ಮತ್ತಾಯ 1:18 - ಕನ್ನಡ ಸಮಕಾಲಿಕ ಅನುವಾದ18 ಕ್ರಿಸ್ತ ಯೇಸುವಿನ ಜನನದ ವಿವರ: ಯೇಸುವಿನ ತಾಯಿ ಮರಿಯಳನ್ನು ಯೋಸೇಫನಿಗೆ ನಿಶ್ಚಯ ಮಾಡಿದ್ದರು, ಆದರೆ ಅವರಿಬ್ಬರು ಕೂಡಿಬಾಳುವುದಕ್ಕಿಂತ ಮುಂಚೆಯೇ, ಮರಿಯಳು ಪವಿತ್ರಾತ್ಮರಿಂದ ಗರ್ಭಧರಿಸಿರುವುದು ತಿಳಿದುಬಂತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಯೇಸು ಕ್ರಿಸ್ತನ ಜನನವು ಹೇಗಾಯಿತಂದರೆ, ಆತನ ತಾಯಿಯಾದ ಮರಿಯಳಿಗೂ ಯೋಸೇಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಮದುವೆಯಾಗಿ ಕೂಡಿಬಾಳುವುದಕ್ಕಿಂತ ಮೊದಲೇ ಮರಿಯಳು ಪವಿತ್ರಾತ್ಮನ ಶಕ್ತಿಯಿಂದ ಗರ್ಭಧರಿಸಿದ್ದು ತಿಳಿದುಬಂತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಕ್ರಿಸ್ತಯೇಸುವಿನ ಜನನದ ಪ್ರಕರಣ: ಯೇಸುವಿನ ತಾಯಿ ಮರಿಯಳಿಗೂ ಜೋಸೆಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಕೂಡಿ ಬಾಳುವುದಕ್ಕೆ ಮುಂಚೆಯೇ ಮರಿಯಳು ಗರ್ಭವತಿಯಾಗಿರುವುದು ತಿಳಿದುಬಂತು. ಆಕೆ ಗರ್ಭ ಧರಿಸಿದ್ದು ಪವಿತ್ರಾತ್ಮ ಪ್ರಭಾವದಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಯೇಸು ಕ್ರಿಸ್ತನ ಜನನವು ಹೇಗಾಯಿತಂದರೆ - ಆತನ ತಾಯಿಯಾದ ಮರಿಯಳನ್ನು ಯೋಸೇಫನಿಗೆ ನಿಶ್ಚಯಮಾಡಿರಲಾಗಿ ಅವರು ಕೂಡುವದಕ್ಕಿಂತ ಮುಂಚೆ ಆಕೆಯು ಪವಿತ್ರಾತ್ಮನಿಂದ ಬಸುರಾಗಿದ್ದದ್ದು ತಿಳಿದುಬಂತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಯೇಸು ಕ್ರಿಸ್ತನ ತಾಯಿ ಮರಿಯಳು. ಯೇಸುವಿನ ಜನನ ಈ ರೀತಿ ಸಂಭವಿಸಿತು: ಮದುವೆಮಾಡಿಕೊಳ್ಳಲು ಯೋಸೇಫನಿಗೂ ಮರಿಯಳಿಗೂ ನಿಶ್ಚಿತಾರ್ಥವಾಗಿತ್ತು. ಆದರೆ ಮದುವೆಗೆ ಮೊದಲೇ ತಾನು ಗರ್ಭಿಣಿಯಾಗಿರುವುದು ಮರಿಯಳಿಗೆ ತಿಳಿದುಬಂತು. ಮರಿಯಳು ಪವಿತ್ರಾತ್ಮನ ಪ್ರಭಾವದಿಂದ ಗರ್ಭಿಣಿಯಾಗಿದ್ದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಜೆಜು ಕ್ರಿಸ್ತಾಚೊ ಜಲ್ಮ್ ಅಸೊ ಹೊಲೊ: ತೆಚಿ ಬಾಯ್ ಮರಿಚೆ ಜುಜೆಚ್ಯಾ ವಾಂಗ್ಡಾ ಇಡೆ ಹೊಲ್ಲೆ, ಖರೆ ತೆಂಚೆ ಲಗಿನ್ ಹೊವ್ಚ್ಯಾ ಅದ್ದಿಚ್ ಮರಿ ಪವಿತ್ರ್ ಆತ್ಮ್ಯಾನ್ ಗರ್‍ವಾರ್ ಹೊಲಿ. ಅಧ್ಯಾಯವನ್ನು ನೋಡಿ |