Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 1:16 - ಕನ್ನಡ ಸಮಕಾಲಿಕ ಅನುವಾದ

16 ಯಾಕೋಬನು ಯೋಸೇಫನ ತಂದೆ, ಯೋಸೇಫನು ಮರಿಯಳ ಪತಿ, ಮರಿಯಳು ಕ್ರಿಸ್ತ ಎಂದು ಕರೆಯಲಾದ, ಯೇಸುಸ್ವಾಮಿಯ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯಾಕೋಬನ ಮಗನು ಯೋಸೇಫನು. ಯೋಸೇಫನು ಮರಿಯಳ ಗಂಡನು. ಈ ಮರಿಯಳಿಂದಲೇ ಕ್ರಿಸ್ತನೆಂಬ ಯೇಸು ಹುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಈ ಮರಿಯಳಿಂದಲೇ “ಕ್ರಿಸ್ತ” ಎಂದು ಕರೆಯಲಾಗುವ ಯೇಸುಸ್ವಾಮಿ ಹುಟ್ಟಿದ್ದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯಾಕೋಬನು ಮರಿಯಳ ಗಂಡನಾದ ಯೋಸೇಫನನ್ನು ಪಡೆದನು. ಈ ಮರಿಯಳಲ್ಲಿ ಕ್ರಿಸ್ತನೆಂಬ ಯೇಸು ಹುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯಾಕೋಬನು ಯೋಸೇಫನ ತಂದೆ. ಯೋಸೇಫನು ಮರಿಯಳ ಗಂಡ. ಮರಿಯಳು ಯೇಸುವಿನ ತಾಯಿ. ಯೇಸುವನ್ನು ಕ್ರಿಸ್ತ ನೆಂದು ಕರೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಜಾಕೊಬ್ ಜುಜೆಚೊ ಬಾಬಾ, ಜುಜೆಚಿ ಬಾಯ್ಕೊ ಮರಿ ಅನಿ ಮಾನಾ ಮರಿಚ್ಯಾ ಪೊಟಾನ್ ಜಲಮಲ್ಲೊ “ಜೆಜು” ತೆಕಾ ಸುಟ್ಕಾದಿನಾರೊ ಕ್ರಿಸ್ತ್: ಮನ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 1:16
17 ತಿಳಿವುಗಳ ಹೋಲಿಕೆ  

ಜನಸಮೂಹ ಕೂಡಿಬಂದಿದ್ದಾಗ ಪಿಲಾತನು ಅವರಿಗೆ, “ನಿಮಗೆ ಯಾರನ್ನು ಬಿಡುಗಡೆ ಮಾಡಬೇಕೆನ್ನುತ್ತೀರಿ? ಬರಬ್ಬನನ್ನೋ? ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನೋ?” ಎಂದು ಕೇಳಿದನು.


ಆ ಸ್ತ್ರೀಯು ಯೇಸುವಿಗೆ, “ಕ್ರಿಸ್ತ ಎಂದು ಕರೆಯಲಾಗುವ ಮೆಸ್ಸೀಯ ಬರುತ್ತಾರೆಂದು ನಾನು ಬಲ್ಲೆನು. ಅವರು ಬಂದಾಗ ನಮಗೆ ಎಲ್ಲವನ್ನೂ ತಿಳಿಸುವರು,” ಎಂದಳು.


ಯೇಸು ಸೇವೆಯನ್ನು ಪ್ರಾರಂಭಿಸಿದಾಗ ಹೆಚ್ಚು ಕಡಿಮೆ ಮೂವತ್ತು ವರ್ಷದವರಾಗಿದ್ದರು. ಯೇಸು ಜನರ ಎಣಿಕೆಯಲ್ಲಿ ಯೋಸೇಫನ ಮಗನು. ಯೋಸೇಫನು, ಹೇಲೀಯ ಮಗನು,


ಪಿಲಾತನು ಅವರಿಗೆ, “ಹಾಗಾದರೆ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಲು ಅವರೆಲ್ಲರೂ, “ಆತನನ್ನು ಶಿಲುಬೆಗೆ ಹಾಕಿಸು,” ಎಂದು ಹೇಳಿದರು.


ಎಲ್ಲರೂ ಅವರನ್ನು ಹೊಗಳಿದರು. ಯೇಸುವಿನ ಬಾಯಿಂದ ಬಂದ ಕೃಪೆಯುಳ್ಳ ಮಾತುಗಳಿಗೆ ಆಶ್ಚರ್ಯಪಟ್ಟು, “ಈತನು ಯೋಸೇಫನ ಮಗನಲ್ಲವೇ?” ಎಂದು ಮಾತನಾಡಿಕೊಂಡರು.


ತಂದೆತಾಯಿಗಳು ಯೇಸುವನ್ನು ಕಂಡಾಗ ಆಶ್ಚರ್ಯಪಟ್ಟರು. ಆತನ ತಾಯಿಯು, “ಮಗು, ನೀನು ನಮಗೆ ಹೀಗೇಕೆ ಮಾಡಿದೆ? ನಿನ್ನ ತಂದೆಯೂ ನಾನೂ ಎಷ್ಟೋ ಕಳವಳಗೊಂಡು ನಿನ್ನನ್ನು ಹುಡುಕಿದೆವು,” ಎಂದಳು.


ಮರಿಯಳು ತನ್ನ ಚೊಚ್ಚಲು ಮಗನನ್ನು ಹೆತ್ತು, ಬಟ್ಟೆಗಳಿಂದ ಸುತ್ತಿ, ಛತ್ರದಲ್ಲಿ ಅವರಿಗೆ ಸ್ಥಳವಿಲ್ಲವಾದ್ದರಿಂದ ಶಿಶುವನ್ನು ದನದ ಕೊಟ್ಟಿಗೆಯಲ್ಲಿ ಮಲಗಿಸಿದಳು.


ದಾವೀದನ ವಂಶದ ಯೋಸೇಫನಿಗೆ, ನಿಶ್ಚಯವಾಗಿದ್ದ ಮರಿಯಳೆಂಬ ಒಬ್ಬ ಕನ್ನಿಕೆಯ ಬಳಿಗೆ ಕಳುಹಿಸಿದರು.


ಈತನು ಬಡಗಿಯಲ್ಲವೇ? ಈತನು ಮರಿಯಳ ಮಗನಲ್ಲವೇ? ಈತನು ಯಾಕೋಬ, ಯೋಸೆ, ಯೂದ ಮತ್ತು ಸೀಮೋನರ ಅಣ್ಣನಲ್ಲವೇ? ಈತನ ತಂಗಿಯರು ನಮ್ಮಲ್ಲಿ ಇದ್ದಾರಲ್ಲವೇ?” ಎಂದು ಹೇಳಿ, ಯೇಸುವಿನ ವಿಷಯವಾಗಿ ಬೇಸರಗೊಂಡರು.


ಆ ಜ್ಞಾನಿಗಳು ಹೊರಟುಹೋದ ಮೇಲೆ, ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಪ್ರತ್ಯಕ್ಷನಾಗಿ, “ಎದ್ದೇಳು, ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಈಜಿಪ್ಟಿಗೆ ಓಡಿಹೋಗು. ನಾನು ನಿನಗೆ ತಿಳಿಸುವವರೆಗೆ ಅಲ್ಲಿಯೇ ಇರು, ಏಕೆಂದರೆ ಹೆರೋದನು ಮಗುವನ್ನು ಹುಡುಕಿ ಕೊಲ್ಲಬೇಕೆಂದಿದ್ದಾನೆ,” ಎಂದನು.


ಎಲಿಹೂದನು ಎಲಿಯಾಜರನ ತಂದೆ, ಎಲಿಯಾಜರನು ಮತ್ತಾನನ ತಂದೆ, ಮತ್ತಾನನು ಯಾಕೋಬನ ತಂದೆ,


ಅದಕ್ಕೆ ಸೀಮೋನ ಪೇತ್ರನು ಉತ್ತರವಾಗಿ, “ನೀವು ಕ್ರಿಸ್ತ ಮತ್ತು ಜೀವಂತ ದೇವರ ಪುತ್ರರಾಗಿದ್ದೀರಿ,” ಎಂದು ಉತ್ತರಕೊಟ್ಟನು.


ತರುವಾಯ ಯೇಸು, ತಾನೇ ಕ್ರಿಸ್ತ ಎಂಬುದನ್ನು ಯಾರಿಗೂ ಹೇಳಬಾರದೆಂದು ತಮ್ಮ ಶಿಷ್ಯರಿಗೆ ಆಜ್ಞಾಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು