Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:29 - ಕನ್ನಡ ಸಮಕಾಲಿಕ ಅನುವಾದ

29 ನಾನು ಸಾತ್ವಿಕನೂ ದೀನ ಹೃದಯದವನೂ ಆಗಿರುವುದರಿಂದ ನೀವು ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ. ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನಾನು ವಿನಯಶೀಲನು, ದೀನಹೃದಯನು; ನನ್ನ ನೊಗಕ್ಕೆ ಹೆಗಲುಕೊಟ್ಟು ನನ್ನಿಂದ ಕಲಿತುಕೊಳ್ಳಿ. ಆಗ ನಿಮಗೆ ವಿಶ್ರಾಂತಿ ಸಿಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನಾನು ಸಾತ್ವಿಕನೂ ದೀನಮನಸ್ಸುಳ್ಳವನೂ ಆಗಿರುವದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಲ್ಲಿ ಕಲಿತುಕೊಳ್ಳಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನನ್ನ ನೊಗಕ್ಕೆ ಹೆಗಲು ಕೊಟ್ಟು ನನ್ನಿಂದ ಕಲಿತುಕೊಳ್ಳಿರಿ. ನಾನು ಸಾತ್ವಿಕನೂ ದೀನನೂ ಆಗಿರುವುದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಮಾಜೊ ಜುವ್ ಘೆವಾ, ಅನಿ ಖಾಂಜ್ಯಾರ್ ಥವ್ನ್ ಘೆವಾ ಅನಿ ಮಾಜೆಕ್ನಾ ಶಿಕಾ, ಕಶ್ಯಾಕ್ ಮಟ್ಲ್ಯಾರ್ ಮಿಯಾ ಖಾಲ್ತಿ ಹೊವ್ನ್ ಚಲ್ತಲ್ಯಾ ಮನಾಚೊ ಅನಿ ಭೊಳೊ; ಅನಿ ತುಮ್ಕಾ ಆರಾಮ್ ಘೆವ್ಕ್ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:29
38 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಹೀಗೆ ಹೇಳುತ್ತಾರೆ: “ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ, ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ, ಒಳ್ಳೆಯ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ. ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕುವುದು, ಆದರೆ ಅವರು, ‘ನಾವು ನಡೆಯುವುದಿಲ್ಲ,’ ಎಂದರು.


ದೇವರಲ್ಲಿ ನೆಲೆಗೊಂಡವನಾಗಿದ್ದೇನೆಂದು ಹೇಳುವವನು ಯೇಸು ಜೀವಿಸಿದಂತೆಯೇ ತಾನೂ ಜೀವಿಸಬೇಕು.


ನಾನು ನಿಮಗೆ ಮಾಡಿದಂತೆಯೇ ನೀವು ಸಹ ಮಾಡಬೇಕೆಂದು ನಾನು ನಿಮಗೆ ಮಾದರಿಯನ್ನು ಕೊಟ್ಟಿದ್ದೇನೆ.


“ಆದ್ದರಿಂದ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವ ಪ್ರತಿಯೊಬ್ಬನೂ ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಸಮಾನ.


ಹೀಗೆ ಯೇಸು ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ನಿರಂತರವಾಗಿ ರಕ್ಷಣೆಗೆ ಕಾರಣರಾದರು.


ನಾನು ನಿಮ್ಮ ಬಳಿಯಲ್ಲಿ ಮುಖಾಮುಖಿಯಾಗಿ ಮಾತನಾಡುವಾಗ, “ಮೃದುವಾಗಿಯೂ” ನಿಮ್ಮಿಂದ ದೂರವಿರುವಾಗ “ಕಠಿಣನಾಗಿಯೂ ವರ್ತಿಸುವವನು” ಎಂತಲೂ ನೀವು ತಿಳಿದಿದ್ದೀರಿ. ಅಂಥ ಪೌಲನೆಂಬ, ನಾನು ಕ್ರಿಸ್ತ ಯೇಸುವಿನ ದೀನತ್ವದಿಂದಲೂ ಸಾತ್ವಿಕತೆಯಿಂದಲೂ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ:


ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ,” ಎಂದರು.


ಚೀಯೋನ್ ಪುತ್ರಿಯೇ, ಮಹಾ ಉಲ್ಲಾಸಪಡು. ಯೆರೂಸಲೇಮಿನ ಪುತ್ರಿಯೇ ಆರ್ಭಟಿಸು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ. ಆತನು ನೀತಿವಂತನಾಗಿಯೂ ಜಯಹೊಂದಿದವನಾಗಿಯೂ, ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾನೆ.


ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿಯೂ ಇರಲಿ:


ಆದರೆ ಮೋಶೆ ಎಂಬವನು ಭೂಲೋಕದಲ್ಲಿರುವ ಸಕಲ ಮನುಷ್ಯರೆಲ್ಲರಿಗಿಂತ ಬಹು ದೀನನಾಗಿದ್ದನು.


“ಚೀಯೋನಿನ ಪುತ್ರಿಗೆ ಹೇಳಿರಿ, ‘ಇಗೋ, ನಿನ್ನ ಅರಸನು, ಸಾತ್ವಿಕನಾಗಿ, ಕತ್ತೆಯನ್ನೂ, ಕತ್ತೆಯಮರಿಯನ್ನೂ ಹತ್ತಿದವನಾಗಿ ನಿನ್ನ ಬಳಿಗೆ ಬರುತ್ತಾನೆ.’ ”


ನಾವು ದೈವಜ್ಞಾನವನ್ನು ವಿರೋಧಿಸುವ ವಾಗ್ವಾದಗಳನ್ನೂ ಪ್ರತಿಯೊಂದು ನಟನೆಯನ್ನೂ ಧ್ವಂಸಮಾಡುತ್ತೇವೆ. ಪ್ರತಿಯೊಂದು ಯೋಚನೆಗಳನ್ನು ಕ್ರಿಸ್ತ ಯೇಸುವಿಗೆ ವಿಧೇಯವಾಗುವಂತೆ ಸೆರೆಹಿಡಿಯುವವರು ಆಗಿದ್ದೇವೆ.


ನಮಗೆ ಕರ್ತ ಆಗಿರುವ ಯೇಸುವಿನ ಅಧಿಕಾರದ ಮೂಲಕ ನಿಮಗೆ ಕೊಟ್ಟ ಆಜ್ಞೆಗಳನ್ನು ನೀವು ತಿಳಿದವರಾಗಿದ್ದೀರಿ.


ನೀವು ಇವುಗಳನ್ನು ತಿಳಿದುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.


ಪೇತ್ರನು ಇನ್ನೂ ಮಾತನಾಡುತ್ತಿರುವಾಗಲೇ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿಯಿತು. ಆಗ, “ಈತನು ಪ್ರಿಯನಾಗಿರುವ ನನ್ನ ಮಗನು. ಈತನನ್ನು ನಾನು ಸಂಪೂರ್ಣವಾಗಿ ಮೆಚ್ಚಿದ್ದೇನೆ. ಈತನ ಮಾತನ್ನು ನೀವು ಕೇಳಿರಿ,” ಎಂದು ಮೇಘದೊಳಗಿಂದ ಒಂದು ಧ್ವನಿ ಕೇಳಿತು.


ಅವರು ದೇವರನ್ನು ಅರಿಯದವರಿಗೂ ನಮಗೆ ಕರ್ತ ಆಗಿರುವ ಯೇಸುವಿನ ಸುವಾರ್ತೆಗೆ ಅವಿಧೇಯರಾದವರಿಗೂ ಪ್ರತೀಕಾರ ಮಾಡುವರು.


ನಾನು ನಿಯಮ ಇಲ್ಲದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಅವರಿಗೆ ನಿಯಮವಿಲ್ಲದವನಂತಾದೆನು. ನಾನು ಕ್ರಿಸ್ತ ಯೇಸುವಿನ ನಿಯಮಕ್ಕೆ ಒಳಗಾದವನಾಗಿದ್ದರೂ ನಾನು ದೇವರ ನಿಯಮದಿಂದ ಸ್ವತಂತ್ರವಾದವನಲ್ಲ.


“ ‘ನನ್ನಂಥ ಒಬ್ಬ ಪ್ರವಾದಿಯನ್ನು ನಿಮ್ಮ ಸ್ವಂತ ಜನರೊಳಗಿಂದಲೇ ದೇವರು ನಿಮಗೆ ಕಳುಹಿಸುವರು,’ ಎಂದು ಇಸ್ರಾಯೇಲರಿಗೆ ಹೇಳಿದವನು ಈ ಮೋಶೆಯೇ.


ಆಗ ಜನರು ನಡೆದ ಸಂಗತಿ ಏನೆಂದು ಕಾಣುವುದಕ್ಕಾಗಿ ಹೊರಟು ಯೇಸುವಿನ ಬಳಿಗೆ ಬಂದರು. ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯುಳ್ಳವನಾಗಿ, ಯೇಸುವಿನ ಪಾದಗಳ, ಬಳಿಯಲ್ಲಿ ಕುಳಿತಿರುವುದನ್ನು ಕಂಡು ಭಯಪಟ್ಟರು.


ಯೆಹೋವ ದೇವರೇ, ನನ್ನ ಹೃದಯವು ಗರ್ವದ್ದಲ್ಲ, ನನಗೆ ಸೊಕ್ಕಿನ ಕಣ್ಣಿಲ್ಲ ದೊಡ್ಡ ವಿಷಯಗಳಲ್ಲಿಯೂ ನನಗೆ ನಿಲುಕಲಾರದವುಗಳಲ್ಲಿಯೂ ನಾನು ಕೈ ಹಾಕುವುದಿಲ್ಲ.


ನನ್ನ ಮನವೇ, ನೀನು ವಿಶ್ರಾಂತಿಯಿಂದಿರು; ಏಕೆಂದರೆ ಯೆಹೋವ ದೇವರು ನಿನಗೆ ಉಪಕಾರಿಯಾಗಿದ್ದಾರೆ.


ಜ್ಞಾನದ ಮಾರ್ಗಗಳು ಸಂತೋಷಕರ; ಅದರ ದಾರಿಗಳೆಲ್ಲಾ ಶಾಂತಿಯ ದಾರಿಗಳೇ.


ಆತನು ಮೊದಲು, “ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ, ಬಳಲಿದವರನ್ನು ವಿಶ್ರಮಗೊಳಿಸಿರಿ. ನಿಮಗೆ ಅನುಕೂಲವಾದ ಉಪಶಮನ ಇದೇ,” ಎಂದು ಹೇಳಿದಾಗಲೂ ಅವರು ಕೇಳಲಿಲ್ಲ.


ದೀನರ ಸಂತೋಷವು ಯೆಹೋವ ದೇವರಲ್ಲಿ ಹೆಚ್ಚಾಗುವುವು. ಮನುಷ್ಯರಲ್ಲಿ ಬಡವರು ಇಸ್ರಾಯೇಲಿನ ಪರಿಶುದ್ಧನಲ್ಲಿ ಹರ್ಷಿಸುವರು.


ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು. ಆದರೆ ನಾನು ನಿಮ್ಮ ನೊಗವನ್ನು ಇನ್ನೂ ಹೆಚ್ಚು ಭಾರವಾಗಿ ಮಾಡುವೆನು. ನನ್ನ ತಂದೆಯು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ, ನಾನಾದರೋ ನಿಮ್ಮನ್ನು ಚೇಳು ಕೊರಡೆಗಳಿಂದ ಶಿಕ್ಷಿಸುವೆನು,’ ಎಂದು ನೀನು ಅವರಿಗೆ ಹೇಳು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು