Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:25 - ಕನ್ನಡ ಸಮಕಾಲಿಕ ಅನುವಾದ

25 ಆದರೆ ಜನರು ನಿದ್ರಿಸುತ್ತಿರುವಾಗ, ಅವನ ವೈರಿಯು ಬಂದು ಗೋಧಿಯ ನಡುವೆ ಕಳೆಯನ್ನು ಬಿತ್ತಿ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆದರೆ ಜನರು ನಿದ್ರೆ ಮಾಡುವ ಸಮಯದಲ್ಲಿ ಅವನ ವೈರಿಯು ಬಂದು ಗೋದಿಯ ನಡುವೆ ಕಳೆಯನ್ನು ಬಿತ್ತಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಒಂದು ರಾತ್ರಿ ಎಲ್ಲರೂ ನಿದ್ರಿಸುತ್ತಿರುವಾಗ, ಅವನ ವೈರಿ ಬಂದು, ಗೋದಿಯ ನಡುವೆ ಕಳೆಗಳನ್ನು ಬಿತ್ತಿ ಹೋದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆದರೆ ಜನರು ನಿದ್ರೆಮಾಡುವ ಕಾಲದಲ್ಲಿ ಅವನ ವೈರಿಯು ಬಂದು ಗೋದಿಯ ನಡುವೆ ಹಣಜಿ ಬಿತ್ತಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆ ರಾತ್ರಿ ಜನರೆಲ್ಲರೂ ನಿದ್ರಿಸುತ್ತಿದ್ದಾಗ ಅವನ ವೈರಿ ಬಂದು ಗೋಧಿಯ ನಡುವೆ ಹಣಜಿಯನ್ನು ಬಿತ್ತಿ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಎಕ್ ದಿಸ್ ರಾಚ್ಚೆ ಸಗ್ಳೆ ಜಾನಾ ನಿಜಲ್ಲ್ಯಾ ತನ್ನಾ ದುಸ್ಮಾನ್ ಯೆತಾ ಅನಿ ಘಂವಾಚ್ಯಾ ಮದ್ದಿ ಕಳ್ಯಾಂಚೆ ಭ್ಹಿಂಯ್ ಸಿಪ್ಡುನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:25
19 ತಿಳಿವುಗಳ ಹೋಲಿಕೆ  

ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.


ಆದರೆ ಆ ಕಾಲದಲ್ಲಿ ಸುಳ್ಳು ಪ್ರವಾದಿಗಳು ಸಹ ಜನರಲ್ಲಿ ಕಾಣಿಸಿಕೊಂಡರು. ಅದೇ ಪ್ರಕಾರ ನಿಮ್ಮಲ್ಲಿಯೂ ಈಗ ಸುಳ್ಳು ಬೋಧಕರು ಕಾಣಿಸಿಕೊಳ್ಳುವರು. ಅಂಥವರು ಹಾನಿಕರವಾದ ಸುಳ್ಳು ಬೋಧನೆಗಳನ್ನು ರಹಸ್ಯವಾಗಿ ಸಭೆಯೊಳಗೆ ತರುವರು. ತಮ್ಮನ್ನು ಕೊಂಡುಕೊಂಡ ಸಾರ್ವಭೌಮ ಕರ್ತ ಆಗಿರುವವರನ್ನೇ ಅಲ್ಲಗಳೆಯುವರು. ಹೀಗೆ ಅವರು ತಮ್ಮ ಮೇಲೆ ವಿನಾಶವನ್ನು ತಾವೇ ಬರಮಾಡಿಕೊಳ್ಳುವರು.


ಅದನ್ನು ಬಿತ್ತಿದ ವೈರಿಯು ಸೈತಾನನೇ. ಸುಗ್ಗಿಯ ಕಾಲವು ಲೋಕಾಂತ್ಯವಾಗಿದೆ. ಕೊಯ್ಯುವವರು ದೇವದೂತರೇ.


ಭೂಲೋಕದವರನ್ನೆಲ್ಲಾ ವಂಚಿಸುತ್ತಿದ್ದ ಆ ಮಹಾ ಘಟಸರ್ಪನು ಎಂದರೆ ಪಿಶಾಚನೆಂತಲೂ ಸೈತಾನನೆಂತಲೂ ಕರೆಯಲಾದ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರನ್ನೂ ಅವನೊಂದಿಗೆ ತಳ್ಳಲಾಯಿತು.


ನಿಮ್ಮಲ್ಲಿ ಯಾರೂ ದೇವರ ಕೃಪೆಗೆ ತಪ್ಪಿಹೋಗದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅದರಿಂದ ಅನೇಕರು ಮಲಿನರಾಗದಂತೆಯೂ


ಮದುಮಗನು ತಡಮಾಡಿದಾಗ ಅವರೆಲ್ಲರೂ ತೂಕಡಿಸುತ್ತಾ ನಿದ್ರೆ ಹೋದರು.


ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ವಿಶ್ವಾಸಿಗಳು ನಮ್ಮನ್ನು ದಾಸತ್ವದಲ್ಲಿ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿರುವ ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು.


ಆದರೆ ನಿನ್ನ ಮೇಲೆ ಒಂದು ತಪ್ಪು ಹೊರಿಸಬೇಕಾಗುತ್ತದೆ. ಅದೇನೆಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ವ್ಯಭಿಚಾರ ಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಬಿಟ್ಟಿರುವುದು.


ಆ ಮೊದಲನೆಯ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವನ್ನು ಕೊಡಲಾಗಿದ್ದರಿಂದ ಭೂನಿವಾಸಿಗಳನ್ನು ಮೋಸಗೊಳಿಸುತ್ತದೆ. ಭೂಮಿಯ ಮೇಲೆ ವಾಸಿಸುವವರು, ಕತ್ತಿಯಿಂದ ಗಾಯಹೊಂದಿ, ಸಾಯದೆ ಬದುಕಿದ ಮೃಗದ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಹೇಳುತ್ತದೆ.


ಯೇಸು ಮತ್ತೊಂದು ಸಾಮ್ಯವನ್ನು ಹೇಳಿದರು: “ಪರಲೋಕ ರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ.


ಗೋಧಿಯು ಮೊಳೆತು ಬೆಳೆಯುತ್ತಿರುವಾಗ, ಕಳೆ ಸಹ ಕಾಣಿಸಿಕೊಂಡಿತು.


“ಮನೆಯ ಯಜಮಾನನ ಸೇವಕರು ಅವನ ಬಳಿಗೆ ಬಂದು ಅವನಿಗೆ, ‘ಅಯ್ಯಾ, ನೀನು ನಿನ್ನ ಹೊಲದಲ್ಲಿ ಒಳ್ಳೆಯ ಬೀಜವನ್ನು ಬಿತ್ತಿದೆಯಲ್ಲಾ? ಆದರೆ ಈ ಕಳೆಯು ಎಲ್ಲಿಂದ ಬಂತು?’ ಎಂದು ಕೇಳಿದರು.


“ಆದರೆ ಯಜಮಾನನು, ‘ಬೇಡ, ನೀವು ಕಳೆಯನ್ನು ಕೀಳುವಾಗ, ಅವುಗಳೊಂದಿಗೆ ಗೋಧಿಯನ್ನೂ ಕಿತ್ತುಬಿಟ್ಟೀರಿ.


ಸುಗ್ಗಿಯ ಕಾಲದವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ. ಸುಗ್ಗಿಯ ಕಾಲದಲ್ಲಿ ನಾನು ಕೊಯ್ಯುವವರಿಗೆ: ಮೊದಲು ಕಳೆಯನ್ನು ಕೂಡಿಸಿ ಅವುಗಳನ್ನು ಸುಡುವುದಕ್ಕೆ ಬೇರೆ ಕಟ್ಟಿಡಿರಿ, ಗೋಧಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು,’ ಅಂದನು.”


ಇವಳು ಮಧ್ಯರಾತ್ರಿಯಲ್ಲಿ ಎದ್ದು, ನಿನ್ನ ದಾಸಿಯು ನಿದ್ರೆಗೈಯುತ್ತಿರುವಾಗ, ನನ್ನ ಹತ್ತಿರ ಮಲಗಿದ್ದ ನನ್ನ ಮಗನನ್ನು ತೆಗೆದುಕೊಂಡು, ಅದನ್ನು ತನ್ನ ಎದೆಯ ಮೇಲೆ ಮಲಗಿಸಿಕೊಂಡು, ತನ್ನ ಸತ್ತ ಮಗುವನ್ನು ನನ್ನ ಎದೆಯ ಮೇಲೆ ಮಲಗಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು