Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:1 - ಕನ್ನಡ ಸಮಕಾಲಿಕ ಅನುವಾದ

1 ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರಿಗೆ ಆದೇಶ ಕೊಟ್ಟಾದ ಮೇಲೆ, ಗಲಿಲಾಯ ಪ್ರದೇಶದ ಪಟ್ಟಣಗಳಲ್ಲಿ ಬೋಧಿಸುವುದಕ್ಕೂ ಶುಭವರ್ತಮಾನವನ್ನು ಸಾರುವುದಕ್ಕೂ ಅಲ್ಲಿಂದ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಅಪ್ಪಣೆಕೊಡುವುದನ್ನು ಮುಗಿಸಿದ ಬಳಿಕ ಅವರ ಪಟ್ಟಣಗಳಲ್ಲಿ ಉಪದೇಶಮಾಡುವುದಕ್ಕೂ ಬೋಧಿಸುವುದಕ್ಕೂ ಅಲ್ಲಿಂದ ಹೊರಟು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೇಸುಸ್ವಾಮಿ ತಮ್ಮ ಹನ್ನೆರಡುಮಂದಿ ಶಿಷ್ಯರಿಗೆ ಆದೇಶವನ್ನು ಕೊಟ್ಟಾದ ಮೇಲೆ ಅಲ್ಲಿಂದ ಹೊರಟು ಉಪದೇಶ ಮಾಡುವುದಕ್ಕೂ ಬೋಧಿಸುವುದಕ್ಕೂ ಹತ್ತಿರದ ಊರುಗಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಹೇಳಬೇಕಾದದ್ದನ್ನು ಹೇಳಿ ಮುಗಿಸಿದ ಬಳಿಕ ಅಲ್ಲಿಯವರ ಊರುಗಳಲ್ಲಿ ಉಪದೇಶಮಾಡುವದಕ್ಕೂ ಸುವಾರ್ತೆಯನ್ನು ಸಾರುವದಕ್ಕೂ ಅಲ್ಲಿಂದ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಈ ಸಂಗತಿಗಳನ್ನು ಹೇಳಿದ ನಂತರ ಅಲ್ಲಿಂದ ಹೊರಟು ಬೋಧಿಸುವುದಕ್ಕೆ ಮತ್ತು ಉಪದೇಶಿಸುವುದಕ್ಕೆ ಗಲಿಲಾಯ ಪಟ್ಟಣಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಹೆ ಸಗ್ಳೆ ಅಪ್ನಾಚ್ಯಾ ಬಾರಾ ಜಾನಾ ಶಿಸಾಕ್ನಿ ಸಾಂಗುನ್ ಸರಲ್ಲ್ಯಾ ಮಾನಾ, ಜೆಜು ತೊ ಜಾಗೊ ಸೊಡುನ್ ಥೈ ಹೊತ್ತ್ಯಾ ಜಗೊಳ್‍ಲ್ಯಾ ಶಾರಾತ್ನಿ ಶಿಕ್ವುಕ್ ಅನಿ ದೆವಾಚಿ ಬರಿ ಖಬರ್ ಸಾಂಗುಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:1
19 ತಿಳಿವುಗಳ ಹೋಲಿಕೆ  

ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮರಿಂದಲೂ ಶಕ್ತಿಯಿಂದಲೂ ಅಭಿಷೇಕಿಸಿದ್ದರು. ಮಾತ್ರವಲ್ಲದೆ, ದೇವರು ಯೇಸುವಿನೊಡನೆ ಇದ್ದುದರಿಂದ, ಅವರು ಬೇರೆ ಬೇರೆ ಕಡೆಗಳಿಗೆ ಹೋಗಿ ಒಳಿತನ್ನು ಮಾಡಿ, ಪಿಶಾಚನಿಂದ ಪೀಡಿತರಾದವರನ್ನು ಗುಣಪಡಿಸುತ್ತಾ ಸಂಚರಿಸಿದ್ದನ್ನು ನೀವು ಬಲ್ಲಿರಿ.


ಇದಾದ ಮೇಲೆ, ಯೇಸು ಪ್ರತಿಯೊಂದು ಪಟ್ಟಣಕ್ಕೂ ಹಳ್ಳಿಗೂ ಹೋಗಿ, ದೇವರ ರಾಜ್ಯದ ವಿಷಯ ಪ್ರಚಾರ ಮಾಡುತ್ತಾ ಸುವಾರ್ತೆಯನ್ನು ಸಾರುತ್ತಾ ಇದ್ದರು. ಹನ್ನೆರಡು ಮಂದಿ ಶಿಷ್ಯರು ಅವರೊಂದಿಗೆ ಇದ್ದರು.


ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಇದ್ದ ಸಭಾಮಂದಿರಗಳಲ್ಲಿ ಬೋಧಿಸುತ್ತಾ, ರಾಜ್ಯದ ಸುವಾರ್ತೆಯನ್ನು ಸಾರುತ್ತಾ, ಜನರ ಪ್ರತಿಯೊಂದು ವ್ಯಾಧಿಯನ್ನೂ ರೋಗವನ್ನೂ ಗುಣಪಡಿಸುತ್ತಾ ಸಂಚರಿಸಿದರು.


ನಾವು ನಿಮ್ಮ ಸಂಗಡ ಇದ್ದಾಗ, “ಕೆಲಸ ಮಾಡಲೊಲ್ಲದವನು ಉಣ್ಣಲೂಬಾರದು,” ಎಂದು ನಿಮಗೆ ಆಜ್ಞಾಪಿಸಿದ್ದೆವು.


ಪ್ರಿಯರೇ, ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುವುದೇನೆಂದರೆ, ನಮ್ಮಿಂದ ಸ್ವೀಕರಿಸಿದ ಬೋಧನೆಯನ್ನು ಅನುಸರಿಸದೆ, ಸೋಮಾರಿಯಾಗಿ ಅಶಿಸ್ತಿನಿಂದ ನಡೆಯುವ ಪ್ರತಿ ವಿಶ್ವಾಸಿಗೆ ನೀವು ದೂರವಾಗಿರಬೇಕು.


ನಮಗೆ ಕರ್ತ ಆಗಿರುವ ಯೇಸುವಿನ ಅಧಿಕಾರದ ಮೂಲಕ ನಿಮಗೆ ಕೊಟ್ಟ ಆಜ್ಞೆಗಳನ್ನು ನೀವು ತಿಳಿದವರಾಗಿದ್ದೀರಿ.


ಜೀವಿಸುವವರಿಗೂ ಸತ್ತವರಿಗೂ ನ್ಯಾಯಾಧೀಶರಾಗಿ ದೇವರಿಂದ ನೇಮಕವಾದವರು ಯೇಸುವೇ ಎಂದು ನಾವು ಜನರಿಗೆ ಬೋಧಿಸಿ ಸಾಕ್ಷಿ ಕೊಡಬೇಕೆಂದೂ ಕ್ರಿಸ್ತ ಯೇಸು ನಮಗೆ ಆಜ್ಞಾಪಿಸಿದ್ದಾರೆ.


ಅಂದರೆ, ಯೇಸು ಆರಿಸಿಕೊಂಡ ಅಪೊಸ್ತಲರಿಗೆ ಪವಿತ್ರಾತ್ಮ ದೇವರ ಮುಖಾಂತರ ಆಜ್ಞಾಪಿಸಿದ ದಿನ ಮೊದಲುಗೊಂಡು ಸ್ವರ್ಗಕ್ಕೆ ಏರಿಹೋಗುವ ದಿನದವರೆಗೆ ಮಾಡಿದ್ದೆಲ್ಲವನ್ನೂ ಬರೆದಿದ್ದೇನೆ.


ನಾನು ನಿಮಗೆ ಆಜ್ಞಾಪಿಸಿದ್ದನ್ನು ಪಾಲಿಸಿದರೆ ನೀವು ನನ್ನ ಸ್ನೇಹಿತರು.


ನಾನು ನನ್ನ ತಂದೆಯ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನೆಲೆಗೊಂಡಿರುವಂತೆಯೇ ನೀವು ನನ್ನ ಆಜ್ಞೆಗಳನ್ನು ಪಾಲಿಸಿ ನಡೆದರೆ ನನ್ನ ಪ್ರೀತಿಯಲ್ಲಿ ನೆಲೆಗೊಳ್ಳುವಿರಿ.


ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ,” ಎಂದರು.


ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ, ಅವರ ಬೋಧನೆಯನ್ನು ಕೇಳಿ ಜನರು ಆಶ್ಚರ್ಯಪಟ್ಟರು.


ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ, ಯೆಹೂದ್ಯರ ಸಭಾಮಂದಿರಗಳಲ್ಲಿ ಬೋಧಿಸುತ್ತಾ, ರಾಜ್ಯದ ಸುವಾರ್ತೆಯನ್ನು ಸಾರುತ್ತಾ, ಜನರಲ್ಲಿದ್ದ ಸಕಲ ವಿಧವಾದ ವ್ಯಾಧಿಗಳನ್ನೂ ಸಕಲ ವಿಧವಾದ ಬೇನೆಗಳನ್ನೂ ಗುಣಪಡಿಸುತ್ತಾ ಬಂದರು.


ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರು ಪ್ರತ್ಯಕ್ಷರಾಗುವ ತನಕ ಈ ಆಜ್ಞೆಯನ್ನು ನಿಷ್ಕಳಂಕವಾಗಿಯೂ ನಿಂದಾರಹಿತವಾಗಿಯೂ ನೀನು ಕಾಪಾಡಬೇಕು.


ಶಿಷ್ಯರು ಹೊರಟುಹೋಗಿ ಜನರಿಗೆ ದೇವರ ಕಡೆ ತಿರುಗಿಕೊಳ್ಳಿರಿ ಎಂದು ಸಾರಿ ಹೇಳಿದರು.


ಅದಕ್ಕೆ ಅವರು, “ಈತನು ಗಲಿಲಾಯ ಪ್ರಾಂತ ಮೊದಲುಗೊಂಡು ಈ ಸ್ಥಳದವರೆಗೂ ಯೂದಾಯ ಪ್ರಾಂತದ ಎಲ್ಲಾ ಕಡೆಗೂ ಬೋಧಿಸುತ್ತಾ, ಜನರನ್ನು ಕ್ರಾಂತಿಗೆ ಪ್ರೇರೇಪಿಸುತ್ತಿದ್ದಾನೆ,” ಎಂದು ಒತ್ತಾಯ ಪೂರ್ವಕವಾಗಿ ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು