ಮತ್ತಾಯ 13:19 - ಕನ್ನಡ ಸಮಕಾಲಿಕ ಅನುವಾದ19 ಯಾರಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ, ಕೆಡುಕನು ಬಂದು ಅವರ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದುಹಾಕುತ್ತಾನೆ, ಇದೇ ದಾರಿಯ ಪಕ್ಕದಲ್ಲಿ ಬಿತ್ತಲಾಗಿರುವ ಬೀಜವಾಗಿರುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯಾವನಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ತಿಳಿದುಕೊಳ್ಳದೆ ಇದ್ದರೆ ದುಷ್ಟನು ಬಂದು ಆತನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಹಾಕುತ್ತಾನೆ. ಇವನೇ ಬೀಜ ಬಿದ್ದ ದಾರಿಯ ಮಗ್ಗುಲಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಒಬ್ಬನು ಶ್ರೀಸಾಮ್ರಾಜ್ಯದ ಸಂದೇಶವನ್ನು ಕೇಳಿ ಅದನ್ನು ಗ್ರಹಿಸದೆಹೋದರೆ, ಕೇಡಿಗನು ಬಂದು ಅವನ ಹೃದಯದಲ್ಲಿ ಬಿತ್ತಿದ್ದ ಬೀಜವನ್ನು ತೆಗೆದೆಸೆಯುತ್ತಾನೆ. ಇವನು ಕಾಲ್ದಾರಿಯಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “ಮಗ್ಗುಲಲ್ಲಿ ಬಿದ್ದ ಬೀಜ ಅಂದರೇನು? ಪರಲೋಕರಾಜ್ಯವನ್ನು ಕುರಿತು ಬೋಧಿಸಿದ್ದನ್ನು ಕೇಳಿ ಅದನ್ನು ಅರ್ಥಮಾಡಿಕೊಳ್ಳದೆ ಇರುವ ಮನುಷ್ಯನೇ ಬೀಜ ಬಿದ್ದ ದಾರಿ ಮಗ್ಗುಲಾಗಿರುವನು. ಕೆಡುಕನು (ಸೈತಾನನು) ಬಂದು ಆ ಮನುಷ್ಯನ ಹೃದಯದಲ್ಲಿ ಬಿತ್ತಿದ್ದ ಬೀಜಗಳನ್ನು ತೆಗೆದುಹಾಕುತ್ತಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಸರ್‍ಗಾಚ್ಯಾ ರಾಜಾಚಿ ಬರಿ ಖಬರ್ ಆಯಿಕ್ತ್ಯಾತ್, ಖರೆ ತೆಂಕಾ ಅರ್ತ್ ಹೊಯ್ನಾ. ಹಿ ಲೊಕಾ ವಾಟೆಚ್ಯಾ ದಂಡೆಕ್ ಪಡಲ್ಲ್ಯಾ ಭ್ಹಿಂಯಾ ಬಾಸೆನ್. ಸೈತಾನ್ ಯೆತಾ ಅನಿ ತೆಂಚ್ಯಾ ಮನಾತ್ ಸಿಪಡಲ್ಲೆ ಭ್ಹಿಂಯ್ ಕಾಡುನ್ ಘೆವ್ನ್ ಜಾತಾ. ಅಧ್ಯಾಯವನ್ನು ನೋಡಿ |