ಮತ್ತಾಯ 13:28 - ಕನ್ನಡ ಸಮಕಾಲಿಕ ಅನುವಾದ28 “ಯಜಮಾನನು ಅವರಿಗೆ, ‘ವೈರಿಯು ಇದನ್ನು ಮಾಡಿದ್ದಾನೆ,’ ಎಂದನು. “ಆಗ ಸೇವಕರು ಅವನಿಗೆ, ‘ನಾವು ಹೋಗಿ ಅವುಗಳನ್ನು ಕಿತ್ತುಹಾಕೋಣವೇ?’ ಎಂದು ಕೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅದಕ್ಕೆ ಅವನು, ‘ಇದು ವೈರಿ ಮಾಡಿದ ಕೆಲಸ’ ಎಂದು ಹೇಳಿದನು, ಅದಕ್ಕೆ ಆಳುಗಳು ಅವನಿಗೆ, ‘ಹಾಗಾದರೆ ನಾವು ಹೋಗಿ ಅದನ್ನು ಕಿತ್ತುಹಾಕುವುದು ನಿಮಗೆ ಇಷ್ಟವಿದೆಯೋ?’ ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಯಜಮಾನ, ‘ಇದು ನನ್ನ ವೈರಿ ಮಾಡಿರುವ ಕೆಲಸ,’ ಎಂದ. ‘ಹಾಗಾದರೆ, ಕಳೆಯನ್ನು ಕಿತ್ತುಹಾಕೋಣವೇ’ ಎಂದರು ಆಳುಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅವನು - ಇದು ಒಬ್ಬ ವೈರಿ ಮಾಡಿದ ಕೆಲಸ ಅನ್ನಲಾಗಿ ಆಳುಗಳು ಅವನನ್ನು - ಹಾಗಾದರೆ ನಾವು ಅದನ್ನು ಆರಿಸಿ ತೆಗೆಯೋಣೋ ಎಂದು ಕೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 “ಆ ಮನುಷ್ಯನು, ‘ಒಬ್ಬ ವೈರಿ ಹಣಜಿಯನ್ನು ಬಿತ್ತಿದ್ದಾನೆ’ ಎಂದು ಉತ್ತರಕೊಟ್ಟನು. “ಆ ಸೇವಕರು ‘ನಾವು ಹೋಗಿ ಹಣಜಿಗಳನ್ನು ಕೀಳಬೇಕೆ?’ ಎಂದು ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ತನ್ನಾ ತೆನಿ “ಕೊನ್ಕಿ ದುಸ್ಮಾನಾನ್ ಕರಲ್ಲೆ ಕಾಮ್ ತೆ” ಮನುನ್ ಜಬಾಬ್ ದಿಲ್ಯಾನ್. ತನ್ನಾ ಆಳಾನಿ, “ಅಮಿ ಜಾವ್ನ್ ತಿ ಕಳ್ಯಾಂಚಿ ಝಾಡಾ ಉಪ್ಸುನ್ ಕಾಡುಚೆ ಕಾಯ್?” ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |