Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:24 - ಕನ್ನಡ ಸಮಕಾಲಿಕ ಅನುವಾದ

24 ಯೇಸು ಮತ್ತೊಂದು ಸಾಮ್ಯವನ್ನು ಹೇಳಿದರು: “ಪರಲೋಕ ರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕ ರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಯೇಸುಸ್ವಾಮಿ ಜನರಿಗೆ ಮತ್ತೊಂದು ಸಾಮತಿಯನ್ನು ಹೇಳಿದರು: “ಸ್ವರ್ಗಸಾಮ್ರಾಜ್ಯವು ತನ್ನ ಹೊಲದಲ್ಲಿ ಒಳ್ಳೆಯ ಗೋದಿಯನ್ನು ಬಿತ್ತಿದ ರೈತನನ್ನು ಹೋಲುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು; ಅದೇನಂದರೆ - ಪರಲೋಕರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ್ದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಬಳಿಕ ಯೇಸು ಅವರಿಗೆ ಇನ್ನೊಂದು ಸಾಮ್ಯದ ಮೂಲಕ ಬೋಧಿಸಿದನು. ಅದೇನೆಂದರೆ: “ಪರಲೋಕರಾಜ್ಯ ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ರೈತನಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಮಾನಾ ಜೆಜುನ್ ತೆಂಕಾ ಅನಿ ಎಕ್ ಕಾನಿ ಸಾಂಗಟ್ಲ್ಯಾನ್. ಸರ್ಗಾಚೊ ರಾಜ್ ಮಟ್ಲ್ಯಾರ್, ಎಕ್ ಮಾನ್ಸಾನ್ ಅಪ್ನಾಚ್ಯಾ ಶೆತಾತ್ ಬರೆ ಭ್ಹಿಂಯ್ ಪೆರಲ್ಲ್ಯಾ ಸರ್ಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:24
23 ತಿಳಿವುಗಳ ಹೋಲಿಕೆ  

“ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತೆಗೆದುಕೊಂಡು ಮದುಮಗನನ್ನು ಎದುರುಗೊಳ್ಳುವುದಕ್ಕಾಗಿ ಹೊರಟುಹೋದ ಹತ್ತು ಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವುದು.


“ಪರಲೋಕ ರಾಜ್ಯವನ್ನು ತನ್ನ ದ್ರಾಕ್ಷಿಯ ತೋಟಕ್ಕೆ ಕೂಲಿಯಾಳುಗಳನ್ನು ಕರೆಯುವುದಕ್ಕಾಗಿ ಬೆಳಿಗ್ಗೆ ಹೊರಟ ಒಬ್ಬ ಯಜಮಾನನಿಗೆ ಹೋಲಿಸಲಾಗಿದೆ.


“ಪರಲೋಕ ರಾಜ್ಯವು, ಸರೋವರದಲ್ಲಿ ಬೀಸಲಾಗಿ ಎಲ್ಲಾ ತರವಾದ ಮೀನುಗಳನ್ನು ಕೂಡಿಸಿದ ಬಲೆಗೆ ಹೋಲಿಕೆಯಾಗಿದೆ.


“ಪರಲೋಕ ರಾಜ್ಯವು ಮಗನ ಮದುವೆ ಮಾಡಿದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.


ಯೇಸು ಉತ್ತರವಾಗಿ ಅವರಿಗೆ, “ಒಳ್ಳೆಯ ಬೀಜ ಬಿತ್ತುವವನು ಮನುಷ್ಯಪುತ್ರನು.


ಪುನಃ ಯೇಸು, “ದೇವರ ರಾಜ್ಯವನ್ನು ಯಾವುದಕ್ಕೆ ಹೋಲಿಸಲಿ?


ಅನಂತರ ಯೇಸು, “ದೇವರ ರಾಜ್ಯವು ಯಾವುದಕ್ಕೆ ಹೋಲಿಕೆಯಾಗಿದೆ? ನಾನು ಯಾವುದಕ್ಕೆ ಅದನ್ನು ಹೋಲಿಸಲಿ?


ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದರು: “ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀಯು ತೆಗೆದುಕೊಂಡು ಹುಳಿಯಿಲ್ಲದ ಸುಮಾರು ಇಪ್ಪತ್ತೇಳು ಕಿಲೋಗ್ರಾಂ ಹಿಟ್ಟಿನಲ್ಲಿ ಕಲಸಿದಾಗ ಆ ಹಿಟ್ಟೆಲ್ಲಾ ಹುಳಿಯಾಯಿತು.”


ಏಕೆಂದರೆ ನೀವು ತಿರುಗಿ ಹುಟ್ಟಿದವರಾಗಿದ್ದೀರಲ್ಲಾ! ಆ ಜನ್ಮವು ನಾಶವಾಗುವ ಬೀಜದಿಂದಲ್ಲ. ಆದರೆ ನಾಶವಾಗದಂಥದ್ದರಿಂದ ಸಜೀವವಾದ ಸದಾಕಾಲವಿರುವ ದೇವರ ವಾಕ್ಯದ ಮೂಲಕ ಆಗಿದೆ.


ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದರು: “ಪರಲೋಕ ರಾಜ್ಯವು, ಒಬ್ಬ ಮನುಷ್ಯನು ಸಾಸಿವೆ ಕಾಳನ್ನು ತೆಗೆದುಕೊಂಡುಹೋಗಿ ತನ್ನ ಹೊಲದಲ್ಲಿ ಬಿತ್ತಿದ್ದಕ್ಕೆ ಹೋಲಿಕೆಯಾಗಿದೆ.


“ಆದ್ದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕ ತೆಗೆದುಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.


ಯಾರಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ, ಕೆಡುಕನು ಬಂದು ಅವರ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದುಹಾಕುತ್ತಾನೆ, ಇದೇ ದಾರಿಯ ಪಕ್ಕದಲ್ಲಿ ಬಿತ್ತಲಾಗಿರುವ ಬೀಜವಾಗಿರುವದು.


“ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ,” ಎಂದು ಸಾರುತ್ತಿದ್ದನು.


“ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಯಜಮಾನನು ದ್ರಾಕ್ಷಿಯ ತೋಟವನ್ನು ಮಾಡಿ ಅದರ ಸುತ್ತಲೂ ಬೇಲಿ ಹಾಕಿದನು. ಅದರೊಳಗೆ ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಅಗೆದು ಕಾವಲುಗೋಪುರವನ್ನು ಕಟ್ಟಿ ರೈತರಿಗೆ ಗೇಣಿಗೆ ಕೊಟ್ಟು ದೂರದೇಶಕ್ಕೆ ಹೋದನು.


ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ, ಯೆಹೂದ್ಯರ ಸಭಾಮಂದಿರಗಳಲ್ಲಿ ಬೋಧಿಸುತ್ತಾ, ರಾಜ್ಯದ ಸುವಾರ್ತೆಯನ್ನು ಸಾರುತ್ತಾ, ಜನರಲ್ಲಿದ್ದ ಸಕಲ ವಿಧವಾದ ವ್ಯಾಧಿಗಳನ್ನೂ ಸಕಲ ವಿಧವಾದ ಬೇನೆಗಳನ್ನೂ ಗುಣಪಡಿಸುತ್ತಾ ಬಂದರು.


ಪರಲೋಕದಲ್ಲಿ ನಿಮಗೋಸ್ಕರ ಕಾದಿರಿಸಲಾದ ನಿರೀಕ್ಷೆಯಿಂದಲೇ ಈ ವಿಶ್ವಾಸವೂ ಪ್ರೀತಿಯೂ ಬುಗ್ಗೆಯಾಗಿ ಒದಗಿಬರುತ್ತದೆ. ಈ ನಿರೀಕ್ಷೆಯ ಬಗ್ಗೆ ಸುವಾರ್ತೆಯ ಸತ್ಯ ಸಂದೇಶವನ್ನು ಮೊದಲೇ ನೀವು ಕೇಳಿದ್ದೀರಿ.


“ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರಿಗೆ ಸಾಮ್ಯಗಳನ್ನು ಒಗಟಾಗಿ ಹೇಳು.


ಆಗ ಯೆಹೋವ ದೇವರು ಅವರಿಗೆ ಹೀಗೆ ಹೇಳಿದರು: ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ ಇದರಿಂದ ಅವರು ಎಡವಿಬಿದ್ದು ಗಾಯಗೊಳ್ಳಬಹುದು. ಮತ್ತು ಬಲೆಯಲ್ಲಿ ಸಿಕ್ಕಿ ಬೀಳುವರು.


ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ.


ಆದರೆ ಜನರು ನಿದ್ರಿಸುತ್ತಿರುವಾಗ, ಅವನ ವೈರಿಯು ಬಂದು ಗೋಧಿಯ ನಡುವೆ ಕಳೆಯನ್ನು ಬಿತ್ತಿ ಹೊರಟುಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು