Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:12 - ಕನ್ನಡ ಸಮಕಾಲಿಕ ಅನುವಾದ

12 ಸ್ನಾನಿಕನಾದ ಯೋಹಾನನ ದಿನಗಳಿಂದ ಇದುವರೆಗೆ, ಪರಲೋಕ ರಾಜ್ಯವು ಬಲಾತ್ಕಾರಕ್ಕೆ ಒಳಗಾಗಿದೆ, ಬಲಾತ್ಕಾರಿಗಳು ಅದನ್ನು ಬಲವಂತವಾಗಿ ತೆಗೆದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸ್ನಾನಿಕ ಯೋಹಾನನ ಕಾಲದಿಂದ ಈ ವರೆಗೂ ಪರಲೋಕ ರಾಜ್ಯವು ಬಲವಂತಕ್ಕೆ ಗುರಿಯಾಗುತ್ತಿದೆ. ಬಲಾತ್ಕಾರಿಗಳು ಒತ್ತಾಯದಿಂದ ಅದನ್ನು ಸ್ವಾಧೀನಮಾಡಿಕೊಳ್ಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಯೊವಾನ್ನನು ತನ್ನ ಸಂದೇಶವನ್ನು ಸಾರಿದಂದಿನಿಂದ ಇಂದಿನವರೆಗೆ ಸ್ವರ್ಗಸಾಮ್ರಾಜ್ಯವು ನೂಕುನುಗ್ಗಲಿಗೆ ಗುರಿಯಾಗಿದೆ. ಬಲಪ್ರಯೋಗ ಮಾಡುವವರು ಅದನ್ನು ಸ್ವಾಧೀನಪಡಿಸಿಕೊಳ್ಳಲು ಯತ್ನಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇದಲ್ಲದೆ ಸ್ನಾನಿಕನಾದ ಯೋಹಾನನ ಕಾಲದಿಂದ ಈವರೆಗೂ ಪರಲೋಕರಾಜ್ಯವು ಬಲಾತ್ಕಾರಕ್ಕೆ ಗುರಿಯಾಗಿರುತ್ತದೆ; ಬಲಾತ್ಕಾರಿಗಳು ನುಗ್ಗಿ ಅದನ್ನು ಸ್ವಾಧೀನ ಮಾಡಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಸ್ನಾನಿಕ ಯೋಹಾನನು ಬಂದ ಸಮಯದಿಂದ ಇಲ್ಲಿಯವರೆಗೂ ಪರಲೋಕರಾಜ್ಯ ಪ್ರಬಲವಾದ ಆಕ್ರಮಣಗಳಿಗೆ ಒಳಗಾಗಿದೆ. ಬಲಾತ್ಕಾರವನ್ನು ಉಪಯೋಗಿಸಿ ಜನರು ರಾಜ್ಯವನ್ನು ಪಡೆದುಕೊಳ್ಳುವುದಕ್ಕಾಗಿ ಪ್ರಯತ್ನಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಜುವಾಂವ್ ಬಾವ್ತಿಸಾನ್ ಅಪ್ನಿ ಸಾಂಗ್ತಲಿ ಖಬರ್ ಸಾಂಗಲ್ಲ್ಯಾಕ್ನಾ ಆಜ್ ಪತರ್‍ಬಿ ಸರ್‍ಗಾಚ್ಯಾ ರಾಜ್ ಘಟ್ ಹೊವ್ನಗೆತ್ ಹಾಯ್, ಅನಿ ತರಾಸ್ ದಿತಲಿ ಲೊಕಾ ತೆ ಅಪ್ನಾಚೆ ಕರುನ್ ಘೆವ್ಕ್ ಬಗುಲ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:12
11 ತಿಳಿವುಗಳ ಹೋಲಿಕೆ  

“ಮೋಶೆಯ ನಿಯಮವೂ ಪ್ರವಾದನೆಗಳೂ ಯೋಹಾನನವರೆಗೆ ಇದ್ದವು. ಅಂದಿನಿಂದ, ದೇವರ ರಾಜ್ಯವು ಸಾರಲಾಗಿದೆ. ಪ್ರತಿಯೊಬ್ಬನು ಬಲವಂತದಿಂದ ಅದರೊಳಗೆ ನುಗ್ಗುತ್ತಿದ್ದಾನೆ.


“ಇಕ್ಕಟ್ಟಾದ ಬಾಗಿಲಿನಿಂದ ಒಳಗೆ ಪ್ರವೇಶಿಸುವುದಕ್ಕೆ ಪ್ರಯಾಸಪಡಿರಿ, ಅನೇಕರು ಒಳಗೆ ಪ್ರವೇಶಿಸುವುದಕ್ಕೆ ಪ್ರಯತ್ನಿಸಿದರೂ ಆಗುವುದಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ.


ಹೀಗಿರುವಲ್ಲಿ ನನ್ನ ಪ್ರಿಯ ಸ್ನೇಹಿತರೇ, ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರುವಾಗಲೂ ನೀವು ಯಾವಾಗಲೂ ನನಗೆ ವಿಧೇಯರಾದಂತೆ ಈಗಲೂ ವಿಧೇಯರಾಗಿ, ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ರಕ್ಷಣೆಯನ್ನು ಕಾರ್ಯರೂಪಕ್ಕೆ ತನ್ನಿರಿ.


ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ, ನೀವು ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿಯೇ ದುಡಿಯಿರಿ. ಅದನ್ನು ಮನುಷ್ಯಪುತ್ರನಾದ ನಾನು ನಿಮಗೆ ಕೊಡುವೆನು. ಇದಕ್ಕಾಗಿ ತಂದೆ ದೇವರು ಮೆಚ್ಚುಗೆಯ ಮುದ್ರೆಯನ್ನು ನನ್ನ ಮೇಲೆ ಹಾಕಿದ್ದಾರೆ,” ಎಂದರು.


ಯೇಸು ಉತ್ತರವಾಗಿ, “ಸದ್ಯಕ್ಕೆ ಒಪ್ಪಿಕೋ, ಹೀಗೆ ನಾವು ಸಕಲ ನೀತಿಯನ್ನೂ ನೆರವೇರಿಸಬೇಕಾಗಿದೆ,” ಎಂದು ಹೇಳಿದಾಗ, ಯೋಹಾನನು ಒಪ್ಪಿಕೊಂಡನು.


ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಸ್ತ್ರೀಯರಲ್ಲಿ ಹುಟ್ಟಿದವರಲ್ಲಿ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಹುಟ್ಟಲಿಲ್ಲ; ಆದರೂ ಪರಲೋಕ ರಾಜ್ಯದಲ್ಲಿರುವ ಅತ್ಯಂತ ಚಿಕ್ಕವನು ಅವನಿಗಿಂತಲೂ ದೊಡ್ಡವನಾಗಿದ್ದಾನೆ.


ಯೋಹಾನನ ಕಾಲದ ತನಕ ಮೋಶೆಯ ನಿಯಮ ಹಾಗು ಎಲ್ಲ ಪ್ರವಾದಿಗಳು ದೇವರ ರಾಜ್ಯವನ್ನು ಕುರಿತು ಪ್ರವಾದನೆ ಮಾಡಿದರು.


ಏಕೆಂದರೆ ಕೆಲವೊಮ್ಮೆ ದೇವದೂತನು ಇಳಿದುಬಂದು ನೀರನ್ನು ಕಲಕುತ್ತಿದ್ದನು. ನೀರು ಕಲಕಿದೊಡನೆ ಮೊದಲು ಯಾರು ನೀರಿನೊಳಗೆ ಹೆಜ್ಜೆಯಿಡುತ್ತಿದ್ದರೋ ಅವರಿಗೆ ಯಾವ ರೋಗವಿದ್ದರೂ ಅದು ಗುಣವಾಗುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು