ಮತ್ತಾಯ 10:1 - ಕನ್ನಡ ಸಮಕಾಲಿಕ ಅನುವಾದ1 ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ತಮ್ಮ ಬಳಿಗೆ ಕರೆದು, ಅಶುದ್ಧಾತ್ಮಗಳನ್ನು ಓಡಿಸುವುದಕ್ಕೂ ಎಲ್ಲಾ ತರವಾದ ವ್ಯಾಧಿಯನ್ನೂ ರೋಗವನ್ನೂ ಸ್ವಸ್ಥಮಾಡುವುದಕ್ಕೂ ಅವರಿಗೆ ಅಧಿಕಾರವನ್ನು ಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ ದೆವ್ವಗಳನ್ನು ಬಿಡಿಸುವುದಕ್ಕೂ ಎಲ್ಲಾ ಬಗೆಯ ರೋಗಗಳನ್ನೂ ಎಲ್ಲಾ ರೀತಿಯ ಬೇನೆಗಳನ್ನೂ ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯೇಸುಸ್ವಾಮಿ ತಮ್ಮ ಹನ್ನೆರಡುಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಎಲ್ಲ ರೋಗರುಜಿನಗಳನ್ನು ಗುಣಪಡಿಸುವುದಕ್ಕೂ ದೆವ್ವಗಳನ್ನು ಬಿಡಿಸುವುದಕ್ಕೂ ಅವರಿಗೆ ಅಧಿಕಾರವನ್ನು ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಮತ್ತು ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಹತ್ತರಕ್ಕೆ ಕರೆದು ದೆವ್ವಗಳನ್ನು ಬಿಡಿಸುವದಕ್ಕೂ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುವದಕ್ಕೂ ಅವರಿಗೆ ಅಧಿಕಾರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಅವರಿಗೆ ದುರಾತ್ಮಗಳನ್ನು ಬಿಡಿಸುವುದಕ್ಕೂ ಎಲ್ಲಾ ತರದ ವ್ಯಾಧಿ ಮತ್ತು ಕಾಯಿಲೆಗಳನ್ನು ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಜೆಜುನ್ ಅಪ್ನಾಚ್ಯಾ ಬಾರಾ ಶಿಸಾಕ್ನಿ ಎಕಾಕ್ಡೆ ಬಲ್ವುಲ್ಯಾನ್, ಅನಿ ತೆಂಕಾ ಗಿರೆ ಕಾಡ್ತಲೊ, ಅನಿ ಸಗ್ಳಿ ರೊಗಾ, ಅನಿ ದುಕ್ನಿ ಅರಾಮ್ ಕರ್‍ತಲೊ ಅದಿಕಾರ್ ದಿಲ್ಯಾನ್. ಅಧ್ಯಾಯವನ್ನು ನೋಡಿ |