Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:15 - ಕನ್ನಡ ಸಮಕಾಲಿಕ ಅನುವಾದ

15 ಆದರೆ ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದರು. ದೊಡ್ಡ ಜನರ ಗುಂಪು ಅವರನ್ನು ಹಿಂಬಾಲಿಸಿತು. ಯೇಸು ಅವರಲ್ಲಿ ಅಸ್ವಸ್ಥರಾದವರನ್ನು ಗುಣಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ತಮಗೆ ವಿರುದ್ಧ ಒಳಸಂಚು ನಡೆಯುತ್ತಿದೆ ಎಂದು ಯೇಸುಸ್ವಾಮಿ ಅರಿತುಕೊಂಡು ಅಲ್ಲಿಂದ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಫರಿಸಾಯರು ಏನು ಮಾಡುತ್ತಿದ್ದಾರೆಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಆ ಸ್ಥಳವನ್ನು ಬಿಟ್ಟುಹೋದನು. ಅನೇಕ ಜನರು ಆತನನ್ನು ಹಿಂಬಾಲಿಸಿದರು. ಆತನು ಎಲ್ಲಾ ರೋಗಿಗಳನ್ನು ಗುಣಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಜೆಜುಕ್ ತ್ಯಾ ಲೊಕಾಂಚೊ ಘಾತ್ ಕಳ್ಳೊ, ತಸೆಮನುನ್ ಜೆಜು ತೊ ಜಾಗೊ ಸೊಡುನ್ ಥೈತ್ನಾ ಧುರ್ ಗೆಲೊ, ಅನಿ ಲೊಕಾಂಚೊ ಮೊಟೊ ತಾಂಡೊ ತೆಚ್ಯಾ ಫಾಟ್ನಾ ಹೊತ್ತೊ. ತೆನಿ ಸಿಕ್ ಹೊತ್ತ್ಯಾ ಲೊಕಾಕ್ನಿ ಗುನ್ ಕರ್‍ಲ್ಯಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:15
15 ತಿಳಿವುಗಳ ಹೋಲಿಕೆ  

ಒಂದು ಸ್ಥಳದಲ್ಲಿ ನಿಮಗೆ ಹಿಂಸೆಯಾದರೆ ಇನ್ನೊಂದು ಸ್ಥಳಕ್ಕೆ ಓಡಿಹೋಗಿರಿ. ಮನುಷ್ಯಪುತ್ರನು ಬರುವಷ್ಟರಲ್ಲಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವುದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.


ಹೀಗಿರುವುದರಿಂದ ಯೇಸು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ತಿರುಗಾಡಲಿಲ್ಲ. ಆದರೆ ಅವರು ಅಲ್ಲಿಂದ ಅರಣ್ಯಕ್ಕೆ ಸಮೀಪದಲ್ಲಿದ್ದ ಎಫ್ರಾಯೀಮ್ ಎಂಬ ಊರಿಗೆ ಹೋಗಿ ಅಲ್ಲಿ ತಮ್ಮ ಶಿಷ್ಯರ ಸಂಗಡ ವಾಸಮಾಡಿದರು.


ಇವುಗಳಾದ ಮೇಲೆ ಯೇಸು ಗಲಿಲಾಯದ ಪ್ರಾಂತದಲ್ಲಿ ಸಂಚಾರ ಮಾಡಿದರು. ಯೆಹೂದ್ಯರು ಯೇಸುವನ್ನು ಕೊಲ್ಲುವುದಕ್ಕೆ ಹುಡುಕುತ್ತಿದ್ದುದರಿಂದ ಯೂದಾಯದಲ್ಲಿ ಸಂಚರಿಸಲು ಅವರು ಇಷ್ಟಪಡಲಿಲ್ಲ.


ಜನರ ದೊಡ್ಡ ಸಮೂಹಗಳು ಅವರನ್ನು ಹಿಂಬಾಲಿಸಿದವು, ಯೇಸು ಅವರನ್ನು ಅಲ್ಲಿ ಸ್ವಸ್ಥಮಾಡಿದರು.


ಯೇಸು ಹಳ್ಳಿ, ಪಟ್ಟಣ ಊರುಗಳಲ್ಲಿ ಎಲ್ಲೆಲ್ಲಿ ಹೋದರೋ ಅಲ್ಲಿ ಜನರು ರೋಗಿಗಳನ್ನು ತಂದು ಪೇಟೆಗಳಲ್ಲಿ ಇಟ್ಟು, ಯೇಸುವಿನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಅವರನ್ನು ಬೇಡಿಕೊಂಡರು. ಯೇಸುವನ್ನು ಮುಟ್ಟಿದವರೆಲ್ಲರೂ ಗುಣಹೊಂದಿದರು.


ಇದಕ್ಕಾಗಿಯೇ ನಿಮ್ಮನ್ನು ಕರೆಯಲಾಯಿತು: ಕ್ರಿಸ್ತ ಯೇಸು ಸಹ ನಮಗೋಸ್ಕರ ಬಾಧೆಯನ್ನು ಅನುಭವಿಸಿ ತಮ್ಮ ಹೆಜ್ಜೆಯ ಜಾಡಿನಲ್ಲಿ ನೀವು ನಡೆಯಬೇಕೆಂದು ಆದರ್ಶವನ್ನು ಬಿಟ್ಟುಹೋದರು.


ಒಳ್ಳೆಯದನ್ನು ಮಾಡುವುದರಲ್ಲಿ ಎದೆಗುಂದದಿರೋಣ. ಏಕೆಂದರೆ ನಾವು ಬೇಸರಗೊಳ್ಳದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.


ನನ್ನನ್ನು ಕಳುಹಿಸಿದ ತಂದೆಯ ಕೆಲಸಗಳನ್ನು ಹಗಲಿರುವಾಗಲೇ ನಾವು ಮಾಡಬೇಕು. ರಾತ್ರಿ ಬಂದಾಗ ಯಾರಿಗೂ ಕೆಲಸ ಮಾಡಲಾಗದು.


ಆ ದಿನಗಳಲ್ಲಿ ಯೇಸು ಪ್ರಾರ್ಥಿಸುವುದಕ್ಕಾಗಿ ಒಂದು ಬೆಟ್ಟಕ್ಕೆ ಹೋಗಿ, ರಾತ್ರಿಯೆಲ್ಲಾ ದೇವರನ್ನು ಪ್ರಾರ್ಥಿಸುವುದರಲ್ಲಿ ಕಳೆದರು.


ಯೇಸು ಅವರ ಆಲೋಚನೆಗಳನ್ನು ತಿಳಿದು, “ನೀವು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳುತ್ತಿರುವುದೇನು?


ಆದರೆ ಜನರು ಅದನ್ನು ತಿಳಿದು ಯೇಸುವನ್ನು ಹಿಂಬಾಲಿಸಿದರು. ಯೇಸು ಅವರನ್ನು ಸ್ವೀಕರಿಸಿ, ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ, ಸ್ವಸ್ಥತೆ ಬೇಕಾಗಿದ್ದವರನ್ನು ಸ್ವಸ್ಥಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು