Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:17 - ಕನ್ನಡ ಸಮಕಾಲಿಕ ಅನುವಾದ

17 “ ‘ನಾವು ನಿಮಗಾಗಿ ಕೊಳಲೂದಿದೆವು, ನೀವು ಕುಣಿಯಲಿಲ್ಲ; ನಾವು ಶೋಕಗೀತೆ ಹಾಡಿದೆವು, ನೀವು ಗೋಳಾಡಲಿಲ್ಲ,’ ಎಂದು ಹೇಳುವವರಿಗೆ ಇದು ಹೋಲಿಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ‘ನಿಮಗೋಸ್ಕರ ಕೊಳಲೂದಿದೆವು ನೀವು ಕುಣಿಯಲಿಲ್ಲ. ಶೋಕಿಸಿದೆವು ನೀವು ಗೋಳಾಡಲಿಲ್ಲ’ ಎಂದು ಕೂಗಿ ಹೇಳುವಂಥ ಮಕ್ಕಳಿಗೆ ಸಮಾನವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಾವು ಕೊಳಲನೂದಲು ನೀವು ಕುಣಿದಾಡಲಿಲ್ಲ; ನಾವು ಶೋಕಗೀತೆಗಳ ಹಾಡಲು ನೀವು ಕಣ್ಣೀರಿಡಲಿಲ್ಲ,” ಎಂದು ಪೇಟೆಬೀದಿಯಲ್ಲಿ ಕುಳಿತು, ಒಬ್ಬರಿಗೊಬ್ಬರು ಕೂಗಾಡುವ ಮಕ್ಕಳನ್ನು ಇವರು ಹೋಲುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಿಮಗೋಸ್ಕರ ಕೊಳಲೂದಿದೆವು, ನೀವು ಕುಣಿಯಲಿಲ್ಲ. ಗೋಳಾಡಿದೆವು, ನೀವು ಎದೆಬಡಕೊಳ್ಳಲಿಲ್ಲ ಎಂದು ಕೂಗಿಹೇಳುವಂಥ ಹುಡುಗರನ್ನು ಹೋಲುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ‘ನಾವು ನಿಮಗೋಸ್ಕರ ವಾದ್ಯ ಬಾರಿಸಿದೆವು. ನೀವು ಕುಣಿಯಲಿಲ್ಲ; ನಾವು ಶೋಕಗೀತೆ ಹಾಡಿದೆವು, ನೀವು ದುಃಖಿಸಲಿಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಅಮಿ ತುಮ್ಚೆಸಾಟ್ನಿ ಲಗ್ನಾಚೆ ವಾಜಾಪ್ ವಾಜ್ವುಲಾವ್, ಖರೆ ತುಮಿ ನಾಚುಕ್ನ್ಯಾಶಿ! ಅಮಿ ಮರ್‍ನಾಚ್ಯಾ ಗಿತಾ ಮಟ್ಲ್ಯಾವ್, ಜಾಲ್ಯಾರ್‍ಬಿ ತುಮಿ ರಡುಕ್ನ್ಯಾಶಿ!” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:17
15 ತಿಳಿವುಗಳ ಹೋಲಿಕೆ  

ಪರಿಶುದ್ಧ ಹಬ್ಬವನ್ನು ಆಚರಿಸುವ ರಾತ್ರಿಯಲ್ಲಿ ಆದಂತೆ ನಿಮಗೆ ಹಾಡು ಇರುವುದು. ಯೆಹೋವ ದೇವರ ಪರ್ವತವಾಗಿರುವ ಇಸ್ರಾಯೇಲಿನ ಬಂಡೆಯ ಬಳಿಗೆ ಕೊಳಲಿನ ಸಂಗಡ ಹೋಗುವ ಪ್ರಕಾರ ಹೃದಯದ ಸಂತೋಷವಿರುವುದು.


ಅದಕ್ಕೆ ಯೇಸು ಅವರಿಗೆ, “ಮದುಮಗನು ತಮ್ಮ ಜೊತೆಯಲ್ಲಿ ಇರುವ ತನಕ ಮದುಮಗನ ಆಪ್ತರು ದುಃಖಪಡುವುದುಂಟೇ? ಆದರೆ ಮದುಮಗನು ಅಗಲಬೇಕಾಗುವ ದಿವಸಗಳು ಬರುತ್ತವೆ; ಆಗ ಅವರು ಉಪವಾಸ ಮಾಡುವರು.


ಇಸ್ರಾಯೇಲಿನ ಕನ್ಯೆಯೇ, ನಾನು ನಿನ್ನನ್ನು ಮತ್ತೆ ನಿರ್ಮಿಸುವೆನು. ನೀನು ಪುನಃ ನಿರ್ಮಿತವಾಗುವೆ. ನಿನ್ನ ದಮ್ಮಡಿಗಳಿಂದ ತಿರುಗಿ ನಿನ್ನನ್ನು ಅಲಂಕರಿಸಿಕೊಂಡು ಸಂತೋಷ ಪಡುವವರ ನಾಟ್ಯದಲ್ಲಿ ಹೊರಡುವೆ.


ತರುವಾಯ ಯೇಸು ಆ ಅಧಿಕಾರಿಯ ಮನೆಯೊಳಗೆ ಬಂದು ಕೊಳಲೂದುವವರನ್ನೂ ಜನರ ಗೊಂದಲವನ್ನೂ ಕಂಡು,


ಇದಲ್ಲದೆ ಜನರೆಲ್ಲರೂ ಅವನನ್ನು ಹಿಂಬಾಲಿಸಿದರು. ಜನರು ಕೊಳಲು ಊದಿ ಮಹಾ ಆನಂದದಿಂದ ಸಂತೋಷಿಸಿದರು. ಅವರ ಶಬ್ದದಿಂದ ಭೂಮಿಯು ಕಂಪಿಸಿತು.


“ಆಗ, ಹಿರಿಯ ಮಗನು ಹೊಲದಲ್ಲಿದ್ದನು. ಅವನು ಮನೆಯ ಸಮೀಪಕ್ಕೆ ಬರುತ್ತಿದ್ದಾಗ, ನರ್ತನವನ್ನೂ ವಾದ್ಯವನ್ನೂ ಕೇಳಿ,


ಅವರು ಯೊರ್ದನಿನ ಆಚೆ ಇರುವ ಆಟಾದ್ ಕಣಕ್ಕೆ ಬಂದಾಗ, ಅಲ್ಲಿ ಅಧಿಕವಾದ ಮತ್ತು ಮಹಾ ಘೋರವಾದ ಗೋಳಾಟದಿಂದ ದುಃಖಪಟ್ಟರು.


“ಆದರೆ ಈ ಸಂತತಿಯನ್ನು ನಾನು ಯಾವುದಕ್ಕೆ ಹೋಲಿಸಲಿ? ಮಕ್ಕಳು ಪೇಟೆಗಳಲ್ಲಿ ಕೂತುಕೊಂಡು ಇತರರನ್ನು ಕರೆಯುತ್ತಾ:


“ಏಕೆಂದರೆ ಯೋಹಾನನು ಅನ್ನಪಾನಗಳನ್ನು ತೆಗೆದುಕೊಳ್ಳಲಿಲ್ಲ. ಅದಕ್ಕೆ ಅವರು, ‘ಅವನಿಗೆ ದೆವ್ವ ಹಿಡಿದಿದೆ,’ ಎಂದರು.


ಅವರು ಸಂತೆಯಲ್ಲಿ ಕುಳಿತುಕೊಂಡು ಒಬ್ಬರನ್ನೊಬ್ಬರು ಕರೆಯುತ್ತಾ: “ ‘ನಾವು ನಿಮಗಾಗಿ ಕೊಳಲೂದಿದೆವು, ನೀವು ಕುಣಿಯಲಿಲ್ಲ, ನಾವು ನಿಮಗಾಗಿ ಶೋಕಗೀತೆ ಹಾಡಿದೆವು, ನೀವು ಅಳಲಿಲ್ಲ,’ ಎಂದು ಹೇಳುವ ಮಕ್ಕಳಿಗೆ ಹೋಲಿಕೆಯಾಗಿದ್ದಾರೆ.


ಎಲ್ಲರೂ ಅಳುತ್ತಾ ಹುಡುಗಿಗಾಗಿ ಗೋಳಾಡುತ್ತಿದ್ದರು. ಯೇಸು, “ಅಳಬೇಡಿರಿ, ಆಕೆಯು ಸತ್ತಿಲ್ಲ, ನಿದ್ರೆ ಮಾಡುತ್ತಾಳೆ,” ಎಂದರು.


ಜನರ ಮಹಾ ಸಮೂಹ ಯೇಸುವಿನ ಹಿಂದೆ ಹೊರಟಿತು. ಅವರಲ್ಲಿ ಯೇಸುವಿಗಾಗಿ ಶೋಕಿಸುತ್ತಾ, ಗೋಳಾಡುತ್ತಿದ್ದ ಮಹಿಳೆಯರು ಸಹ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು