Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:3 - ಕನ್ನಡ ಸಮಕಾಲಿಕ ಅನುವಾದ

3 ಆಗ ಯೇಸು ಅನೇಕ ವಿಷಯಗಳನ್ನು ಅವರಿಗೆ ಸಾಮ್ಯಗಳಲ್ಲಿ ಹೇಳಿದ್ದು: “ಒಬ್ಬ ರೈತನು ಬಿತ್ತುವುದಕ್ಕೆ ಹೊರಟನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಯೇಸು ಅವರಿಗೆ ಅನೇಕ ವಿಷಯಗಳನ್ನು ಸಾಮತಿಯ ರೂಪದಲ್ಲಿ ಹೇಳಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಹೇಳಿದನು. ಹೇಗಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ಯೇಸು ಸಾಮ್ಯಗಳ ಮೂಲಕ ಅನೇಕ ವಿಷಯಗಳನ್ನು ಅವರಿಗೆ ಬೋಧಿಸಿದನು. ಯೇಸು ಅವರಿಗೆ ಈ ಸಾಮ್ಯವನ್ನು ಹೇಳಿದನು: “ಒಬ್ಬ ರೈತನು ಬೀಜ ಬಿತ್ತುವುದಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಸುಮಾರ್ ವಿಶಯಾ ಸಾಂಗುಕ್ ಮನುನ್ ತೊ ಕಾನಿಯಾ ವಾಪ್ರಿ. ತನ್ನಾ ತೆನಿ, “ಎಗ್ದಾ ಎಕ್ ಶೆತ್ಕಾರಿ ಹೊತ್ತೊ ತೊ ಭ್ಹಿಂಯ್ ಸಿಪ್ಡುಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:3
27 ತಿಳಿವುಗಳ ಹೋಲಿಕೆ  

ಅನಂತರ ಯೇಸು ಅವರಿಗೆ, “ನಿಮಗೆ ಈ ಸಾಮ್ಯ ಅರ್ಥವಾಗಲಿಲ್ಲವೇ? ಹಾಗಾದರೆ ನೀವು ಬೇರೆ ಸಾಮ್ಯಗಳನ್ನು ಹೇಗೆ ಅರ್ಥಮಾಡಿಕೊಳ್ಳುವಿರಿ?


ಈ ರೀತಿಯ ಅನೇಕ ಸಾಮ್ಯಗಳಿಂದ ಅವರ ಗ್ರಹಿಕೆಗೆ ತಕ್ಕ ಹಾಗೆ ಯೇಸು ಅವರಿಗೆ ವಾಕ್ಯವನ್ನು ಉಪದೇಶಿಸುತ್ತಿದ್ದರು.


ಈ ಸಾಮ್ಯಗಳನ್ನು ಮುಗಿಸಿದ ತರುವಾಯ ಯೇಸು ಅಲ್ಲಿಂದ ಹೊರಟು ಹೋದರು.


ನಾನು ಸಾಮ್ಯವನ್ನು ಹೇಳಲು ನನ್ನ ಬಾಯಿ ತೆರೆಯುವೆನು. ಪೂರ್ವದಿಂದಿರುವ ಗುಪ್ತವಾದವುಗಳನ್ನು ನುಡಿಯುವೆನು.


ಆಗ ಮುಖ್ಯಯಾಜಕರೂ ನಿಯಮ ಬೋಧಕರೂ ಹಿರಿಯರೂ ತಮ್ಮ ವಿರೋಧವಾಗಿಯೇ ಈ ಸಾಮ್ಯವನ್ನು ಹೇಳಿದರೆಂದು ತಿಳಿದು ಯೇಸುವನ್ನು ಹಿಡಿಯುವುದಕ್ಕೆ ಸಂದರ್ಭ ನೋಡಿದರು. ಆದರೆ ಅವರು ಜನರಿಗೆ ಹೆದರಿ, ಯೇಸುವನ್ನು ಬಿಟ್ಟು ಹೊರಟು ಹೋದರು.


ಸಾಮ್ಯಕ್ಕೆ ನನ್ನ ಕಿವಿಗೊಟ್ಟು ಒಗಟನ್ನು ಕಿನ್ನರಿಯಿಂದ ಬಿಚ್ಚುವೆನು.


“ಇವುಗಳನ್ನು ನಾನು ಸೂಚಕವಾಗಿ ನಿಮ್ಮೊಡನೆ ಮಾತನಾಡಿದ್ದೇನೆ. ನಾನು ಇನ್ನು ಸಾಮ್ಯಗಳಿಂದ ಮಾತನಾಡದೆ ತಂದೆಯ ವಿಷಯವಾಗಿ ನಿಮಗೆ ಸ್ಪಷ್ಟವಾಗಿ ಪ್ರಕಟಿಸುವ ಗಳಿಗೆಯು ಬರುತ್ತದೆ.


ಪೇತ್ರನು ಯೇಸುವಿಗೆ, “ಕರ್ತದೇವರೇ, ನೀವು ಈ ಸಾಮ್ಯವನ್ನು ನಮಗೆ ಮಾತ್ರ ಹೇಳುತ್ತೀರೋ ಅಥವಾ ಎಲ್ಲರಿಗೋ?” ಎಂದು ಕೇಳಿದನು.


ಅದಕ್ಕೆ ಯೇಸು, “ದೇವರ ರಾಜ್ಯದ ರಹಸ್ಯಗಳನ್ನು ತಿಳಿದುಕೊಳ್ಳುವುದಕ್ಕೆ ನಿಮಗೆ ಅನುಮತಿಸಲಾಗಿದೆ, ಆದರೆ ಉಳಿದವರಿಗೆ, “ ‘ಅವರು ಕಣ್ಣಾರೆ ನೋಡಿದರೂ ಕಾಣದಂತೆಯೂ; ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯಗಳಲ್ಲಿ ಮರೆಯಾಗಿವೆ.’


ಯೇಸು ಸಾಮ್ಯಗಳಿಂದ ಮಾತನಾಡಲು ಪ್ರಾರಂಭಿಸಿದರು: “ಒಬ್ಬಾನೊಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ ಸುತ್ತಲೂ ಬೇಲಿ ಹಾಕಿದನು. ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಅಗೆದು ಕಾವಲುಗೋಪುರವನ್ನು ಕಟ್ಟಿ ರೈತರಿಗೆ ವಹಿಸಿಬಿಟ್ಟು ದೂರದೇಶಕ್ಕೆ ಹೊರಟುಹೋದನು.


ಆಗ ಯೇಸು ಅವರನ್ನು ಹತ್ತಿರಕ್ಕೆ ಕರೆದು ಸಾಮ್ಯರೂಪದಲ್ಲಿ ಹೇಳಿದ್ದೇನೆಂದರೆ: “ಸೈತಾನನು ಸೈತಾನನನ್ನು ಓಡಿಸುವುದು ಹೇಗೆ?


“ಅಂಜೂರ ಮರದ ದೃಷ್ಟಾಂತದಿಂದ ಈ ಪಾಠವನ್ನು ಕಲಿತುಕೊಳ್ಳಿರಿ: ಅದರ ರೆಂಬೆ ಇನ್ನೂ ಎಳೆಯದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳುತ್ತೀರಿ.


ಅವರೆಲ್ಲರೂ ಅವನನ್ನು ಅಪಹಾಸ್ಯದ ಮಾತುಗಳಿಂದ ಅವಮಾನ ಮಾಡುವುದಿಲ್ಲವೋ? ಕದ್ದುಕೊಂಡ ವಸ್ತುಗಳನ್ನು ರಾಶಿಯಾಗಿ ಕೂಡಿಸಿಟ್ಟುಕೊಳ್ಳುವವನಿಗೆ ಅಕ್ರಮ ಮಾರ್ಗದಿಂದ ಐಶ್ವರ್ಯವಂತನಾಗಿರುವವನಿಗೆ ಕಷ್ಟ. ಇದೆಷ್ಟರವರೆಗೆ ಮುಂದುವರಿಯಬೇಕು?


ಆ ದಿನದಲ್ಲಿ ಜನರು ನಿಮ್ಮನ್ನು ಅಪಹಾಸ್ಯ ಮಾಡುವರು. ‘ನಾವು ಸಂಪೂರ್ಣವಾಗಿ ಹಾಳಾಗಿದ್ದೇವೆ. ನನ್ನ ಪ್ರಜೆಗಳ ಆಸ್ತಿ ವಿಭಾಗವಾಗಿದೆ. ಆತನು ಅದನ್ನು ನನ್ನಿಂದ ತೆಗೆದುಕೊಳ್ಳುವನು. ಆತನು ನಮ್ಮ ಹೊಲಗಳನ್ನು ದ್ರೋಹಿಗಳಿಗೆ ಹಂಚಿಕೊಟ್ಟಿದ್ದಾನೆ,’ ” ಎಂಬ ದುಃಖದಾಯಕ ಸಂಗೀತದಿಂದ ಹಾಸ್ಯಮಾಡುವರು.


ಆಗ ನಾನು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ‘ಅವನು ಸಾಮ್ಯಗಳನ್ನು ಹೇಳುವುದಿಲ್ಲವೇ?’ ಎಂದು ನನ್ನ ವಿಷಯದಲ್ಲಿ ಅವರು ಹೇಳುತ್ತಾರೆ,” ಎಂದೆನು.


“ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರಿಗೆ ಸಾಮ್ಯಗಳನ್ನು ಒಗಟಾಗಿ ಹೇಳು.


ಯೇಸು ಪುನಃ ಸಾಮ್ಯಗಳ ಮೂಲಕ ಅವರ ಕೂಡ ಮಾತನಾಡುತ್ತಾ:


ಅವನು ಬಿತ್ತುತ್ತಿರುವಾಗ ಕೆಲವು ಬೀಜಗಳು ದಾರಿಯ ಪಕ್ಕದಲ್ಲಿ ಬಿದ್ದವು, ಪಕ್ಷಿಗಳು ಬಂದು ಅವುಗಳನ್ನು ತಿಂದುಬಿಟ್ಟವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು