Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 1:19 - ಕನ್ನಡ ಸಮಕಾಲಿಕ ಅನುವಾದ

19 ಯೋಸೇಫನು ನೀತಿವಂತನಾಗಿದ್ದರಿಂದ, ಆಕೆಯನ್ನು ಬಹಿರಂಗವಾಗಿ ಅವಮಾನ ಮಾಡುವುದಕ್ಕೆ ಮನಸ್ಸಿಲ್ಲದೆ, ಆಕೆಯನ್ನು ರಹಸ್ಯವಾಗಿ ಬಿಟ್ಟು ಬಿಡಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದ ಕಾರಣ ಮರಿಯಳನ್ನು ಬಯಲಿಗೆ ತಂದು ಅವಮಾನಕ್ಕೆ ಗುರಿಮಾಡದೆ ನಿಶ್ಚಿತಾರ್ಥವನ್ನು ರಹಸ್ಯವಾಗಿ ಮುರಿದುಬಿಡಬೇಕೆಂದು ಆಲೋಚಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆಕೆಯ ಪತಿ ಜೋಸೆಫನು ನೀತಿವಂತನು. ಮರಿಯಳನ್ನು ಅವಮಾನಕ್ಕೆ ಗುರಿಮಾಡುವ ಉದ್ದೇಶ ಅವನದಲ್ಲವಾದ್ದರಿಂದ ಯಾರಿಗೂ ತಿಳಿಯದ ಹಾಗೆ ನಿಶ್ಚಿತಾರ್ಥವನ್ನು ಮುರಿದುಬಿಡಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆದರೆ ಆಕೆಯ ಗಂಡನಾದ ಯೋಸೇಫನು ಸಜ್ಜನನಾಗಿದ್ದು ಆಕೆಯನ್ನು ಬೈಲಿಗೆ ತರುವದಕ್ಕೆ ಮನಸ್ಸಿಲ್ಲದೆ, ಯಾರಿಗೂ ತಿಳಿಯದಂತೆ ಆಕೆಯನ್ನು ಬಿಟ್ಟುಬಿಡಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಮರಿಯಳನ್ನು ಮದುವೆಯಾಗಲಿದ್ದ ಯೋಸೇಫನು ನೀತಿವಂತನಾಗಿದ್ದನು. ಮರಿಯಳನ್ನು ಜನರ ಮುಂದೆ ನಾಚಿಕೆಪಡಿಸಲು ಅವನು ಇಷ್ಟಪಡಲಿಲ್ಲ. ಆದ್ದರಿಂದ ಅವನು ಗುಟ್ಟಾಗಿ ನಿಶ್ಚಿತಾರ್ಥವನ್ನು ರದ್ದುಗೊಳಿಸಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಜುಜೆ ಕನ್ನಾಬಿ ಖಲೆ ಸಮಾ ಹಾಯ್ ತೆಚ್ ಕರ್ನಾರೊ ಮಾನುಸ್, ಖರೆ ಮರಿಕ್ ಲೊಕಾಂಚ್ಯಾ ಫಿಡ್ಯಾತ್ ಅವ್ಮಾನ್ ಕರುಕ್ ತೆಕಾ ಮನ್ ನತ್ತೊ, ತಸೆ ಮನುನ್ ಕೊನಾಕ್ಬಿ ಕಳಿನಸ್ತಾನಾ ತಿಕಾ ಸೊಡುನ್ ದಿವ್ಚೆ ಮನುನ್ ತೊ ಯವ್ಜುಕ್ ಲಾಗಲ್ಲೊ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 1:19
15 ತಿಳಿವುಗಳ ಹೋಲಿಕೆ  

ಆಗ ಸಿಮೆಯೋನನೆಂಬ ಒಬ್ಬ ಮನುಷ್ಯನು ಯೆರೂಸಲೇಮಿನಲ್ಲಿದ್ದನು. ಅವನು ನೀತಿವಂತನೂ ಭಕ್ತನೂ ಆಗಿದ್ದನು. ಅವನು ಇಸ್ರಾಯೇಲರನ್ನು ಸಂತೈಸುವ ಒಬ್ಬರ ಬರುವಿಕೆಗಾಗಿ ಕಾಯುತ್ತಿದ್ದನು. ಪವಿತ್ರಾತ್ಮ ದೇವರ ಪ್ರಸನ್ನತೆ ಅವನ ಮೇಲಿತ್ತು.


ಏಕೆಂದರೆ, ಯೋಹಾನನು ನೀತಿವಂತನು ಮತ್ತು ಪವಿತ್ರ ಮನುಷ್ಯನು ಎಂದು ತಿಳಿದು ಹೆರೋದನು ಭಯಪಟ್ಟು ಅವನನ್ನು ಸುರಕ್ಷಿತವಾಗಿಟ್ಟಿದ್ದನು. ಯೋಹಾನನು ಹೇಳಿದ್ದನ್ನು ಹೆರೋದನು ಕೇಳಿದಾಗಲೆಲ್ಲಾ ಅವನಿಗೆ ಗಲಿಬಿಲಿಯಾಗುತ್ತಿತ್ತು. ಆದರೂ ಅವನ ಮಾತನ್ನು ಕೇಳಲು ಇಷ್ಟಪಡುತ್ತಿದ್ದನು.


“ ‘ಇದಲ್ಲದೆ ಒಬ್ಬನು ಮತ್ತೊಬ್ಬನ ಹೆಂಡತಿಯೊಡನೆ ವ್ಯಭಿಚಾರ ಮಾಡಿದರೆ, ವ್ಯಭಿಚಾರ ಮಾಡುವವನಿಗೂ ಮತ್ತು ವ್ಯಭಿಚಾರ ಮಾಡುವವಳಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು.


ಹೆಚ್ಚು ಕಡಿಮೆ ಮೂರು ತಿಂಗಳಾದ ಮೇಲೆ ಯೆಹೂದನಿಗೆ, “ನಿನ್ನ ಸೊಸೆ ತಾಮಾರಳು ವೇಶ್ಯಾವೃತ್ತಿಮಾಡಿ ವ್ಯಭಿಚಾರದಿಂದ ಗರ್ಭಿಣಿಯಾಗಿದ್ದಾಳೆ,” ಎಂದು ತಿಳಿಸಿದರು. ಆಗ ಯೆಹೂದನು, “ಅವಳನ್ನು ಹೊರಗೆ ತನ್ನಿರಿ, ಅವಳನ್ನು ಸುಡಬೇಕು,” ಎಂದನು.


ಅದಕ್ಕೆ ಅವರು, “ವಿವಾಹ ವಿಚ್ಛೇದನ ಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಅನುಮತಿ ಕೊಟ್ಟನು,” ಎಂದರು.


“ ‘ಒಬ್ಬ ಪುರುಷನಿಗೆ ನಿಶ್ಚಿತವಾಗಿರುವ ದಾಸಿಯಾದ ಒಬ್ಬ ಸ್ತ್ರೀಯೊಂದಿಗೆ ಒಬ್ಬ ಮನುಷ್ಯನು ಸಂಗಮಿಸುವುದಕ್ಕಾಗಿ ಮಲಗಿದರೆ ಅವಳು ಬಿಡುಗಡೆಯನ್ನು ಹೊಂದಿರದಿದ್ದರೆ, ಇಲ್ಲವೆ ಅವಳಿಗೆ ಸ್ವಾತಂತ್ರ್ಯವನ್ನು ಕೊಡದಿರದಿದ್ದರೆ, ತಕ್ಕ ಶಿಕ್ಷೆಯಾಗಬೇಕು. ಅವಳು ಸ್ವತಂತ್ರಳಲ್ಲದ ಕಾರಣ ಅವಳಿಗೆ ಮರಣದಂಡನೆಯನ್ನು ವಿಧಿಸಬಾರದು.


ಇದು ನೋಹನ ಮತ್ತು ಅವನ ವಂಶದವರ ಚರಿತ್ರೆ: ನೋಹನು ನೀತಿವಂತನೂ ತನ್ನ ಕಾಲದವರಲ್ಲಿ ನಿರ್ದೋಷಿಯೂ ಆಗಿದ್ದನು. ಅವನು ದೇವರೊಂದಿಗೆ ವಿಶ್ವಾಸದಿಂದ ನಡೆಯುತ್ತಿದ್ದನು.


ಅವರು, “ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನು, ದೇವರಿಗೆ ಭಯಪಡುವವನು, ಯೆಹೂದ್ಯ ಜನರೆಲ್ಲರೂ ಅವನನ್ನು ಗೌರವಿಸುತ್ತಾರೆ. ನೀನು ಹೇಳುವಂಥದ್ದನ್ನು ಕೇಳಲಿಕ್ಕಾಗಿ ನಿನ್ನನ್ನು ಅಲ್ಲಿಗೆ ಕರೆಯಿಸಬೇಕೆಂದು ಒಬ್ಬ ಪರಿಶುದ್ಧ ದೇವದೂತನಿಂದ ಆದೇಶಪಡೆದಿದ್ದಾನೆ,” ಎಂದರು.


ಆದರೆ ಆ ಮಾತು ಸತ್ಯವಾಗಿದ್ದರೆ, ಆ ಹುಡುಗಿಯಲ್ಲಿ ಕನ್ಯಾಲಕ್ಷಣ ಕಾಣದೆ ಇದ್ದರೆ,


ಬೆಳಗಾದ ಮೇಲೆ ನೆಲವನ್ನು ಗುರುತಿಸಲು ಅವರಿಗೆ ಸಾಧ್ಯವಾಗಲಿಲ್ಲ. ಆದರೆ ಅವರು ದಡವನ್ನು ಕಂಡು ಸಾಧ್ಯವಾದರೆ ಅಲ್ಲಿ ನೌಕೆಯನ್ನು ನಿಲ್ಲಿಸಬೇಕೆಂದು ತೀರ್ಮಾನಿಸಿದರು.


ಈ ಭರವಸೆಯಿಂದ, ನಾನು ನಿಮ್ಮನ್ನು ಮೊದಲು ಸಂದರ್ಶಿಸಿ, ನಿಮಗೆ ಎರಡರಷ್ಟು ಉಪಯುಕ್ತತೆಯನ್ನು ಹೊಂದುವಂತೆ ಯೋಚನೆ ಮಾಡಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು