ಮತ್ತಾಯ 10:10 - ಕನ್ನಡ ಸಮಕಾಲಿಕ ಅನುವಾದ10 ಪ್ರಯಾಣಕ್ಕೆ ಚೀಲವನ್ನಾಗಲಿ, ಎರಡು ಅಂಗಿಗಳನ್ನಾಗಲಿ, ಪಾದರಕ್ಷೆಗಳನ್ನಾಗಲಿ, ಕೋಲುಗಳನ್ನಾಗಲಿ ತೆಗೆದುಕೊಳ್ಳಬೇಡಿರಿ. ಏಕೆಂದರೆ ಕೆಲಸದವನು ತನ್ನ ಜೀವನಾಧಾರಕ್ಕೆ ಅರ್ಹನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಎರಡು ಅಂಗಿ, ಚಪ್ಪಲಿ, ಕೋಲು ಮೊದಲಾದವುಗಳನ್ನೂ ತೆಗೆದುಕೊಳ್ಳಬೇಡಿರಿ. ಆಳು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಎರಡು ಅಂಗಿಗಳನ್ನಾಗಲಿ, ಕಾಲಿಗೆ ಕೆರವನ್ನಾಗಲಿ, ಕೈಗೆ ದಂಡವನ್ನಾಗಲಿ ತೆಗೆದುಕೊಳ್ಳಬೇಡಿ. ಏಕೆಂದರೆ, ದುಡಿಮೆಗಾರನು ಜೀವನಾಧಾರಕ್ಕೆ ಬಾಧ್ಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಎರಡು ಅಂಗಿ ಕೆರ ಕೋಲು ಮೊದಲಾದವುಗಳನ್ನೂ ಸೌರಿಸಿಕೊಳ್ಳಬೇಡಿರಿ. ಆಳು ಅಂಬಲಿಗೆ ಯೋಗ್ಯನಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಚೀಲವನ್ನಾಗಲಿ ಹೆಚ್ಚಿನ ಬಟ್ಟೆಗಳನ್ನಾಗಲಿ ಪಾದರಕ್ಷೆಗಳನ್ನಾಗಲಿ ಊರುಗೋಲುಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿ. ಕೆಲಸಗಾರನಿಗೆ ಅಗತ್ಯವಾದವುಗಳನ್ನು ಒದಗಿಸಲಾಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ವಾಟೆಕ್ ಮನುನ್ ಪಿಸ್ವಿ ಹೊಂವ್ದಿತ್, ನಾಹೊಲ್ಯಾರ್ ಜಾಸ್ತಿಚಿ ಅಂಗಿ ನಾಹೊಲ್ಯಾರ್ ಹೊನಾಯಾ ನಾಹೊಲ್ಯಾರ್ ದಾಂಡೊ ಘೆವ್‍ನಕಾಶಿ. ಕಾಮ್‍ಕಾರಾಕ್ ತೆಕಾ ಪಾಜೆ ಹೊಲ್ಲಿ ಮಜುರಿ ದಿವ್ನ್ ಹೊತಾ. ಅಧ್ಯಾಯವನ್ನು ನೋಡಿ |