ಮತ್ತಾಯ 10:14 - ಕನ್ನಡ ಸಮಕಾಲಿಕ ಅನುವಾದ14 ಯಾರಾದರೂ ನಿಮ್ಮನ್ನು ಸ್ವಾಗತಿಸದೆ ಹೋದರೆ ಇಲ್ಲವೆ ನಿಮ್ಮ ಮಾತುಗಳನ್ನು ಕೇಳದೆ ಹೋದರೆ, ನೀವು ಆ ಮನೆಯನ್ನು ಇಲ್ಲವೆ ಆ ಪಟ್ಟಣವನ್ನು ಬಿಟ್ಟು ಹೊರಡುವಾಗ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನಿಮ್ಮ ವಾಕ್ಯಗಳನ್ನೂ ಕೇಳದೆಯೂ ಹೋದರೆ ನೀವು ಆ ಮನೆಯನ್ನಾಗಲಿ ಆ ಊರನ್ನಾಗಲಿ ಬಿಟ್ಟು ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಒಂದು ಮನೆಯೇ ಆಗಲಿ, ಊರೇ ಆಗಲಿ, ನಿಮ್ಮನ್ನು ಸ್ವಾಗತಿಸದೆ ಅಥವಾ ನಿಮಗೆ ಕಿವಿಗೊಡದೆಹೋದರೆ, ಆ ಮನೆಯನ್ನು ಅಥವಾ ಊರನ್ನು ಬಿಟ್ಟು ಮುಂದಕ್ಕೆ ಹೋಗಿರಿ. ಹೋಗುವಾಗ ನಿಮ್ಮ ಪಾದಗಳಿಗೆ ಅಂಟಿರುವ ದೂಳನ್ನೂ ಝಾಡಿಸಿಬಿಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನಿಮ್ಮ ವಾಕ್ಯಗಳನ್ನು ಕೇಳದೆಯೂ ಹೋದರೆ ನೀವು ಆ ಮನೆಯನ್ನಾಗಲಿ ಆ ಊರನ್ನಾಗಲಿ ಬಿಟ್ಟು ಹೊರಡುವಾಗ ನಿಮ್ಮ ಕಾಲಿಗೆ ಹತ್ತಿದ ದೂಳನ್ನು ಝಾಡಿಸಿಬಿಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಒಂದು ಮನೆಯವರು ಅಥವಾ ಒಂದು ಊರಿನವರು ನಿಮ್ಮನ್ನು ಸ್ವಾಗತಿಸದಿದ್ದರೆ ಇಲ್ಲವೇ ನಿಮ್ಮ ಮಾತನ್ನು ಕೇಳದಿದ್ದರೆ ನೀವು ಆ ಸ್ಥಳವನ್ನು ಬಿಟ್ಟುಹೋಗುವಾಗ, ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಅನಿ ಜರ್ ಎಕ್ ಗಾವಾತ್ಲ್ಯಾ ಲೊಕಾನಿ ನಾಹೊಲ್ಯಾರ್ ಘರಾತ್ಲ್ಯಾ ಲೊಕಾನಿ ತುಮ್ಕಾ ಮರ್‍ಯಾದ್ ದಿನಸ್ಲ್ಯಾರ್, ಅನಿ ತುಮಿ ಸಾಂಗಲ್ಲೆ ಆಯ್ಕಿನಸ್ಲ್ಯಾರ್ ತೊ ಜಾಗೊ ಸೊಡುನ್ ಫಿಡೆ ಚಲಾ, ಅನಿ ಜಾತಾನಾ ತುಮ್ಚ್ಯಾ ಪಾಯಾಂಚಿ ಧುಳ್ ಫಾಪ್ಡಾ. ಅಧ್ಯಾಯವನ್ನು ನೋಡಿ |