Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:18 - ಕನ್ನಡ ಸಮಕಾಲಿಕ ಅನುವಾದ

18 “ಈತನು ನಾನು ಆರಿಸಿಕೊಂಡ ನನ್ನ ದಾಸನು, ಈ ನನ್ನ ಪ್ರಿಯನಲ್ಲಿ ನನ್ನ ಪ್ರಾಣವು ಸಂಪೂರ್ಣ ಮೆಚ್ಚಿದೆ. ನಾನು ಈತನ ಮೇಲೆ ನನ್ನ ಆತ್ಮವನ್ನು ಇರಿಸುವೆನು, ಈತನು ಜನಾಂಗಗಳಿಗೆ ನ್ಯಾಯವನ್ನು ಸಾರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು. ಈತನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಈತನಲ್ಲಿ ನನ್ನ ಆತ್ಮವನ್ನು ಇರಿಸುವೆನು. ಈತನು ಅನ್ಯಜನಗಳಿಗೂ ನ್ಯಾಯವಿಧಿಯನ್ನು ಸಾರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಇದಿಗೋ, ನನ್ನ ದಾಸನು, ನನ್ನಿಂದಾಯ್ಕೆಯಾದವನು, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ನೆಲೆಗೊಳಿಸುವೆ ಇವನಲಿ ಎನ್ನಾತ್ಮವನು; ಸಾರುವನಿವನು ಜಗದಲಿ ನನ್ನ ಧರ್ಮವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇಗೋ, ನನ್ನ ಸೇವಕನು; ಈತನನ್ನು ನಾನು ಆರಿಸಿಕೊಂಡೆನು; ಈತನು ನನಗೆ ಇಷ್ಟನು; ನನ್ನ ಪ್ರಾಣಪ್ರಿಯನು. ಈತನಲ್ಲಿ ನನ್ನ ಆತ್ಮವನ್ನು ಇರಿಸುವೆನು; ಈತನು ಅನ್ಯಜನಗಳಿಗೂ ನ್ಯಾಯವಿಧಿಯನ್ನು ಸಾರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಇಗೋ, ನನ್ನ ಸೇವಕನು. ನಾನು ಆತನನ್ನು ಆರಿಸಿಕೊಂಡಿದ್ದೇನೆ. ಆತನನ್ನು ಪ್ರೀತಿಸುತ್ತೇನೆ, ಆತನನ್ನು ಮೆಚ್ಚಿದ್ದೇನೆ. ಆತನ ಮೇಲೆ ನನ್ನ ಆತ್ಮವನ್ನು ಇರಿಸುವೆನು. ಆತನು ಜನಾಂಗಗಳಿಗೆ ನ್ಯಾಯವಾದ ತೀರ್ಪು ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತೆ, ಕಾಯ್ ಮಟ್ಲ್ಯಾರ್, ಹ್ಯೊ, ಮಾಜೊ ಅಪುರ್‍ಬಾಯೆಚೊ ಸೆವಕ್. ತೆಚೊ ಮಿಯಾ ಪ್ರೆಮ್ ಕರ್‍ತಾ, ಅನಿ ತೆಚ್ಯಾ ವಿಶಯಾತ್ ಮಿಯಾ ಖುಶಿ ಹಾವ್, ತೆಚ್ಯಾ ವರ್‍ತಿ ಮಿಯಾ ಮಾಜೊ ಪವಿತ್ರ್ ಆತ್ಮೊ ಧಾಡುನ್ ದಿತಾ. ಅನಿ ತೊ ಸಗ್ಳ್ಯಾ ದೆಶಾಂಚ್ಯಾ ಲೊಕಾಕ್ನಿ ನ್ಯಾಯ್ ಕರುನ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:18
40 ತಿಳಿವುಗಳ ಹೋಲಿಕೆ  

“ಇಗೋ, ನನ್ನ ಸೇವಕನು. ಇವನಿಗೆ ನಾನೇ ಆಧಾರ, ನಾನು ಆಯ್ದುಕೊಂಡವನಲ್ಲಿ ನನ್ನ ಆತ್ಮವು ಆನಂದಿಸುವುದು; ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಇತರ ಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.


“ಕರ್ತದೇವರ ಆತ್ಮರು ನನ್ನ ಮೇಲೆ ಇದ್ದಾರೆ, ಅವರು ನನ್ನನ್ನು ಬಡವರಿಗೆ ಸುವಾರ್ತೆ ಸಾರುವುದಕ್ಕೆ ಅಭಿಷೇಕಿಸಿದ್ದಾರೆ. ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವುದಕ್ಕೂ, ಕುರುಡರಿಗೆ ದೃಷ್ಟಿ ಕೊಡುವುದಕ್ಕೂ, ಜಜ್ಜಿ ಹೋದವರನ್ನು ಬಿಡಿಸಿ ಕಳುಹಿಸುವುದಕ್ಕೂ,


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮರಿಂದಲೂ ಶಕ್ತಿಯಿಂದಲೂ ಅಭಿಷೇಕಿಸಿದ್ದರು. ಮಾತ್ರವಲ್ಲದೆ, ದೇವರು ಯೇಸುವಿನೊಡನೆ ಇದ್ದುದರಿಂದ, ಅವರು ಬೇರೆ ಬೇರೆ ಕಡೆಗಳಿಗೆ ಹೋಗಿ ಒಳಿತನ್ನು ಮಾಡಿ, ಪಿಶಾಚನಿಂದ ಪೀಡಿತರಾದವರನ್ನು ಗುಣಪಡಿಸುತ್ತಾ ಸಂಚರಿಸಿದ್ದನ್ನು ನೀವು ಬಲ್ಲಿರಿ.


ದೇವರು ಕಳುಹಿಸಿದವರಾದರೋ ದೇವರ ಮಾತುಗಳನ್ನೇ ಆಡುತ್ತಾರೆ. ಏಕೆಂದರೆ ದೇವರು ಅವರಿಗೆ ಆತ್ಮವನ್ನು ಮಿತಿಯಿಲ್ಲದೆ ಕೊಟ್ಟಿದ್ದಾರೆ.


ನೀವು ಸಜೀವ ಕಲ್ಲಾಗಿರುವವರ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿರಾಕರಿಸಿದರೂ ಅದು ದೇವರಿಂದ ಆರಿಸಿಕೊಂಡದ್ದೂ ಅವರಿಗೆ ಅಮೂಲ್ಯವಾದದ್ದೂ ಆಯಿತು.


ನನ್ನ ಸೇವಕನು ವಿವೇಕಿಯಾಗಿ ಕಾರ್ಯವನ್ನು ಸಾಧಿಸಿ, ಅವನು ಉನ್ನತನಾಗಿ ಮೇಲೆಕ್ಕೇರಿ ಮಹೋನ್ನತನಾಗಿರುವನು.


ಅವನ ಮೇಲೆ ಯೆಹೋವ ದೇವರ ಆತ್ಮ, ಜ್ಞಾನ ಮತ್ತು ವಿವೇಕದಾಯಕ ಆತ್ಮ, ಸಮಾಲೋಚನೆ ಮತ್ತು ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳುವಳಿಕೆ ಮತ್ತು ಯೆಹೋವ ದೇವರ ಭಯದ ಆತ್ಮ,


ಏಕೆಂದರೆ, “ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ,” ಎಂಬ ಧ್ವನಿಯು ಮಹೋನ್ನತ ಮಹಿಮೆಯಿಂದ ಅವರಿಗೆ ಉಂಟಾದದ್ದರಲ್ಲಿ ಅವರು ತಂದೆ ದೇವರಿಂದ ಗೌರವವನ್ನೂ ಮಹಿಮೆಯನ್ನೂ ಹೊಂದಿದರಲ್ಲವೇ.


ತಂದೆಯು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತಮ್ಮ ಪ್ರಿಯ ಪುತ್ರ ಕ್ರಿಸ್ತ ಯೇಸುವಿನ ರಾಜ್ಯದೊಳಗೆ ಸೇರಿಸಿದರು.


ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾಗಿರುವ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ,


ತಮ್ಮ ಕೃಪಾ ಮಹಿಮೆಯ ಸ್ತುತಿಗಾಗಿಯೇ ಇವುಗಳನ್ನು ದೇವರು ತಾವು ಪ್ರೀತಿಸುವ ಕ್ರಿಸ್ತನಲ್ಲಿ ನಮಗೆ ಉಚಿತವಾಗಿ ದಯಪಾಲಿಸಿದ್ದಾರೆ.


ಇಲ್ಲಿಗೆ ತಲುಪಿದಾಗ, ಅವರು ಸಭೆಯನ್ನು ಒಟ್ಟುಕೂಡಿಸಿದರು. ದೇವರು ಅವರಿಗೆ ತಮ್ಮ ಮುಖಾಂತರವಾಗಿ ಮಾಡಿದ್ದನ್ನೂ ಯೆಹೂದ್ಯರಲ್ಲದವರಿಗೂ ದೇವರು ವಿಶ್ವಾಸದ ದ್ವಾರವನ್ನು ತೆರೆದಿರುವುದನ್ನೂ ವರದಿಮಾಡಿದರು.


ಯೆಹೂದಿ ವಿಶ್ವಾಸಿಗಳು ಇದನ್ನು ಕೇಳಿದಾಗ, ಅವರಿಗೆ ಯಾವ ಆಕ್ಷೇಪಣೆಯೂ ಇರಲಿಲ್ಲ. ಹಾಗಾದರೆ ದೇವರು, “ಯೆಹೂದ್ಯರಲ್ಲದವರಿಗೂ ಸಹ ಜೀವಕ್ಕಾಗಿ ಪಶ್ಚಾತ್ತಾಪವನ್ನು ಕೊಟ್ಟಿದ್ದಾರೆ,” ಎಂದು ಹೇಳಿ ದೇವರನ್ನು ಕೊಂಡಾಡಿದರು.


ಜನರು ನೋಡುತ್ತಾ ನಿಂತುಕೊಂಡಿದ್ದರು. ಅವರೊಂದಿಗೆ ಅಧಿಕಾರಿಗಳು ಸಹ ಯೇಸುವನ್ನು ಅಪಹಾಸ್ಯಮಾಡಿ, “ಬೇರೆಯವರನ್ನು ರಕ್ಷಿಸಿದ ಈತನು ದೇವರು ಆರಿಸಿಕೊಂಡ ಕ್ರಿಸ್ತನಾಗಿದ್ದರೆ, ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ,” ಎಂದರು.


ಆಗ ಮೇಘದೊಳಗಿಂದ, “ಈತನು, ನಾನು ಆರಿಸಿಕೊಂಡ ನನ್ನ ಮಗನು, ಈತನ ಮಾತನ್ನು ಕೇಳಿರಿ,” ಎಂದು ಹೇಳುವ ಧ್ವನಿಯಾಯಿತು.


ಆಗ ಪವಿತ್ರಾತ್ಮರು ದೇಹಾಕಾರವಾಗಿ ಪಾರಿವಾಳದಂತೆ ಯೇಸುವಿನ ಮೇಲೆ ಇಳಿದರು. ಆಗ, “ನೀನು ನನ್ನ ಪ್ರಿಯ ಪುತ್ರನು, ನಿನ್ನನ್ನು ಅಪಾರವಾಗಿ ಮೆಚ್ಚಿದ್ದೇನೆ,” ಎಂಬ ಧ್ವನಿಯು ಪರಲೋಕದಿಂದ ಕೇಳಿಬಂತು.


ಆಗ ಅಲ್ಲಿ ಮೋಡವು ಅವರ ಮೇಲೆ ಕವಿದುಕೊಂಡಿತು. ಮೋಡದೊಳಗಿಂದ, “ಈತನು ಪ್ರಿಯನಾಗಿರುವ ನನ್ನ ಮಗನು, ಈತನ ಮಾತನ್ನು ಕೇಳಿರಿ,” ಎಂಬ ಧ್ವನಿಯು ಬಂದಿತು.


ಆಗ, “ನೀನು ನನ್ನ ಪ್ರಿಯ ಪುತ್ರನು, ನಿನ್ನನ್ನು ಅಪಾರವಾಗಿ ಮೆಚ್ಚಿದ್ದೇನೆ,” ಎಂಬ ಧ್ವನಿಯು ಪರಲೋಕದಿಂದ ಕೇಳಿಬಂತು.


ಪೇತ್ರನು ಇನ್ನೂ ಮಾತನಾಡುತ್ತಿರುವಾಗಲೇ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿಯಿತು. ಆಗ, “ಈತನು ಪ್ರಿಯನಾಗಿರುವ ನನ್ನ ಮಗನು. ಈತನನ್ನು ನಾನು ಸಂಪೂರ್ಣವಾಗಿ ಮೆಚ್ಚಿದ್ದೇನೆ. ಈತನ ಮಾತನ್ನು ನೀವು ಕೇಳಿರಿ,” ಎಂದು ಮೇಘದೊಳಗಿಂದ ಒಂದು ಧ್ವನಿ ಕೇಳಿತು.


“ಮಹಾಯಾಜಕನಾದ ಯೆಹೋಶುವನೇ, ನೀನೂ, ನಿನ್ನ ಮುಂದೆ ಕುಳಿತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ. ಅವರು ಆಶ್ಚರ್ಯವನ್ನುಂಟುಮಾಡುವ ಮನುಷ್ಯರಾಗಿದ್ದಾರೆ. ನಾನು ‘ರೆಂಬೆ’ ಎಂಬ ನನ್ನ ಸೇವಕನನ್ನು ಬರಮಾಡುವೆನು ಎಂಬುದಕ್ಕೆ ಇವರೇ ಮುಂಗುರುತು.


ಓ ಯೆಹೋವ ದೇವರೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಜಗದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಬರುವುವು. “ನಮ್ಮ ಪೂರ್ವಜರು ನಿಶ್ಚಯವಾಗಿ ಸುಳ್ಳಾದದ್ದನ್ನು ಪಾರಂಪರ್ಯವಾಗಿ ಹೊಂದಿದ್ದಾರೆ. ಅವು ವ್ಯರ್ಥವೇ. ಅವುಗಳಲ್ಲಿ ಏನೂ ಪ್ರಯೋಜನವಿಲ್ಲ.


ಆಗ ಇತರ ಜನಾಂಗಗಳು ನಿನ್ನ ವಿಮೋಚನೆಯನ್ನೂ, ಅರಸರೆಲ್ಲರು ನಿನ್ನ ಮಹಿಮೆಯನ್ನೂ ನೋಡುವರು. ಯೆಹೋವ ದೇವರ ಬಾಯಿ ನೇಮಿಸುವ ಹೊಸ ಹೆಸರು ನಿನಗೆ ದೊರೆಯುವುದು.


ಆತನು ತನ್ನ ಪ್ರಾಣದ ವೇದನೆಯನ್ನು ಸಹಿಸಿದ ತರುವಾಯ, ಜೀವದ ಬೆಳಕನ್ನು ಕಂಡು ತೃಪ್ತನಾಗುವನು. ತನ್ನ ತಿಳುವಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕರಿಗೆ ನೀತಿವಂತನಾಗಿ ನಿರ್ಣಯಿಸುವನು. ಏಕೆಂದರೆ ಆತನೇ ಅವರ ಅಪರಾಧಗಳನ್ನು ಹೊತ್ತುಕೊಳ್ಳುವನು.


ಆ ಕಾಲದಲ್ಲಿ ನೀವು ದರ್ಶನದಲ್ಲಿ ನಿಮ್ಮ ಭಕ್ತರಿಗೆ ಹೇಳಿದ್ದೇನೆಂದರೆ: “ಒಬ್ಬ ಶೂರನಿಗೆ ನಾನು ಬಲವನ್ನು ಅನುಗ್ರಹಿಸಿದ್ದೇನೆ. ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತ ಸ್ಥಾನದಲ್ಲಿಟ್ಟಿದ್ದೇನೆ.


ಹೀಗೆ ದೇವರು ಪ್ರವಾದಿಯಾದ ಯೆಶಾಯನ ಮುಖಾಂತರ ಹೇಳಿದ ಮಾತು ನೆರವೇರಿತು. ಅದೇನೆಂದರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು