Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:20 - ಕನ್ನಡ ಸಮಕಾಲಿಕ ಅನುವಾದ

20 ತರುವಾಯ ತಮ್ಮ ಹೆಚ್ಚಾದ ಮಹತ್ಕಾರ್ಯಗಳು ನಡೆದ ಪಟ್ಟಣಗಳು, ದೇವರ ಕಡೆಗೆ ತಿರುಗಿಕೊಳ್ಳದೆ ಇದ್ದುದರಿಂದ ಯೇಸು ಅವುಗಳನ್ನು ಗದರಿಸತೊಡಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅನಂತರ ಆತನು ತನ್ನ ಮಹತ್ಕಾರ್ಯಗಳು ಬಹಳವಾಗಿ ನಡೆದ ಊರುಗಳವರು ಮಾನಸಾಂತರಪಡಲಿಲ್ಲವೆಂದು ಅವುಗಳನ್ನು ಗದರಿಸತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಯಾವ ಪಟ್ಟಣಗಳಲ್ಲಿ ಯೇಸುಸ್ವಾಮಿ ಅದ್ಭುತಕಾರ್ಯಗಳನ್ನು ಹೇರಳವಾಗಿ ಮಾಡಿದ್ದರೋ ಆ ಪಟ್ಟಣಗಳ ಜನರೇ ಪಾಪಕ್ಕೆ ವಿಮುಖರಾಗಲಿಲ್ಲ. ಆದ್ದರಿಂದ ಆ ಪಟ್ಟಣಗಳನ್ನು ಯೇಸು ಖಂಡಿಸಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆಗ ಆತನು ತನ್ನ ಮಹತ್ಕಾರ್ಯಗಳು ಬಹಳವಾಗಿ ನಡೆದ ಊರುಗಳು ದೇವರ ಕಡೆಗೆ ತಿರುಗಲಿಲ್ಲವೆಂದು ಅವುಗಳನ್ನು ಗದರಿಸತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಂತರ ಯೇಸು, ತಾನು ಯಾವ ಪಟ್ಟಣಗಳಲ್ಲಿ ಹೇರಳವಾಗಿ ಅದ್ಭುತಕಾರ್ಯಗಳನ್ನು ಮಾಡಿದ್ದನೋ ಆ ಪಟ್ಟಣಗಳನ್ನು ಖಂಡಿಸಿದನು. ಏಕೆಂದರೆ ಆ ಪಟ್ಟಣಗಳಲ್ಲಿದ್ದ ಜನರು ತಮ್ಮ ಜೀವಿತವನ್ನು ಬದಲಾಯಿಸಿಕೊಳ್ಳಲಿಲ್ಲ ಮತ್ತು ಪಾಪ ಮಾಡುವುದನ್ನು ನಿಲ್ಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಜೆಜುನ್ ಅಪ್ನಿ ಮೊಟಿ-ಮೊಟಿ ವಿಚಿತ್ರ್ ಕಾಮಾ ತ್ಯಾ ಶಾರಾತ್ನಿ ಕರಲ್ಲ್ಯಾನ್, ಜಾಲ್ಲ್ಯಾರ್‍ಬಿ ತ್ಯಾ ಶಾರಾನಿತ್ಲ್ಯಾ ಲೊಕಾನಿ ಅಪ್ನಾಚೆ ಮನ್ ದೆವಾಕ್ಡೆ ಪರ್‍ತುನತ್ತ್ಯಾನಿ. ಜೆಜುನ್ ತ್ಯಾ ಶಾರಾಕ್ನಿ ಖಂಡನ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:20
17 ತಿಳಿವುಗಳ ಹೋಲಿಕೆ  

ನಾನು ಕಿವಿಗೊಟ್ಟು ಕೇಳಿದೆನು. ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ, “ನಾನು ಎಂಥಾ ಕೆಲಸ ಮಾಡಿದ್ದೇನೆ,” ಎಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ. ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ, ಪ್ರತಿಯೊಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ.


ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು. ಆದರೆ ದೇವರ ಕಡೆಗೆ ತಿರುಗಿಕೊಂಡು ತನ್ನ ವ್ಯಭಿಚಾರವನ್ನು ಬಿಟ್ಟುಬಿಡಲು ಅವಳಿಗೆ ಮನಸ್ಸಿಲ್ಲ.


ತಮ್ಮ ನೋವುಗಳಿಗಾಗಿಯೂ ಹುಣ್ಣುಗಳಿಗಾಗಿಯೂ ಪರಲೋಕದ ದೇವರನ್ನು ದೂಷಿಸಿದರು. ಆದರೆ ಅವರು, ತಮ್ಮ ಕೃತ್ಯಗಳಿಗಾಗಿ ಪಶ್ಚಾತ್ತಾಪ ಪಡಲಿಲ್ಲ.


ಮನುಷ್ಯರು ಬಲವಾದ ಕಾವಿನಿಂದ ಕಂದಿ ಹೋದಾಗ್ಯೂ, ಈ ಉಪದ್ರವಗಳ ಮೇಲೆ ಅಧಿಕಾರ ಹೊಂದಿರುವ ದೇವರ ನಾಮವನ್ನು ದೂಷಿಸಿದರು. ಆದರೆ ಅವರು ದೇವರಿಗೆ ಮಹಿಮೆಯನ್ನು ಸಲ್ಲಿಸುವ ಹಾಗೆ ಪಶ್ಚಾತ್ತಾಪ ಪಡಲಿಲ್ಲ.


ನಿಮ್ಮಲ್ಲಿ ಯಾರಿಗಾದರೂ ಜ್ಞಾನ ಕಡಿಮೆಯಾಗಿದ್ದರೆ, ಅವರು ದೇವರನ್ನು ಕೇಳಿಕೊಳ್ಳಲಿ, ಅದು ಅವರಿಗೆ ದೊರಕುವುದು. ದೇವರು ತಪ್ಪು ಕಂಡುಹಿಡಿಯದೆ ಎಲ್ಲರಿಗೂ ಉದಾರಮನಸ್ಸಿನಿಂದ ಕೊಡುವರು.


ನೀನು ಕೆಲವು ವಿಚಿತ್ರವಾದ ವಿಚಾರಗಳನ್ನು ನಮಗೆ ಹೇಳುತ್ತಿರುವೆ. ಆದ್ದರಿಂದ ಅವುಗಳ ಅರ್ಥವನ್ನು ತಿಳಿಯಬಯಸುತ್ತೇವೆ,” ಎಂದರು.


ತರುವಾಯ ಊಟಕ್ಕೆ ಕುಳಿತಿದ್ದ ಹನ್ನೊಂದು ಮಂದಿಗೆ ಯೇಸು ಕಾಣಿಸಿಕೊಂಡರು. ತಾವು ಜೀವಿತರಾಗಿ ಎದ್ದು ಬಂದ ಮೇಲೆ ತಮ್ಮನ್ನು ಕಂಡವರ ಮಾತನ್ನು ಅವರು ನಂಬದಿದ್ದ ಕಾರಣ ಅವರ ಅಪನಂಬಿಕೆಯನ್ನೂ ಹೃದಯದ ಕಾಠಿಣ್ಯವನ್ನೂ ಯೇಸು ಗದರಿಸಿದರು.


ಆಗ ಯೇಸು ಅವರಿಗೆ, “ವಿಶ್ವಾಸವಿಲ್ಲದ ಸಂತಾನವೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,” ಎಂದು ಹೇಳಿದರು.


ನಿನೆವೆ ಪಟ್ಟಣದವರು ನ್ಯಾಯತೀರ್ಪಿನಲ್ಲಿ ಈ ಸಂತತಿಗೆ ಎದುರಾಗಿ ಎದ್ದು ನಿಂತು ಇದನ್ನು ಅಪರಾಧ ಎಂದು ತೀರ್ಪುಮಾಡುವರು, ಏಕೆಂದರೆ ಯೋನನು ಸಾರಿದ್ದನ್ನು ಕೇಳಿ ಅವರು ದೇವರ ಕಡೆಗೆ ತಿರುಗಿಕೊಂಡರು; ಇಗೋ, ಇಲ್ಲಿ ಯೋನನಿಗಿಂತಲೂ ತುಂಬಾ ದೊಡ್ಡವನು ಇದ್ದಾನೆ.


ನಾನು ತಿರುಗಿ ಬಂದಾಗ, ಹಿಂದೆ ನಿಮ್ಮಲ್ಲಿ ಅಶುದ್ಧತ್ವ, ಲೈಂಗಿಕ ಅನೈತಿಕತೆ, ಪೋಕರಿತನ ಮುಂತಾದ ಪಾಪಗಳನ್ನು ಮಾಡಿ ಪಶ್ಚಾತ್ತಾಪ ಪಡದಿರುವ ಅನೇಕರ ವಿಷಯವಾಗಿ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ತಗ್ಗಿಸಿಬಿಡುವನು ಎಂದು ದುಃಖಪಡಬೇಕಾಗಿರುವುದರಿಂದ ನಾನು ಭಯಪಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು