Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:17 - ಕನ್ನಡ ಸಮಕಾಲಿಕ ಅನುವಾದ

17 ಆದರೆ ಜನರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಏಕೆಂದರೆ ಅವರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಒಪ್ಪಿಸುವರು. ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇದಲ್ಲದೆ ಜನರ ವಿಷಯದಲ್ಲಿ ಎಚ್ಚರವಾಗಿರಿ; ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು; ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಚಾವಟಿಗಳಿಂದ ಹೊಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಜನರ ಬಗ್ಗೆ ಜಾಗರೂಕರಾಗಿರಿ! ಅವರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಹಿಡಿದೊಪ್ಪಿಸುವರು. ಪ್ರಾರ್ಥನಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇದಲ್ಲದೆ ಜನರ ವಿಷಯದಲ್ಲಿ ಎಚ್ಚರಿಕೆಯಾಗಿರ್ರಿ; ಅವರು ನಿಮ್ಮನ್ನು ನ್ಯಾಯ ವಿಚಾರಣೆಯ ಸಭೆಗಳಿಗೆ ಎಳಕೊಂಡು ಹೋಗುವರು; ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಜನರ ವಿಷಯದಲ್ಲಿ ಎಚ್ಚರಿಕೆಯಿಂದಿರಿ. ನಿಮ್ಮನ್ನು ಅವರು ಬಂಧಿಸಿ ನ್ಯಾಯಾಲಯಕ್ಕೆ ಕರೆದುಕೊಂಡು ಹೋಗುವರು. ಅವರು ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಯಾದ್ ರ್‍ಹಂವ್ದಿ, ಥೈ ತುಮ್ಕಾ ಲೊಕಾ ಧರುನ್ ಝಡ್ತಿ ಕರ್ತಲ್ಯಾ ಜಾಗ್ಯಾರ್ ವೊಡುನ್ ಘೆವ್ನ್ ಜಾತ್ಯಾತ್, ಅನಿ ಸಿನಾಗೊಗಾತ್ನಿ ನ್ಹೆವ್ನ್ ಕಾಟ್ಯಾಂಚ್ಯಾ ಬಾರ್‍ಕೊಲಾನಿ ಮಾರ್‍ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:17
26 ತಿಳಿವುಗಳ ಹೋಲಿಕೆ  

“ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಒಪ್ಪಿಸುವರು, ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು. ನನ್ನ ನಿಮಿತ್ತವಾಗಿ ಅಧಿಕಾರಿಗಳ ಮತ್ತು ಅರಸರ ಮುಂದೆ ನಿಲ್ಲಿಸುವರು. ಹೀಗೆ ಇದು ಅವರಿಗೆ ಸಾಕ್ಷಿಯಾಗಿರುವುದು.


ಆದ್ದರಿಂದ ನೋಡಿರಿ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ನಿಯಮ ಬೋಧಕರನ್ನೂ ನಿಮ್ಮ ಬಳಿಗೆ ಕಳುಹಿಸುತ್ತೇನೆ. ಅವರಲ್ಲಿ ಕೆಲವರನ್ನು ಕೊಲ್ಲುವಿರಿ, ಶಿಲುಬೆಗೆ ಏರಿಸುವಿರಿ. ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸುವಿರಿ.


ಅನೇಕ ಸಲ ಅವರನ್ನು ದಂಡಿಸಲು ನಾನು ಒಂದು ಸಭಾಮಂದಿರದಿಂದ ಇನ್ನೊಂದು ಸಭಾಮಂದಿರಕ್ಕೆ ಹೋಗಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆ. ಇದಲ್ಲದೆ ಅವರ ಮೇಲೆ ಬಹು ಕೋಪಗೊಂಡವನಾಗಿ ನಾನು ಅವರನ್ನು ಹಿಂಸಿಸಲು ವಿದೇಶಿ ಪಟ್ಟಣಗಳಿಗೂ ಹೋದೆನು.


ಜನರು ನಿಮ್ಮನ್ನು ಸಭಾಮಂದಿರದಿಂದ ಹೊರಗೆ ಹಾಕುವರು. ಆದರೆ ನಿಮ್ಮನ್ನು ಕೊಲ್ಲುವವರು ದೇವರಿಗೆ ಸೇವೆ ಸಲ್ಲಿಸುತ್ತಾರೆಂದು ಭಾವಿಸುವ ಸಮಯ ಬರುತ್ತದೆ.


“ಜನರು ನಿಮ್ಮನ್ನು ಸಭಾಮಂದಿರಗಳಿಗೂ ಆಳುವವರ ಮುಂದೆಯೂ ಅಧಿಕಾರಿಗಳ ಮುಂದೆಯೂ ತಂದಾಗ ಹೇಗೆ ಇಲ್ಲವೆ ಯಾವುದನ್ನು ಕುರಿತು ಉತ್ತರಕೊಡಬೇಕೆಂದು, ಇಲ್ಲವೆ ಏನು ಹೇಳಬೇಕೆಂದು ಚಿಂತಿಸಬೇಡಿರಿ,


ಆದರೆ ನಾನು ನಿಮಗೆ ಹೇಳುವುದೇನೆಂದರೆ: ತನ್ನ ಸಹೋದರನ ಮೇಲೆ ಕೋಪಿಸಿಕೊಳ್ಳುವ ಪ್ರತೀ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು. ಮಾತ್ರವಲ್ಲದೆ, ಯಾವನಾದರೂ ತನ್ನ ಸಹೋದರನನ್ನು ‘ಬುದ್ಧಿ ಇಲ್ಲದವನೇ’ ಎಂದರೂ ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು. ಯಾರನ್ನಾದರೂ, ‘ಮೂರ್ಖಾ,’ ಎನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು.


“ಅದಕ್ಕೆ ನಾನು, ‘ಸ್ವಾಮಿ, ಎಲ್ಲಾ ಸಭಾಮಂದಿರಗಳಲ್ಲಿಯೂ ನಿಮ್ಮಲ್ಲಿ ನಂಬಿಕೆಯಿಟ್ಟವರನ್ನು ಬಂಧಿಸಿ, ಹೊಡೆದು ಸೆರೆಮನೆಗೆ ಹಾಕಿಸುತ್ತಿದ್ದೇನೆಂದು ಈ ಜನರು ಬಲ್ಲರು.


ನೆರೆಯವನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸೆ ಇಡಬೇಡಿರಿ; ನಿನ್ನ ಎದೆಯಲ್ಲಿ ಮಲಗುವವಳಿಗೆ ನಿನ್ನ ಬಾಯಿಯ ಬಾಗಿಲುಗಳನ್ನು ಕಾಯಿ.


ಇನ್ನೂ ಬೇರೆ ಕೆಲವರು ಅಪಹಾಸ್ಯ, ಕೊರಡೆಯ ಪೆಟ್ಟು ತಿಂದು ಬೇಡಿ ಸೆರೆವಾಸವನ್ನು ಸಹ ಅನುಭವಿಸಿದರು,


ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಿಂದಿರು. ಏಕೆಂದರೆ ಅವನು ನಮ್ಮ ಸಂದೇಶವನ್ನು ಬಹಳವಾಗಿ ವಿರೋಧಿಸಿದನು.


ನಾಯಿಗಳಂತೆ ವರ್ತಿಸುವವರಿಗೆ ಎಚ್ಚರಿಕೆ. ದುಷ್ಟಕಾರ್ಯಮಾಡುವವರಿಗೆ ಎಚ್ಚರಿಕೆ, ಸುಳ್ಳು ಸುನ್ನತಿಗಾಗಿ ವಾಗ್ವಾದಿಸುವವರಿಗೆ ಎಚ್ಚರಿಕೆ.


ಆಗ ಮುಖ್ಯಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ, “ಈತನು ಅನೇಕ ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ?


“ಸಹೋದರನು ತನ್ನ ಸಹೋದರನನ್ನೂ, ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು. ಮಕ್ಕಳು ತಮ್ಮ ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.


ಆಗ ಮುಖ್ಯಯಾಜಕರೂ ಆಲೋಚನಾ ಸಭೆಯವರೆಲ್ಲರೂ ಯೇಸುವಿಗೆ ವಿರೋಧವಾಗಿ ಯೇಸುವನ್ನು ಕೊಲ್ಲಿಸಬೇಕೆಂದು ಸುಳ್ಳುಸಾಕ್ಷಿಗಾಗಿ ಹುಡುಕಿದರು.


ಆದ್ದರಿಂದ ಸಹೋದರರು ಕೂಡಲೇ ಪೌಲನನ್ನು ಸಮುದ್ರ ತೀರಕ್ಕೆ ಕಳುಹಿಸಿಬಿಟ್ಟರು. ಆದರೆ ಸೀಲ ಮತ್ತು ತಿಮೊಥೆ ಬೆರೋಯದಲ್ಲಿಯೇ ಉಳಿದುಕೊಂಡರು.


ಇದಲ್ಲದೆ ನನ್ನನ್ನು ಹಾಸ್ಯಮಾಡುವುದಕ್ಕೂ ಕೊರಡೆಗಳಿಂದ ಹೊಡೆಯುವುದಕ್ಕೂ ಶಿಲುಬೆಗೆ ಹಾಕುವುದಕ್ಕೂ ಯೆಹೂದ್ಯರಲ್ಲದವರ ಕೈಗೆ ಒಪ್ಪಿಸಿಕೊಡುವರು. ನಾನಾದರೋ ಮೂರು ದಿನದ ಮೇಲೆ ಜೀವಿತನಾಗಿ ಎದ್ದು ಬರುವೆನು,” ಎಂದು ಹೇಳಿದರು.


ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸರ ಮುಂದೆ ಒಯ್ಯುವರು. ಹೀಗೆ ಅವರಿಗೂ ಯೆಹೂದ್ಯರಲ್ಲದವರಿಗೂ ನೀವು ಸಾಕ್ಷಿಗಳಾಗುವಿರಿ.


ಈ ಮಾರ್ಗಕ್ಕೆ ಸಂಬಂಧಪಟ್ಟ ಪುರುಷರಾಗಲಿ ಸ್ತ್ರೀಯರಾಗಲಿ ದಮಸ್ಕದಲ್ಲಿದ್ದರೆ ಅವರನ್ನು ತಾನು ಬಂಧಿಸಿ ಯೆರೂಸಲೇಮಿಗೆ ತರಲಿಕ್ಕಾಗುವಂತೆ ದಮಸ್ಕದಲ್ಲಿಯ ಸಭಾಮಂದಿರಗಳಿಗೆ ಕೊಡಲು ಮಹಾಯಾಜಕನಿಂದ ಪತ್ರ ಪಡೆದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು