Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 1:24 - ಕನ್ನಡ ಸಮಕಾಲಿಕ ಅನುವಾದ

24 ಯೋಸೇಫನು ನಿದ್ದೆಯಿಂದ ಎದ್ದ ಮೇಲೆ, ಕರ್ತನ ದೂತನು ಆಜ್ಞಾಪಿಸಿದಂತೆ ಮರಿಯಳನ್ನು ತನ್ನ ಹೆಂಡತಿಯನ್ನಾಗಿ ಸ್ವೀಕರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆಗ ಯೋಸೇಫನು ಎಚ್ಚೆತ್ತು ದೇವದೂತನು ಅಪ್ಪಣೆಕೊಟ್ಟ ಪ್ರಕಾರ ಮರಿಯಳನ್ನು ಹೆಂಡತಿಯನ್ನಾಗಿ ಸ್ವೀಕರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆಗ ಜೋಸೆಫನು ಎಚ್ಚೆತ್ತು ದೇವದೂತನ ಆಜ್ಞೆಯ ಪ್ರಕಾರ ಮರಿಯಳನ್ನು ವಿವಾಹಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆಗ ಯೋಸೇಫನು ನಿದ್ದೆ ತಿಳಿದೆದ್ದು ಕರ್ತನ ದೂತನು ಅಪ್ಪಣೆಕೊಟ್ಟ ಹಾಗೆ ತನ್ನ ಹೆಂಡತಿಯನ್ನು ಸೇರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೋಸೇಫನು ಎಚ್ಚರಗೊಂಡ ಮೇಲೆ ಪ್ರಭುವಿನ ದೂತನು ಕನಸಿನಲ್ಲಿ ಹೇಳಿದ್ದಂತೆಯೇ ಮರಿಯಳನ್ನು ಪತ್ನಿಯನ್ನಾಗಿ ಸ್ವೀಕರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಜುಜೆ ನಿಜೆತ್ನಾ ಉಟಲ್ಲ್ಯಾ ತನ್ನಾ ಸರ್ವೆಸ್ವರಾಚ್ಯಾ ದುತಾನ್ ಸಾಂಗಲ್ಲ್ಯಾ ಸರ್ಕೆ ಮರಿಕ್ಡೆ ಲಗಿನ್ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 1:24
18 ತಿಳಿವುಗಳ ಹೋಲಿಕೆ  

ನಾನು ನಿಮಗೆ ಆಜ್ಞಾಪಿಸಿದ್ದನ್ನು ಪಾಲಿಸಿದರೆ ನೀವು ನನ್ನ ಸ್ನೇಹಿತರು.


ಅವರು ದೇವದರ್ಶನದ ಗುಡಾರದ ಒಳಗೆ ಸೇರುವ ಸಮಯದಲ್ಲಿಯೂ, ಬಲಿಪೀಠದ ಸಮೀಪಕ್ಕೆ ಬರುವ ಸಮಯದಲ್ಲಿಯೂ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವರು ಸ್ನಾನ ಮಾಡಿದರು.


ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ಪರಿಮಳ ಧೂಪವನ್ನು ಸುಟ್ಟನು.


ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆ ಯೆಹೋವ ದೇವರ ಸನ್ನಿಧಿಯಲ್ಲಿ ದೀಪಗಳನ್ನು ಇರಿಸಿದನು.


ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆ ಗುಡಾರದ ಮೇಲೆ ಡೇರೆಯನ್ನು ಹರಡಿಸಿ, ಡೇರೆಯ ಹೊದಿಕೆಯನ್ನು ಅದರ ಮೇಲೆ ಹಾಕಿದನು.


ಮೋಶೆಯು ಯೆಹೋವ ದೇವರು ತನಗೆ ಆಜ್ಞಾಪಿಸಿದ ಪ್ರಕಾರವೇ ಅವನು ಎಲ್ಲವನ್ನು ಮಾಡಿದನು.


ಯೆಹೋವ ದೇವರು ತನಗೆ ಆಜ್ಞಾಪಿಸಿದ ಪ್ರಕಾರವೇ ನೋಹನು ಎಲ್ಲವನ್ನೂ ಮಾಡಿದನು.


ದೇವರು ಆಜ್ಞಾಪಿಸಿದ ಪ್ರಕಾರವೇ ನೋಹನು ಎಲ್ಲವನ್ನು ಮಾಡಿದನು.


“ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು, ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.” ಈ ಹೆಸರಿನ ಅರ್ಥ, “ದೇವರು ನಮ್ಮ ಸಂಗಡ ಇದ್ದಾರೆ,” ಎಂಬುದು.


ಆದರೆ ಅವಳು ಮಗನನ್ನು ಹೆರುವತನಕ ಯೋಸೇಫನು ಆಕೆಯೊಂದಿಗೆ ದಾಂಪತ್ಯ ಜೀವನ ಮಾಡಲಿಲ್ಲ. ಯೋಸೇಫನು ಆ ಮಗುವಿಗೆ “ಯೇಸು” ಎಂದು ಹೆಸರಿಟ್ಟನು.


ಆದರೆ ರಾತ್ರಿಯಲ್ಲಿ ಕರ್ತದೇವರ ದೂತನೊಬ್ಬನು ಸೆರೆಮೆನೆಯ ದ್ವಾರಗಳನ್ನು ತೆರೆದು ಅವರನ್ನು ಹೊರಗೆ ನಡೆಸಿಕೊಂಡು ಬಂದು,


ಫಕ್ಕನೆ ದೇವದೂತನೊಬ್ಬನು ಪ್ರತ್ಯಕ್ಷನಾಗಲು ಕೋಣೆಯೆಲ್ಲಾ ಪ್ರಕಾಶಮಯವಾಯಿತು. ಅವನು ಪೇತ್ರನನ್ನು ತಟ್ಟಿ ಎಬ್ಬಿಸಿ, “ಬೇಗ ಎದ್ದೇಳು!” ಎಂದನು. ಪೇತ್ರನ ಕೈಗಳಿಗೆ ಬಂಧಿಸಿದ್ದ ಸರಪಣಿಗಳು ಕಳಚಿಬಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು