ಮ ಸಹೋದರಿ ಅಪ್ಪಿಯ ಮತ್ತು ಸಹಸೈನಿಕ ಅರ್ಖಿಪ್ಪನಿಗೂ - ಕ್ರಿಸ್ತಯೇಸುವಿಗೋಸ್ಕರ ಸೆರೆಯಾಳಾಗಿರುವ ಪೌಲನೂ ಮತ್ತು ನಮ್ಮ ಸಹೋದರ ತಿಮೊಥೇಯನೂ ಬರೆಯುವ ಪತ್ರ: ನಮ್ಮ ತಂದೆಯಾದ ದೇವರು ಮತ್ತು ಒಡೆಯರಾದ ಯೇಸುಕ್ರಿಸ್ತರು ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕ್ರಿಸ್ತ ಯೇಸುವಿನ ಸೆರೆಯವನಾಗಿರುವ ಪೌಲನೂ ಸಹೋದರನಾದ ತಿಮೊಥೆಯನೂ ನಮಗೆ ಪ್ರಿಯನೂ ಜೊತೆಕೆಲಸದವನೂ ಆಗಿರುವ ಫಿಲೆಮೋನನೆಂಬ ನಿನಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸು ಕ್ರಿಸ್ತನ ನಿಮಿತ್ತ ಸೆರೆಯಲ್ಲಿರುವ ಪೌಲನೂ ಸಹೋದರನಾದ ತಿಮೊಥೆಯನೂ ನಮಗೆ ಪ್ರಿಯನಾದ ಮತ್ತು ನಮ್ಮ ಜೊತೆಕೆಲಸದವನಾದ ಫಿಲೆಮೋನನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆಜು ಕ್ರಿಸ್ತಾಚ್ಯಾಸಾಟ್ನಿ ಬಂಧಿಖಾನ್ಯಾತ್ ಅಸಲ್ಲೊ ಪಾವ್ಲು ಅನಿ ಅಮ್ಚೊ ಭಾವ್ ತಿಮೊತಿನ್, ಅಮ್ಚ್ಯಾ ದೊಸ್ತಾ ಅನಿ ವಾಂಗ್ಡಿಯಾಕ್ ಫಿಲೆಮೊನಾಕ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲೆಮೋನನಿಗೆ 1:1
18 ತಿಳಿವುಗಳ ಹೋಲಿಕೆ  

ಈ ಕಾರಣದಿಂದ ಯೆಹೂದ್ಯರಲ್ಲದವರಾಗಿರುವ ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ ಸೆರೆಯಾಳಾಗಿರುವ ಪೌಲನೆಂಬ ನಾನು ಹೇಳುವುದೇನೆಂದರೆ:


ಹಾಗೆ ಆಜ್ಞಾಪಿಸದೆ, ಈಗ ಕ್ರಿಸ್ತ ಯೇಸುವಿನ ಸೆರೆಯಾಳೂ ಮುದುಕನೂ ಆಗಿರುವ ಪೌಲನೆಂಬ ನಾನು ಪ್ರೀತಿಯ ನಿಮಿತ್ತವೇ ನಿನ್ನನ್ನು ಬೇಡಿಕೊಳ್ಳುತ್ತೇನೆ.


ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾಗಿರುವ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ,


ಆದರೂ ನನ್ನ ಸಹೋದರನೂ ಜೊತೆ ಕೆಲಸದವನೂ ಸಹಸೈನಿಕನೂ ಆಗಿರುವ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವುದು ಅವಶ್ಯವೆಂದು ನಾನು ನೆನೆಸಿದ್ದೇನೆ. ಅವನು ನನ್ನ ಕೊರತೆಯಲ್ಲಿ ಸೇವೆ ಮಾಡುವಂತೆ ನೀವು ಕಳುಹಿಸಿದ ನಿಮ್ಮ ಸಂದೇಶಕನೂ ಆಗಿದ್ದಾನೆ.


ನಾವು ದೇವರ ಜೊತೆಕೆಲಸದವರು. ನೀವು ದೇವರ ಹೊಲವೂ ದೇವರ ಕಟ್ಟಡವೂ ಆಗಿದ್ದೀರಿ.


ಹೀಗಿರುವುದರಿಂದ ನಮ್ಮ ಕರ್ತ ಯೇಸುವಿನ ಸಾಕ್ಷಿಯ ವಿಷಯವಾಗಿಯೂ ಅವರ ಸೆರೆಯವನಾದ ನನ್ನ ವಿಷಯವಾಗಿಯೂ ನೀನು ನಾಚಿಕೆಪಡಬೇಡ. ಅದರ ಬದಲಾಗಿ, ದೇವರ ಶಕ್ತಿಗೆ ಅನುಸಾರವಾಗಿ, ಸುವಾರ್ತೆಗೋಸ್ಕರ ನನ್ನೊಂದಿಗೆ ಶ್ರಮೆಯನ್ನು ಅನುಭವಿಸು.


ನಿಮ್ಮನ್ನು ದೃಢಪಡಿಸುವುದಕ್ಕೂ ನಿಮ್ಮ ನಂಬಿಕೆಯ ವಿಷಯವಾಗಿ ನಿಮ್ಮನ್ನು ಉತ್ತೇಜಿಸುವುದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಯೇಸುಕ್ರಿಸ್ತರ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.


ಯೂಸ್ತನೆನಿಸಿಕೊಳ್ಳುವ ಯೇಸುವೂ ನಿಮ್ಮನ್ನು ವಂದಿಸುತ್ತಾನೆ. ದೇವರ ರಾಜ್ಯಕ್ಕಾಗಿ ನನ್ನ ಜೊತೆ ಕೆಲಸದವರಾಗಿದ್ದವರಲ್ಲಿ ಇವರು ಮಾತ್ರವೇ ಯೆಹೂದ್ಯರು. ಇವರು ನನಗೆ ತುಂಬಾ ಆದರಣೆಯಾಗಿದ್ದರು.


ಜೀವಗ್ರಂಥದಲ್ಲಿ ಹೆಸರು ಬರೆದಿರುವ ಕ್ಲೇಮೆನ್ಸ್ ಮುಂತಾದ ನನ್ನ ಜೊತೆ ಕೆಲಸದವರೊಡನೆ ನನ್ನೊಂದಿಗೆ ಸುವಾರ್ತೆಗೋಸ್ಕರ ಪ್ರಯಾಸಪಟ್ಟ ಆ ಸ್ತ್ರೀಯರಿಗೆ ನೀನೂ ಸಹಾಯಕನಾಗಿರಬೇಕೆಂದು ನಿಜ ಜೊತೆಗಾರನೇ, ನಿನ್ನನ್ನೂ ಕೇಳಿಕೊಳ್ಳುತ್ತೇನೆ.


ಆದ್ದರಿಂದ ನೀವು ಸ್ವೀಕರಿಸಿದ ನಿಮ್ಮ ಕರೆಯುವಿಕೆಗೆ ಯೋಗ್ಯರಾಗಿ ಬಾಳಬೇಕೆಂದು ಕರ್ತನ ಸೆರೆಯಾಳಾದ ನಾನು ನಿಮ್ಮನ್ನು ಪ್ರಬೋಧಿಸುತ್ತೇನೆ.


ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ, ಕೊರಿಂಥದಲ್ಲಿರುವ ದೇವರ ಸಭೆಗೆ ಮತ್ತು ಅಖಾಯ ಪ್ರಾಂತದಲ್ಲಿರುವ ಎಲ್ಲಾ ಪವಿತ್ರ ಜನರಿಗೆ ಬರೆಯುವ ಪತ್ರ:


ನನ್ನ ಜೊತೆಕೆಲಸದವರಾದ ಮಾರ್ಕ, ಅರಿಸ್ತಾರ್ಕ, ದೇಮ ಹಾಗೂ ಲೂಕ ನಿನ್ನನ್ನು ವಂದಿಸುತ್ತಾರೆ.


ನಮ್ಮ ತಂದೆ ದೇವರಲ್ಲಿಯೂ, ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ, ಸಿಲ್ವಾನ, ತಿಮೊಥೆಯರು ಬರೆಯುವುದು:


ಏಕೆಂದರೆ ಆ ಸುವಾರ್ತೆಗಾಗಿಯೇ ಸೆರೆಯಲ್ಲಿರುವ ರಾಯಭಾರಿಯಾದ ನಾನು ಅದನ್ನು ಸಾರುವುದರಲ್ಲಿ ಧೈರ್ಯವಾಗಿ ಮಾತನಾಡುವ ಹಂಗಿನಲ್ಲಿದ್ದೇನೆ.


ಪೌಲನು ದೆರ್ಬೆಗೂ ಲುಸ್ತ್ರಕ್ಕೂ ಬಂದನು. ಅಲ್ಲಿ, ತಿಮೊಥೆಯನೆಂಬ ಹೆಸರಿನ ಒಬ್ಬ ಶಿಷ್ಯನಿದ್ದನು. ಅವನ ತಾಯಿ ವಿಶ್ವಾಸಿಯಾಗಿದ್ದ ಯೆಹೂದ್ಯ ಸ್ತ್ರೀ. ಆದರೆ ಅವನ ತಂದೆ ಒಬ್ಬ ಗ್ರೀಕನಾಗಿದ್ದನು.


ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ.


ಕ್ರಿಸ್ತ ಯೇಸುವಿನ ದಾಸರಾದ ಪೌಲ ತಿಮೊಥೆಯರು, ಕ್ರಿಸ್ತ ಯೇಸುವಿನಲ್ಲಿರುವ ಫಿಲಿಪ್ಪಿಯ ದೇವರ ಪರಿಶುದ್ಧರೆಲ್ಲರಿಗೂ, ಅವರೊಂದಿಗಿರುವ ಮೇಲ್ವಿಚಾರಕರಿಗೂ ಸಭಾಸೇವಕರಿಗೂ ಬರೆಯುವ ಪತ್ರ:


ಕ್ರಿಸ್ತ ಯೇಸುವಿಗಾಗಿ ನನ್ನ ಜೊತೆ ಸೆರೆಯಾಳಾಗಿರುವ ಎಪಫ್ರನು ನಿನಗೆ ವಂದನೆ ತಿಳಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು